Homeಮುಖಪುಟಹೈದರಾಬಾದ್: ಔಷಧ ಕಾರ್ಖಾನೆಯಲ್ಲಿ ಸ್ಫೋಟ, 8 ಮಂದಿಗೆ ಗಾಯ

ಹೈದರಾಬಾದ್: ಔಷಧ ಕಾರ್ಖಾನೆಯಲ್ಲಿ ಸ್ಫೋಟ, 8 ಮಂದಿಗೆ ಗಾಯ

- Advertisement -
- Advertisement -

ಹೈದರಾಬಾದ್ ನಗರದ ಹೊರವಲಯದಲ್ಲಿರುವ ಬೊಲ್ಲಾರಂ ಕೈಗಾರಿಕಾ ಪ್ರದೇಶದ ಔಷಧ ತಯಾರಿಕಾ ಕಾರ್ಖಾನೆಯೊಂದರಲ್ಲಿ ಭಾರಿ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 8 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಹೈದರಾಬಾದ್ ಮಹಾನಗರ ಪ್ರದೇಶದ ಭಾಗವಾಗಿರುವ ತೆಲಂಗಾಣದ ಸಂಗರೆಡ್ಡಿ ಜಿಲ್ಲೆಯ ಬೊಲ್ಲಾರಂನಲ್ಲಿರುವ ಕೈಗಾರಿಕಾ ಅಭಿವೃದ್ಧಿ ಪ್ರದೇಶದ ವಿಂಧ್ಯ ಆರ್ಗಾನಿಕ್ಸ್‌ನಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಿಯಂತ್ರಿಸಲು ಹರಸಾಹಸ ಪಟ್ಟಿದ್ದಾರೆ. ಘಟನೆಯಲ್ಲಿ ಸುಮಾರು 8 ಕಾರ್ಮಿಕರು ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಇದನ್ನೂ ಓದಿ: BJP ಮತೀಯ ಭಾವನೆ ಕೆರಳಿಸುತ್ತದೆಯೆ ವಿನಃ ಗೋವಿನ ಬಗ್ಗೆ ಭಕ್ತಿ, ಕಾಳಜಿ ಇಲ್ಲ: ಸಿದ್ದರಾಮಯ್ಯ

’ಕೆಲವು ರಾಸಾಯನಿಕ ಪ್ರತಿಕ್ರಿಯೆಗಳಿಗೆ ದ್ರಾವಕವನ್ನು ಇರಿಸಲಾಗಿತ್ತು, ಅದರಿಂದ ಬೆಂಕಿ ಉಂಟಾಗಿ, ಸ್ಫೋಟ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ” ಎಂದು ಪೊಲೀಸರು ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಘಟನೆ ಸಂಭವಿಸಿದಾಗ ಔಷಧ ಕಾರ್ಖಾನೆಯಲ್ಲಿ ಸುಮಾರು 100 ಜನ ಕೆಲಸ ನಿರ್ವಹಿಸುತ್ತಿದ್ದರು. ಇವರೆಗೆ ಯಾವುದೇ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ.


ಇದನ್ನೂ ಓದಿ: ನಿಲ್ಲದ ರೈತ ಹೋರಾಟ: 100 ಪತ್ರಿಕಾಗೋಷ್ಟಿ, 700 ಸಭೆಗಳ ಮೂಲಕ ಪ್ರಚಾರಕ್ಕೆ ಹೊರಟ ಬಿಜೆಪಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...