Homeಮುಖಪುಟಹೈದರಾಬಾದ್: ವಿಶ್ವ ಸುಂದರಿ ಸ್ಪರ್ಧೆಗೆ ಬಜರಂಗದಳದಿಂದ ವಿರೋಧ

ಹೈದರಾಬಾದ್: ವಿಶ್ವ ಸುಂದರಿ ಸ್ಪರ್ಧೆಗೆ ಬಜರಂಗದಳದಿಂದ ವಿರೋಧ

- Advertisement -
- Advertisement -

ವಿರೋಧ ಪಕ್ಷಗಳು ಮತ್ತು ಮಹಿಳಾ ಸಂಘಟನೆಗಳ ನಂತರ, ಬಜರಂಗದಳ ಸೇರಿದಂತೆ ಬಲಪಂಥೀಯ ಗುಂಪುಗಳು ಮೇ 10 ರಿಂದ 31 ರವರೆಗೆ ಹೈದರಾಬಾದ್‌ನಲ್ಲಿ ನಿಗದಿಯಾಗಿರುವ 72 ನೇ ವಿಶ್ವ ಸುಂದರಿ ಸ್ಪರ್ಧೆಯನ್ನು ವಿರೋಧಿಸಿವೆ.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗೆ “ಯುದ್ಧದಂತಹ ಪರಿಸ್ಥಿತಿ”ಯ ನಡುವೆಯೂ ಸೌಂದರ್ಯ ಸ್ಪರ್ಧೆಯನ್ನು ನಡೆಸಲಾಗುತ್ತಿದೆ ಎಂದು ಬಜರಂಗದಳ ವಿರೋಧಿಸಿದೆ.

ತೆಲಂಗಾಣ ಬಜರಣ್ ದಳದ ಸಂಚಾಲಕ ಶಿವ ರಾಮ್ ಕಾರ್ಯಕ್ರಮವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು. ಜನರಲ್ಲಿ ರಾಷ್ಟ್ರೀಯತೆಯ ಭಾವನೆಗಳನ್ನು ಉತ್ತೇಜಿಸಲು ಎಲ್ಲರೂ ಪ್ರಯತ್ನಿಸಬೇಕು ಎಂದು ಅವರು ಹೇಳಿದರು.

ಪ್ರಸ್ತುತ ಪರಿಸ್ಥಿತಿಯಲ್ಲಿ ಭಾರತೀಯ ಸೇನೆಯ ಬೆಂಬಲಕ್ಕೆ ನಿಲ್ಲುವ ಬದಲು ಸರ್ಕಾರ ಅಂತಹ ಕಾರ್ಯಕ್ರಮವನ್ನು ನಡೆಸಿದರೆ ಜನರು ಸುಮ್ಮನಿರುವುದಿಲ್ಲ ಎಂದು ಅವರು ಎಚ್ಚರಿಸಿದರು.

ಸರ್ಕಾರಿ ನೌಕರರ ಬೇಡಿಕೆಗಳನ್ನು ಪೂರೈಸಲು ರಾಜ್ಯ ಸರ್ಕಾರದ ಬಳಿ ಹಣವಿಲ್ಲ ಎಂಬ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಭಜರಂಗದಳ ನಾಯಕ ಮಿಸ್ ವರ್ಲ್ಡ್ ನಡೆಸಲು ಅದು ಹೇಗೆ ಹಣವನ್ನು ಸಂಗ್ರಹಿಸಿತು ಎಂದು ಪ್ರಶ್ನಿಸಿದ್ದಾರೆ.

“ರಾಜ್ಯವು ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದೆ ಎಂದು ನೀವು ಹೇಳುತ್ತಿದ್ದೀರಿ. ಆದರೆ, ಈ ಅಂತರರಾಷ್ಟ್ರೀಯ ಸೌಂದರ್ಯ ಸ್ಪರ್ಧೆಯನ್ನು ಆಯೋಜಿಸಲು ನಿಮಗೆ ಹಣ ಹೇಗೆ ಸಿಕ್ಕಿತು” ಎಂದು ಅವರು ಕೇಳಿದರು.

ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕೂಡ ಸೌಂದರ್ಯ ಸ್ಪರ್ಧೆಯನ್ನು ವಿರೋಧಿಸಿದೆ. ದೇವಾಲಯಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಯೋಜಿಸಿದ್ದಕ್ಕಾಗಿ ಸರ್ಕಾರವನ್ನು ಟೀಕಿಸಿತು. ಇದನ್ನು ‘ಸಾಂಸ್ಕೃತಿಕ ಜಿಹಾದ್’ ಎಂದು ಕರೆದಿದೆ.

ರಾಮಪ್ಪ ದೇವಸ್ಥಾನ, ಯಾದಗಿರಿಗುಟ್ಟ ಮತ್ತು ಅನಂತಗಿರಿ ಬೆಟ್ಟಗಳಂತಹ ಪವಿತ್ರ ಸ್ಥಳಗಳಲ್ಲಿ ಸ್ಪರ್ಧೆಗಳನ್ನು ನಡೆಸುವ ನಿರ್ಧಾರವನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕೆಂದು ಸಂಘಟನೆ ಒತ್ತಾಯಿಸಿದೆ.

ಮಹಿಳಾ ಗುಂಪುಗಳು ಸಹ ಈ ಕಾರ್ಯಕ್ರಮವನ್ನು ಬಲವಾಗಿ ವಿರೋಧಿಸಿವೆ. ಇದು ಸೂಕ್ತವಲ್ಲ ಮತ್ತು ಮಹಿಳೆಯರನ್ನು ಅವಮಾನಿಸುವಂತಿದೆ ಎಂದು ಅವರು ಕರೆದಿದ್ದಾರೆ.

ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನ್ (ಎಐಎಂಎಸ್ಎಸ್) ಮತ್ತು ಭಾರತೀಯ ಮಹಿಳಾ ರಾಷ್ಟ್ರೀಯ ಒಕ್ಕೂಟ (ಎನ್‌ಎಫ್‌ಐಡಬ್ಲ್ಯೂ) ಸೇರಿದಂತೆ ವಿವಿಧ ಮಹಿಳಾ ಸಂಘಟನೆಗಳು, ಕೆಲವು ವಿದ್ಯಾರ್ಥಿ ಸಂಘಗಳು ಮತ್ತು ಯುವ ಸಂಘಟನೆಗಳೊಂದಿಗೆ ಹೈದರಾಬಾದ್‌ನಲ್ಲಿ ರ‍್ಯಾಲಿ ನಡೆಸಿ, ಸರ್ಕಾರವು ಈ ಕಾರ್ಯಕ್ರಮವನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.

ಮುಖ್ಯ ವಿರೋಧ ಪಕ್ಷವಾದ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದೆ. ಆರ್ಥಿಕ ಸಂಕಷ್ಟದ ಸಮಯದಲ್ಲಿ ಸರ್ಕಾರವು ದುಂದು ವೆಚ್ಚ ಮಾಡಿದೆ ಎಂದು ಅದು ಆರೋಪಿಸಿದೆ.

ಸರ್ಕಾರಿ ನೌಕರರ ವೇತನ, ಪಿಂಚಣಿ ಮತ್ತು ಕಲ್ಯಾಣ ಯೋಜನೆಗಳಂತಹ ನಿರ್ಣಾಯಕ ಆರ್ಥಿಕ ಬಾಧ್ಯತೆಗಳನ್ನು ಪೂರೈಸಲು ತನ್ನ ಬಳಿ ಹಣವಿಲ್ಲ ಎಂದು ಹೇಳಿಕೊಂಡರೂ, ಈ ಕಾರ್ಯಕ್ರಮಕ್ಕಾಗಿ ಸರ್ಕಾರವು ರೂ.200 ಕೋಟಿ ಖರ್ಚು ಮಾಡುತ್ತಿದೆ ಎಂದು ಬಿಆರ್‌ಎಸ್ ಕಾರ್ಯಕಾರಿ ಅಧ್ಯಕ್ಷ ಕೆ.ಟಿ. ರಾಮರಾವ್ ಟೀಕಿಸಿದರು.

ಮಿಸ್ ವರ್ಲ್ಡ್ ಅನ್ನು ಯಶಸ್ವಿಯಾಗಿ ನಡೆಸಲು ವಿಸ್ತಾರವಾದ ವ್ಯವಸ್ಥೆಗಳನ್ನು ಮಾಡುವಂತೆ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೋಮವಾರ ಅಧಿಕಾರಿಗಳಿಗೆ ಆದೇಶಿಸಿದರು.

116 ದೇಶಗಳ ಸ್ಪರ್ಧಿಗಳು ಭಾಗವಹಿಸುವ ಸೌಂದರ್ಯ ಸ್ಪರ್ಧೆಗೆ ಪೊಲೀಸರು ಕಣ್ಗಾವಲು ಹೆಚ್ಚಿಸಬೇಕು, ಕಟ್ಟುನಿಟ್ಟಿನ ಭದ್ರತಾ ವ್ಯವಸ್ಥೆಗಳನ್ನು ಮಾಡಬೇಕು ಎಂದು ಅವರು ಕೇಳಿದರು.

ಮೇ 10 ರಂದು ಗಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಉದ್ಘಾಟನೆಯಿಂದ ಮೇ 31 ರಂದು ನಡೆಯುವ ಗ್ರ್ಯಾಂಡ್ ಫಿನಾಲೆಯವರೆಗಿನ ಪ್ರತಿಯೊಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮುಖ್ಯಮಂತ್ರಿ ಕರೆ ನೀಡಿದರು.

ಮಿಸ್ ವರ್ಲ್ಡ್ ಸ್ಪರ್ಧಿಗಳು ಚಾರ್ಮಿನಾರ್, ಲಾಡ್ ಬಜಾರ್, ಸೆಕ್ರೆಟರಿಯೇಟ್‌ನಲ್ಲಿರುವ ತೆಲಂಗಾಣ ಥಲ್ಲಿ ಪ್ರತಿಮೆ ಮತ್ತು ರಾಜ್ಯದ ಇತರ ಅನೇಕ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಲು ಅಗತ್ಯವಾದ ಸಾರಿಗೆ ಮತ್ತು ಇತರ ಸೌಲಭ್ಯಗಳನ್ನು ಒದಗಿಸುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಹೈದರಾಬಾದ್| ಹಲವು ತಿಂಗಳಿಂದ ಕಿರುಕುಳ; ಆತ್ಮಹತ್ಯೆಗೆ ಶರಣಾದ ನೊಂದ ಶಾಲಾ ಬಾಲಕಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...