Homeಮುಖಪುಟಹೈದರಾಬಾದ್ ಅವಳಿ ಬಾಂಬ್ ಸ್ಪೋಟ: ಐವರು ಅಪರಾಧಿಗಳ ಮರಣದಂಡನೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್

ಹೈದರಾಬಾದ್ ಅವಳಿ ಬಾಂಬ್ ಸ್ಪೋಟ: ಐವರು ಅಪರಾಧಿಗಳ ಮರಣದಂಡನೆ ಎತ್ತಿ ಹಿಡಿದ ತೆಲಂಗಾಣ ಹೈಕೋರ್ಟ್

- Advertisement -
- Advertisement -

ಹೈದರಾಬಾದ್‌ನ ದಿಲ್‌ಸುಖ್‌ನಗರ ಅವಳಿ ಬಾಂಬ್ ಸ್ಫೋಟ ಪ್ರಕರಣದ ಅಪರಾಧಿಗಳಾದ ​ಇಂಡಿಯನ್ ಮುಜಾಹಿದ್ದೀನ್ ಸಂಘಟನೆಯ ​ಐವರು ಸದಸ್ಯರಿಗೆ ಎನ್‌ಐಎ ನ್ಯಾಯಾಲಯ 2016ರಲ್ಲಿ ವಿಧಿಸಿದ್ದ ಮರಣದಂಡನೆಯನ್ನು ತೆಲಂಗಾಣ ಹೈಕೋರ್ಟ್ ಮಂಗಳವಾರ (ಏಪ್ರಿಲ್ 8) ಎತ್ತಿಹಿಡಿದಿದೆ.

2013ರಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ 18 ಜನರ ಸಾವಿಗೀಡಾಗಿದ್ದರು ಮತ್ತು 121 ಜನರು ಗಾಯಗೊಂಡಿದ್ದರು.

ನ್ಯಾಯಮೂರ್ತಿಗಳಾದ ಕೆ. ಲಕ್ಷ್ಮಣ್ ಮತ್ತು ಪಿ. ಶ್ರೀ ಸುಧಾ ಅವರಿದ್ದ ಹೈಕೋರ್ಟ್‌ ವಿಭಾಗೀಯ ಪೀಠ, ಸೆಷನ್ಸ್ ನ್ಯಾಯಾಧೀಶರು ಮರಣದಂಡನೆಯನ್ನು ದೃಢಪಡಿಸುವಂತೆ ಮಾಡಿದ ಉಲ್ಲೇಖದ ಮೇರೆಗೆ ಮತ್ತು ಆರೋಪಿಗಳಾದ ಅಸದುಲ್ಲಾ ಅಖ್ತರ್ ಹದ್ದಿ ತಬ್ರೆಜ್ ಡ್ಯಾನಿಯಲ್ ಅಸಾದ್, ಜಿಯಾ ಉರ್ ರೆಹಮಾನ್, ಮೊಹಮ್ಮದ್ ತಹ್ಸೀನ್ ಅಖ್ತರ್ ಹಸನ್, ಮೊಹಮ್ಮದ್ ಅಹ್ಮದ್ ಸಿದ್ದಿಬಾಪ ಅಲಿಯಾಸ್ ಯಾಸಿನ್ ಭಟ್ಕಳ್ ಮತ್ತು ಅಜಾಜ್ ಶೇಖ್ ಸಮರ್ ಅರ್ಮಾನ್ ಸಲ್ಲಿಸಿದ ಮೇಲ್ಮನವಿ ವಿಚಾರಣೆ ನಡೆಸಿ ಆದೇಶ ಹೊರಡಿಸಿದೆ.

ಎನ್‌ಐಎ ಆರೋಪಪಟ್ಟಿಯ ಪ್ರಕಾರ 6 ಜನರನ್ನು ಬಾಂಬ್ ಸ್ಪೋಟದ ಹೊಣೆಗಾರರನ್ನಾಗಿ ಮಾಡಲಾಗಿದ್ದರೂ, ಸ್ಪೋಟದ ಹಿಂದಿನ ಮಾಸ್ಟರ್ ಮೈಂಡ್ ಎಂದು ಹೇಳಲಾದ ರಿಯಾಜ್ ಭಟ್ಕಳ್ ಪಾಕಿಸ್ತಾನಕ್ಕೆ ಪರಾರಿಯಾಗಿದ್ದಾನೆ ಎಂದು ಶಂಕಿಸಲಾಗಿದೆ. ಹೀಗಾಗಿ, ಬಂಧನದಲ್ಲಿರುವ ಐವರು ಆರೋಪಿಗಳ ವಿರುದ್ಧ ಮಾತ್ರ ವಿಚಾರಣೆ ನಡೆಸಲಾಗಿದೆ.

“ಬಾಂಬ್ ಸ್ಫೋಟಗಳನ್ನು ಇಂಡಿಯನ್ ಮುಜಾಹಿದ್ದೀನ್ ಸಂಘಟನೆ ಯೋಜಿಸಿತ್ತು ಮತ್ತು ಭಾರತದ ವಿರುದ್ಧ ಯುದ್ಧ ನಡೆಸಲು ಉನ್ನತ ಮಟ್ಟದ ಪಿತೂರಿ ನಡೆಸಲಾಗಿತ್ತು. ಆ ಪಿತೂರಿಯ ಪ್ರಕಾರ ಜನರ ಮನಸ್ಸಿನಲ್ಲಿ ಭಯ ಸೃಷ್ಟಿಸಲು ಹೈದರಾಬಾದ್‌ನಲ್ಲಿ ಬಾಂಬ್ ಸ್ಫೋಟಗಳನ್ನು ನಡೆಸಲು ಅಪರಾಧಿಗಳು ನಿರ್ಧರಿಸಿದ್ದರು” ಎನ್‌ಐಎ ಪತ್ರಿಕಾ ಪ್ರಕಟಣೆಯಲ್ಲಿ ಆರೋಪಿಸಿದ್ದಾಗಿ ಲೈವ್‌ ಲಾ ವರದಿ ಮಾಡಿದೆ.

ಫೆಬ್ರವರಿ 21,2013ರಂದು ಸಂಜೆ 7 ಗಂಟೆ ಸುಮಾರಿಗೆ ಹೈದರಾಬಾದ್‌ನ ದಿಲ್‌ಸುಖ್‌ನಗರ ಮಾರುಕಟ್ಟೆಯಲ್ಲಿ ಅವಳಿ ಬಾಂಬ್ ಸ್ಫೋಟಗಳು ಸಂಭವಿಸಿದ್ದವು. ಘಟನೆಯಲ್ಲಿ ತಾಯಿಯ ಗರ್ಭದಲ್ಲಿದ್ದ ಒಂದು ಮಗು ಸೇರಿದಂತೆ 18 ಜನರು ಸಾವಿಗೀಡಾಗಿದ್ದರು ಮತ್ತು 131 ಜನರು ಗಾಯಗೊಂಡಿದ್ದರು. ಮೊದಲ ಸ್ಫೋಟ ಸಂಜೆ 7 ಗಂಟೆ ಸುಮಾರಿಗೆ ದಿಲ್‌ಸುಖ್‌ನಗರದ 107 ಬಸ್ ನಿಲ್ದಾಣದ ಬಳಿ ಸಂಭವಿಸಿತ್ತು. ಇದಾಗಿ, ಕೆಲವು ಸೆಕೆಂಡುಗಳ ನಂತರ ಎರಡನೇ ಸ್ಫೋಟ ದಿಲ್‌ಸುಖ್‌ನಗರದ ಎ -1 ಮಿರ್ಚಿ ಸೆಂಟರ್ ಅಂಗಡಿಯ ಬಳಿ ಸಂಭವಿಸಿತ್ತು.

ಈ ಕುರಿತ ತನಿಖೆಯಲ್ಲಿ ಬಾಂಬ್ ಸ್ಫೋಟಗಳು ಮತ್ತು ಆರೋಪಿಗಳ ನಡುವೆ ಸಂಪರ್ಕವಿದೆ ಎಂದು ಅಧಿಕಾರಿಗಳು ಹೇಳಿದ್ದರು. ಹೆಚ್ಚುವರಿಯಾಗಿ, ತನಿಖಾಧಿಕಾರಿಗಳು ಅಮೋನಿಯಂ ನೈಟ್ರೇಟ್, ಡಯೋಡ್‌ಗಳು, ಸಂಪರ್ಕಿತ ತಂತಿಗಳು, ಟೈಮರ್‌ಗಳು, ಬ್ಯಾಟರಿಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಇವುಗಳನ್ನು ಬಳಸಿ ಹೆಚ್ಚಿನ ದಾಳಿ ನಡೆಸುವ ಸಾಧ್ಯತೆ ಇತ್ತು ಎಂದಿದ್ದರು.

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ; ಮದರಸಾ ಶಿಕ್ಷಕನಿಗೆ 187 ವರ್ಷಗಳ ಜೈಲು ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಸ್ಸಾಂ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ, ತಮ್ಮ ವಿರೋಧಿಗಳನ್ನು ಮುಗಿಸಲು ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ; ರಾಹುಲ್ ಗಾಂಧಿ

ನವದೆಹಲಿ: "ಅಸ್ಸಾಂನ ಪ್ರಸ್ತುತ ಮುಖ್ಯಮಂತ್ರಿ ದೇಶದ ಅತ್ಯಂತ ಭ್ರಷ್ಟ. ಅವರು ಕಾನೂನಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ತಮ್ಮ ರಾಜಕೀಯ ವಿರೋಧಿಗಳು ಮತ್ತು ವಿಮರ್ಶಕರನ್ನು ಕಿರುಕುಳ ನೀಡಲು ಅವರು ರಾಜ್ಯ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುವುದು ಸಂವಿಧಾನಕ್ಕೆ ವಿರುದ್ಧವಾಗಿದೆ"...

ಕೃಷಿ ವೆಚ್ಚದ ಆಧಾರದ ಮೇಲೆ ಎಂಎಸ್‌ಪಿ ನಿಗದಿ ಕೋರಿ ರೈತರಿಂದ ಅರ್ಜಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ನಿಗದಿಪಡಿಸುವಾಗ, ಆಯಾ ರಾಜ್ಯ ಸರ್ಕಾರಗಳು ಪ್ರಸ್ತಾಪಿಸಿದ 'C2' ಎಂದು ಕರೆಯಲಾಗುವ ಕೃಷಿ ವೆಚ್ಚಕ್ಕೆ ಸಮರ್ಪಕ ಪ್ರಾಮುಖ್ಯತೆ ನೀಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಕೋರಿ...

ದೆಹಲಿ ವಿವಿ: ಅಂಬೇಡ್ಕರ್ ಕಾಲೇಜಿನಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ವಿರೋಧಿಸಿ ಪ್ರತಿಭಟಿಸಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ, ಬಂಧನ

ಸೋಮವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಆಯೋಜಿಸಿದ್ದ ಕಾರ್ಯಕ್ರಮವನ್ನು ವಿರೋಧಿಸಿ ಪ್ರತಿಭಟಿಸಿದ ದೆಹಲಿ ವಿಶ್ವವಿದ್ಯಾಲಯದ ಡಾ. ಭೀಮ್ ರಾವ್ ಅಂಬೇಡ್ಕರ್ ಕಾಲೇಜಿನ ವಿದ್ಯಾರ್ಥಿಗಳ ಮೇಲೆ ಭದ್ರತಾ ಸಿಬ್ಬಂದಿ ಹಲ್ಲೆ ನಡೆಸಿ, ದೆಹಲಿ ಪೊಲೀಸರು...

ಪವನ್ ಖೇರಾಗೆ ನಿರೀಕ್ಷಣಾ ಜಾಮೀನು : ತೆಲಂಗಾಣ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಅಸ್ಸಾಂ ಸರ್ಕಾರ

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ವಿರುದ್ಧದ ಹೇಳಿಕೆಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಒಂದು ವಾರದ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ನೀಡಿದ...

ಶಾಂತಿಗಾಗಿ ಕರೆ ನೀಡಿದ್ದ ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ; ತಾನೇ ಯೇಸು ಕ್ರಿಸ್ತ ಎಂಬಂತೆ ಎಐ ಫೋಟೋ ಹಂಚಿಕೊಂಡ ಅಮೆರಿಕ ಅಧ್ಯಕ್ಷ

ವಾಷಿಂಗ್ಟನ್: ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ರಾತ್ರಿ ಪೋಪ್ ಲಿಯೋ XIV ವಿರುದ್ಧ ಅಸಾಧಾರಣ ಟೀಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಮೆರಿಕದಲ್ಲಿ ಜನಿಸಿದ ಕ್ಯಾಥೋಲಿಕ್ ಚರ್ಚ್‌ನ ಜಾಗತಿಕ ನಾಯಕ "ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ" ಮತ್ತು...

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...