ವಿವಿಧ ಸಾಮಾಜಿಕ ಮಾಧ್ಯಮ ವೇದಿಕೆಗಳ ಮೂಲಕ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿ ವೀಕ್ಷಿಸಿದ ಮತ್ತು ಹಂಚಿಕೊಂಡ ಆರೋಪದ ಮೇಲೆ ಮೂವರು ವ್ಯಕ್ತಿಗಳನ್ನು ಬಂಧಿಸಲಾಗಿದೆ.
ಆರೋಪಿಗಳು 22 ರಿಂದ 36 ವರ್ಷ ವಯಸ್ಸಿನವರಾಗಿದ್ದಾರೆ. ಇದರಲ್ಲಿ ಒಬ್ಬ ವಿದ್ಯಾರ್ಥಿ, ವೆಲ್ಡರ್ ಮತ್ತು ಖಾಸಗಿ ಉದ್ಯೋಗಿ ಸೇರಿದ್ದಾರೆ. ಕಾಣೆಯಾದ ಮತ್ತು ಶೋಷಿತ ಮಕ್ಕಳ ರಾಷ್ಟ್ರೀಯ ಕೇಂದ್ರ (ಎನ್‌ಸಿಎಂಇಸಿ) ದಿಂದ ಮಾಹಿತಿ ಪಡೆದ ನಂತರ ಸೈಬರ್ ಟಿಪ್‌ಲೈನ್ ಮೂಲಕ ದಾಖಲಾಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.
ವರದಿಗಳ ಪ್ರಕಾರ, ಸೈಬರ್ ಅಪರಾಧ ಅಧಿಕಾರಿಗಳು ಐಪಿ ವಿಳಾಸಗಳು, ಮೊಬೈಲ್ ಸಂಖ್ಯೆಗಳು ಮತ್ತು ಇಮೇಲ್ ಐಡಿಗಳ ಮೂಲಕ ಆರೋಪಿಗಳನ್ನು ಪತ್ತೆಹಚ್ಚಿ, ಹೈದರಾಬಾದ್‌ನಲ್ಲಿ ಅವರ ಸ್ಥಳಗಳನ್ನು ಹುಡುಕಲಾಗಿದೆ. ಅವರು ಹಲವಾರು ವೆಬ್‌ಸೈಟ್‌ಗಳಿಂದ ಮಕ್ಕಳ ಅಶ್ಲೀಲ ಚಿತ್ರಗಳನ್ನು ಡೌನ್‌ಲೋಡ್ ಮಾಡಿ ವೀಕ್ಷಿಸಿದ್ದಾರೆ. ಅವರ ಸಂಪರ್ಕಗಳೊಂದಿಗೆ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಇದೀಗ, ಐಟಿ ಕಾಯ್ದೆ ಸೇರಿದಂತೆ ಮೂರು ಪ್ರಕರಣಗಳನ್ನು ದಾಖಲಿಸಲಾಗಿದೆ.
ಇದನ್ನೂ ಒದಿ; ಪೋಕ್ಸೋ ಪ್ರಕರಣ | ಕೇರಳದ ಮೂವರು ಪತ್ರಕರ್ತರಿಗೆ ಹೈಕೋರ್ಟ್‌ನಿಂದ ಮಧ್ಯಂತರ ನಿರೀಕ್ಷಣಾ ಜಾಮೀನು


