Homeಮುಖಪುಟ"ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ": ಯುಪಿ ಕಾಂಗ್ರೆಸ್ ಅಭಿಯಾನಕ್ಕೆ ಪ್ರಿಯಾಂಕಾ ಗಾಂಧಿ ಚಾಲನೆ

“ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ”: ಯುಪಿ ಕಾಂಗ್ರೆಸ್ ಅಭಿಯಾನಕ್ಕೆ ಪ್ರಿಯಾಂಕಾ ಗಾಂಧಿ ಚಾಲನೆ

- Advertisement -
- Advertisement -

ಉತ್ತರ ಪ್ರದೇಶ ಚುನಾವಣೆಯನ್ನು ಮಹಿಳಾ ಕೇಂದ್ರಿತವನ್ನಾಗಿ ನಡೆಸಲು ನಿರ್ಧರಿಸಿರುವ ಕಾಂಗ್ರೆಸ್ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಇಂದು ಲಕ್ನೋದಲ್ಲಿ “ನಾನು ಹುಡುಗಿ ಮತ್ತು ನಾನು ಹೋರಾಡಬಲ್ಲೆ” ಎಂಬ ಕಾಂಗ್ರೆಸ್ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.

ಝಾನ್ಸಿಯಲ್ಲಿ ಕಾಂಗ್ರೆಸ್ ಏರ್ಪಡಿಸಿದ್ದ ಮಹಿಳಾ ಮ್ಯಾರಥಾನ್ ಸ್ಪರ್ಧೆಗೆ ಸಾವಿರಾರು ಜನರು ಭಾಗವಹಿಸಿದ್ದಾರೆ. ಒಮ್ರಿಕಾನ್ ಭೀತಿಯ ಕಾರಣಕ್ಕೆ ಜಿಲ್ಲಾಡಳಿತ ಮ್ಯಾರಥಾನ್‌ಗೆ ಅನುಮತಿ ನಿರಾಕರಿಸಿದ್ದರ ನಡುವೆಯೂ ಸಾವಿರಾರು ಹುಡುಗಿಯರು ಭಾಗವಹಿಸಿದ್ದಾರೆ. ಇದರ ಫೋಟೊ ಮತ್ತು ವಿಡಿಯೋಗಳನ್ನು ಕಾಂಗ್ರೆಸ್ ಪಕ್ಷದ ಟ್ವಿಟರ್ ಮತ್ತಿತರ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ.

ಈ ಸ್ಪರ್ಧೆಯಲ್ಲಿ ಮೊದಲ ಮೂರು ಸ್ಥಾನ ಗಳಿಸಿದವರಿಗೆ ಸ್ಕೂಟಿ ಬಹುಮಾನ ನೀಡಲಾಗುವುದು, 4ರಿಂದ 25ನೇ ಸ್ಥಾನ ಗಳಿಸಿದವರಿಗೆ ಸ್ಮಾರ್ಟ್‌ಪೋನ್ ಮತ್ತು 26 ರಿಂದ 100 ನೇ ಸ್ಥಾನ ಗಳಿಸಿದವರಿಗೆ ಫಿಟ್ನೆಸ್ ಬ್ಯಾಂಡ್ ಮತ್ತು 1000 ದವರೆಗೆ ಸ್ಥಾನ ಗಳಿಸಿದವರಿಗೆ ಪದಕಗಳನ್ನು ಬಹುಮಾನವನ್ನಾಗಿ ನೀಡಲಾಗುವುದು ಎಂದು ಪಕ್ಷವು ತಿಳಿಸಿದೆ.

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮಹಿಳೆಯರಿಗೆ 40% ದಷ್ಟು ಟಿಕೆಟ್ ನೀಡುವುದಾಗಿ ಘೋಷಿಸಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ಹಿಡಿದರೆ 12 ನೇ ತರಗತಿ ಉತ್ತೀರ್ಣರಾದ ಹುಡುಗಿಯರಿಗೆ ಸ್ಮಾರ್ಟ್‌ಫೋನ್ ಮತ್ತು ಎಲ್ಲಾ ಪದವೀಧರ ಯುವತಿಯರಿಗೆ ಎಲೆಕ್ಟ್ರಾನಿಕ್ ಸ್ಕೂಟಿ ನೀಡುತ್ತೇವೆ ಎಂದು ಭರವಸೆ ನೀಡಿದೆ.

ಕಾಂಗ್ರೆಸ್ ಪಕ್ಷವು ಉತ್ತರ ಪ್ರದೇಶದಲ್ಲಿನ ಲಿಂಗ ಸಮಾನತೆಯ ಕುರಿತು ತನ್ನ ಪ್ರಚಾರವನ್ನು ಕೇಂದ್ರೀಕರಿಸಿದೆ. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳನ್ನು ನಿಯಂತ್ರಿಸಬೇಕೆಂದು ಆಗ್ರಹಿಸುತ್ತಿದೆ. ಕಳೆದ ವರ್ಷದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣ ದೇಶಾದ್ಯಂತ ಆಕ್ರೋಶ ಹುಟ್ಟು ಹಾಕಿದ್ದನ್ನು ನಾವಿಲ್ಲಿ ಗಮನಿಸಬಹುದು.


ಇದನ್ನೂ ಓದಿ: ಯುಪಿಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೇರಿದರೆ ಪದವಿ ವಿದ್ಯಾರ್ಥಿನಿಯರಿಗೆ ‘ಸ್ಕೂಟಿ’: ಪ್ರಿಯಾಂಕ ಗಾಂಧಿ ಮತ್ತೊಂದು ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. First such Women movement in India

    It definitely provides a Philip to Women empowerment in India and ultimately leads to 33% reservation to Women in Parliament
    Great achievement

  2. First such Women movement in India

    It definitely provides a Philip to Women empowerment in India and ultimately leads to 33% reservation to Women in Parliament
    Great achievement
    Good

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...