Homeಮುಖಪುಟಹೈದರಾಬಾದ್ ಗ್ಯಾಂಗ್‌ರೇಪ್: ನಾಲ್ವರು ಆರೋಪಿಗಳು ಅಪ್ರಾಪ್ತರು - ಜಾಮೀನು ಮಂಜೂರು

ಹೈದರಾಬಾದ್ ಗ್ಯಾಂಗ್‌ರೇಪ್: ನಾಲ್ವರು ಆರೋಪಿಗಳು ಅಪ್ರಾಪ್ತರು – ಜಾಮೀನು ಮಂಜೂರು

ಇದೇ ಹೈದರಾಬಾದ್‌ನಲ್ಲಿ 2019ರಲ್ಲಿ ಪಶುವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ನಕಲಿ ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿತ್ತು!

- Advertisement -
- Advertisement -

ಹೈದರಾಬಾದ್‌ನಲ್ಲಿ ಪಬ್‌ಗೆ ತೆರಳಿದ್ದ ಬಾಲಕಿಗೆ ಡ್ರಾಪ್ ಕೊಡುವ ನೆಪದಲ್ಲಿ ರಾಜಕಾರಣಿಗಳು ಮತ್ತು ಪ್ರಭಾವಿಗಳ ಪುತ್ರರು ಸೇರಿ ನಡೆಸಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಅಪ್ರಾಪ್ತರು ಎಂದು ಪರಿಗಣಿಸಿರುವ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಐವರು ಅಪ್ರಾಪ್ತ ಶಾಲಾ ಬಾಲಕರು ಕಾರಿನೊಳಗೆ ಕೂಡಿಹಾಕಿ ಸಾಮೂಹಿಕ ಅತ್ಯಾಚಾರಗೈದಿದ್ದಾರೆ ಎಂಬ ಆರೋಪದ ಮೇಲೆ ಹೈದರಾಬಾದ್ ಪೊಲೀಸರು ಪ್ರಕರಣ ದಾಖಲಿಸಿದ್ದರು. 18 ವರ್ಷದ ವಯಸ್ಕ ಆರೋಪಿ ಸದುದ್ದೀನ್ ಮಲಿಕ್ ಸೇರಿದಂತೆ ಮೊದಲ ಐವರು ಆರೋಪಿಗಳ ಮೇಲೆ ಸಾಮೂಹಿಕ ಅತ್ಯಾಚಾರ, ಅಪಹರಣ, ಸ್ವಯಂಪ್ರೇರಣೆಯಿಂದ ಗಾಯಗೊಳಿಸುವುದು ಮತ್ತು POCSO ಕಾಯಿದೆಯ ಸೆಕ್ಷನ್‌ಗಳ ಅಡಿಯಲ್ಲಿ ಬಂಧಿಸಲಾಗಿತ್ತು.

ಪ್ರಕರಣದಲ್ಲಿ ಎಲ್ಲಾ ಐದು ಆರೋಪಿಗಳು ಕಿರಿಯರು 16 ಮತ್ತು 18 ವರ್ಷಗಳ ನಡುವೆ ಇದ್ದಾರೆ. ಅವರಲ್ಲಿ ಒಬ್ಬ ಆರೋಪಿಗೆ 18 ವರ್ಷ ತುಂಬಲು ಕೇವಲ ಒಂದು ತಿಂಗಳ ಕಡಿಮೆಯಿದೆ. ಇವರೆಲ್ಲರೂ ಪ್ರಭಾವಿ ರಾಜಕೀಯ ಕುಟುಂಬಗಳಿಂದ ಬಂದವರು ಅಥವಾ ಪ್ರಬಲ ರಾಜಕೀಯ ಸಂಪರ್ಕ ಹೊಂದಿದ್ದಾರೆ ಎನ್ನಲಾಗಿದೆ.

ಇದರಲ್ಲಿ 18 ವರ್ಷದೊಳಗಿನ ಐವರು ಆರೋಪಿಗಳನ್ನು ವಯಸ್ಕರಂತೆ ವಿಚಾರಣೆಗೆ ಒಳಪಡಿಸಲು ಪೊಲೀಸರು ಒತ್ತಾಯಿಸಿದ್ದರು. ಇದರಿಂದಾಗಿ ಈ ಐವರು ಗರಿಷ್ಠ ಶಿಕ್ಷೆಗೆ ಗುರಿಯಾಗುತ್ತಾರೆ ಎಂಬುದು ಪೊಲೀಸರ ವಾದವಾಗಿತ್ತು. ಆದರೆ ನ್ಯಾಯಾಲಯವು ಆ ಮನವಿಯನ್ನು ಪುರಸ್ಕರಿಸದ ಕಾರಣ ನಾಲ್ವರನ್ನು ಇಂದು ಬಿಡುಗಡೆ ಮಾಡಲಾಗಿದೆ.

ಪ್ರಕರಣದ ಹಿನ್ನೆಲೆ

ಮೇ 28 ರಂದು ಈ ಘಟನೆ ನಡೆದಿತ್ತು. 17 ವರ್ಷದ ಬಾಲಕಿಯೊಬ್ಬಳು ತನ್ನ ಸ್ನೇಹಿತನ ಜೊತೆ ಪಬ್ ಒಂದಕ್ಕೆ ತೆರಳಿದ್ದಾಳೆ. ಆದರೆ ಆತ ಬೇಗನೇ ಪಬ್‌ನಿಂದ ತೆರಳಿದ್ದಾನೆ. ಅಲ್ಲಿಂದ ಆರೋಪಿ ಬಾಲಕರು ಡ್ರಾಪ್ ಕೊಡುವುದಾಗಿ ಹೇಳಿ ಬಾಲಕಿಯೊಂದಿಗೆ ಸ್ನೇಹ ಸಾಧಿಸಿದ್ದು ಕಾರ್‌ನಲ್ಲಿ ತೆರಳಿದ್ದಾರೆ. ಆ ಐದು ಬಾಲಕರು ಕಾರನ್ನು ಪ್ರತಿಷ್ಟಿತ ಜ್ಯುಬಿಲಿ ಹಿಲ್ಸ್ ಎಂಬಲ್ಲಿ ನಿಲ್ಲಿಸಿ, ಕಾರಿನೊಳಗೆ ಬಾಲಕಿಯ ಮೇಲೆ ಅತ್ಯಾಚಾರವೆಸಗಲಾಗಿದೆ. ಈ ಸಂದರ್ಭದಲ್ಲಿ ಕೆಲವರು ಹೊರಗೆ ನಿಂತು ಕಾವಲು ಕಾದಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಶಾಸಕನ ಮಗನೂ ಸಹ ಭಾಗಿಯಾಗಿದ್ದು, ಆದರೆ ಅತ್ಯಾಚಾರ ನಡೆಯುವ ಮುನ್ನವೇ ಕಾರಿನಿಂದ ಇಳಿದು ಹೋಗಿದ್ದಾನೆ ಎನ್ನಲಾಗಿತ್ತು.

ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಆಡಳಿತರೂಢ ಟಿಆರ್‌ಎಸ್ ಪಕ್ಷ ಆರೋಪಿಗಳನ್ನು ರಕ್ಷಿಸುತ್ತಿದೆ ಎಂದು ಆರೋಪಿಸಿದ್ದರು. ರಾಷ್ಟ್ರೀಯ ಮಹಿಳಾ ಆಯೋಗ ಸಹ ಪ್ರಕರಣದ ಸಂಪೂರ್ಣ ವರದಿ ಸಲ್ಲಿಸುವಂತೆ ಆದೇಶಿಸಿತ್ತು.

ಹಿಂದೆ ನಡೆದಿತ್ತು ನಕಲಿ ಎನ್‌ಕೌಂಟರ್

ಇದೇ ಹೈದರಾಬಾದ್‌ನಲ್ಲಿ 2019ರ ನವೆಂಬರ್‌ನಲ್ಲಿ ಪಶುವೈದ್ಯೆಯ ಮೇಲೆ ನಾಲ್ವರು ಅತ್ಯಾಚಾರವೆಸಗಿ ಸುಟ್ಟು ಹಾಕಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದರು. ನಾಲ್ವರು ಆರೋಪಿಗಳಾದ ಜೊಲ್ಲು ಶಿವ, ಮೊಹಮ್ಮದ್ ಆರಿಫ್, ಜೊಲ್ಲು ನವೀನ್ ಮತ್ತು ಚೆನ್ನಕೇಶವುಲುರನ್ನು 2019ರ ಡಿಸೆಂಬರ್ 06 ರ ಮುಂಜಾನೆ 03 ಗಂಟೆಯ ಸಮಯದಲ್ಲಿ ಹೈದರಾಬಾದ್ ಪೊಲೀಸರು ಗುಂಡಿಟ್ಟು ಕೊಂದಿದ್ದರು. ಅದನ್ನು ಎನ್‌ಕೌಂಟರ್ ಎಂದು ಪೊಲೀಸರು ಸಮರ್ಥಿಸಿಕೊಂಡಿದ್ದರು.

ಆದರೆ ಸುಪ್ರೀಂಕೋರ್ಟ್ ನೇಮಿಸಿದ ತನಿಖಾ ಆಯೋಗ, ತನ್ನ ವರದಿಯಲ್ಲಿ ಎನ್‌ಕೌಂಟರ್ ಅನ್ನು ‘ನಕಲಿ’ ಎಂದು ಕರೆದಿದೆ. ಆರೋಪಿಗಳನ್ನು “ಉದ್ದೇಶಪೂರ್ವಕವಾಗಿ ಅವರ ಸಾವಿಗೆ ಕಾರಣವಾಗುವ ಉದ್ದೇಶದಿಂದ ಗುಂಡು ಹಾರಿಸಲಾಗಿದೆ” ಎಂದು ಸಮಿತಿ ವರದಿಯಲ್ಲಿ ಉಲ್ಲೇಖಿಸಿದೆ.

ಆರೋಪಿಗಳು ಪೊಲೀಸರ ಶಸ್ತ್ರಾಸ್ತ್ರಗಳನ್ನು ಕಸಿದುಕೊಂಡು ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂಬ ಆರೋಪಗಳು ಸುಳ್ಳು ಎಂದು ಆಯೋಗವು ಹೇಳಿದ್ದು, 10 ಕ್ಕೂ ಹೆಚ್ಚು ಪೊಲೀಸರ ವಿರುದ್ಧ ಕೊಲೆ ಆರೋಪಗಳನ್ನು ಹೊರಿಸಲು ಶಿಫಾರಸು ಮಾಡಿದೆ.

ಪ್ರಸ್ತುತ ಅಪ್ರಾಪ್ತ ಬಾಲಕರ ಪ್ರಕರಣದಲ್ಲಿ ಅವರಿಗೆ ಕೇವಲ ಎರಡು ತಿಂಗಳಿನಲ್ಲಿ ಜಾಮೀನು ದೊರೆತು ಬಿಡುಗಡೆಗೊಂಡಿದ್ದಾರೆ. ಅಪ್ರಾಪ್ತರಾದ ಕಾರಣ ಅವರಿಗೆ ಜಾಮೀನು ನೀಡಿರುವುದು ಸಮರ್ಪಕ ಎನಿಸಿಕೊಂಡರು ಅವರು ಪ್ರಭಾವಿ ರಾಜಕೀಯ ಹಿನ್ನೆಲೆಯಿಂದ ಬಂದ ಕಾರಣಕ್ಕೆ ಜಾಮೀನು ದೊರೆತಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಆದರೆ ಪಶು ವೈದ್ಯೆಯ ಪ್ರಕರಣದಲ್ಲಿ ಆರೋಪಿಗಳು ತಳಸಮುದಾಯ, ಬಡವರಾದ ಕಾರಣಕ್ಕೆ ಸಮರ್ಪಕ ವಿಚಾರಣೆ ಸಹ ನಡೆಸದೇ 10 ದಿನಗಳಲ್ಲಿಯೇ ಕೊಂದು ಹಾಕಲಾಯಿತು. ಇದೇ ವಿಷಯವನ್ನು ಆಧರಿಸಿ ಮಲೆಯಾಳಂನಲ್ಲಿ ಜನಗಣಮನ ಎಂಬ ಸಿನಿಮಾ ಸಹ ತಯಾರಾಗಿ ಸಾಕಷ್ಟು ಗಮನ ಸೆಳೆದಿದೆ.

ಇದನ್ನೂ ಓದಿ: ಹೈದರಾಬಾದ್‌‌ ದಿಶಾ ಪ್ರಕರಣ; ಆರೋಪಿಗಳ ಕೊಲೆ ಮಾಡಲೆಂದೇ ಪೊಲೀಸರಿಂದ ‘ನಕಲಿ ಎನ್‌ಕೌಂಟರ್‌‌’: ತನಿಖಾ ಆಯೋಗ ವರದಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...