Homeಮುಖಪುಟಹೈದರಾಬಾದ್‌ನಲ್ಲಿ ಪೆಟ್ರೋಲ್‌ಗೆ ಮುಗಿಬಿದ್ದ ಜನ: ಕುದುರೆ ಏರಿ ಹೊರಟ ಪುಡ್‌ ಡೆಲಿವರಿ ಬಾಯ್‌

ಹೈದರಾಬಾದ್‌ನಲ್ಲಿ ಪೆಟ್ರೋಲ್‌ಗೆ ಮುಗಿಬಿದ್ದ ಜನ: ಕುದುರೆ ಏರಿ ಹೊರಟ ಪುಡ್‌ ಡೆಲಿವರಿ ಬಾಯ್‌

- Advertisement -
- Advertisement -

ಹಿಟ್‌ ಆಂಡ್‌ ರನ್‌ ಪ್ರಕರಣಗಳಲ್ಲಿ 10 ವರ್ಷಗಳ ಜೈಲು ಶಿಕ್ಷೆ ಮತ್ತು 7 ಲಕ್ಷ ದಂಡವನ್ನು ವಿಧಿಸುವ ಕೇಂದ್ರ ಸರ್ಕಾರದ ಭಾರತೀಯ ನ್ಯಾಯ ಸಂಹಿತಾ ಕಾನೂನಿನ ವಿರುದ್ಧ ದೇಶದ ವಿವಿಧೆಡೆ ಟ್ರಕ್‌ ಚಾಲಕರು ವ್ಯಾಪಕವಾಗಿ ಪ್ರತಿಭಟನೆ ಮಾಡಿದ್ದಾರೆ. ಮಹಾರಾಷ್ಟ್ರ, ಮಧ್ಯಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ಉತ್ತರ ಪ್ರದೇಶ, ಹಿಮಾಚಲ, ರಾಜಸ್ಥಾನ ಮತ್ತು ಬಿಹಾರಗಳಲ್ಲಿ ಪ್ರತಿಭಟನೆ ಜನರ ಮೇಲೆ ವ್ಯಾಪಕವಾದ ಪರಿಣಾಮ ಬೀರಿತ್ತು. ಟ್ರಕ್‌ ಚಾಲಕರ ಪ್ರತಿಭಟನೆಯಿಂದಾಗಿ ಹೈದರಾಬಾದ್‌ನ ಪೆಟ್ರೋಲ್ ಪಂಪ್‌ಗಳಾದ್ಯಂತ ಭಾರಿ ಜನಸಂದಣಿ ಸೇರಿದ್ದರು. ಚಾಲಕರ ವ್ಯಾಪಕ ಪ್ರತಿಭಟನೆಗಳಿಂದ ಇಂಧನ ಪೂರೈಕೆ ಸ್ಥಗಿತದ ಭಯದಿಂದ ಜನರು ಪೆಟ್ರೋಲ್‌ ಪಂಪ್‌ಗಳಲ್ಲಿ ಜಮಾಯಿಸಿದ್ದರು.

ಇದರಿಂದ ಹೈದರಾಬಾದ್‌ನ ಝೊಮಾಟೊ ಡೆಲಿವರಿ ಬಾಯ್‌ ಓರ್ವ ತನ್ನ ದ್ವಿಚಕ್ರ ವಾಹನವನ್ನು ಬಿಟ್ಟು ಕುದುರೆಯಲ್ಲಿ ಪಾರ್ಸೆಲ್‌ ಸಾಗಾಟ ಮಾಡಿದ್ದಾನೆ. ಈ ಕುರಿತ ವಿಡಿಯೋ ವೈರಲ್‌ ಆಗಿದೆ. ‘ಅರ್ಬಾಜ್ ದಿ ಗ್ರೇಟ್’ ಎಂಬ ಎಕ್ಸ್‌ ಖಾತೆಯಲ್ಲಿ ಈ ಕುರಿತು ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, ಡೆಲಿವರಿ ಏಜೆಂಟ್ ತನ್ನ ಹೆಗಲ ಮೇಲೆ ಡೆಲಿವರಿ ಬ್ಯಾಗ್‌ ಹಾಕಿಕೊಂಡಿದ್ದಾನೆ. ಝೊಮಾಟೊ ಟೀಸರ್ಟ್‌ ಧರಸಿದ್ದ ಯುವಕ ಕುದುರೆಯ ಮೇಲೇರಿ ಜನ ಸಂದಣಿ ಪ್ರದೇಶದಲ್ಲಿ ವಾಹನಗಳ ನಡುವೆ ಪಾರ್ಸೆಲ್‌ ಕೊಂಡೊಯ್ಯುತ್ತಿರುವುದು ಕಂಡು ಬಂದಿದೆ. ಹೈದರಾಬಾದ್‌ನಲ್ಲಿ ಪ್ರತಿಭಟನೆಯಿಂದಾಗಿ ಇಂಧನ ಕೊರತೆಯ ಆತಂಕದಿಂದ ಪೆಟ್ರೋಲ್ ಪಂಪ್‌ಗಳಲ್ಲಿ ಜನರು ಜಮಾಯಿಸಿದ್ದರು. ಉದ್ದವಾದ ಸರತಿ ಸಾಲುಗಳಿದ್ದ ಕಾರಣಕ್ಕೆ ಬೈಕ್‌ ಬದಿಗಿಟ್ಟು, ಕುದುರೆಯ ಮೂಲಕ ಪುಡ್‌ ಡೆಲಿವರಿ ಮಾಡಲಾಗಿದೆ ಎಂದು ಹೇಳಲಾಗಿದೆ.

ಭಾರತೀಯ ನ್ಯಾಯ ಸಂಹಿತಾ ಶಾಸನವನ್ನು ಖಂಡಿಸಿ ಜ.1 ಮತ್ತು 2ರಂದು ನಡೆದ ರಾಷ್ಟ್ರವ್ಯಾಪಿ ಮುಷ್ಕರವು ಇಂಧನ ವಿತರಣೆಯ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರಿದೆ. ಇದು ಗ್ರಾಹಕರಲ್ಲಿ ಇಂಧನದ ಕೊರತೆ ಮತ್ತು ಭೀತಿಗೆ ಕಾರಣವಾಗಿದೆ. ಹೈದರಾಬಾದ್‌ನ ಅಫ್ಜಲ್‌ಗುಂಜ್, ಬಂಜಾರಾ ಹಿಲ್ಸ್, ನಾಂಪಲ್ಲಿ, ಬೇಗಂಪೇಟ್, ಲಂಗರ್ ಹೌಜ್ ಮತ್ತು ಗಚಿಬೌಲಿ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ಪೆಟ್ರೋಲ್ ಪಂಪ್‌ಗಳ ಬಳಿ ಜನರ ಸಾಲುಗಳು ನಿಂತುಕೊಂಡಿರುವುದು ಕಂಡು ಬಂದಿತ್ತು.

ಏನಿದು ಪ್ರತಿಭಟನೆ?

ಹೊಸ ಕ್ರಿಮಿನಲ್ ಕಾನೂನಿನಲ್ಲಿ ಹಿಟ್ ಅಂಡ್ ರನ್‌ ಪ್ರಕರಣಗಳ ಜೈಲು ಶಿಕ್ಷೆಯ ಅವಧಿಯನ್ನು ಹೆಚ್ಚಿಸಲಾಗಿದೆ. ಅಪಘಾತದ ಬಳಿಕ ಚಾಲಕರು ಪರಾರಿಯಾಗಲು ಯತ್ನಿಸಿದರೆ ಅಥವಾ ಮಾರಣಾಂತಿಕ ಅಪಘಾತವನ್ನು ಪೊಲೀಸರಿಗೆ ವರದಿ ಮಾಡದಿದ್ದಲ್ಲಿ 10 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು 7 ಲಕ್ಷ ರೂಪಾಯಿ ದಂಡ ವಿಧಿಸಬಹುದು. ಈ ಹಿಂದೆ, ಹಿಟ್ ಅಂಡ್‌ ರನ್ ಪ್ರಕರಣಕ್ಕೆ ಐಪಿಸಿಯ ಸೆಕ್ಷನ್ 304 ಎ (ನಿರ್ಲಕ್ಷ್ಯದಿಂದ ಸಾವಿಗೆ ಕಾರಣ) ಅಡಿಯಲ್ಲಿ 2 ವರ್ಷಗಳವರೆಗೆ ಮಾತ್ರ ಜೈಲು ಶಿಕ್ಷೆ ವಿಧಿಸಬಹುದಾಗಿತ್ತು.

ಯಾರೂ ಉದ್ದೇಶಪೂರ್ವಕವಾಗಿ ಅಪಘಾತವೆಸಗುವುದಿಲ್ಲ. ಹೊಸ ಕಾನೂನಿನ ಪ್ರಕಾರ ಅಪಘಾತ ನಡೆದಾಗ ಘಟನಾ ಸ್ಥಳದಿಂದ ಪಲಾಯಣ ಮಾಡದಿದ್ದರೆ ಆಕ್ರೋಶಿತ ಜನರು ಚಾಲಕರ ಮೇಲೆ ದಾಳಿ ಮಾಡುವ ಸಾಧ್ಯತೆಯಿರುತ್ತದೆ. ತಮ್ಮ ರಕ್ಷಣೆಗೋಸ್ಕರ ಪಲಾಯಣ ಮಾಡುವ ಚಾಲಕರನ್ನು ಹೊಸ ಕಾನೂನು ತಡೆಯುತ್ತದೆ ಎಂದು ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದರು.

ಕೇಂದ್ರ ಗೃಹ ಇಲಾಖೆಯ ಕಾರ್ಯದರ್ಶಿ ಅಜಯ್ ಭಲ್ಲಾ ಅವರೊಂದಿಗಿನ ಸಭೆಯ ನಂತರ ಇಂದು ಆಲ್ ಇಂಡಿಯಾ ಮೋಟಾರ್ ಟ್ರಾನ್ಸ್‌ಪೋರ್ಟ್ ಅಸೋಸಿಯೇಷನ್ (ಎಐಎಂಟಿಸಿ) ಮುಷ್ಕರ ಕೊನೆಗೊಳಿಸಲು ನಿರ್ಧರಿಸಿದೆ. ಹೊಸ ಕಾನೂನುಗಳು ಇನ್ನೂ ಜಾರಿಗೆ ಬಂದಿಲ್ಲ. ಎಐಎಂಟಿಸಿಯೊಂದಿಗೆ ಸಮಾಲೋಚನೆ ನಡೆಸಿದ ನಂತರವೇ ಜಾರಿಗೆ ತರಲಾಗುವುದು ಎಂದು ಕೇಂದ್ರ ಸರ್ಕಾರದ ಪರವಾಗಿ ಅಜಯ್‌ ಭಲ್ಲಾ ಅವರು ಸಾರಿಗೆ ಸಂಸ್ಥೆಯ ಸದಸ್ಯರಿಗೆ ಭರವಸೆ ನೀಡಿದ ಹಿನ್ನೆಲೆ, ಮುಷ್ಕರ ಹಿಂಪಡೆಯಲಾಗಿದೆ ಎನ್ನಲಾಗಿದೆ.

ಇದನ್ನು ಓದಿ; ದಲಿತ ರೈತರಿಗೆ ‘ED’ ಸಮನ್ಸ್‌ ಪ್ರಕರಣ: ರಾಷ್ಟ್ರಪತಿಗೆ ಪತ್ರ ಬರೆದ IRS ಅಧಿಕಾರಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...