Homeಮುಖಪುಟಸರ್ವಾಧಿಕಾರಿ ನಿರ್ದೇಶನದ ಮೇರೆಗೆ ನನ್ನ ಮನೆ ಮೇಲೆ ದಾಳಿ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

ಸರ್ವಾಧಿಕಾರಿ ನಿರ್ದೇಶನದ ಮೇರೆಗೆ ನನ್ನ ಮನೆ ಮೇಲೆ ದಾಳಿ: ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್

- Advertisement -
- Advertisement -

ಕೇಂದ್ರೀಯ ತನಿಖಾ ದಳ (ಸಿಬಿಐ)ವು ಗುರುವಾರ ತಮ್ಮ ಮನೆ ಮೇಲೆ ದಾಳಿ ನಡೆಸಿರುವ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್, ‘ಸರ್ವಾಧಿಕಾರಿ ನಿರ್ದೇಶನದ ಮೇರೆಗೆ ಸರ್ಕಾರಿ ಸಂಸ್ಥೆಗಳು ನನ್ನ ಮನೆ ಮೇಲೆ ದಾಳಿ ನಡೆಸುತ್ತಿವೆ. ನಾನೊಬ್ಬ ರೈತನ ಮಗ; ದಾಳಿಗೆ ಹೆದರುವುದಿಲ್ಲ’ ಎಂದು ಹೇಳಿದ್ದಾರೆ.

ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಕಳೆದ 3-4 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದೇನೆ. ಇಷ್ಟೆಲ್ಲಾ ಇದ್ದರೂ ಸರ್ವಾಧಿಕಾರಿ ನಿರ್ದೇಶನದ ಮೇರೆಗೆ ಸರ್ಕಾರಿ ಸಂಸ್ಥೆಗಳು ನನ್ನ ಮನೆ ಮೇಲೆ ದಾಳಿ ನಡೆಸುತ್ತಿವೆ. ನನ್ನ ಚಾಲಕ, ಸಹಾಯಕರ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಲಾಗುತ್ತಿದೆ. ನಾನೊಬ್ಬ ರೈತನ ಮಗನಾಗಿದ್ದು, ದಾಳಿಗೆ ಹೆದರುವುದಿಲ್ಲ. ನಾನು ರೈತರೊಂದಿಗೆ ಇದ್ದೇನೆ’ ಎಂದು ಹೇಳಿದ್ದಾರೆ.

‘ಭ್ರಷ್ಟಾಚಾರದ ಆರೋಪ ಹೊತ್ತಿರುವವರ ವಿರುದ್ಧ ನಾನು ದೂರು ನೀಡಿದ್ದೆ. ಆದರೆ, ಸಿಬಿಐ ಅವರನ್ನು ಹುಡುಕುವ ಬದಲು ನನ್ನ ಮನೆ ಮೇಲೆ ದಾಳಿ ಮಾಡಿದೆ. ನನ್ನ 4-5 ಕುರ್ತಾ ಪೈಜಾಮಗಳನ್ನು ಹೊರತುಪಡಿಸಿ ನೀವು ನನ್ನ ಮನೆಯಿಂದ ಏನನ್ನೂ ಪಡೆಯುವುದಿಲ್ಲ. ಸರ್ಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಸರ್ವಾಧಿಕಾರಿ ನನ್ನನ್ನು ಹೆದರಿಸಲು ಪ್ರಯತ್ನಿಸುತ್ತಿದ್ದಾರೆ. ನಾನು ರೈತನ ಮಗ, ನಾನು ಹೆದರುವುದಿಲ್ಲ ಮತ್ತು ತಲೆಬಾಗುವುದಿಲ್ಲ ಎಂದು ಅವರು ಮತ್ತೊಂದು ಪೋಸ್ಟ್‌ನಲ್ಲಿ ತಿಳಿಸಿದ್ದಾರೆ.

ಕಿರು ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದಂತೆ ಗುರುವಾರ ಸುಮಾರು 100 ಸಿಬಿಐ ಅಧಿಕಾರಿಗಳು ಮಲಿಕ್ ಅವರ ಮನೆ ಮತ್ತು ವಿವಿಧ ನಗರಗಳ 29 ಇತರ ಸ್ಥಳಗಳ ಮೇಲೆ ದಾಳಿ ನಡೆಸಿದ್ದಾರೆ. ಮಲಿಕ್ ಅವರು ಆಗಸ್ಟ್ 23, 2018 ಮತ್ತು ಅಕ್ಟೋಬರ್ 30, 2019 ರ ನಡುವೆ ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿ ಸೇವೆ ಸಲ್ಲಿಸಿದ್ದರು. ಅವರು ಇನ್ನೂ ರಾಜ್ಯಪಾಲರಾಗಿದ್ದಾಗ, ಯೋಜನೆಗೆ ಸಂಬಂಧಿಸಿದ ಒಂದು ಫೈಲ್ ಸೇರಿದಂತೆ ಎರಡು ಫೈಲ್‌ಗಳನ್ನು ತೆರವುಗೊಳಿಸಲು 300 ಕೋಟಿ ರೂಪಾಯಿಗಳನ್ನು ಲಂಚದ ರೂಪದಲ್ಲಿ ನೀಡಲಾಯಿತು ಎಂಬ ಆರೋಪ ಕೇಳಿಬಂದಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಈಗಾಗಲೇ ಚೆನಾಬ್ ವ್ಯಾಲಿ ಪವರ್ ಪ್ರಾಜೆಕ್ಟ್ಸ್ (ಪಿ) ಲಿಮಿಟೆಡ್‌ನ ಮಾಜಿ ಅಧ್ಯಕ್ಷ ನವೀನ್ ಕುಮಾರ್ ಚೌಧರಿ ಮತ್ತು ಇತರ ಮಾಜಿ ಅಧಿಕಾರಿಗಳಾದ ಎಂ.ಎಸ್.ಬಾಬು, ಎಂ.ಕೆ.ಮಿತ್ತಲ್ ಮತ್ತು ಅರುಣ್ ಕುಮಾರ್ ಮಿಶ್ರಾ ಮತ್ತು ಪಟೇಲ್ ಇಂಜಿನಿಯರಿಂಗ್ ಲಿಮಿಟೆಡ್ ವಿರುದ್ಧ ಪ್ರಕರಣ ದಾಖಲಿಸಿದೆ.

ಕೇಂದ್ರದ ಭಾರತೀಯ ಜನತಾ ಪಕ್ಷ (ಬಿಜೆಪಿ) ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಟೀಕೆಗೆ ಮಲಿಕ್ ಗುರಿಯಾಗುತ್ತಿದ್ದಾರೆ ಎಂಬ ಆರೋಪಗಳಿವೆ.

ಮಾಜಿ ರಾಜ್ಯಪಾಲರಿಗೆ ಸಿಎಂ ಸಿದ್ದರಾಮಯ್ಯ ಬೆಂಬಲ:

ಜಮ್ಮು-ಕಾಶ್ಮೀರ ಮಾಜಿ ರಾಜ್ಯಪಾಲರಾಧ ಸತ್ಯಪಾಲ್ ಮಲಿಕ್ ಅವರ ಮೇಲಿನ ಸಿಬಿಐ ದಾಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. 40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದೇ ಮಾಜಿ ರಾಜ್ಯಪಾಲರು ಮತ್ತು ಭಾರತೀಯ ಜನತಾ ಪಕ್ಷದ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್ ಅವರ ಅಪರಾಧವಾಗಿ ಹೋಯಿತು. ನಿರೀಕ್ಷೆಯಂತೆ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿ, ಬೆದರಿಸುವ ಪ್ರಯತ್ನ ಮಾಡಿದೆ’ ಎಂದು ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ಪುಲ್ವಾಮ ದುರಂತ ನಡೆದ ಸಮಯದಲ್ಲಿ ಸತ್ಯಪಾಲ್ ಮಲಿಕ್ ಅವರು ಜಮ್ಮು ಮತ್ತು ಕಾಶ್ಮೀರದ ರಾಜ್ಯಪಾಲರಾಗಿದ್ದ ಕಾರಣ ಕೇಂದ್ರದ ವಿರುದ್ಧದ ಅವರ ಆರೋಪವನ್ನು ತಳ್ಳಿಹಾಕಲಾಗದು. ಸತ್ಯವನ್ನು ಎದುರಿಸಲಾಗದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಿರೀಕ್ಷೆಯಂತೆ ಅವರಿಗೆ ಸಿಬಿಐ ತನಿಖೆ ಮೂಲಕ ಚಿತ್ರಹಿಂಸೆ ನೀಡಲು ಹೊರಟಿದೆ, ಈ ಕೃತ್ಯ ಅತ್ಯಂತ ಖಂಡನೀಯ. ಕೇಂದ್ರ ಸರ್ಕಾರ ತನ್ನ ದುಷ್ಟಬುದ್ದಿಯನ್ನು ತಿದ್ದಿಕೊಂಡು, ಸತ್ಯಪಾಲ್ ಮಲಿಕ್ ಅವರ ಮೇಲಿನ ದೌರ್ಜನ್ಯ ನಿಲ್ಲಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಸತ್ಯವನ್ನು ಸಹಿಸದಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮನ್ನು ಪ್ರಶ್ನಿಸುವವರ ವಿರುದ್ಧ ಐಟಿ, ಇಡಿ, ಸಿಬಿಐಗಳನ್ನು ಛೂ ಬಿಟ್ಟು ಬಲತ್ಕಾರದಿಂದ ಬಾಯಿ ಮುಚ್ಚಿಸುವ ಪ್ರಯತ್ನನ್ನು ಮುಂದುವರಿಸಿದ್ದಾರೆ. ಆದರೆ ದೇಶದ ಜನತೆ ಇಂತಹ ಕುಟಿಲ ಕಾರಸ್ತಾನಗಳನ್ನು ಅರ್ಥಮಾಡಿಕೊಳ್ಳುವಷ್ಟು ಪ್ರಬುದ್ಧರಾಗಿದ್ದಾರೆ’ ಎಂದು ಹೇಳಿದ್ದಾರೆ.

ಇದನ್ನೂ ಓದಿ; ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ: ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ಕೊಟ್ಟ ಸಿಎಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳದಲ್ಲಿ ತೀವ್ರಗೊಳ್ಳಲಿರುವ ಮಳೆ; ಆರೇಂಜ್-ಯೆಲ್ಲೋ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

0
ಮುಂದಿನ ಕೆಲವು ದಿನಗಳಲ್ಲಿ ಮಳೆ ತೀವ್ರಗೊಳ್ಳುವ ಸಾಧ್ಯತೆಯಿರುವುದರಿಂದ ಭಾರತೀಯ ಹವಾಮಾನ ಇಲಾಖೆ ಗುರುವಾರ ಕೇರಳದ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಮೇ 18 ರಂದು ಪಾಲಕ್ಕಾಡ್ ಮತ್ತು ಮಲಪ್ಪುರಂ, ಮೇ 19 ರಂದು...