Homeಮುಖಪುಟಹೈದರಾಬಾದ್ ವಿವಿ ಚುನಾವಣೆ: ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ದಲಿತ ವಿದ್ಯಾರ್ಥಿ ಅಧ್ಯಕ್ಷರಾಗಿ ಆಯ್ಕೆ

ಹೈದರಾಬಾದ್ ವಿವಿ ಚುನಾವಣೆ: ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ದಲಿತ ವಿದ್ಯಾರ್ಥಿ ಅಧ್ಯಕ್ಷರಾಗಿ ಆಯ್ಕೆ

ಲಿಂಗ ಸಂವೇದನೆ ಸಮಿತಿಗೆ ಪ್ರತಿನಿಧಿಯಾಗಿ ಟ್ರಾನ್ಸ್ ಯುವತಿ ಆಯ್ಕೆಯಾಗಿದ್ದಾರೆ.

- Advertisement -
- Advertisement -

ಪರಿಶಿಷ್ಟ ಜಾತಿಯ ಮಹಾರ್ ಸಮುದಾಯಕ್ಕೆ ಸೇರಿದ 24 ವರ್ಷದ ಪ್ರಜ್ವಲ್ ಚಂದ್ರಕಾಂತ್ ಗಾಯಕವಾಡ ಅವರು ಫೆಬ್ರವರಿ 25, ಶನಿವಾರದಂದು ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ  ಆಯ್ಕೆಯಾದರು.

ಪ್ರಜ್ವಲ್ ಅವರು ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನ ಸಂಚಾಲಕರಾಗಿದ್ದಾರೆ. ಇವರು ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್-ಸ್ಟೂಡೆಂಟ್ಸ್ ಫೆಡರೇಶನ್ ಆಫ್ ಇಂಡಿಯಾ-ದಲಿತ್ ಸ್ಟೂಡೆಂಟ್ಸ್ ಯೂನಿಯನ್ (ASA-SFI-DSU) ಪ್ಯಾನೆಲ್‌ನಿಂದ ಸ್ಪರ್ಧಿಸಿ 608 ಮತಗಳ ಅಂತರದಿಂದ ಗೆದ್ದಿದ್ದಾರೆ. ಅವರ ಜೊತೆಗೆ, ಐದು ಇತರ ದಲಿತ ವಿದ್ಯಾರ್ಥಿಗಳು ವಿವಿಧ ಹುದ್ದೆಗಳಿಗೆ ಆಯ್ಕೆಯಾಗಿದ್ದಾರೆ. ಇದು ಹೈದರಾಬಾದ್ ವಿಶ್ವವಿದ್ಯಾನಿಲಯದಲ್ಲಿ ಸಾಮಾಜಿಕ ನ್ಯಾಯದ ಆಂದೋಲನ ಚಾಲ್ತಿಯಲ್ಲಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ ಎಂದು ಪ್ರಜ್ವಲ್ ಹೇಳಿದ್ದಾರೆ.

“ಯಾವುದೇ ಭಾರತೀಯ ವಿಶ್ವವಿದ್ಯಾನಿಲಯದ ಇತಿಹಾಸದಲ್ಲಿ, ಒಂಬತ್ತು ಹುದ್ದೆಗಳಲ್ಲಿ ಆರು ದಲಿತ ವಿದ್ಯಾರ್ಥಿಗಳು ಸ್ಪರ್ಧಿಸಿ ಗೆಲವು ಕಂಡಿಲ್ಲ, ಜಾತಿ ವಿರೋಧಿ ಚಳವಳಿಯ ಇತಿಹಾಸದಲ್ಲಿ ಇದೊಂದು ವಿಜಯದ ಕ್ಷಣವಾಗಿದೆ” ಎಂದು ಪ್ರಜ್ವಲ್ ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜ್ವಲ್ ಚಂದ್ರಕಾಂತ್ ಗಾಯಕವಾಡ

ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಜಂಟಿ ಕಾರ್ಯದರ್ಶಿ, ಕ್ರೀಡಾ ಕಾರ್ಯದರ್ಶಿ, ಸಾಂಸ್ಕೃತಿಕ ಕಾರ್ಯದರ್ಶಿ ಮತ್ತು ವಿದ್ಯಾರ್ಥಿಗಳ ಲೈಂಗಿಕ ಕಿರುಕುಳದ ವಿರುದ್ಧ ಲಿಂಗ ಸಂವೇದನೆ ಸಮಿತಿ ಸೇರಿದಂತೆ ವಿದ್ಯಾರ್ಥಿ ಒಕ್ಕೂಟದ ಚುನಾವಣೆಗಳು ಒಂಬತ್ತು ಹುದ್ದೆಗಳಿಗೆ ನಡೆಯುತ್ತವೆ.

ಪ್ರಜ್ವಲ್‌ ಅವರು ಮಹಾರಾಷ್ಟ್ರದ ನಾಸಿಕ್‌ನಿಂದ ಬಂದಿದ್ದು, ಅವರು ಜೆಂಡರ್ ಸ್ಟಡೀಸ್ ವಿಭಾಗದಲ್ಲಿ ಪಿಎಚ್‌ಡಿ ಮಾಡುತ್ತಿದ್ದಾರೆ. ಅವರ ತಂದೆ ತಾಯಿ ಅಂಬೇಡ್ಕರ್‌ವಾದಿಗಳಾಗಿದ್ದು, ಪ್ರಜ್ವಲ್‌ ಕೂಡ ಯಾವಾಗಲೂ ಅಂಬೇಡ್ಕರ್ ಸಿದ್ಧಾಂತದ ಕಡೆಗೆ ಒಲವು ತೋರುತ್ತಿದ್ದರು. ಅವರು ಪುಣೆಯ ಫರ್ಗುಸನ್ ಕಾಲೇಜಿನಲ್ಲಿ ಪದವಿ  ಓದುವ ಸಮಯದಲ್ಲಿ ತಮ್ಮ ವಿದ್ಯಾರ್ಥಿ ರಾಜಕೀಯವನ್ನು ಪ್ರಾರಂಭಿಸಿದರು. ಅಲ್ಲಿ ಅವರು ಅಂಬೇಡ್ಕರ್ ವಿದ್ಯಾರ್ಥಿಗಳ ಸಂಘಟನೆಯ ಸ್ಥಾಪಕ-ಸದಸ್ಯರಾಗಿದ್ದರು.

ಇದನ್ನೂ ಓದಿ: ಹೈದರಾಬಾದ್‌‌ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲಿ ಬಿಬಿಸಿ ಸಾಕ್ಷ್ಯಚಿತ್ರ ವೀಕ್ಷಿಸಿದ ವಿದ್ಯಾರ್ಥಿಗಳು

2019ರಲ್ಲಿ ಪ್ರಜ್ವಲ್ ಅವರು ಹೈದರಾಬಾದ್ ವಿಶ್ವವಿದ್ಯಾನಿಲಯಕ್ಕೆ ಪ್ರವೇಶ ಮಾಡಿದು, ಇತಿಹಾಸದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದರು. ಈ ವೇಳೆ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ನೊಂದಿಗೆ ಸಂಬಂಧ ಹೊಂದಿದ್ದರು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳ ಮೇಲಿನ ತಾರತಮ್ಯದ ವಿರುದ್ಧ ಹಲವು ಹೋರಾಟಗಳನ್ನು ಮುನ್ನಡೆಸಿದ್ದಾರೆ.

”ಸಾಮಾಜಿಕ ನ್ಯಾಯದ ವಿಷಯದಲ್ಲಿ, ಹೈದರಾಬಾದ್ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘಟನೆಯು ಇತರ ವಿಶ್ವವಿದ್ಯಾಲಯಗಳಿಗಿಂತ ಬಹಳ ಮುಂದಿದೆ. ಮೀಸಲಾತಿಗಳನ್ನು ರಕ್ಷಿಸುವುದಷ್ಟೇ ಅಲ್ಲ, ವಿದ್ಯಾರ್ಥಿಗಳ ಫೆಲೋಶಿಪ್‌ಗಾಗಿ ಹೋರಾಡುವಲ್ಲಿ ಅಂಬೇಡ್ಕರ್ ಸ್ಟೂಡೆಂಟ್ಸ್ ಅಸೋಸಿಯೇಷನ್‌ ಪ್ರಮುಖ ಪಾತ್ರ ವಹಿಸಿದೆ” ಎಂದು ಪ್ರಜ್ವಲ್ ಹೇಳಿದ್ದಾರೆ.

ದಲಿತ ಸಮುದಾಯದ ಅಧ್ಯಕ್ಷರನ್ನು ಹೊಂದುವುದರ ಜೊತೆಗೆ, ವಿದ್ಯಾರ್ಥಿಗಳು ಮೊದಲ ಬಾರಿಗೆ 21 ವರ್ಷದ ಟ್ರಾನ್ಸ್ ಮಹಿಳೆ, ದಲಿತ ಸಮುದಾಯದ ಹೃತಿಕ್ ಲಕ್ಷ್ಮಣ್ ಲಾಲನ್ ಅವರನ್ನು ಲೈಂಗಿಕ ಕಿರುಕುಳದ ವಿರುದ್ಧದ ಲಿಂಗ ಸಂವೇದನೆ ಸಮಿತಿಗೆ ಪ್ರತಿನಿಧಿಯನ್ನಾಗಿ ಆಯ್ಕೆ ಮಾಡಿದ್ದಾರೆ.

ಹೃತಿಕ್ ಲಕ್ಷ್ಮಣ್ ಲಾಲನ್

ಗುಜರಾತ್‌ನ ಕಚ್‌ನಿಂದ ಬಂದಿರುವ ಹೃತಿಕ್ ಅವರು ಸಮಾಜಶಾಸ್ತ್ರದಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾರೆ. ಅವರು ಮೇಘವಾಲ್ ಜಾತಿಗೆ ಸೇರಿದವರು. ”ಇದೊಂದು ಐತಿಹಾಸಿಕ ಸಾಧನೆ ಎಂದು ಪುನರುಚ್ಚರಿಸಲಾಗುತ್ತಿದೆ. ವಿದ್ಯಾರ್ಥಿ ಸಮುದಾಯದಿಂದ ನನಗೆ ದೊರೆತಿರುವ ಬೆಂಬಲ ಮತ್ತು ಗೌರವದಿಂದ ನಾನು ತುಂಬಾ ವಿನಮ್ರನಾಗಿದ್ದೇನೆ” ಎಂದು ಅವರು ತಮ್ಮ ಕೃತಜ್ಞತೆ ತಿಳಿಸಿದ್ದಾರೆ.

“ಫಲಿತಾಂಶಗಳು ಪ್ರಕಟವಾದಾಗ ನಾನು 2019 ರಲ್ಲಿ ಟ್ರಾನ್ಸ್ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯಿದೆಯನ್ನು ಅಂಗೀಕರಿಸಿದ ದಿನದ ಬಗ್ಗೆ ಯೋಚಿಸುತ್ತಿದ್ದೆ. ಟ್ರಾನ್ಸ್ ವ್ಯಕ್ತಿಯ ಮೌಖಿಕ ಮತ್ತು ಲೈಂಗಿಕ ನಿಂದನೆಯು ಆರು ತಿಂಗಳಿಂದ ಎರಡು ವರ್ಷಗಳವರೆಗೆ ಜೈಲು ಶಿಕ್ಷೆಗೆ ಕಾರಣವಾಗಬಹುದು ಎಂದು ಅದರ ಷರತ್ತು ಹೇಳುತ್ತದೆ. ಇದು ಮಹಿಳೆಯರ ವಿರುದ್ಧ ಮಾಡಿದ ಅದೇ ಅಪರಾಧಕ್ಕೆ ಹೋಲಿಸಿದರೆ ತೀರಾ ಕಡಿಮೆ. ಬಿಜೆಪಿ ಸರ್ಕಾರದ ಪ್ರತಿಗಾಮಿ ನೀತಿಗೆ ಉತ್ತರವಾಗಿ ನಾನು ಗೆಲುವು ಸಾರ್ಧಿಸಿದ್ದೇನೆ” ಎಂದು ಹೃತಿಕ್ ನೆನಪಿಸಿಕೊಳ್ಳುತ್ತಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಲೈಂಗಿಕ ಅಲ್ಪಸಂಖ್ಯಾತರ ಪರ ಹೋರಾಟಗಾರ್ತಿ ಅಕೈ ಪದ್ಮಶಾಲಿ ಅವರು, ”ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ಲೈಂಗಿಕ ಕಿರುಕುಳದ ವಿರುದ್ಧದ ಲಿಂಗ ಸಂವೇದನೆ ಸಮಿತಿಗೆ ಟ್ರಾನ್ಸ್ ಮಹಿಳೆಯನ್ನು ಆಯ್ಕೆ ಮಾಡಿರುವುದು ಒಳ್ಳೆಯ ಬೆಳವಣಿಗೆಯಾಗಿದೆ. ಇದೇ ರೀತಿ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಟ್ರಾನ್ಸ್ ಮಹಿಳೆಯರನ್ನು ಗುರುತಿಸುವ ಕೆಲಸ ಆಗಬೇಕಿದೆ” ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...