Homeಮುಖಪುಟಹೈದರಾಬಾದ್ ಪಾಲಿಕೆ ಚುನಾವಣೆ: ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಫರ್ಧೆ - ಯಾರಿಗೆ ಬಹುಮತ?

ಹೈದರಾಬಾದ್ ಪಾಲಿಕೆ ಚುನಾವಣೆ: ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಫರ್ಧೆ – ಯಾರಿಗೆ ಬಹುಮತ?

- Advertisement -
- Advertisement -

ಗ್ರೇಟರ್‌ ಹೈದರಾಬಾದ್‌ ಮುನ್ಸಿಪಲ್‌ ಕಾರ್ಪೊರೇಷನ್‌’ (GHMC) ಚುನಾವಣೆ ಫಲಿತಾಂಶ ಇನ್ನೆನು ಹೊರ ಬೀಳಲಿದೆ. ಆಡಳಿತಾರೂಢ ತೆಲಂಗಾಣ ರಾಷ್ಟ್ರ ಸಮಿತಿ (TRS‌), ಬಿಜೆಪಿ ಮತ್ತು ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ನಡುವೆ ತ್ರಿಕೋನ ಸ್ಪರ್ಧೆ ನಡೆಯತ್ತಿದೆ.

ತೆಲುಗು ಪತ್ರಿಕೆ ಸಾಕ್ಷಿ ವರದಿ ಪ್ರಕಾರ ಇಲ್ಲಿಯವರೆಗೆ, ಆಡಳಿತರೂಢ ಟಿಆರ್‌ಎಸ್ 33 ವಾರ್ಡ್‌ಗಳಲ್ಲಿ ಗೆಲುವು ಮತ್ತು 28 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಎಐಎಂಐಎಂ 30 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದ್ದು, 9 ವಾರ್ಡ್‌ಗಳಲ್ಲಿ ಮುನ್ನಡೆ ಸಾಧಿಸಿದೆ. ಬಿಜೆಪಿ 22 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿ, 21 ವಾರ್ಡ್‌ಗಳಲ್ಲಿ ಮುನ್ನಡೆ ದಾಖಲಿಸಿದೆ. ಕಾಂಗ್ರೆಸ್ 2 ವಾರ್ಡ್‌ಗಳಲ್ಲಿ ಗೆಲುವು ಸಾಧಿಸಿದೆ.

150 ವಾರ್ಡ್‌ಗಳ ಹೈದರಾಬಾದ್ ಪಾಲಿಕೆ ಚುನಾವಣೆಗೆ ಡಿ.1ರಂದು ಮತದಾನ ನಡೆದಿತ್ತು. ಇಂದು ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಕಾರ್ಯ ಆರಂಭವಾದ್ದು, ಕೆಲವು ಹೊತ್ತಲ್ಲೇ ಫಲಿತಾಂಶ ಪ್ರಕಟವಾಗಲಿದೆ.

ಈ ಬಾರಿ ಹೈದರಾಬಾದ್ ಪಾಲಿಕೆ ಚುನಾವಣೆ ದೇಶಾದ್ಯಂತ ಭಾರಿ ಕುತೂಹಲಕ್ಕೆ ಕಾರಣವಾಗಿತ್ತು. ಪಾಲಿಕೆ ಚುನಾವಣೆ ಪ್ರಚಾರಕ್ಕೆ ಬಿಜೆಪಿಯ ಘಟಾನುಘಟಿ ನಾಯಕರೇ ಕಣಕ್ಕಿಳಿದಿದ್ದರು. ಗೃಹ ಸಚಿವ ಅಮಿತ್ ಶಾ ಕೂಡ ಕಣಕ್ಕೆ ಇಳಿದಿದ್ದರು. ಸದ್ಯ ಮೂರು ಪಕ್ಷಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ತಿದ್ದುಪಡಿಗೆ ಕೇಂದ್ರದ ಒಪ್ಪಿಗೆ: ಹಿಂತೆಗೆದುಕೊಳ್ಳಬೇಕೆಂದು ಪಟ್ಟು ಹಿಡಿದ ರೈತರು!

ಎಎನ್‌ಐ ಜೊತೆಗೆ ಮಾತನಾಡಿರುವ ತೆಲಂಗಾಣ ಸಚಿವ ತಲಸಾನಿ ಶ್ರೀನಿವಾಸ್ ಯಾದವ್, ದೇಶದಲ್ಲಿ ರೈತರ ಪ್ರತಿಭಟನೆ ಸೇರಿದಂತೆ ಹಲವು ಸಮಸ್ಯೆಗಳು ಇರುವಾಗ, ಕೇಂದ್ರ ನಾಯಕರು ಸ್ಥಳೀಯ ಚುನಾವಣೆ ಪ್ರಚಾರಕ್ಕೆ ಬಂದದ್ದು ಯಾಕೆ ಎಂದು ತಿಳಿಯುತ್ತಿಲ್ಲ ಎಂದಿದ್ದಾರೆ.

’ಕೇಂದ್ರ ಸರ್ಕಾರ ಹೈದರಾಬಾದ್ ಅಭಿವೃದ್ಧಿಗೆ ಏನು ಮಾಡಿದೆ ಎಂಬುದರ ಬಗ್ಗೆ ಅವರು ಚುನಾವಣಾ ಪ್ರಚಾರದಲ್ಲಿ ಏನನ್ನೂ ಉಲ್ಲೇಖಿಸಲಿಲ್ಲ. ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್ (ಜಿಎಚ್‌ಎಂಸಿ) ಚುನಾವಣೆಯಲ್ಲಿ ಟಿಆರ್‌ಎಸ್ ಈ ಬಾರಿ 100% ರಷ್ಟು ಸರ್ಕಾರ ರಚಿಸಲಿದೆ’ ಎಂದಿದ್ದಾರೆ.


ಇದನ್ನೂ ಓದಿ: ಎಂಎಲ್‌ಸಿ ಚುನಾವಣೆ: 4 ಸ್ಥಾನದಲ್ಲಿ ಮಹಾವಿಕಾಸ್ ಅಘಾಡಿ ಜಯ- ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...