Homeಮುಖಪುಟಹೈದರಾಬಾದ್ ಗ್ಯಾಂಗ್ ರೇಪ್: ಇಬ್ಬರ ಬಂಧನ, ಮೂವರು ಅಪ್ರಾಪ್ತರ ಪತ್ತೆ

ಹೈದರಾಬಾದ್ ಗ್ಯಾಂಗ್ ರೇಪ್: ಇಬ್ಬರ ಬಂಧನ, ಮೂವರು ಅಪ್ರಾಪ್ತರ ಪತ್ತೆ

- Advertisement -
- Advertisement -

ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರಗೈದಿರುವ ಪ್ರಕರಣದಲ್ಲಿ ಹೈದರಾಬಾದ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸಿಸಿಟಿವಿ ಫೂಟೆಜ್‌ಗಳ ಆಧಾರದಲ್ಲಿ ಐವರು ಆರೋಪಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಮೂವರು ಅಪ್ರಾಪ್ತ ಬಾಲಕರು ಸೇರಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶನಿವಾರ ಸಂಜೆ ಈ ಅಮಾನವೀಯ ಕೃತ್ಯ ಜರುಗಿದ್ದು, ಆರೋಪಿಗಳೆಲ್ಲರು ಪ್ರಥಮ ಮತ್ತು ದ್ವಿತೀಯ ಪಿಯುಸಿ ಓದುತ್ತಿದ್ದು, ರಾಜಕೀಯ ಪ್ರಭಾವಿಗಳ ಕುಟುಂಬಕ್ಕೆ ಸೇರಿದ್ದಾರೆ. ಗೃಹ ಸಚಿವರ ಮೊಮ್ಮಗ ಭಾಗಿಯಾಗಿಲ್ಲ ಎಂದಿರುವ ಪೊಲೀಸರು, ಬಾಲಕಿಯ ಹೇಳಿಕೆ ಆಧರಿಸಿ IPC ಸೆಕ್ಷನ್ 354 ಮತ್ತು 323 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (POCSO) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

“ಆರೋಪಿ ಸಾದುದ್ದೀನ್ ಮಲಿಕ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗುರುತಿಸಲಾದ ಐದು ಜನರಲ್ಲಿ ಮೂವರು ಅಪ್ರಾಪ್ತರು” ಎಂದು ಉಪ ಪೊಲೀಸ್ ಆಯುಕ್ತ (ಪಶ್ಚಿಮ ವಲಯ) ಜೋಯಲ್ ಡೇವಿಸ್ ತಿಳಿಸಿದ್ದಾರೆ.

ಶನಿವಾರ ಸಂಜೆ 17 ವರ್ಷದ ಬಾಲಕಿಯೊಬ್ಬಳು ತನ್ನ ಸ್ನೇಹಿತನ ಜೊತೆ ಪಬ್ ಒಂದಕ್ಕೆ ತೆರಳಿದ್ದಾಳೆ. ಆದರೆ ಆತ ಬೇಗನೇ ಪಬ್‌ನಿಂದ ತೆರಳಿದ್ದಾನೆ. ಅಲ್ಲಿಂದ ಆರೋಪಿ ಬಾಲಕರು ಡ್ರಾಪ್ ಕೊಡುವುದಾಗಿ ಹೇಳಿ ಬಾಲಕಿಯೊಂದಿಗೆ ಸ್ನೇಹ ಸಾಧಿಸಿದ್ದು ಕಾರ್‌ನಲ್ಲಿ ತೆರಳಿದ್ದಾರೆ. ದಾರಿ ಮಧ್ಯೆ ಬೇಕರಿಗೂ ಭೇಟಿ ಕೊಟ್ಟಿದ್ದಾರೆ ಎನ್ನಲಾಗಿದೆ.

ಆ ಐದು ಬಾಲಕರು ಕಾರನ್ನು ಪ್ರತಿಷ್ಟಿತ ಜ್ಯುಬಿಲಿ ಹಿಲ್ಸ್ ಎಂಬಲ್ಲಿ ನಿಲ್ಲಿಸಿ, ಕಾರಿನೊಳಗೆ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಹೊರಗೆ ನಿಂತು ಕಾವಲು ಕಾದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಶಾಸಕನ ಮಗನೂ ಸಹ ಭಾಗಿಯಾಗಿದ್ದು, ಆದರೆ ಅತ್ಯಾಚಾರ ನಡೆಯುವ ಮುನ್ನವೇ ಕಾರಿನಿಂದ ಇಳಿದು ಹೋಗಿದ್ದಾನೆ ಎನ್ನಲಾಗಿದೆ. ಸಂಪೂರ್ಣ ವಿಚಾರಣೆಯ ಬಳಿಕವಷ್ಟೇ ಸತ್ಯ ಹೊರಬೀಳಲಿದೆ.

ಬಾಲಕಿ ಸದ್ಯ ಶಾಕ್‌ನಲ್ಲಿದ್ದಾಳೆ. ಪೂರ್ತಿ ವಿವರ ನೀಡುವ ಪರಿಸ್ಥಿತಿಯಲ್ಲಿಲ್ಲ. ಸದ್ಯಕ್ಕೆ ಸಿಕ್ಕಿರುವ ಮಾಹಿತಿಯ ಆಧಾರದಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದೇವೆ. ಸಿಸಿಟಿವಿ ದೃಶ್ಯಾವಳಿಗಳು ಸೇರಿ ಇನ್ನಿತರ ತಾಂತ್ರಿಕ ಸಾಕ್ಷಿಗಳ ಆಧಾರದಲ್ಲಿ ತನಿಖೆ ನಡೆಸುತ್ತಿದ್ದೇವೆ. ಅಪ್ರಾಪ್ತರಿಗೆ ಕ್ಲಬ್‌ನಲ್ಲಿ ಹೇಗೆ ಪ್ರವೇಶ ನೀಡಲಾಯಿತು ಎನ್ನುವುದರ ಕುರಿತೂ ತನಿಖೆ ನಡೆಸುತ್ತಿದ್ದೇವೆ ಎಂದು ಪೊಲೀಸ್ ಅಧಿಕಾರಿ ಜೋಲ್ ಡೇವಿಸ್ ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಖಂಡಿಸಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳುವಂತೆ ತೆಲಂಗಾಣ ಐಟಿ ಸಚಿವ ಕೆಟಿ ರಾಮರಾವ್ ಅವರು ರಾಜ್ಯ ಗೃಹ ಸಚಿವ ಮೊಹಮ್ಮದ್ ಮಹಮೂದ್ ಅಲಿ, ಡಿಜಿಪಿ ಮತ್ತು ಹೈದರಾಬಾದ್ ನಗರ ಪೊಲೀಸ್ ಕಮಿಷನರ್‌ರವರಲ್ಲಿ ಮನವಿ ಮಾಡಿದ್ದಾರೆ. “ಆರೋಪಿಗಳ ಸ್ಥಾನಮಾನಗಳು ಅಥವಾ ಸಂಬಂಧಗಳನ್ನು ಲೆಕ್ಕಿಸದೆ ಯಾರನ್ನೂ ಬಿಡಬೇಡಿ” ಎಂದು ವಿನಂತಿಸಿದ್ದಾರೆ.

“ಅಪ್ರಾಪ್ತ ಬಾಲಕಿಯ ಅತ್ಯಾಚಾರದ ದುಃಖ ಮತ್ತು ನಾಚಿಕೆಗೇಡಿನ ಘಟನೆಯಲ್ಲಿ ನಾವು ಆ ಕುಟುಂಬದ ಬೆಂಬಲಕ್ಕೆ ನಿಂತಿದ್ದೇವೆ. ತೆಲಂಗಾಣ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುತ್ತಾರೆ ಎಂಬ ವಿಶ್ವಾಸ ನನಗಿದೆ. ಮಹಿಳಾ ಸುರಕ್ಷತೆಯ ವಿಷಯದಲ್ಲಿ ನಾವು ಜೀರೋ ಸಹಿಷ್ಣುತೆಯ ದಾಖಲೆಯನ್ನು ಹೊಂದಿದ್ದೇವೆ” ಎಂದು ತೆಲಂಗಾಣ ರಾಷ್ಟ್ರ ಸಮಿತಿ ನಾಯಕಿ ಕೆ ಕವಿತಾ ಹೇಳಿದ್ದಾರೆ.

ಇದನ್ನೂ ಓದಿ: 8 ವರ್ಷಗಳ ನರೇಂದ್ರ ಮೋದಿ ಸರ್ಕಾರದ ವಿಚ್ಛಿದ್ರಕಾರಿ ಸಾಧನೆಗಳು

ಅತ್ಯಾಚಾರವೆಂಬದು ಹೀನ ಕುಕೃತ್ಯ. ವಿಕೃತ ಮನಸ್ಸಗಳು ಮಾಡುವ ಘೋರ ಅಪರಾಧ. ಇಂತಹ ಹೀನ ಕೃತ್ಯಕ್ಕೆ ಹೈದರಾಬಾದ್‌ನಲ್ಲಿ ಶಾಲಾ ಬಾಲಕರೂ ಇಳಿದಿರುವುದು ದುರಂತವಾಗಿದೆ. ಈ ಕುರಿತು ಸರ್ಕಾರಗಳು ಗಂಭೀರವಾಗಿ ಚಿಂತಿಸಿ ಮಕ್ಕಳಿಗೆ ಚಿಕ್ಕಂದಿನಲ್ಲಿಯೇ ಅರಿವು ಮೂಡಿಸಬೇಕಿದೆ. ಅತ್ಯಾಚಾರಗಳನ್ನು ತಡೆಯಲು ಗಂಭೀರ ಪ್ರಯತ್ನ ಹಾಕಬೇಕಿದೆ. ಅದು ಘೋರ ಅಪರಾಧ ಎಂದು ಎಲ್ಲರ ಮನಸ್ಸಿನಲ್ಲಿ ಮೂಡುವಂತೆ ಒತ್ತಡ ಹಾಕಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....