Homeಮುಖಪುಟಹೈದರಾಬಾದ್ ಗ್ಯಾಂಗ್ ರೇಪ್: AIMIM ಶಾಸಕನ ಪುತ್ರ ಸೇರಿದಂತೆ ಎಲ್ಲ ಆರೋಪಿಗಳ ಬಂಧನ

ಹೈದರಾಬಾದ್ ಗ್ಯಾಂಗ್ ರೇಪ್: AIMIM ಶಾಸಕನ ಪುತ್ರ ಸೇರಿದಂತೆ ಎಲ್ಲ ಆರೋಪಿಗಳ ಬಂಧನ

- Advertisement -
- Advertisement -

ದೇಶದಲ್ಲಿ ಭಾರಿ ಆಕ್ರೋಶಕ್ಕೆ ಮತ್ತು ರಾಜಕೀಯ ಕೆಸರೆರಚಾಟಕ್ಕೆ ಕಾರಣವಾದ ಹೈದರಾಬಾದ್ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಒಬ್ಬ ವಯಸ್ಕ ಮತ್ತು ಐವರು ಅಪ್ರಾಪ್ತರು ಸೇರಿದಂತೆ ಎಲ್ಲ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದಲ್ಲಿ ಎಐಎಂಐಎಂ (ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್) ಶಾಸಕನ ಅಪ್ರಾಪ್ತ ಪುತ್ರನನ್ನು ಆರೋಪಿ ಎಂದು ಹೆಸರಿಸಲಾಗಿದ್ದು, ಆತನನ್ನು ಆರನೇ ಆರೋಪಿಯಾಗಿ ಬಂಧಿಸಲಾಗಿದೆ.

18 ವರ್ಷದ ವಯಸ್ಕ ಆರೋಪಿ ಸದುದ್ದೀನ್ ಮಲಿಕ್ ಸೇರಿದಂತೆ ಮೊದಲ ಐವರು ಆರೋಪಿಗಳ ಮೇಲೆ ಸಾಮೂಹಿಕ ಅತ್ಯಾಚಾರ, ಅಪಹರಣ, ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು ಮತ್ತು POCSO ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಕನಿಷ್ಠವೆಂದರೂ 20 ವರ್ಷಗಳ ಜೈಲು ಅಥವಾ ಜೀವಮಾನದ ಜೈಲು ಶಿಕ್ಷೆ ವಿಧಿಸಬಹುದು.

ಆರನೇ ಆರೋಪಿ ಅತ್ಯಾಚಾರದಲ್ಲಿ ಭಾಗಿಯಾಗಿಲ್ಲ ಆದರೂ ಲೈಂಗಿಕ ದೌರ್ಜನ್ಯ ನಡೆಸಿರುವುದರಿಂದ ಆತನ ವಿರುದ್ಧ ಐಪಿಸಿ ಸೆಕ್ಷನ್ 354 (ಮಹಿಳೆಯ ವಿರುದ್ಧ ಅಪರಾಧ ಪ್ರಕರಣ) ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್‌ ಅಡಿ ಪ್ರಕರಣ ದಾಖಲಿಸಲಾಗಿದೆ. ಆತನಿಗೂ 5–7 ವರ್ಷ ಜೈಲು ಶಿಕ್ಷೆಯಾಗುವ ಸಾಧ್ಯತೆ ಇದೆ ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದಾರೆ.

ಇದನ್ನೂ ಓದಿ: ಹೈದರಾಬಾದ್: ಬಾಲಕಿ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬೆಳಕಿಗೆ ಬಂದ ಮತ್ತಷ್ಟು ಕೇಸ್‌ಗಳು

ಕಳೆದ ವಾರ, ಬಿಜೆಪಿ ಶಾಸಕ ರಘುನಂದನ್ ರಾವ್, ಎಐಎಂಐಎಂ ಶಾಸಕರ ಮಗ ಕೂಡ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ, ಸಂತ್ರಸ್ತ ಬಾಲಕಿಯ ಜೊತೆಗಿರುವ ವಿಡಿಯೋ ಕ್ಲಿಪ್ ಮತ್ತು ಫೋಟೋಗಳನ್ನು ಬಿಡುಗಡೆ ಮಾಡಿದ್ದರು. ಶಾಸಕರ ಮಗ ಕಾರಿನಲ್ಲಿ ಇದ್ದರೂ, ಪೊಲೀಸರು ಮರೆ ಮಾಚುತ್ತಿದ್ದಾರೆ ಎಂದು ಆರೋಪಿಸಿದರು.

ಈಗ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಬಿಜೆಪಿ ಶಾಸಕ ರಘುನಂದನ್ ರಾವ್ ವಿರುದ್ಧ ಅಬಿಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರು ಕೂಡ ಆರಂಭದಲ್ಲಿ, ಸ್ಥಳೀಯ ಪೇಸ್ಟ್ರಿ ಅಂಗಡಿಯಲ್ಲಿ ಇವರನ್ನು ಬಿಟ್ಟು ಶಾಸಕರ ಮಗ ಹೊರಟು ಹೋಗಿದ್ದರಿಂದ ಸಾಮೂಹಿಕ ಅತ್ಯಾಚಾರದಲ್ಲಿ ಭಾಗಿಯಾಗಿಲ್ಲ ಎಂದು ಸಮರ್ಥಿಸಿಕೊಂಡಿದ್ದರು.”ಆರನೇ ಆರೋಪಿ ಇನ್ನೋವಾದಲ್ಲಿ (ಕಾರು) ಸ್ವಲ್ಪ ದೂರ ಪ್ರಯಾಣಿಸಿದ್ದಾರೆ. ನಂತರ ಫೋನ್ ಕರೆ ಬಂದಿದ್ದರಿಂದ ಹಿಂತಿರುಗಿದ ಬಳಿಕ ಐದು ಜನರು ಅತ್ಯಾಚಾರ ಎಸಗಿದ್ದಾರೆ” ಎಂದು ಕಮಿಷನರ್ ತಿಳಿಸಿದ್ದಾರೆ.

“ಮಧ್ಯಾಹ್ನ 3 ಗಂಟೆ ಸುಮಾರಿಗೆ ಪಬ್‌ನಲ್ಲಿಯೇ ಬಾಲಕಿಗೆ ಕಿರುಕುಳ ನೀಡಲು ಆರಂಭವಾಗಿದೆ. ಆಕೆಯ ಸ್ನೇಹಿತ ಹೋದ ನಂತರ ಸಂಜೆ 5:40 ರ ಸುಮಾರಿಗೆ ಆರೋಪಿಗಳು ಪಬ್‌ನ ಹೊರಗೆ ಇವರ ಕೈಗೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳು 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಾಗಿದ್ದು, “ರಾಜಕೀಯವಾಗಿ ಪ್ರಭಾವಿ” ಕುಟುಂಬಕ್ಕೆ ಸೇರಿದವರು” ಎಂದು ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಹೇಳಿದ್ದಾರೆ.

ಪೊಲೀಸರ ಕೈಗೆ ಸಿಕ್ಕಿಬಿದ್ದ ಅಪ್ರಾಪ್ತರಲ್ಲಿ ಒಬ್ಬರು ರಾಜ್ಯದ ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿಯ ಸ್ಥಳೀಯ ನಾಯಕರೊಬ್ಬರ ಪುತ್ರ. ಇನ್ನೋರ್ವ ಅಪ್ರಾಪ್ತ ಸಂಗ ರೆಡ್ಡಿಯ ಟಿಆರ್‌ಎಸ್ ಮುಖಂಡರೊಬ್ಬರ ಪುತ್ರರಾಗಿದ್ದಾರೆ.

ಮೇ 28 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ ಪ್ರದೇಶದಲ್ಲಿ ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿದ್ದಾಗ 17 ವರ್ಷದ ಬಾಲಕಿಯ ಮೇಲೆ ರಾಜಕೀಯ ಕುಟುಂಬಗಳ ಅಪ್ರಾಪ್ತ ವಯಸ್ಕರು ಸೇರಿದಂತೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.


ಇದನ್ನೂ ಓದಿ: ಹೈದರಾಬಾದ್ ಗ್ಯಾಂಗ್ ರೇಪ್ : ಸಂತ್ರಸ್ತೆಯ ವಿಡಿಯೋ ಹಂಚಿಕೊಂಡಿದ್ದ ಬಿಜೆಪಿ ಶಾಸಕನ ಮೇಲೆ FIR

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...