ಹೈದರಾಬಾದ್‌ನ ಚಾರ್ ಮಿನಾರ್ ಬಳಿ ಭಾನುವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಮಕ್ಕಳು ಸೇರಿದಂತೆ ಹದಿನೇಳು ಜನರು ಸಾವನ್ನಪ್ಪಿದ್ದಾರೆ ಎಂದು ANI ವರದಿ ಮಾಡಿದೆ. ಚಾರ್ ಮಿನಾರ್‌ನ ಗುಲ್ಜಾರ್ ಹೌಸ್ ಚೌರಸ್ತಾದಲ್ಲಿರುವ ಮೂರು ಅಂತಸ್ತಿನ ಕಟ್ಟಡದಲ್ಲಿ ಬೆಳಿಗ್ಗೆ 6.16 ಕ್ಕೆ ಬೆಂಕಿ ಕಾಣಿಸಿಕೊಂಡ ಬಗ್ಗೆ ಮಾಹಿತಿ ಬಂದಿದೆ ಎಂದು ತೆಲಂಗಾಣ ಅಗ್ನಿಶಾಮಕ ವಿಪತ್ತು ಪ್ರತಿಕ್ರಿಯೆ ತುರ್ತುಸ್ಥಿತಿ ಮತ್ತು ನಾಗರಿಕ ರಕ್ಷಣಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಹೈದರಾಬಾದ್ | ಚಾರ್ ಮಿನಾರ್
ನೆಲ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡು ಮೇಲಿನ ಮಹಡಿಗಳಿಗೆ ಹರಡಿತು ಎಂದು ಅದು ಹೇಳಿದ್ದು, “ಅಗ್ನಿಶಾಮಕ, ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಗಳನ್ನು ಏಕಕಾಲದಲ್ಲಿ ನಡೆಸಲಾಯಿತು. ಮೊದಲ ಮಹಡಿಯಲ್ಲಿ 17 ಜನರು ಸಿಲುಕಿಕೊಂಡಿದ್ದಾರೆ” ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸೇರಿಸಲಾಗಿದೆ. ಬೆಂಕಿಯಲ್ಲಿ ಸಾವನ್ನಪ್ಪಿದ 17 ಜನರ ಹೆಸರುಗಳನ್ನು ಪತ್ರಿಕಾ ಪ್ರಕಟಣೆಯಲ್ಲಿ ಪಟ್ಟಿ ಮಾಡಲಾಗಿದೆ.
17 people have lost their lives in the fire incident that broke out in a building in Gulzar House near Charminar in Hyderabad earlier today: Telangana Fire Disaster Response Emergency & Civil Defence. pic.twitter.com/AjQGiczzyZ
— ANI (@ANI) May 18, 2025
“ಸುಮಾರು ಒಂಬತ್ತು ಜನರಿಗೆ ಸುಟ್ಟ ಗಾಯಗಳಾಗಿವೆ ಮತ್ತು ಉಳಿದವರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ” ಎಂದು ಅಗ್ನಿಶಾಮಕ ಅಧಿಕಾರಿಯೊಬ್ಬರು ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಸ್ಥಳದಲ್ಲಿ 11 ಅಗ್ನಿಶಾಮಕ ದಳದ ವಾಹನಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಬೆಂಕಿಯಲ್ಲಿ ಮಡಿದವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. “ತೆಲಂಗಾಣದ ಹೈದರಾಬಾದ್‌ನಲ್ಲಿ ಸಂಭವಿಸಿದ ಬೆಂಕಿ ದುರಂತದಿಂದ ಜೀವಹಾನಿಯಾಗಿರುವುದಕ್ಕೆ ತೀವ್ರ ದುಃಖವಾಗಿದೆ. ಮೃತರ ಪ್ರತಿಯೊಬ್ಬರ ಹತ್ತಿರದ ಸಂಬಂಧಿಕರಿಗೆ PMNRF [ಪ್ರಧಾನಿ ರಾಷ್ಟ್ರೀಯ ಪರಿಹಾರ ನಿಧಿ] ಯಿಂದ 2 ಲಕ್ಷ ರೂ. ಪರಿಹಾರ ನೀಡಲಾಗುವುದು.” ಎಂದು ಅವರು ಹೇಳಿದ್ದಾರೆ.
ಗಾಯಗೊಂಡವರಿಗೆ 50,000 ರೂ. ನೀಡಲಾಗುವುದು ಎಂದು ಮೋದಿ ಹೇಳಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ಪರಿಹಾರ ಕಾರ್ಯಗಳನ್ನು ತೀವ್ರಗೊಳಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ ಎಂದು ಹೇಳಿದ್ದಾರೆ. ಹೈದರಾಬಾದ್ | ಚಾರ್ ಮಿನಾರ್
ಇಲ್ಲಿ ಕ್ಲಿಕ್ ಮಾಡಿ
ಇದನ್ನೂಓದಿ: ಬಿಹಾರ | ಪ್ರಶಾಂತ್ ಕಿಶೋರ್ ಜನ ಸುರಾಜ್ ಪಕ್ಷದೊಂದಿಗೆ ಆರ್‌ಸಿಪಿ ಸಿಂಗ್ ಪಕ್ಷ ವಿಲೀನ
ಬಿಹಾರ | ಪ್ರಶಾಂತ್ ಕಿಶೋರ್ ಜನ ಸುರಾಜ್ ಪಕ್ಷದೊಂದಿಗೆ ಆರ್‌ಸಿಪಿ ಸಿಂಗ್ ಪಕ್ಷ ವಿಲೀನ

