Homeಮುಖಪುಟಹೈದರಾಬಾದ್‌: ಸಂಚಾರ ನಿರ್ವಹಣೆಯಲ್ಲಿ ಹೊಸ ಜೀವನ ಕಂಡುಕೊಂಡ ಟ್ರಾನ್ಸ್‌ಜೆಂಡರ್ ಸಮುದಾಯ

ಹೈದರಾಬಾದ್‌: ಸಂಚಾರ ನಿರ್ವಹಣೆಯಲ್ಲಿ ಹೊಸ ಜೀವನ ಕಂಡುಕೊಂಡ ಟ್ರಾನ್ಸ್‌ಜೆಂಡರ್ ಸಮುದಾಯ

- Advertisement -
- Advertisement -

ಹೈದರಾಬಾದ್‌ನಲ್ಲಿ ಸುಮಾರು 39 ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ನಗರದ ರಸ್ತೆಗಳಲ್ಲಿ ಭಿಕ್ಷೆ ಬೇಡುವುದನ್ನು ಬಿಟ್ಟು ತೆಲಂಗಾಣ ಪೊಲೀಸರ ಭಾಗವಾಗಿ ಸಂಚಾರವನ್ನು ನಿರ್ವಹಿಸುವತ್ತ ಸಾಗಿದ್ದಾರೆ. ಪ್ರಾಯೋಗಿಕ ಆಧಾರದ ಮೇಲೆ ಸಂಚಾರ ಸಹಾಯಕರಾಗಿ ನೇಮಕಗೊಂಡಿರುವ ಅವರ ಪ್ರಯಾಣವನ್ನು ಸಬಲೀಕರಣ ಮತ್ತು ಸಾಮಾಜಿಕ ಸ್ವೀಕಾರದ ಸಂಕೇತವೆಂದು ಬಣ್ಣಿಸಲಾಗುತ್ತಿದೆ.

ಟ್ರಾಫಿಕ್ ಸಹಾಯಕರಲ್ಲಿ ಒಬ್ಬರಾದ ನಿಶಾ ಮಾತನಾಡಿ, ಅವಕಾಶಕ್ಕಾಗಿ ತೆಲಂಗಾಣ ಮುಖ್ಯಮಂತ್ರಿ ಎ. ರೇವಂತ್ ರೆಡ್ಡಿ ಅವರಿಗೆ ಕೃತಜ್ಞತೆ ಸಲ್ಲಿಸಿದರು. “ಹಿಂದೆ ನಾವು ಭಿಕ್ಷೆ ಬೇಡುತ್ತಿದ್ದ ಸ್ಥಳಗಳಲ್ಲಿ ಸಂಚಾರವನ್ನು ನಿರ್ವಹಿಸುವುದು ಅದ್ಭುತವಾಗಿದೆ” ಎಂದು ಅವರು ಸಂತಸ ಹಂಚಿಕೊಂಡಿದ್ದಾರೆ.

“ನನ್ನ ಪೋಷಕರು ನನ್ನನ್ನು ಸ್ವೀಕರಿಸಲಿಲ್ಲ. ಆದರೆ, ಅವರು ಈಗ ನನ್ನನ್ನು ಸ್ವೀಕರಿಸಿದರು. ನನ್ನ ಸ್ನೇಹಿತರು ನನ್ನನ್ನು ತಪ್ಪಿಸುತ್ತಿದ್ದರು. ಆದರೆ, ಈಗ ಅವರು ನನಗೆ ಸಂದೇಶ ಕಳುಹಿಸುತ್ತಾರೆ; ಸಂಪರ್ಕದಲ್ಲಿರುತ್ತಾರೆ. ನಾನು ಕೆಲಸ ಪಡೆದ ನಂತರ, ನನ್ನ ಸಂಬಂಧಿಕರು ಮತ್ತು ಇತರರು ಮೆಚ್ಚುತ್ತಿದ್ದಾರೆ; ಇದು ಅದ್ಭುತ. ನಾನು ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ” ಎಂದು ನಿಶಾ ಹೇಳಿದರು.

ಮತ್ತೊಬ್ಬ ಟ್ರಾಫಿಕ್ ಸಹಾಯಕರಾದ ಸನಾ ಇದೇ ರೀತಿಯ ಭಾವನೆಗಳನ್ನು ಪ್ರತಿಧ್ವನಿಸಿದರು; ನಾಗರಿಕರಿಂದ ಅವರು ಪಡೆಯುವ ಹೊಸ ಗೌರವವದ ಕುರಿತು ಖುಷಿ ವ್ಯಕ್ತಪಡಿಸಿದರು.

ನವೆಂಬರ್ 2024 ರಲ್ಲಿ, ಸಿಎಂ ರೆಡ್ಡಿ ಅವರು ಹೆಚ್ಚಿನ ದಟ್ಟಣೆಯ ಪ್ರದೇಶಗಳಲ್ಲಿ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳನ್ನು ಸಂಚಾರ ಸ್ವಯಂಸೇವಕರಾಗಿ ನೇಮಿಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದಾಗ ಈ ಉಪಕ್ರಮ ಪ್ರಾರಂಭವಾಯಿತು. ಅವರಿಗೆ ಗೃಹರಕ್ಷಕರಿಗೆ ಹೋಲುವ ಉದ್ಯೋಗಾವಕಾಶಗಳನ್ನು ಒದಗಿಸುವುದು, ಮೀಸಲಾದ ಡ್ರೆಸ್ ಕೋಡ್ ಮತ್ತು ಸಂಬಳ ಒದಗಿಸುವುದು ಇದರ ಉದ್ದೇಶವಾಗಿತ್ತು.

ಡಿಸೆಂಬರ್ 6, 2024 ರಂದು, ಸಿಎಂ ರೇವಂತ್ ರೆಡ್ಡಿ ಅವರು ಆಯ್ಕೆಯಾದ ಅಭ್ಯರ್ಥಿಗಳಿಗೆ ದಾಖಲಾತಿ ಪತ್ರಗಳನ್ನು ಹಸ್ತಾಂತರಿಸಿದರು. ಡಿಸೆಂಬರ್ 22 ರ ಹೊತ್ತಿಗೆ ಅವರನ್ನು ಔಪಚಾರಿಕವಾಗಿ ಸೇವೆಗೆ ಸೇರಿಸಲಾಯಿತು. 100 ಅರ್ಜಿದಾರರಲ್ಲಿ, ದೈಹಿಕ ಪರೀಕ್ಷೆಗಳು ಸೇರಿದಂತೆ ಕಠಿಣ ಆಯ್ಕೆ ಪ್ರಕ್ರಿಯೆಯ ನಂತರ 44 ಜನರನ್ನು ಶಾರ್ಟ್‌ಲಿಸ್ಟ್ ಮಾಡಲಾಯಿತು. 39 ಜನರು ತಮ್ಮ ತರಬೇತಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದರು.

ಹೆಚ್ಚುವರಿ ಪೊಲೀಸ್ ಆಯುಕ್ತ (ಟ್ರಾಫಿಕ್) ಪಿ. ವಿಶ್ವ ಪ್ರಸಾದ್, ಟ್ರಾನ್ಸ್‌ಜೆಂಡರ್ ಸಂಚಾರ ಸಹಾಯಕರು ಸೇರ್ಪಡೆಯಾದಾಗಿನಿಂದ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಗಮನಿಸಿದರು.

“ಟ್ರಾಫಿಕ್ ಸಹಾಯಕರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರು ವೃತ್ತಿಪರ ಕುಶಾಗ್ರಮತಿ ಪಡೆಯಲು ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ. ಅವರು ಸಮಾಜದೊಂದಿಗೆ ಸಂಯೋಜನೆಗೊಳ್ಳಲು ಮತ್ತು ಉತ್ತಮವಾಗಿ ಕಾರ್ಯನಿರ್ವಹಿಸಲು ಬಯಸುತ್ತಾರೆ” ಎಂದರು.

ಇದನ್ನೂ ಓದಿ; ಸ್ಯಾಮ್ ಪಿತ್ರೋಡಾ ವಿರುದ್ಧ ಅಕ್ರಮ ಭೂ ಒತ್ತುವರಿ ದೂರು ಕೊಟ್ಟ ಬಿಜೆಪಿ ನಾಯಕ ಎನ್.ಆರ್. ರಮೇಶ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...