Homeಮುಖಪುಟಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

- Advertisement -
- Advertisement -

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ ಮಂಡಳಿಯನ್ನು ಆಗ್ರಹಿಸಿದೆ. ನವದೆಹಲಿಯಲ್ಲಿ ನಡೆದ ನೀಟ್ (NEET) ಪ್ರತಿಭಟನೆಗೆ ಸಂಬಂಧಿಸಿದ ಪ್ರಕರಣದ ವಿಚಾರಣೆ ವೇಳೆ ಸಿಜೆಐ ನೀಡಿದ್ದ ಕೆಲವು ಹೇಳಿಕೆಗಳನ್ನು ವಿರೋಧಿಸಿ ವಿದ್ಯಾರ್ಥಿಗಳು ಈ ಪಟ್ಟು ಹಿಡಿದಿದ್ದಾರೆ.

ವಿಶ್ವವಿದ್ಯಾಲಯವು ಪದವಿ ಪ್ರದಾನ ಸಮಾರಂಭದ ದಿನಾಂಕವನ್ನಾಗಲಿ ಅಥವಾ ಸಿಜೆಐ ಅವರ ಭೇಟಿಯನ್ನಾಗಲಿ ಅಧಿಕೃತವಾಗಿ ಇನ್ನೂ ಖಚಿತಪಡಿಸಿಲ್ಲವಾದರೂ, ಪ್ರತಿ ವರ್ಷ ಸಿಜೆಐ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುವುದು ನಾಲ್ಸಾರ್‌ನಲ್ಲಿ ನಡೆದುಕೊಂಡು ಬಂದ ಸಂಪ್ರದಾಯವಾಗಿದೆ. ನೀಟ್ ಅಕ್ರಮ ಖಂಡಿಸಿ ಪ್ರತಿಭಟಿಸುತ್ತಿದ್ದ ವಿದ್ಯಾರ್ಥಿಗಳು ಹಾಗೂ ಜಂತರ್ ಮಂತರ್‌ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಶಿಕ್ಷಣತಜ್ಞ ಸೋನಂ ವಾಂಗ್‌ಚುಕ್ ಅವರಿಗೆ ಬೆಂಬಲ ಸೂಚಿಸಿ ಜುಲೈ 20 ರಂದು ನಾಲ್ಸಾರ್‌ನ ಹಲವು ವಿದ್ಯಾರ್ಥಿಗಳು ‘ಒಂದು ಹೊತ್ತಿನ ಉಪವಾಸ’ ಆಚರಿಸಿದ್ದರು.

ಇದರ ಬೆನ್ನಲ್ಲೇ, ಜುಲೈ 22 ರಂದು ನೀಟ್ ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯದ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಳ್ಳಲು ಸಿಜೆಐ ಸೂರ್ಯ ಕಾಂತ್ ಅವರಿದ್ದ ಪೀಠವು ನಿರಾಕರಿಸಿತ್ತು. ಈ ವೇಳೆ ನಮಗೆ ವಿಡಿಯೋಗಳನ್ನು ನೋಡಲು ಆಸಕ್ತಿಯಿಲ್ಲ, ಸಮಯವೂ ಇಲ್ಲ. ನಮ್ಮ ಸಮಯವನ್ನೂ ಹಾಳು ಮಾಡಬೇಡಿ, ನಿಮ್ಮ ಸಮಯವನ್ನೂ ವ್ಯರ್ಥ ಮಾಡಿಕೊಳ್ಳಬೇಡಿ ಎಂದು ಸಿಜೆಐ ಹೇಳಿದ್ದರೆನ್ನಲಾದ ಮಾತುಗಳು ಸಾಮಾಜಿಕ ಮಧ್ಯಮಗಳಲ್ಲಿ ವೈರಲ್ ಆಗಿದ್ದವು.

ಈ ಹಿನ್ನೆಲೆಯಲ್ಲಿ, ಜುಲೈ 23 ರಂದು 2026ರ ಬ್ಯಾಚ್‌ನ ಹೊರಹೋಗುವ ವಿದ್ಯಾರ್ಥಿಗಳು ವಿಶ್ವವಿದ್ಯಾಲಯದ ಕುಲಪತಿ, ರಿಜಿಸ್ಟ್ರಾರ್ ಹಾಗೂ ಆಡಳಿತ ಮಂಡಳಿಗೆ ಪತ್ರ ಬರೆದು, ಸಿಜೆಐ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿದ್ದರು. ಸ್ಟೂಡೆಂಟ್ಸ್ ಬಾರ್ ಕೌನ್ಸಿಲ್ ಸದಸ್ಯರು ಸೇರಿದಂತೆ ಸುಮಾರು 70 ವಿದ್ಯಾರ್ಥಿಗಳು ಈ ಮನವಿಗೆ ಬೆಂಬಲ ಸೂಚಿಸಿದ್ದರು. ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯವನ್ನು ಅಲಕ್ಷಿಸುವ ರೀತಿಯಲ್ಲಿ ನಡೆದುಕೊಂಡ ವ್ಯಕ್ತಿಯಿಂದ ಪದವಿ ಪಡೆಯುವುದು ತಾವು ಕಲಿತ ಸಂವಿಧಾನಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂಬುದು ವಿದ್ಯಾರ್ಥಿಗಳ ವಾದವಾಗಿತ್ತು. ನಂತರ ಈ ಅಭಿಯಾನಕ್ಕೆ ಜೂನಿಯರ್ ಬ್ಯಾಚ್‌ಗಳ ವಿದ್ಯಾರ್ಥಿಗಳೂ ಬೆಂಬಲ ವ್ಯಕ್ತಪಡಿಸಿದ್ದು, ಒಟ್ಟು 380ಕ್ಕೂ ಹೆಚ್ಚು ವಿದ್ಯಾರ್ಥಿಗಳು ಈ ಮನವಿಗೆ ಸಹಿ ಹಾಕಿದ್ದಾರೆ.

ಆಗಸ್ಟ್ 8 ರವರೆಗೆ ವಿಶ್ವವಿದ್ಯಾಲಯವು ವಿದ್ಯಾರ್ಥಿಗಳ ಮನವಿಗೆ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ. ಸಾಮಾನ್ಯವಾಗಿ ಆಗಸ್ಟ್‌ನಲ್ಲಿ ನಡೆಯಬೇಕಿದ್ದ ಪದವಿ ಪ್ರದಾನ ಸಮಾರಂಭದ ದಿನಾಂಕ ನಿಗದಿಯಾಗದಿರುವುದು ಮತ್ತು ಯಾವುದೇ ಸಿದ್ಧತೆಗಳು ಆರಂಭವಾಗದಿರುವುದು ವಿದ್ಯಾರ್ಥಿಗಳಲ್ಲಿ ಗೊಂದಲ ಮೂಡಿಸಿದೆ. ಅಲ್ಲದೆ, ಪ್ರಸಕ್ತ ತಿಂಗಳ ಕೊನೆಯಲ್ಲಿ ಮಧ್ಯಂತರ ಪರೀಕ್ಷೆಗಳು ಇರುವುದರಿಂದ ಆಗಸ್ಟ್‌ನಲ್ಲಿ ಸಮಾರಂಭ ನಡೆಯುವುದು ಅನುಮಾನ ಎನ್ನಲಾಗಿದೆ. ಈ ಕುರಿತು ಮಾತನಾಡಿದ ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು, ವಿದ್ಯಾರ್ಥಿಗಳ ಪತ್ರವನ್ನು ಆಡಳಿತ ಮಂಡಳಿ ಗಮನಿಸಿದೆ, ಆದರೆ ಮುಖ್ಯ ಅತಿಥಿಯನ್ನು ಬದಲಾಯಿಸುವ ಸಾಧ್ಯತೆ ತೀರ ಕಡಿಮೆ ಇದ್ದು, ಸದ್ಯ ‘ಕಾದು ನೋಡುವ’ ತಂತ್ರ ಅನುಸರಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಇನ್ನೊಂದೆಡೆ, ಆಡಳಿತ ಮಂಡಳಿಯಿಂದ ಸೂಕ್ತ ಸ್ಪಂದನೆ ಸಿಗದಿದ್ದರೆ ಒಂದು ವಾರದ ನೋಟಿಸ್ ನೀಡಿ ಪ್ರತಿಭಟನೆ ನಡೆಸುವುದಾಗಿ ವಿದ್ಯಾರ್ಥಿಗಳು ಎಚ್ಚರಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...