Homeಮುಖಪುಟನೀತಿ ಆಯೋಗ 'ಅಯೋಗ್ಯ ಸಂಸ್ಥೆ', ಬಿಜೆಪಿಯಿಂದ 'ಬೂಟಾಟಿಕೆ': ಕಾಂಗ್ರೆಸ್ ಟೀಕೆ

ನೀತಿ ಆಯೋಗ ‘ಅಯೋಗ್ಯ ಸಂಸ್ಥೆ’, ಬಿಜೆಪಿಯಿಂದ ‘ಬೂಟಾಟಿಕೆ’: ಕಾಂಗ್ರೆಸ್ ಟೀಕೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ 10ನೇ ಆಡಳಿತ ಮಂಡಳಿ ಸಭೆ ಶನಿವಾರ (ಮೇ 24, 2025) ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಲಾಗಿದೆ. ‘ವಿಕಸಿತ ಭಾರತಕ್ಕಾಗಿ ವಿಕಸಿತ ರಾಜ್ಯ @2047’ ಎಂಬ ಘೋಷವಾಕ್ಯದಡಿ ಸಭೆ ನಡೆಯಲಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, “ನೀತಿ ಆಯೋಗ ಎಂಬುದು ‘ಅಯೋಗ್ಯ ಸಂಸ್ಥೆ’ಯಾಗಿದೆ. ನೀತಿ ಆಯೋಗದ ಸಭೆ ನಡೆಸುವ ಮೂಲಕ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಬೂಟಾಟಿಕೆ ಪ್ರದರ್ಶನ ಮಾಡುತ್ತಿದೆ. ಇದು ಜನರ ದಿಕ್ಕು ತಪ್ಪಿಸುವ ಮತ್ತೊಂದು ಕಸರತ್ತು ಎಂದು ಟೀಕಿಸಿದೆ.

ಸಭೆ ಆರಂಭಕ್ಕೂ ಮುನ್ನ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್ ವಕ್ತಾರ ಜೈರಾಮ್ ರಮೇಶ್, “ಇಂದು ನೀತಿ ಆಯೋಗದ ಆಡಳಿತ ಮಂಡಳಿಯು ಪ್ರಧಾನ ಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಭೆ ಸೇರಲಿದೆ. ಇದು ವಿಕಸಿತ ಭಾರತ ಗುರಿಯ ಪ್ರಗತಿಯನ್ನು ಪರಿಶೀಲಿಸುತ್ತದೆ ಎಂದು ವರದಿಯಾಗಿದೆ. ಅಧಿಕಾರದಲ್ಲಿರುವವರೇ ತಮ್ಮ ದುರುದ್ದೇಶಪೂರಿತ ಮಾತು ಮತ್ತು ಕೃತ್ಯಗಳಿಂದ ಸಾಮಾಜಿಕ ಸಾಮರಸ್ಯದ ಬಂಧಗಳನ್ನು ನಾಶಪಡಿಸಿದರೆ ಅದು ಎಂತಹ ವಿಕಸಿತ ಭಾರತವಾಗಿರುತ್ತದೆ?” ಎಂದು ಪ್ರಶ್ನಿಸಿದ್ದಾರೆ.

“ಅಧಿಕಾರದಲ್ಲಿರುವವರು ತಮ್ಮ ದುಷ್ಟ ಗುರಿಗಳನ್ನು ಪೂರೈಸಲು ಸಂಸತ್ತು, ನ್ಯಾಯಾಂಗ, ವಿಶ್ವವಿದ್ಯಾಲಯಗಳು, ಮಾಧ್ಯಮ ಮತ್ತು ಸಾಂವಿಧಾನಿಕ ಮತ್ತು ಶಾಸನಬದ್ಧ ಸಂಸ್ಥೆಗಳನ್ನು ಬುಡಮೇಲು ಮಾಡಿದರೆ ಅದು ಎಂತಹ ವಿಕಸಿತ ಭಾರತವಾಗಿರುತ್ತದೆ?. ಭಾರತ ಸದಾ ಎತ್ತಿಹಿಡಿದಿರುವ ಮೌಲ್ಯಗಳ ಅತ್ಯಂತ ಬಲವಾಗಿ ಮತ್ತು ವ್ಯವಸ್ಥಿತವಾಗಿ ದಾಳಿ ನಡೆದರೆ ಅದು ಎಂತಹ ವಿಕ್ಷಿಸಿತ ಭಾರತವಾಗಿರುತ್ತದೆ?” ಎಂದು ಕೇಳಿದ್ದಾರೆ.

“ದೇಶದಲ್ಲಿ ಕೆಲವೇ ಕೆಲವು ವ್ಯಕ್ತಿಗಳ ಕೈಯಲ್ಲಿ ಸಂಪತ್ತು ಸಂಗ್ರಹವಾಗುತ್ತಲೇ ಇದೆ. ಆರ್ಥಿಕ ಅಸಮಾನತೆಗಳು ತೀವ್ರಗೊಳ್ಳುತ್ತಿದೆ. ಭಾರತದ ವೈವಿಧ್ಯತೆಗಳನ್ನು ಉದ್ದೇಶಪೂರ್ವಕವಾಗಿ ಅವಮಾನಿಸಲು ಮತ್ತು ಅಳಿಸಿ ಹಾಕಲು ಪ್ರಯತ್ನಿಸಲಾಗುತ್ತಿದೆ” ಎಂದು ಜೈರಾಮ್ ರಮೇಶ್ ಆಕ್ರೋಶ ಹೊರಹಾಕಿದ್ದಾರೆ.

“ಭಾರತದ ಅದ್ಭುತ ವೈವಿಧ್ಯತೆಗಳನ್ನು ಉದ್ದೇಶಪೂರ್ವಕವಾಗಿ ಅವಮಾನಿಸಿ ಅಳಿಸಿಹಾಕಲು ಪ್ರಯತ್ನಿಸಿದರೆ ಅದು ಎಂತಹ ವಿಕಸಿತ ಭಾರತವಾಗಿರುತ್ತದೆ?. ವಾಕ್ ಸ್ವಾತಂತ್ರ್ಯ ಮಾತ್ರವಲ್ಲದೆ, ದೇಶದಲ್ಲಿ ಸ್ವಾತಂತ್ರ್ಯವೂ ಅಪಾಯದಲ್ಲಿದೆ. ಇದು ಯಾವ ರೀತಿಯ ವಿಕಸಿತ ಭಾರತ?” ಎಂದು ಜೈರಾಮ್ ರಮೇಶ್ ಪ್ರಶ್ನಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ನೀತಿ ಆಯೋಗದ ಸಭೆಯಲ್ಲಿ ದೇಶದ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನೆಂಟ್ ಗವರ್ನರ್‌ಗಳು, ಕೇಂದ್ರ ಸರ್ಕಾರದ ಪ್ರಮುಖ ಸಚಿವರು ಮತ್ತು ಉನ್ನತ ಅಧಿಕಾರಿಗಳು ಪಾಲ್ಗೊಳ್ಳಬೇಕಿತ್ತು.

ಆದರೆ, ಕರ್ನಾಟಕದ ಸಿಎಂ ಸಿದ್ದರಾಮಯ್ಯ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ, ಪುದಚ್ಚೇರಿ ಸಿಎಂ ರಂಗಸಾಮಿ ಸಭೆಗೆ ಹಾಜರಾಗಿಲ್ಲ ಎಂದು ಈ ಸುದ್ದಿ ಬರೆಯು ಹೊತ್ತಿಗೆ ವರದಿಯಾಗಿತ್ತು.

ಹೆದ್ದಾರಿಯ ಮಧ್ಯೆಯೆ ಲೈಂಗಿಕ ಕ್ರಿಯೆ ನಡೆಸಿದ ಬಿಜೆಪಿ ನಾಯಕ; ವಿಡಿಯೊ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....