Homeಮುಖಪುಟಹೈದರಾಬಾದ್ ಪಾಲಿಕೆ ಚುನಾವಣೆ: 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ

ಹೈದರಾಬಾದ್ ಪಾಲಿಕೆ ಚುನಾವಣೆ: 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ

ಈಗಾಗಲೇ ಬಿಜೆಪಿ ನಾಯಕರು ಹೈದರಾಬಾದ್ ಪಾಲಿಕೆಯಲ್ಲಿ ತಾವೇ ಗೆದ್ದೆವು ಎಂದು ಟ್ವೀಟ್ ಮಾಡುತ್ತಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಹೈದರಾಬಾದ್ ಅನ್ನು ಭಾಗ್ಯನಗರ ಎಂದು ಉಚ್ಛರಿಸಿದ್ದಾರೆ.

- Advertisement -
- Advertisement -

ಹೈದರಾಬಾದ್ ಪಾಲಿಕೆ ಚುನಾವಣೆ ಈ ಬಾರಿ ದೇಶಾದ್ಯಂತ ಭಾರಿ ಕುತೂಹಲಕ್ಕ ಕಾರಣವಾಗಿತ್ತು. ಪಾಲಿಕೆ ಚುನಾವಣೆ ಪ್ರಚಾರಕ್ಕೆ ಬಿಜೆಪಿಯ ಘಟಾನುಘಟಿ ನಾಯಕರೇ ಕಣಕ್ಕಿಳಿದಿದ್ದರು. ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌’ (GHMC) ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು ಫಲಿತಾಂಶ ಇಂದು ಹೊರ ಬೀಳಲಿದೆ.

150 ವಾರ್ಡ್‌ಗಳ ಹೈದರಾಬಾದ್ ಪಾಲಿಕೆ ಚುನಾವಣೆಗೆ ಡಿ.1ರಂದು ಮತದಾನ ನಡೆದಿತ್ತು. ಇಂದು ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾದ್ದು, ಸದ್ಯದ ವರದಿ ಪ್ರಕಾರ ಈವರೆಗೆ 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (TRS‌) 32 ಕ್ಷೇತ್ರಗಳಲ್ಲಿ ಮತ್ತು ಅಸಾದುದ್ದೀನ್ ಓವೈಸಿ ನೇತೃತ್ವದ  ಎಐಎಂಐಎಂ 17 ವಾರ್ಡ್‌‌ಗಳಲ್ಲಿ ಮುನ್ನಡೆ ಸಾಧಿಸಿವೆ. ಒಟ್ಟು 1,122 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇದನ್ನೂ ಓದಿ: ಹೈದರಾಬಾದ್: ಅತಿಕ್ರಮಣ ಪ್ರವೇಶ; ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಪ್ರಕರಣ!

ಬಿಜೆಪಿ ತನ್ನ ಚುನಾವಣಾ ಪ್ರಚಾರದಲ್ಲಿ ಹೈದರಾಬಾದ್‌ ಅನ್ನು ಭಾಗ್ಯನಗರವಾಗಿ ಮರುನಾಮಕರಣ ಮಾಡುವ ವಿಚಾರಗಳು, ಮತದಾರರ ಪಟ್ಟಿಯಲ್ಲಿ 30,000 ರಿಂದ 40,000 ರೋಹಿಂಗ್ಯಾಗಳಿದ್ದಾರೆ ಎಂಬ ಆರೋಪ,  ತೇಜಸ್ವಿ ಸೂರ್ಯ ಓವೈಸಿ ಅವರನ್ನು ಜಿನ್ನಾ ಅವರಿಗೆ ಹೋಲಿಸಿದ್ದರು.

ಸದ್ಯ 88 ವಾರ್ಡ್‌‌ಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿರುಬ ಬಗ್ಗೆ ತೆಲಂಗಾಣ ಬಿಜೆಪಿ ಸಂಸದ ಡಿ ಅರವಿಂದ್, ಜನ ಬದಲಾವಣೆ ಬಯಸಿದ್ದಾರೆ ಎಂಬುದರ ಸ್ಪಷ್ಟ ಸಂದೇಶ ಇದು ಎಂದಿದ್ದಾರೆ.

“ತೆಲಂಗಾಣದಲ್ಲಿ ಬದಲಾವಣೆ ಪರ್ವ ಆರಂಭವಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶ, ದುಬ್ಬಾಕಾ ಉಪಚುನಾವಣೆ ಫಲಿತಾಂಶವನ್ನು ನೀವು ನೋಡಿದ್ದೀರಿ. ಈಗ ಪಾಲಿಕೆ ಸರದಿ. ಜನರು ಬದಲಾವಣೆಯನ್ನು ಬಯಸಿದ್ದಾರೆ ಎಂಬುದು ಟಿಆರ್‌ಎಸ್‌ಗೆ ಸ್ಪಷ್ಟ ಸಂದೇಶವಾಗಿದೆ. ನಾವು ಸಂಜೆಯವರೆಗೆ ಕಾಯೋಣ” ಎಂದು ತೆಲಂಗಾಣ ಬಿಜೆಪಿ ಸಂಸದ ಡಿ ಅರವಿಂದ್ ಹೇಳಿಕೆ ನೀಡಿದ್ದಾರೆ.

ಈಗಾಗಲೇ ಬಿಜೆಪಿ ನಾಯಕರು ಹೈದರಾಬಾದ್ ಪಾಲಿಕೆಯಲ್ಲಿ ತಾವೇ ಗೆದ್ದೆವು ಎಂದು ಟ್ವೀಟ್ ಮಾಡುತ್ತಿದ್ದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌ ಸಂತೋಷ್ ಹೈದರಾಬಾದ್ ಅನ್ನು ಭಾಗ್ಯನಗರ ಎಂದು ಉಚ್ಛರಿಸಿದ್ದಾರೆ.

2016ರ ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌ ಚುನಾವಣೆಯಲ್ಲಿ ಟಿಆರ್‌ಎಸ್‌ 99, ಎಐಎಂಐಎಂ 44 ಗೆದ್ದರೆ ಉಳಿದ ಬಿಜೆಪಿ 4, ಕಾಂಗ್ರೆಸ್ 2 ಮತ್ತು ಟಿಡಿಪಿ 1 ಸ್ಥಾನಕ್ಕೆ ತೃಪ್ತಿ ಪಟ್ಟಿದ್ದವು.


ಇದನ್ನೂ ಓದಿ: ಒವೈಸಿಯನ್ನು ’ಜಿನ್ನಾ ಅವತಾರ’ ಎಂದು ವಿವಾದವೆಬ್ಬಿಸಿದ ಸಂಸದ ತೇಜಸ್ವಿ ಸೂರ್ಯ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಫೇಸ್‌ಬುಕ್, ಇನ್‌ಸ್ಟಾಗ್ರಾಮ್‌ ವೀಕ್ಷಿಸುತ್ತಾ ಬೀದಿಯಲ್ಲಿ ತಿರುಗಾಡುವ ಯುವಕರ ಖಾತೆಗಳಿಗೆ ಹಣ...

0
"ಇನ್‌ಸ್ಟಾಗ್ರಾಮ್ ಮತ್ತು ಫೇಸ್‌ಬುಕ್‌ಗಳನ್ನು ಬಳಸಿಕೊಂಡು ಬೀದಿಗಳಲ್ಲಿ ತಿರುಗುತ್ತಿರುವ ನಮ್ಮ ಯುವಕರ ಬ್ಯಾಂಕ್ ಖಾತೆಗಳಿಗೆ ವಾರ್ಷಿಕ ಒಂದು ಲಕ್ಷ ರೂಪಾಯಿ ಮತ್ತು ತಿಂಗಳಿಗೆ 8,500 ರೂಪಾಯಿಗಳನ್ನು ಜಮಾ ಮಾಡಲಾಗುತ್ತದೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ"...