Homeಮುಖಪುಟಹೈದ್ರಾಬಾದ್ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ತೆಲಂಗಾಣ ಪೊಲೀಸರ ಚಿಂತನೆ

ಹೈದ್ರಾಬಾದ್ ಅತ್ಯಾಚಾರ ಪ್ರಕರಣ: ಆರೋಪಿಗಳನ್ನು ವಯಸ್ಕರಂತೆ ಪರಿಗಣಿಸಲು ತೆಲಂಗಾಣ ಪೊಲೀಸರ ಚಿಂತನೆ

- Advertisement -
- Advertisement -

ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರಣೆಯ ಸಮಯದಲ್ಲಿ ಐವರು ಸಿಸಿಎಲ್‌ಗಳನ್ನು (ಕಾನೂನಿನ ಪ್ರಕ್ರಿಯೆಯಲ್ಲಿ ತೊಡಗಿರುವ ಮಕ್ಕಳು) ವಯಸ್ಕರಂತೆ ಪರಿಗಣಿಸುವಂತೆ ಬಾಲ ನ್ಯಾಯ ಮಂಡಳಿಗೆ ತೆಲಂಗಾಣ ಪೊಲೀಸರು ಅರ್ಜಿ ಸಲ್ಲಿಸಲು ಚಿಂತನೆ ನಡೆಸುತ್ತಿದ್ದಾರೆ.

ಆರೋಪಿಗಳಿಗೆ ಗರಿಷ್ಠ ಶಿಕ್ಷೆಯಾಗುವುದನ್ನು ಖಚಿತಪಡಿಸಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ರಾಜ್ಯ ಸಚಿವ ಕೆ.ಟಿ.ರಾಮರಾವ್ ಪೊಲೀಸರನ್ನು ಅಭಿನಂದಿಸಿದ್ದಾರೆ. ಮೇ 28 ರಂದು 17 ವರ್ಷದ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಐವರು ಬಾಲಾಪರಾಧಿಗಳು ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ. ಒಬ್ಬ ಬಾಲಾಪರಾಧಿ ಸಂತ್ರಸ್ತೆಯೊಂದಿಗೆ ಅನುಚಿತವಾಗಿ ವರ್ತಿಸುತ್ತಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಆದರೆ ಅಪರಾಧದಲ್ಲಿ ಆತ ಭಾಗಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಹೈದರಾಬಾದ್ ಪೊಲೀಸ್ ಕಮಿಷನರ್ ಸಿ.ವಿ.ಆನಂದ್ ಪಿಟಿಐಗೆ ತಿಳಿಸಿದ್ದು, “ಆರೋಪಿಗಳಿಗೆ ಗರಿಷ್ಠ ಶಿಕ್ಷೆಯನ್ನು ಖಾತ್ರಿಪಡಿಸಿಕೊಳ್ಳಲು ಐವರನ್ನೂ ವಯಸ್ಕರಂತೆ ಪರಿಗಣಿಸಲು ಮಂಡಳಿಯ ಮುಂದೆ ಮನವಿ ಸಲ್ಲಿಸಲು ಮುಂದಾಗಿದ್ದೇವೆ. ಘೋರ ಅಪರಾಧದಲ್ಲಿ ಭಾಗಿಯಾದವರ ವಿರುದ್ಧ ಕಾನೂನಿನ ಕಠಿಣ ಸೆಕ್ಷನ್‌ಗಳನ್ನು ಅನ್ವಯಿಸಲಾಗಿದೆ. ಈ ಕಾನೂನಿನ ಶಿಕ್ಷೆಯ ಪ್ರಕಾರ ಸಾಯುವವರೆಗೂ ಜೈಲಿನಲ್ಲಿರುಬಹುದು ಅಥವಾ ಮರಣದಂಡನೆಯಾಗಬಹುದು” ಎಂದಿದ್ದಾರೆ.

ಪ್ರಕರಣವು ಈಗ ತನಿಖೆಯಲ್ಲಿದೆ. ಚಾರ್ಜ್‌ಶೀಟ್ ಸಲ್ಲಿಸಿದ ನಂತರ, ಐವರು ಸಿಸಿಎಲ್‌ಗಳನ್ನು ವಯಸ್ಕರಂತೆ ವಿಚಾರಣೆಗೆ ಒಳಪಡಿಸುವಂತೆ ಶಿಫಾರಸು ಮಾಡಲು ಬಾಲ ನ್ಯಾಯ ಮಂಡಳಿಗೆ (ಜೆಜೆಬಿ) ವಿನಂತಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. “ಇಲ್ಲದಿದ್ದರೆ ಅವರು ಬಾಲಾಪರಾಧಿಗಳಾಗಿ ಉಳಿಯುತ್ತಾರೆ. ಕೇವಲ ಮೂರು ವರ್ಷಗಳ ಶಿಕ್ಷೆಗೆ ಒಳಗಾಗುತ್ತಾರೆ” ಎಂದು ಪೊಲೀಸರು ಹೇಳಿದ್ದಾರೆ.

ಇದನ್ನೂ ಓದಿರಿ: ಮರ್ಯಾದೆಗೇಡು ಹತ್ಯೆ: ಸಾವಿನ ಕುರಿತು ಮೊದಲೇ ಬರೆದಿದ್ದ ಯುವತಿ; ಪತ್ರದಲ್ಲೇನಿದೆ?

ತೆಲಂಗಾಣ ರಾಷ್ಟ್ರರಕ್ಷಣಾ ಸಮಿತಿ ಪಕ್ಷದ ಕಾರ್ಯಾಧ್ಯಕ್ಷ  ಕೆ.ಟಿ.ರಾಮರಾವ್‌ ಟ್ವೀಟ್ ಮಾಡಿದ್ದು, “ನಾನು ತೆಲಂಗಾಣ ಪೊಲೀಸರ ನಿಲುವನ್ನು ಸ್ವಾಗತಿಸುತ್ತೇನೆ ಹಾಗೂ ಬೆಂಬಲಿಸುತ್ತೇನೆ. ಅತ್ಯಾಚಾರದಂತಹ ಘೋರ ಅಪರಾಧವನ್ನು ಮಾಡುವಷ್ಟು ವಯಸ್ಕರಾಗಿದ್ದರೆ, ಅವರನ್ನು ವಯಸ್ಕರಂತೆ ಶಿಕ್ಷಿಸಬೇಕು. ಆದರೆ ಬಾಲಾಪರಾಧಿಯಾಗಿ ಪರಿಗಣಿಸಬಾರದು” ಎಂದಿದ್ದಾರೆ.

ಸ್ಥಳೀಯ ನ್ಯಾಯಾಲಯವು ಕಸ್ಟಡಿಗೆ ನೀಡಿದ ನಂತರ ಸೆರೆಮನೆಯಲ್ಲಿದ್ದ ವಯಸ್ಕ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು. ಅಪರಾಧದ ದೃಶ್ಯವನ್ನು ಮರುಸೃಷ್ಟಿ ಮಾಡುವುದು ಸೇರಿದಂತೆ ಪ್ರಕರಣದ ಹೆಚ್ಚಿನ ತನಿಖೆಯ ಭಾಗವಾಗಿ ಆರೋಪಿಯನ್ನು ಕಸ್ಟಡಿ ವಿಚಾರಣೆಗೆ ಒಳಪಡಿಸಲು ಪೊಲೀಸರು ಕೋರಿದ್ದಾರೆ.

ಸಂಬಂಧಿತ ಬೆಳವಣಿಗೆಯಲ್ಲಿ, ಜುವೆನೈಲ್ ಜಸ್ಟಿಸ್ ಬೋರ್ಡ್ ಪ್ರತಿಕ್ರಿಯೆ ನೀಡಿದ್ದು, ಜೂನ್ 10 ರಿಂದ ನಾಲ್ಕು ದಿನಗಳ ಕಾಲ ವಿಚಾರಣೆಗಾಗಿ ಮೂವರು ಸಿಸಿಎಲ್‌ಗಳನ್ನು ಪೊಲೀಸ್ ಕಸ್ಟಡಿಗೆ ನೀಡಲು ಒಪ್ಪಿಗೆ ನೀಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...