Homeಮುಖಪುಟಹೈದರಾಬಾದ್ ಗ್ಯಾಂಗ್ ರೇಪ್ : ಸಂತ್ರಸ್ತೆಯ ವಿಡಿಯೋ ಹಂಚಿಕೊಂಡಿದ್ದ ಬಿಜೆಪಿ ಶಾಸಕನ ಮೇಲೆ FIR

ಹೈದರಾಬಾದ್ ಗ್ಯಾಂಗ್ ರೇಪ್ : ಸಂತ್ರಸ್ತೆಯ ವಿಡಿಯೋ ಹಂಚಿಕೊಂಡಿದ್ದ ಬಿಜೆಪಿ ಶಾಸಕನ ಮೇಲೆ FIR

- Advertisement -
- Advertisement -

ಹೈದರಾಬಾದ್‌ನ ಜುಬಿಲಿ ಹಿಲ್ಸ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸಿದ ಆರೋಪದ ಮೇಲೆ ಬಿಜೆಪಿ ಶಾಸಕ ರಘುನಂದನ್ ರಾವ್ ವಿರುದ್ಧ ಅಬಿಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗ್ಯಾಂಗ್ ರೇಪ್ ಸಂತ್ರಸ್ತೆಯ ವಿಡಿಯೋವನ್ನು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡಿದ್ದಕ್ಕಾಗಿ ಬಿಜೆಪಿ ಶಾಸಕ ರಘುನಂದನ್ ರಾವ್ ವಿರುದ್ಧ ಐಪಿಸಿ (ಭಾರತೀಯ ದಂಡ ಸಂಹಿತೆ) ಸೆಕ್ಷನ್ 228 ಎ (ಗುರುತು ಬಹಿರಂಗಪಡಿಸುವುದು) ಅಡಿಯಲ್ಲಿ ಅಬಿಡ್ಸ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಎಸ್‌ಎಚ್‌ಒ ಬಿ.ಪ್ರಸಾದ ರಾವ್ ತಿಳಿಸಿದ್ದಾರೆ.

ಕಳೆದ ವಾರ ಬಿಜೆಪಿ ಕೇಂದ್ರ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಶಾಸಕ ರಘುನಂದನ್ ರಾವ್, ಮಾಧ್ಯಮಗಳ ಮುಂದೆ ವಿಡಿಯೋ ಮತ್ತು ಛಾಯಾಚಿತ್ರವನ್ನು ತೋರಿಸಿದ್ದರು. ಇದು ಸಂತ್ರಸ್ತ ಅಪ್ರಾಪ್ತೆಯೊಂದಿಗೆ ಕಾರಿನಲ್ಲಿ AIMIM ಶಾಸಕರ ಮಗ ಇದ್ದರು ಎಂಬುದಕ್ಕೆ ಇದು ಪುರಾವೆಯಾಗಿದೆ ಎಂದು ಹೇಳಿದ್ದರು. ಜೊತೆಗೆ ಪೊಲೀಸರು ಶಾಸಕರ ಮಗನನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದರು.

ಇದನ್ನೂ ಓದಿ: ಕೊಲ್ಕತ್ತಾ: ಸರ್ಕಾರಿ ಹುದ್ದೆ ಪಡೆದ ಕಾರಣ ಹೆಂಡತಿಯ ಅಂಗೈ ಕತ್ತರಿಸಿದ ಪತಿ

ಕಾರಿನೊಳಗೆ ರೆಕಾರ್ಡ್ ಮಾಡಲಾದ ವಿಡಿಯೋದ ಸ್ಕ್ರೀನ್‌ಶಾಟ್‌ಗಳನ್ನು ಪ್ರಿಂಟ್ ಮಾಡಿಸಿ ಅವುಗಳನ್ನು ಶಾಸಕ ಪತ್ರಿಕಾಗೋಷ್ಠಿಯಲ್ಲಿ  ತೋರಿಸಿದರು. ಹಿಂದಿನ ಸೀಟ್‌ನಲ್ಲಿ ಸಂತ್ರಸ್ತೆಯೊಂದಿಗೆ ಇದ್ದ ವಿಡಿಯೋದಲ್ಲಿರುವ ವ್ಯಕ್ತಿ ಎಐಎಂಐಎಂ ಶಾಸಕನ ಮಗ ಎಂದು ಬಿಜೆಪಿ ಆರೋಪಿಸಿದ್ದು, ಆತನನ್ನು ಬಂಧಿಸುವಂತೆ ಒತ್ತಾಯಿಸಿತ್ತು.

ವಿಡಿಯೋ ಕ್ಲಿಪ್ ಬಿಡುಗಡೆಯಾದ ನಂತರ, ಹಲವಾರು ಜನರು ಅದನ್ನು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸುದ್ದಿ ವಾಹಿನಿಗಳಲ್ಲಿ ಪ್ರಸಾರವಾಗಿದೆ. ವೀಡಿಯೊ ಕ್ಲಿಪ್‌ಗಳನ್ನು ಪ್ರಸಾರ ಮಾಡಿದ್ದ ಇಬ್ಬರು ಯೂಟ್ಯೂಬರ್‌ಗಳ ಮೇಲೂ ಪ್ರಕರಣ ದಾಖಲಿಸಲಾಗಿದೆ.

ಪಕ್ಷಪಾತವಿಲ್ಲದೆ ಹಲವಾರು ರಾಜಕೀಯ ಮುಖಂಡರು ಮತ್ತು ಮಹಿಳಾ ಕಾರ್ಯಕರ್ತರು ಶಾಸಕ ರಘುನಂದನ್ ರಾವ್ ವಿರುದ್ಧ ಕಿಡಿ ಕಾರಿದ್ದರು. ರಾಜಕೀಯ ಲಾಭಕ್ಕಾಗಿ  ಸಂತ್ರಸ್ತೆಯ ಗುರುತನ್ನು ಸಾರ್ವಜನಿಕಗೊಳಿಸುತ್ತಿದ್ದಾರೆ ಎಂದು ಟೀಕಿಸಿದ್ದರು.

ಮೇ 28 ರಂದು ಹೈದರಾಬಾದ್‌ನ ಜುಬಿಲಿ ಹಿಲ್ಸ್‌ ಪ್ರದೇಶದಲ್ಲಿ ಪಾರ್ಟಿ ಮುಗಿಸಿ ಮನೆಗೆ ಮರಳುತ್ತಿದ್ದಾಗ 17 ವರ್ಷದ ಬಾಲಕಿಯ ಮೇಲೆ ರಾಜಕೀಯ ಕುಟುಂಬಗಳ ಅಪ್ರಾಪ್ತ ವಯಸ್ಕರು ಸೇರಿದಂತೆ ಐವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ. ಈ ಘಟನೆ ರಾಜಕೀಯ ಕೆಸರೆರಚಾಟಕ್ಕೂ ತಿರುಗಿದೆ. ಪ್ರಕರಣದಲ್ಲಿ ಇದುವರೆಗೆ ನಾಲ್ವರನ್ನು ಬಂಧಿಸಲಾಗಿದೆ.


ಇದನ್ನೂ ಓದಿ: ಹೈದರಾಬಾದ್: ಬಾಲಕಿ ಅತ್ಯಾಚಾರ ಪ್ರಕರಣದ ಬೆನ್ನಲ್ಲೇ ಬೆಳಕಿಗೆ ಬಂದ ಮತ್ತಷ್ಟು ಕೇಸ್‌ಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಸಿದ್ದರಾಮಯ್ಯ ಸರ್ಕಾರ ಮುಸ್ಲಿಮರನ್ನು ಒಬಿಸಿ ಪಟ್ಟಿಗೆ ಸೇರಿಸಿದ್ದು ನಿಜಾನಾ?

0
ಕರ್ನಾಟಕದಲ್ಲಿ ಮುಸ್ಲಿಮರನ್ನು ಹಿಂದುಳಿದ ವರ್ಗಕ್ಕೆ ಸೇರಿಸುವ ಮೂಲಕ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂದುಳಿದ ವರ್ಗಗಳ 36 ಜಾತಿಗಳಿಗೆ ಅನ್ಯಾಯ ಮಾಡಿದೆ ಎಂದು ಬಿಜೆಪಿ ಆರೋಪಿಸಿದೆ. ಸಿದ್ದರಾಮಯ್ಯ ಸರ್ಕಾರ ಹಿಂದುಳಿದ ವರ್ಗಗಳಿಗೆ...