Homeಮುಖಪುಟಹೈದ್ರಾಬಾದ್‌: ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಸರ್ಕಲ್‌ ಇನ್‌ಸ್ಪೆಕ್ಟರ್‌‌

ಹೈದ್ರಾಬಾದ್‌: ಮಹಿಳೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ ಸರ್ಕಲ್‌ ಇನ್‌ಸ್ಪೆಕ್ಟರ್‌‌

ಅತ್ಯಾಚಾರ ಮತ್ತು ಕೊಲೆ ಯತ್ನ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು ಇನ್‌ಸ್ಪೆಕ್ಟರ್‌‌‍ ತಲೆಮರೆಸಿಕೊಂಡಿದ್ದಾನೆ.

- Advertisement -
- Advertisement -

ಹೈದ್ರಾಬಾದ್: ಇಲ್ಲಿನ ಸಿಕಂದರಾಬಾದ್‌ನಲ್ಲಿ ಪೊಲೀಸ್ ಅಧಿಕಾರಿಯೊಬ್ಬ ತನ್ನ ಫಾರ್ಮ್‌ಹೌಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯ ಹೆಂಡತಿಯನ್ನು ಅಪಹರಿಸಿ, ಅತ್ಯಾಚಾರ ಮಾಡಿ, ಬಳಿಕ ಗಂಡ-ಹೆಂಡತಿಗೆ ಗನ್ ತೋರಿಸಿ ಕೊಲೆ ಬೆದರಿಕೆ ಹಾಕಿದ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.

“ಮರೇಡಪಲ್ಲಿ ಪೊಲೀಸ್ ಠಾಣೆಯ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ವರ ರಾವ್ ನನ್ನ ಮನೆಗೆ ನುಗ್ಗಿ ನನ್ನ ಮೇಲೆ ಅತ್ಯಾಚಾರ ಎಸಗಿ, ಪತಿಯ ಮೇಲೆ ಹಲ್ಲೆ ನಡೆಸಿ ರಿವಾಲ್ವರ್‌ನಿಂದ ಬೆದರಿಸಿ ಜುಲೈ 7 ಮತ್ತು 8ರ ಮಧ್ಯರಾತ್ರಿ ನಮ್ಮನ್ನು ಅಪಹರಿಸಿದ್ದನು” ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಅತ್ಯಾಚಾರ ಮತ್ತು ಕೊಲೆ ಯತ್ನ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ಸ್‌ಪೆಕ್ಟರ್ ತನ್ನ ವಿರುದ್ಧ ಪ್ರಕರಣ ದಾಖಲಿಸಿದಾಗಿನಿಂದ ತಲೆಮರೆಸಿಕೊಂಡಿದ್ದಾನೆ. ನಾಗೇಶ್ವರ ರಾವ್‌ನನ್ನು ಬಂಧಿಸಲು ಪೊಲೀಸರು ವಿಶೇಷ ತಂಡಗಳನ್ನು ರಚಿಸಿದ್ದಾರೆ. ಆತನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಇನ್ಸ್‌ಪೆಕ್ಟರ್ ನಾಗೇಶ್ವರ್ ರಾವ್, 2018ರಲ್ಲಿ ಒಬ್ಬ ಆರೋಪಿಯನ್ನು ಬಂಧಿಸಿದ್ದರು. ನಂತರ ಆತನನ್ನ ತನ್ನ ತೋಟದ ಮನೆಯಲ್ಲಿ ಮಾಸಿಕ ಸಂಬಳದ ಕೂಲಿಯನ್ನಾಗಿ ನೇಮಿಸಿಕೊಂಡಿದ್ದರು ಎಂದು ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘‘ನನ್ನ ಗಂಡ ತೋಟದ ಮನೆಯಲ್ಲಿ ಕೆಲಸ ಮಾಡುತ್ತಿದ್ದಾಗ ಇನ್‌ಸ್ಪೆಕ್ಟರ್ ನಾಗೇಶ್ವರ್ ರಾವ್ ನನ್ನ ಗಂಡನಿಗೆ ತಿಳಿಯದಂತೆ ನನ್ನನ್ನು ಬಲವಂತವಾಗಿ ಕೃಷಿ ಜಮೀನಿಗೆ ಎಳೆದುಕೊಂಡು ಬಂದನು” ಎಂದು ಸಂತ್ರಸ್ತ ಮಹಿಳೆ ಜುಲೈ 8 ರಂದು ವನಸ್ಥಲಿಪುರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದೆ.

ಮಹಿಳೆ ತನ್ನ ಗಂಡನಿಗೆ ಘಟನೆಯ ಕುರಿತು ವಿವರಿಸಿದಾಗ, ಆಕೆಯ ಪತಿ ಇನ್ಸ್‌ಪೆಕ್ಟರ್‌ಗೆ ಕರೆ ಮಾಡಿ ನನ್ನ ಕುಟುಂಬಕ್ಕೆ ತೊಂದರೆ ನೀಡದಂತೆ ಕೇಳಿಕೊಂಡಿದ್ದಾನೆ. ಇದು ಮುಂದುವರಿದರೆ ನಿಮ್ಮ ಹೆಂಡತಿಗೆ ವಿಷಯ ತಿಳಿಸುತ್ತೇನೆ ಎಂದು ದಂಪತಿ ಹೇಳಿದ್ದಾರೆ. ಆ ಸಮಯದಲ್ಲಿ, ಇನ್ಸ್‌ಪೆಕ್ಟರ್ ನಾಗೇಶ್ವರ ರಾವ್‌ ಕ್ಷಮೆಯಾಚಿಸಿದ್ದನು ಎಂದು ಮಹಿಳೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

“ಇಷ್ಟಾದ ಮೇಲೆ ಒಬ್ಬ ಇನ್‌ಸ್ಪೆಕ್ಟರ್, ಒಬ್ಬ ಸಬ್ ಇನ್‌ಸ್ಪೆಕ್ಟರ್ ಮತ್ತು ಕೆಲವು ಕಾನ್‌ಸ್ಟೆಬಲ್‌ಗಳು ನಮ್ಮ ಮನೆಗೆ ಬಂದು ನನ್ನ ಪತಿಯನ್ನು ಟಾಸ್ಕ್ ಫೋರ್ಸ್ ಕಚೇರಿಗೆ ಕರೆದೊಯ್ದರು. ಪೊಲೀಸರು ನನ್ನ ಪತಿಗೆ ಥಳಿಸಿ, ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿದರು. ಪೊಲೀಸರು ನನ್ನ ಗಂಡನ ಕೈಯಲ್ಲಿ ಗಾಂಜಾ ಪೊಟ್ಟಣಗಳನ್ನು ಇಟ್ಟು ಫೋಟೋ ಮತ್ತು ವಿಡಿಯೊಗಳನ್ನು ಮಾಡಿಕೊಂಡರು. ಏನಾದರೂ ಇನ್ಸ್‌ಸ್ಪೆಕ್ಟರ್‌ ಪತ್ನಿಗೆ ವಿಷಯ ತಿಳಿಸಿದರೆ ಸುಳ್ಳು ಪ್ರಕರಣದಲ್ಲಿ ಸಿಲುಕಿಸುವುದಾಗಿ ನಮ್ಮಿಬ್ಬರನ್ನು ಹೆದರಿಸಿದ್ದಾರೆ” ಎಂದು ಮಹಿಳೆ ಆರೋಪಿಸಿದ್ದಾರೆ.

ಜುಲೈ 7 ರಂದು ರಾತ್ರಿ 9.30 ಗಂಟೆಗೆ ಇನ್ಸ್‌ಪೆಕ್ಟರ್ ನಾಗೇಶ್ವರ್ ರಾವ್ ವನಸ್ಥಲಿಪುರಂನಲ್ಲಿರುವ ತನ್ನ ಮನೆಗೆ ಅತಿಕ್ರಮವಾಗಿ ನುಗ್ಗಿ ಥಳಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.

ನನ್ನ ಗಂಡ ಮನೆಗೆ ಬಂದು ಬಾಗಿಲು ತೆರೆದು ಇನ್ಸ್‌ಪೆಕ್ಟರ್‌ಗೆ ಕೋಲಿನಿಂದ ಹೊಡೆಯಲು ಪ್ರಾರಂಭಿಸಿದರು. ನಂತರ ಇನ್‌ಸ್ಪೆಕ್ಟರ್‌ ನಾಗೇಶ್ವರ್ ನಮ್ಮಿಬ್ಬರಿಗೂ ರಿವಾಲ್ವರ್ ತೋರಿಸಿ ಬೆದರಿಸಿದರು ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಉತ್ತರ ಪ್ರದೇಶ: ಅಪ್ರಾಪ್ತ ತಂಗಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಲು ಸಹಾಯ ಮಾಡಿದ ಅಕ್ಕ

ಹೈದರಾಬಾದ್ ಬಿಟ್ಟು ಹೋಗದಿದ್ದರೆ ನೀವಿಬ್ಬರು ‘ವೇಶ್ಯಾಗೃಹ’ ನಡೆಸುತ್ತಿದ್ದಿರಿ ಎಂದು ಸುಳ್ಳು ಪ್ರಕರಣ ದಾಖಲಿಸುವುದಾಗಿ ಇನ್ಸ್‌ಪೆಕ್ಟರ್ ಬೆದರಿಕೆ ಹಾಕಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.

ಗಂಡ ಹೆಂಡತಿಯನ್ನು ವಾಹನದಲ್ಲಿ ಕೂರಿಸಿಕೊಂಡು ಇಬ್ರಾಹಿಂಪಟ್ಟಣದತ್ತ ಕರೆದೊಯ್ಯಲಾಗುತ್ತಿತ್ತು. ಜುಲೈ 8ರ ಮುಂಜಾನೆ ಕಾರು ಅಪಘಾತಕ್ಕೀಡಾಯಿತು, ಆಗ ದಂಪತಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಮಹಿಳೆಯ ದೂರಿನ ಆಧಾರದ ಮೇಲೆ, ರಾಚಕೊಂಡ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ವನಸ್ಥಲಿಪುರಂ ಪೊಲೀಸ್ ಠಾಣೆಯಲ್ಲಿ ಪೊಲೀಸ್ ಅಧಿಕಾರಿಯ ವಿರುದ್ಧ ಅತ್ಯಾಚಾರ, ಕ್ರಿಮಿನಲ್ ಅತಿಕ್ರಮಣ, ಕೊಲೆಯತ್ನ, ಅಪಹರಣ ಮತ್ತು ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...