Homeಮುಖಪುಟಹೈದರಾಬಾದ್ ಪಾಲಿಕೆ ಚುನಾವಣೆ: TRS-BJP ನಡುವಿನ ಮತಗಳ ವ್ಯತ್ಯಾಸ ಕೇವಲ 11,000!

ಹೈದರಾಬಾದ್ ಪಾಲಿಕೆ ಚುನಾವಣೆ: TRS-BJP ನಡುವಿನ ಮತಗಳ ವ್ಯತ್ಯಾಸ ಕೇವಲ 11,000!

ಬಿಜೆಪಿಯ ಹಿಂದುತ್ವ ರಾಜಕಾರಣದ ಹೊರತಾಗಿಯೂ ಟಿಆರ್‌ಎಸ್‌ ಸರ್ಕಾರದ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಉಂಟಾದ ಪ್ರವಾಹವು ಜನರು ಟಿಆರ್‌ಎಸ್‌ ವಿರುದ್ಧ ಮತ ಹಾಕುವಂತೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

- Advertisement -
- Advertisement -

ಇತ್ತೀಚೆಗೆ ನಡೆದ ಗ್ರೇಟರ್ ಹೈದರಾಬಾದ್ ಮುನಿಸಿಪಾಲ್ ಕಾರ್ಪೋರೇಷನ್ ಚುನಾವಣೆಯಲ್ಲಿ ಬಿಜೆಪಿ ಹೇಗೆ ತನ್ನ ಹಿಂದುತ್ವ ರಾಜಕಾರಣದಿಂದ ಗಮನಾರ್ಹ ಸಾಧನೆ ಮಾಡಿತು ಎಂದು ತಿಳಿದಿದೆ. ಆದರೆ ಚುನಾವಣೆಯಲ್ಲಿ ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದರೂ ಸಹ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ ಟಿಆರ್‌ಎಸ್‌ಗಿಂತ ಕೇವಲ ಒಂದು ಹೆಜ್ಜೆ ಮಾತ್ರ ಹಿಂದಿದೆ ಎಂಬುದನ್ನು ಮತ ಎಣಿಕೆ ನಂತರದ ಅಂಕಿ ಅಂಶಗಳು ತೋರಿಸಿವೆ.

ಪಾಲಿಕೆ ಚುನಾವಣೆಯಲ್ಲಿ ಟಿಆರ್‌ಎಸ್ 55, ಬಿಜೆಪಿ 48, ಎಐಎಂಐಎಂ 44, ಕಾಂಗ್ರೆಸ್ 02 ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನಗಳಲ್ಲಿ ವಿಜಯಿಯಾಗಿವೆ. ಟಿಆರ್‌ಎಸ್‌ ಮತ್ತು ಬಿಜೆಪಿ ನಡುವೆ 7 ಸ್ಥಾನಗಳ ವ್ಯತ್ಯಾಸ ಕಂಡುಬಂದರೆ ಒಟ್ಟಾರೆ ಮತಗಳಿಕೆಯಲ್ಲಿ ಕೇವಲ 11 ಸಾವಿರ ಮತಗಳ ವ್ಯತ್ಯಾಸವಿದೆ. ಒಟ್ಟು ಚಲಾವಣೆಯಾದ ಮತಗಳಲ್ಲಿ ಟಿಆರ್‌ಎಸ್‌ 12.06 ಲಕ್ಷ (35.81%) ಮತಗಳನ್ನು ಪಡೆದರೆ ಬಿಜೆಪಿಯು 11.95 ಲಕ್ಷ (35.56%) ಮತಗಳನ್ನು ತನ್ನದಾಗಿಸಿಕೊಂಡಿದೆ. ಇಬ್ಬರ ನಡುವಿನ ವ್ಯತ್ಯಾಸ 11 ಸಾವಿರ ಮತಗಳು ಮಾತ್ರ.

ಬಿಜೆಪಿ ಹಿಂದುತ್ವದ ರಾಜಕಾರಣವನ್ನು ಯಶಸ್ವಿಯಾಗಿ ನಿರ್ವಹಿಸಿತು. ಮೊದಲು ಅದು ಟಿಆರ್‌ಎಸ್ ಮತ್ತು ಎಐಎಂಐಎಂ ನಡುವೆ ಒಳ ಒಪ್ಪಂದವಾಗಿದೆ ಎಂದು ಪ್ರಚಾರ ಮಾಡಿತು. ಹೈದರಾಬಾದಿನಲ್ಲಿ 30,000-40,000 ರೋಹಿಂಗ್ಯಾ ಮುಸ್ಲಿಮರಿದ್ದಾರೆ ಎಂದು ಅಪಪ್ರಚಾರ ಮಾಡಿತು. ತಾವು ಅಧಿಕಾರಕ್ಕೆ ಬಂದರೆ ಹೈದರಾಬಾದ್ ಬದಲು ಭಾಗ್ಯನಗರ ಎಂದು ಮರುನಾಮಕರಣ ಮಾಡುವುದಾಗಿ ಘೋಷಿಸಿದರು. ಗೃಹ ಸಚಿವ ಅಮಿತ್‌ ಶಾ ಆದಿಯಾಗಿ ಹಿಂದುತ್ವದ ಪ್ರಖರ ಮುಖ ತೇಜಸ್ವಿ ಸೂರ್ಯ ಸೇರಿ ಘಟಾನುಘಟಿಗಳು ಪ್ರಚಾರಕ್ಕೆ ಬಂದು ಹೋದರು.

ಬಿಜೆಪಿಯ ಹಿಂದುತ್ವ ರಾಜಕಾರಣದ ಹೊರತಾಗಿಯೂ ಟಿಆರ್‌ಎಸ್‌ ಸರ್ಕಾರದ ಮೇಲಿನ ಆಡಳಿತ ವಿರೋಧಿ ಅಲೆ ಮತ್ತು ಇತ್ತೀಚೆಗೆ ಹೈದರಾಬಾದ್‌ನಲ್ಲಿ ಉಂಟಾದ ಪ್ರವಾಹವು ಜನರು ಟಿಆರ್‌ಎಸ್‌ ವಿರುದ್ಧ ಮತ ಹಾಕುವಂತೆ ಮಾಡಿದೆ ಎಂದು ವಿಶ್ಲೇಷಿಸಲಾಗುತ್ತಿದೆ. ಅದಕ್ಕೆ ಪೂರಕವೆಂಬಂತೆ ಇತ್ತೀಚಿನ ಭಾರಿ ಮಳೆ ಮತ್ತು ಪ್ರವಾಹದ ಸಂದರ್ಭದಲ್ಲಿ ಭಾರಿ ಹಾನಿಗೊಳಗಾದ ಪ್ರದೇಶಗಳಾದ ಸರೂರ್‌ನಗರ, ಹಯಾತ್‌ನಗರ, ಗಡಿಯನ್ನಾರಂ, ನಾಗೋಲ್, ಮೂಸರಂಬಾಗ್, ಅಂಬರ್ಪೆಟ್, ರಾಮಂತಪುರ, ಉಪ್ಪಲ್, ಕವಡಿಗುಡ, ಗಾಂಧಿನಗರ ಮತ್ತು ಮೈಲಾರ್‌ದೇವ್‌ಪಲ್ಲಿ ವಾರ್ಡ್‌ಗಳಲ್ಲಿ ಬಿಜೆಪಿ ಗೆದ್ದಿದೆ.

ಮತ್ತೊಂದು ಕುತೂಹಲಕಾರಿ ಅಂಶವೆಂದರೆ ಪ್ರತ್ಯೇಕ ತೆಲಂಗಾಣದಲ್ಲಿ ನಡೆದ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ತೆಲಂಗಾಣಿಗರು ವಾಸಿಸುವ ರಾಮ್‌ನಗರ, ಗಾಂಧಿನಗರ, ಕಚಿಗುಡ, ನಲ್ಲಕುಂತ, ಬಾಗ್ ಅಂಬರ್‌ಪೇಟೆ, ಮುಶೀರಬಾದ್ ಮುಂತಾದ ಪ್ರದೇಶಗಳಲ್ಲಿನ ಎಲ್ಲಾ ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಇದನ್ನು ಟಿಆರ್‌ಎಸ್‌ನ ಭದ್ರಕೋಟೆ ಎಂದೇ ಕರೆಯಲಾಗುತ್ತಿತ್ತು.

ಒಟ್ಟಿನಲ್ಲಿ ತೆಲಂಗಾಣದಲ್ಲಿ 2023ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಗೆ ಬಿಜೆಪಿ ಭದ್ರ ಅಡಿಪಾಯ ಹಾಕಿಕೊಂಡಿದೆ. ಈ ಚುನಾವಣೆಯಲ್ಲಿ ಟಿಆರ್‌ಎಸ್-ಎಐಎಂಐಎಂ‌ ಸರ್ಕಾರ ರಚಿಸಿದರೂ ಸಹ ಅಧಿಕೃತವಾಗಿ ಗೆದ್ದಿರುವುದು ಬಿಜೆಪಿ ಎಂತಲೇ ಹೇಳಲಾಗುತ್ತಿದೆ.


ಇದನ್ನೂ ಓದಿ; ಪರಿಷತ್ ಚುನಾವಣೆ: ದಶಕಗಳ ನಂತರ ಮೋದಿ ಕ್ಷೇತ್ರ ವಾರಣಾಸಿಯಲ್ಲಿ ಬಿಜೆಪಿಗೆ ಹೀನಾಯ ಸೋಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಿಂದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಮೇಲೆ ಸಂಶಯ ಮೂಡಿದೆ: ಅಶೋಕ್ ಲವಾಸ ಕಳವಳ

ಚುನಾವಣಾ ಪ್ರಕ್ರಿಯೆಯ ಶುದ್ಧೀಕರಣದ ನೆಪದಲ್ಲಿ ನೈಜ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಅಥವಾ ಬೇಟೆಯಾಡುವ ಪ್ರವೃತ್ತಿಯನ್ನು ತಕ್ಷಣವೇ ಕೈಬಿಡಬೇಕು, SIR ಪ್ರಕ್ರಿಯೆಯಿಂದ ಚುನಾವಣಾ ಆಯೋಗದ ವಿಶ್ವಾಸಾರ್ಹತೆ ಮತ್ತು ವರ್ಚಸ್ಸಿಗೆ ಭಾರೀ ಧಕ್ಕೆಯಾಗುತ್ತಿದೆ ಎಂದಿರುವ ಮಾಜಿ...

“ಟರ್ನ್ ಅಪ್ರೂವರ್ ಆಗಿ”: ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯ; ಮತ ಕಳ್ಳತನ ಆರೋಪದಲ್ಲಿ ಮೋದಿ, ಶಾ ತನಿಖೆ ನಡೆಯಬೇಕಿದೆ: ರಾಹುಲ್ ಗಾಂಧಿ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಚುನಾವಣಾ ವ್ಯವಸ್ಥೆಯಲ್ಲಿ ನಡೆದಿರುವುದಾಗಿ ಆರೋಪಿಸಲಾಗುತ್ತಿರುವ ಅಕ್ರಮಗಳ ಕುರಿತು “ಅನುಮೋದಕರಾಗಿ” (ಅಪ್ರೂವರ್) ಬದಲಾಗಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ...

SIR : ಭಾಲ್ಕಿ, ಬೆಳಗಾವಿ ಉತ್ತರ-ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ಸಾವಿರಾರು ಅರ್ಹ ಮತಗಳ ಡಿಲೀಟ್‌ಗೆ ಯತ್ನ; ಅನ್ಯರು ಫಾರಂ-7 ಸಲ್ಲಿಸಿರುವುದು ಬಯಲು!

ಭಾರತೀಯ ಚುನಾವಣಾ ಆಯೋಗದಲ್ಲಿ (ಇಸಿಐ) ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ಸರ್ವಾಧಿಕಾರಿ ಧೋರಣೆ ಬಟಾಬಯಲಾಗಿ ದೇಶದಾದ್ಯಂತ ಭಾರೀ ಚರ್ಚೆಯಾಗುತ್ತಿರುವ ನಡುವೆಯೇ, ಕರ್ನಾಟಕದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌)...

‘ದಿಮಾಗಿ ನಕ್ಸಲರು ಚುನಾವಣಾ ಆಯುಕ್ತರನ್ನು ಗುರಿಯಾಗಿಸಿಕೊಂಡಿದ್ದಾರೆ..’; ಗ್ಯಾನೇಶ್‌ ಕುಮಾರ್ ಬೆಂಬಲಕ್ಕೆ ನಿಂತ ಅಸ್ಸಾಂ ಸಿಎಂ

ಮುಖ್ಯ ಚುನಾವಣಾ ಆಯುಕ್ತರು ಇತರ ಚುನಾವಣಾ ಆಯುಕ್ತರನ್ನು ಸಂಪರ್ಕಿಸದೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ. ಮುಖ್ಯ ಚುನಾವಣಾ ಆಯುಕ್ತರನ್ನು (ಸಿಇಸಿ) ಗುರಿಯಾಗಿಸಿಕೊಂಡು ನಡೆಸಲಾಗುತ್ತಿರುವ ದಾಳಿಯು ಇದು ರಾಜಕೀಯ ಪ್ರಚಾರ ಹಾಗೂ ವಿರೋಧ ಪಕ್ಷಗಳ...

ಚುನಾವಣಾ ಆಯೋಗದ ಆಂತರಿಕ ಭಿನ್ನಾಭಿಪ್ರಾಯ: ಸಂಕಷ್ಟದಲ್ಲಿ ಲಕ್ಷಾಂತರ ‘Gen Z’ ಯುವಕರ ಮತದಾನದ ಹಕ್ಕು!

ಭಾರತೀಯ ಚುನಾವಣಾ ಆಯೋಗದಲ್ಲಿ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಇತರ ಇಬ್ಬರು ಆಯುಕ್ತರ ನಡುವೆ ಉಂಟಾಗಿದೆ ಎನ್ನಲಾದ ಆಂತರಿಕ ಭಿನ್ನಾಭಿಪ್ರಾಯದಿಂದಾಗಿ, ದೇಶದ ನೂತನ ಯುವ ಮತದಾರರ ಸೇರ್ಪಡೆ ಪ್ರಕ್ರಿಯೆ ಮಂದಗತಿಯಲ್ಲಿದೆ ಎಂಬ ವರದಿ...

‘ಅನ್ಯಾಯಯುತ’ ಚುನಾವಣೆಗಳಿಗೆ ಅವಕಾಶ ನೀಡಿದ್ದಕ್ಕಾಗಿ ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು: ಪ್ರಿಯಾಂಕಾ ಗಾಂಧಿ

ವಯನಾಡ್: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಕೋಟ್ಯಂತರ ಮತದಾರರ ಹೆಸರುಗಳು ಪಟ್ಟಿಯಿಂದ ಹೊರಗುಳಿದಿರುವ ವಿಚಾರದ ನಡುವೆಯೇ ಚುನಾವಣಾ ಆಯೋಗದ ವಿರುದ್ಧ ಕಾಂಗ್ರೆಸ್‌ನ ವಾಗ್ದಾಳಿ ಮತ್ತಷ್ಟು ತೀವ್ರಗೊಂಡಿದೆ. ಮತದಾರರ...

48 ಗಂಟೆಯೊಳಗೆ ರಾಜೀನಾಮೆ ನೀಡದಿದ್ದರೆ ರಾಷ್ಟ್ರವ್ಯಾಪಿ ಪ್ರತಿಭಟನೆ; ಗ್ಯಾನೇಶ್ ಕುಮಾರ್‌ಗೆ ಸಿಜೆಪಿ ಎಚ್ಚರಿಕೆ

ದೇಶದ ಅತ್ಯಂತ ದೊಡ್ಡ ರಾಷ್ಟ್ರದ್ರೋಹಿ ಎಂದು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ನಡೆಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ), "ಮತದಾರರ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದ್ದಾರೆ" ಎಂದು ಆರೋಪಿಸಿ ಅವರ...

11 ವರ್ಷದ ಅತ್ಯಾಚಾರ ಸಂತ್ರಸ್ತೆಗೆ ಗರ್ಭಧಾರಣೆ ಮುಂದುವರಿಸಲು ಒತ್ತಾಯಿಸಲಾಗದು: 24 ವಾರ ಮೀರಿದರೂ ಗರ್ಭಪಾತಕ್ಕೆ ಜಮ್ಮು-ಕಾಶ್ಮೀರ ಹೈಕೋರ್ಟ್ ಅನುಮತಿ

ಶ್ರೀನಗರ: ಲೈಂಗಿಕ ದೌರ್ಜನ್ಯದಿಂದ ಗರ್ಭಿಣಿಯಾಗಿರುವ 11 ವರ್ಷದ ಬಾಲಕಿಯನ್ನು ಕಾನೂನಿನಲ್ಲಿರುವ ನಿಗದಿತ ಅವಧಿಯನ್ನು ಮೀರಿದೆ ಎಂಬ ಕಾರಣಕ್ಕೆ ಗರ್ಭಧಾರಣೆಯನ್ನು ಪೂರ್ಣ ಅವಧಿಯವರೆಗೆ ಮುಂದುವರಿಸುವಂತೆ ಒತ್ತಾಯಿಸಲಾಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್...

6 ವರ್ಷದ ಮಲಮಗಳ ಅತ್ಯಾಚಾರ, ಹತ್ಯೆ ಪ್ರಕರಣ : ಅಪರಾಧಿಯ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಗೆ ಬದಲಾಯಿಸಿದ ಸುಪ್ರೀಂ ಕೋರ್ಟ್

ಮಧ್ಯಪ್ರದೇಶದಲ್ಲಿ ತನ್ನ ಆರು ವರ್ಷದ ಮಲಮಗಳನ್ನು ಅತ್ಯಾಚಾರ ಮಾಡಿ ಹತ್ಯೆಗೈದ ಪ್ರಕರಣದಲ್ಲಿ ಅಪರಾಧಿಯೆಂದು ಸಾಬೀತಾದ ವ್ಯಕ್ತಿಗೆ ವಿಧಿಸಲಾಗಿದ್ದ ಮರಣದಂಡನೆಯನ್ನು ಸುಪ್ರೀಂ ಕೋರ್ಟ್ ಇಂದು (ಸೆ.24) ಬದಲಾಯಿಸಿದೆ. livelaw.in ನ್ಯಾಯಮೂರ್ತಿ ವಿಕ್ರಮ್ ನಾಥ್, ನ್ಯಾಯಮೂರ್ತಿ ಸಂದೀಪ್...

ಬಾಂಬೆ ಐಐಟಿಯಲ್ಲಿ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ತನಿಖೆಗೆ ಸಮಿತಿ ರಚನೆ

ಬಿ.ಟೆಕ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಶಂಕಿತ ಆತ್ಮಹತ್ಯೆಯ ಸುತ್ತಲಿನ ಪರಿಸ್ಥಿತಿಗಳ ಬಗ್ಗೆ ತನಿಖೆ ನಡೆಸಲು ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಬಾಂಬೆ ಬುಧವಾರ (ಸೆ.23) 10 ಸದಸ್ಯರ...