ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆ ಶನಿವಾರ (ಮೇ 24, 2025) ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಲಾಗಿದೆ. ‘ವಿಕಸಿತ ಭಾರತಕ್ಕಾಗಿ ವಿಕಸಿತ ರಾಜ್ಯ @2047’ ಎಂಬ ಘೋಷವಾಕ್ಯದಡಿ ಸಭೆ ನಡೆಯಲಿದೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ನೀತಿ ಆಯೋಗ ಎಂಬುದು ‘ಅಯೋಗ್ಯ ಸಂಸ್ಥೆ’ಯಾಗಿದೆ. ನೀತಿ ಆಯೋಗದ ಸಭೆ ನಡೆಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೂಟಾಟಿಕೆ ಪ್ರದರ್ಶನ ಮಾಡುತ್ತಿದೆ. ಇದು ಜನರ ದಿಕ್ಕು ತಪ್ಪಿಸುವ ಮತ್ತೊಂದು ಕಸರತ್ತು ಎಂದು ಟೀಕಿಸಿದೆ.
ಸಭೆ ಆರಂಭಕ್ಕೂ ಮುನ್ನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್, “ಇಂದು ನೀತಿ ಆಯೋಗದ ಆಡಳಿತ ಮಂಡಳಿಯು ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ ಸೇರಲಿದೆ. ಇದು ವಿಕಸಿತ ಭಾರತ ಗುರಿಯ ಪ್ರಗತಿಯನ್ನು ಪರಿಶೀಲಿಸುತ್ತದೆ ಎಂದು ವರದಿಯಾಗಿದೆ. ಅಧಿಕಾರದಲ್ಲಿರುವವರೇ ತಮ್ಮ ದುರುದ್ದೇಶಪೂರಿತ ಮಾತು ಮತ್ತು ಕೃತ್ಯಗಳಿಂದ ಸಾಮಾಜಿಕ ಸಾಮರಸ್ಯದ ಬಂಧಗಳನ್ನು ನಾಶಪಡಿಸಿದರೆ ಅದು ಎಂತಹ ವಿಕಸಿತ ಭಾರತವಾಗಿರುತ್ತದೆ?” ಎಂದು ಪ್ರಶ್ನಿಸಿದ್ದಾರೆ.
Today the Governing Council of the NITI Aayog meets under the chairmanship of the PM. It will reportedly review progress on the so-called Viksit Bharat goal.
What sort of Viksit Bharat will it be if those in power themselves destroy the bonds of social harmony by their malicious…
— Jairam Ramesh (@Jairam_Ramesh) May 24, 2025
“ಅಧಿಕಾರದಲ್ಲಿರುವವರು ತಮ್ಮ ದುಷ್ಟ ಗುರಿಗಳನ್ನು ಪೂರೈಸಲು ಸಂಸತ್ತು, ನ್ಯಾಯಾಂಗ, ವಿಶ್ವವಿದ್ಯಾಲಯಗಳು, ಮಾಧ್ಯಮ ಮತ್ತು ಸಾಂವಿಧಾನಿಕ ಮತ್ತು ಶಾಸನಬದ್ಧ ಸಂಸ್ಥೆಗಳನ್ನು ಬುಡಮೇಲು ಮಾಡಿದರೆ ಅದು ಎಂತಹ ವಿಕಸಿತ ಭಾರತವಾಗಿರುತ್ತದೆ?. ಭಾರತ ಸದಾ ಎತ್ತಿಹಿಡಿದಿರುವ ಮೌಲ್ಯಗಳ ಅತ್ಯಂತ ಬಲವಾಗಿ ಮತ್ತು ವ್ಯವಸ್ಥಿತವಾಗಿ ದಾಳಿ ನಡೆದರೆ ಅದು ಎಂತಹ ವಿಕ್ಷಿಸಿತ ಭಾರತವಾಗಿರುತ್ತದೆ?” ಎಂದು ಕೇಳಿದ್ದಾರೆ.
“ದೇಶದಲ್ಲಿ ಕೆಲವೇ ಕೆಲವು ವ್ಯಕ್ತಿಗಳ ಕೈಯಲ್ಲಿ ಸಂಪತ್ತು ಸಂಗ್ರಹವಾಗುತ್ತಲೇ ಇದೆ. ಆರ್ಥಿಕ ಅಸಮಾನತೆಗಳು ತೀವ್ರಗೊಳ್ಳುತ್ತಿದೆ. ಭಾರತದ ವೈವಿಧ್ಯತೆಗಳನ್ನು ಉದ್ದೇಶಪೂರ್ವಕವಾಗಿ ಅವಮಾನಿಸಲು ಮತ್ತು ಅಳಿಸಿ ಹಾಕಲು ಪ್ರಯತ್ನಿಸಲಾಗುತ್ತಿದೆ” ಎಂದು ಜೈರಾಮ್ ರಮೇಶ್ ಆಕ್ರೋಶ ಹೊರಹಾಕಿದ್ದಾರೆ.
“ಭಾರತದ ಅದ್ಭುತ ವೈವಿಧ್ಯತೆಗಳನ್ನು ಉದ್ದೇಶಪೂರ್ವಕವಾಗಿ ಅವಮಾನಿಸಿ ಅಳಿಸಿಹಾಕಲು ಪ್ರಯತ್ನಿಸಿದರೆ ಅದು ಎಂತಹ ವಿಕಸಿತ ಭಾರತವಾಗಿರುತ್ತದೆ?. ವಾಕ್ ಸ್ವಾತಂತ್ರ್ಯ ಮಾತ್ರವಲ್ಲದೆ, ದೇಶದಲ್ಲಿ ಸ್ವಾತಂತ್ರ್ಯವೂ ಅಪಾಯದಲ್ಲಿದೆ. ಇದು ಯಾವ ರೀತಿಯ ವಿಕಸಿತ ಭಾರತ?” ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು, ಕೇಂದ್ರ ಸರ್ಕಾರದ ಪ್ರಮುಖ ಸಚಿವರು ಮತ್ತು ಉನ್ನತ ಅಧಿಕಾರಿಗಳು ಪಾಲ್ಗೊಳ್ಳಬೇಕಿತ್ತು.
ಆದರೆ, ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಪುದಚ್ಚೇರಿ ಸಿಎಂ ರಂಗಸಾಮಿ ಸಭೆಗೆ ಹಾಜರಾಗಿಲ್ಲ ಎಂದು ಈ ಸುದ್ದಿ ಬರೆಯು ಹೊತ್ತಿಗೆ ವರದಿಯಾಗಿತ್ತು.
ಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕ; ವಿಡಿಯೊ ವೈರಲ್!


