Homeಮುಖಪುಟಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

ಹೈದರಾಬಾದ್‌: 16 ಕೋಟಿ ರೂಗಳ ವಿಶ್ವದ ದುಬಾರಿ ಇಂಜೆಕ್ಷನ್ ಪಡೆದ 3 ವರ್ಷದ ಮಗು!

- Advertisement -
- Advertisement -

ಆಯನ್ಸ್ ಗುಪ್ತಾ ಹೆಸರಿನ ಮೂರು ವರ್ಷದ ಮಗುವಿಗೆ ಅಪರೂಪದ ಬೆನ್ನುಮೂಳೆಯ ಸ್ನಾಯು ಕ್ಷೀಣತೆ (spinal muscular atrophy) ಎಂಬ ರೋಗ ಕಾಡುತ್ತಿತ್ತು. ಅದರ ಜೀನ್ ಥೆರಪಿ ಚಿಕಿತ್ಸೆಗೆ 16 ಕೋಟಿ ರೂ ಬೆಲೆಯ ಇಂಜೆಕ್ಷನ್ ಅಗತ್ಯವಿತ್ತು. ಆ ಮಗುವಿನ ಪೋಷಕರು ಕ್ರೌಡ್ ಫಂಡಿಂಗ್‌ನಲ್ಲಿ ಮನವಿ ಮಾಡಿದಾಗ 62,000 ಜನರು ದೇಣಿಗೆ ನೀಡಿದ್ದರ ಪರಿಣಾಮವಾಗಿ 16 ಕೋಟಿ ರೂ ಸಂಗ್ರಹವಾಯಿತು. ಕೊನೆಗೂ ವಿಶ್ವದ ಅತಿ ದುಬಾರಿ ಇಂಜೆಕ್ಷನ್ ಅನ್ನು ಆ ಮಗು ಪಡೆಯಿತು…

ಇದೆಲ್ಲವೂ ನಡೆದಿದ್ದು ಹೈದರಾಬಾದ್‌ನಲ್ಲಿ. ಅಲ್ಲಿನ ರೈನ್ಬೊ ಚಿಲ್ಡ್ರನ್ಸ್ ಹಾಸ್ಪಿಟಲ್‌ನಲ್ಲಿ ಜೂನ್ 09 ರಂದು ಆಯನ್ಸ್ ಝೊಲ್ಗೆನ್ಸ್ಮ ಎಂಬ ಔಷಧಿಯನ್ನು ಅಮೆರಿಕದಿಂದ ಆಮದು ಮಾಡಿಕೊಂಡು ನೀಡಲಾಯಿತು. ಪೋಷಕರಾದ ಯೋಗೇಶ್ ಗುಪ್ತಾ ಮತ್ತು ರುಪಾಲ್ ಗುಪ್ತಾ ಮೊದಲಿಗೆ ಅಷ್ಟು ದೊಡ್ಡ ಮೊತ್ತವನ್ನು ಹೊಂದಿಸಲು ಕಷ್ಟ ಎಂದುಕೊಂಡಿದ್ದರು. ಆದರೆ ImpactGuru.com ಮೂಲಕ ಈ ವರ್ಷದ ಫೆಬ್ರವರಿಯಿಂದ ಕ್ರೌಡ್ ಫಂಡಿಂಗ್‌ಗೆ ಮನವಿ ಮಾಡಿದರು. ಜೂನ್‌ ವೇಳೆಗೆ ಹಣ ಸಂಗ್ರಹವಾಗಿ ಚಿಕಿತ್ಸೆಗೆ ಸಹಕಾರಿಯಾಯಿತು.

“62,450 ದೇಣಿಗೆ ನೀಡಿದ್ದಾರೆ. ದಾನಿಯೊಬ್ಬರು 56 ಲಕ್ಷ ನೀಡಿದ್ದಾರೆ. ವಿಶ್ವದ ದುಬಾರಿ ಔಷಧಿಯನ್ನು ನನ್ನ ಮಗನಿಗೆ ನೀಡಿ ಆತನನ್ನು ಬದುಕಿಸಲು ನೆರವಾದ ಎಲ್ಲಾ ದಾನಿಗಳಿಗೆ ನಾವು ಋಣಿಯಾಗಿದ್ದೇವೆ” ಎಂದು ಯೋಗೇಶ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ, ಅನುಷ್ಕ ಶರ್ಮಾ, ಅನಿಲ್ ಕಪೂರ್, ಅಜಯ್ ದೇವಗನ್, ಧರ್ಮ ಪ್ರೊಡಕ್ಷನ್, ಟಿ-ಸೀರಿಸ್, ಸಿಪ್ಲಾ ಸೇರಿದಂತೆ ಹಲವಾರು ಜನ ದೇಣಿಗೆ ನೀಡುವ ಮೂಲಕ ಬೆಂಬಲ ನೀಡಿದ್ದರು.

ಬೆನ್ನುಮೂಳೆಯ ಸ್ನಾಯು ಕ್ಷೀಣತೆಯು ಎಸ್‌ಎಂಎನ್ 1 ಜೀನ್‌ನಲ್ಲಿನ ದೋಷದಿಂದಾಗಿ ಉಂಟಾಗುವ ಕಾಯಿಲೆಯಾಗಿದೆ. ಪೀಡಿತ ಮಕ್ಕಳು ಆರಂಭದಲ್ಲಿ ಮೇಲಿನ ಮತ್ತು ಕೆಳಗಿನ ಕಾಲುಗಳನ್ನು ಒಳಗೊಂಡ ಸ್ನಾಯು ದೌರ್ಬಲ್ಯವನ್ನು ಹೊಂದುತ್ತಾರೆ. ಈ ಎಸ್‌ಎಂಎ ಸಾಮಾನ್ಯವಾಗಿ 10,000 ಮಕ್ಕಳಲ್ಲಿ ಒಬ್ಬರ ಮೇಲೆ ಪರಿಣಾಮ ಬೀರುತ್ತದೆ, ಮತ್ತು ಪ್ರಸ್ತುತ ಭಾರತದಲ್ಲಿ ಸುಮಾರು 800 ಮಕ್ಕಳು ಎಸ್‌ಎಂಎಯಿಂದ ಬಳಲುತ್ತಿದ್ದಾರೆ.

ಝೊಲ್ಗೆನ್ಸ್ಮ ಒಂದೇ ಡೋಸ್ ಇಂಟ್ರಾವೆನಸ್ ಇಂಜೆಕ್ಷನ್ ಜೀನ್ ಚಿಕಿತ್ಸೆಯಾಗಿದೆ. 16 ಕೋಟಿ ರೂ.ಗಳ ಬೆಲೆಯ ಹೊರತಾಗಿ, ಕೇಂದ್ರೀಯ ಹಣಕಾಸು ಸಚಿವಾಲಯವು ಮಾನವೀಯ ಆಧಾರದ ಮೇಲೆ ಈ ಔಷಧದ ಮೇಲೆ ಸುಮಾರು 6 ಕೋಟಿ ಮೌಲ್ಯದ ಆಮದು ತೆರಿಗೆಯನ್ನು ಮನ್ನಾ ಮಾಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.


ಇದನ್ನೂ ಓದಿ: ನಿಮ್ಮ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಸಪ್ತಪದಿ ತುಳಿಯಿರಿ: ಇದು ತಮಾಷೆಯಲ್ಲ ಸತ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...