Homeಮುಖಪುಟನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ನಾನೊಬ್ಬ ಪತ್ರಕರ್ತೆ, ಹಾಗಾಗಿ ಅರ್ನಾಬ್ ಪರ ನಿಲ್ಲುವುದಿಲ್ಲ!- ಅರ್ಫಾ ಖಾನಮ್ ಶೇರ್ವಾನಿ

ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು.

- Advertisement -
- Advertisement -

“ನಾನೊಬ್ಬ ಪತ್ರಕರ್ತೆಯಾಗಿರುವುದರಿಂದ ಅರ್ನಾಬ್ ಗೋಸ್ವಾಮಿಯ ಪರ ನಿಲ್ಲುವುದಿಲ್ಲ” ಎಂದು ದಿ ವೈರ್ ಪತ್ರಕರ್ತೆಯಾದ ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ. ಹಣದ ವಂಚನೆ ಮತ್ತು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಮುಂಬೈ ಪೊಲೀಸರು ಈ ವಾರ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ್ದರು.

ರಿಪಬ್ಲಿಕ್ ಟಿವಿಯ ಮಾಲೀಕರು ಮತ್ತು ಪ್ರಧಾನ ಸಂಪಾದಕರಾದ ಅರ್ನಾಬ್ ಗೋಸ್ವಾಮಿಯನ್ನು ಬಂಧಿಸಿದ ಸುದ್ದಿ ತಿಳಿದ ತಕ್ಷಣ, ಅವರನ್ನು ಬೆಂಬಲಿಸಿ ಎಲ್ಲಾಕಡೆಯಿಂದಲೂ ಪ್ರತಿಕ್ರಿಯೆ ಬರತೊಡಗಿತು. ಅದರಲ್ಲೂ ಇಡೀ ಬಿಜೆಪಿಯ ಪಟಾಲಂ ಒಟ್ಟಾಗಿ, ಕೇಂದ್ರ ಸಚಿವರಾದ ಅಮಿತ್ ಶಾ, ಸ್ಮೃತಿ ಇರಾನಿ, ಪ್ರಕಾಶ್ ಜಾವಡೇಕರ್ ಮತ್ತು ಪಕ್ಷದ ಇತರ ಹಿರಿಯ ಕಾರ್ಯಕರ್ತರು ಸೇರಿದಂತೆ ಹಲವು ನಾಯಕರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದು, ಇದನ್ನು 1975 ರಲ್ಲಿ ಇಂದಿರಾ ಗಾಂಧಿ ವಿಧಿಸಿದ ತುರ್ತು ಪರಿಸ್ಥಿತಿಗೆ ಹೋಲಿಸಿದರು. ಇಷ್ಟೇ ಅಲ್ಲದೇ, ಹಲವಾರು ಬಿಜೆಪಿ ಕಾರ್ಯಕರ್ತರು ಬೀದಿಗಿಳಿದು ಅರ್ನಾಬ್ ಚಿತ್ರದೊಂದಿಗೆ ಬಿಜೆಪಿಯ ಧ್ವಜಗಳು ಮತ್ತು ಚಿಹ್ನೆಗಳನ್ನು ಬಳಸಿ ಪ್ರತಿಭಟಿಸಿದ್ದರು.

ಇದನ್ನೂ ಓದಿ: ಆತ್ಮಹತ್ಯೆಗೆ ಪ್ರಚೋದನೆ: ಅರ್ನಾಬ್ ಗೋಸ್ವಾಮಿಗೆ 14 ದಿನ ನ್ಯಾಯಾಂಗ ಬಂಧನ!

ಇದರ ಕುರಿತು ಪ್ರತಿಕ್ರಿಯಾ ಬರಹವನ್ನು ಬರೆದಿರುವ ಪತ್ರಕರ್ತೆ ಅರ್ಫಾ ಖಾನಮ್ ಶೇರ್ವಾನಿ, “ಅನೇಕ ಉದಾರವಾದಿ ಪತ್ರಕರ್ತರು, ಬರಹಗಾರರು ಮತ್ತು ಕಾರ್ಯಕರ್ತರು ಈ ಬಂಧನವನ್ನು ಖಂಡಿಸಿ, ಅರ್ನಾಬ್‌ ಗೋಸ್ವಾಮಿಯ ಅಭಿವ್ಯಕ್ತಿ ಸ್ವಾತಂತ್ರವನ್ನು ಸಮರ್ಥಿಸಿಕೊಂಡರು. ಜೊತೆಗೆ ಅರ್ನಾಬ್‌ನೊಂದಿಗಿರುವ ಭಿನ್ನಾಭಿಪ್ರಾಯದ ಹೊರತಾಗಿಯೂ ಆತನ ಬಂಧನವನ್ನು ವಿರೋಧಿಸಲು ಒತ್ತಾಯಿಸಿದರು” ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

“ಅರ್ನಾಬ್ ಗೋಸ್ವಾಮಿ ಇಂದು ಭಾರತೀಯ ರಾಜಕಾರಣದ ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಲ್ಲಿ ಒಬ್ಬರಾಗಿದ್ದು, ನರೇಂದ್ರ ಮೋದಿಯವರ ಇಡೀ ಕ್ಯಾಬಿನೆಟ್ ಸಾರ್ವಜನಿಕವಾಗಿ ಹೊರಬಂದು ಯಾರಿಗಾದರೂ ಬೆಂಬಲ ವ್ಯಕ್ತಪಡಿಸಿದ್ದನ್ನು ಇದುವರೆಗೂ ನಾನು ನೋಡಿಲ್ಲ. ಆದರೆ ಈ ಬೆಂಬಲವನ್ನು ಅರ್ನಾಬ್ ಪಡೆದಿದ್ದಾರೆ. ಈತ ಕೊರೊನಾ ಸಾಂಕ್ರಾಮಿಕ ರೋಗಕ್ಕೆ ಕೋಮು ಬಣ್ಣಬಳಿದು ಮುಸ್ಲಿಮರನ್ನು ನೇರವಾಗಿ ದೂಷಿಸಿದ್ದನ್ನು ನಾವೆಲ್ಲರೂ ನೋಡಿದ್ದೇವೆ. ಕೊರೊನಾ ಜಿಹಾದ್, ಕೊರೊನಾ ಭಯೋತ್ಪಾದನೆ, ಕೊರೊನಾ ಬಾಂಬ್ ಮತ್ತು ತಬ್ಲಿಘಿ ಜಮಾತ್ ಎಂದು ಪ್ಯಾನಲ್‌ನಲ್ಲಿ ಕುಳಿತು ಕಿರುಚಾಡುತ್ತಿದ್ದುದನ್ನು ನೋಡಿದ ಎಂತವರ ಮನಸ್ಸಿನಲ್ಲೂ ಮುಸ್ಲಿಮರ ವಿರುದ್ಧ ದ್ವೇಷ ಹುಟ್ಟುವಂತೆ ಮಾಡುತ್ತಿದ್ದ ಅರ್ನಾಬ್‌ನನ್ನು ಒಬ್ಬ ಪತ್ರಕರ್ತ ಎಂದು ಹೇಗೆ ಒಪ್ಪಿಕೊಳ್ಳುವುದು? ಈ ಕಾರ್ಯಕ್ರಮಗಳನ್ನು ನೋಡಿದ ಜನರು ಮುಗ್ಧ ಮುಸಲ್ಮಾನರನ್ನು ಹಣ್ಣು, ಹಾಲು ಮತ್ತು ತರಕಾರಿ ಮಾರುವುದಕ್ಕೂ ಅವಕಾಶ ಕೊಡದಷ್ಟು ಕೋಮು ವ್ಯಾಘ್ರಗಳಾಗಿ ಬದಲಾಗಿದ್ದರು” ಎಂದು ಖಾನಂ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮಹಿಳಾ ಪೊಲೀಸ್‌ ಮೇಲೆ ಹಲ್ಲೆ: ಅರ್ನಾಬ್ ಸೇರಿ ಪತ್ನಿ & ಮಗನ ವಿರುದ್ಧ ಹೊಸ ಎಫ್‌ಐಆರ್!

“ಹಾಗಾಗಿ ಅರ್ನಾಬ್ ಗೋಸ್ವಾಮಿಯ ರಕ್ಷಣೆಗೆ ಅಥವಾ ಆತನ ಪರ ನಿಲ್ಲಲ್ಲು ನಿರಾಕರಿಸುವುದರಿಂದ ನನ್ನ ಪತ್ರಿಕೋದ್ಯಮ ಧರ್ಮದ ಮೇಲೆ ಮತ್ತು ಪತ್ರಿಕೋದ್ಯಮ ಭ್ರಾತೃತ್ವದ ಮೇಲೆ ಯಾವುದೇ ಋಣಾತ್ಮಕ ಪರಿಣಾಮ ಬೀರುವುದಿಲ್ಲ ಎಂದು ನಾನು ಧೃಢವಾಗಿ ನಂಬಿದ್ದೇನೆ. ಕಳೆದ ಎರಡು ದಶಕಗಳಿಂದ ಆಡಿಯೋ-ವಿಶುವಲ್ ಪತ್ರಿಕೋದ್ಯಮದಲ್ಲಿ ನಾನು ನೂರಾರು ಟಿವಿ ಚರ್ಚೆಗಳನ್ನು ನಡೆಸಿದ್ದೇನೆ. ಆದರೆ ಅರ್ನಾಬ್ ಟಿವಿಗಳಲ್ಲಿ ನಡೆಸುವ ಚರ್ಚೆಗಳನ್ನು ನೋಡಿದರೆ ತಿಳಿಯುತ್ತದೆ, ಆತ ಮಾಡುತ್ತಿರುವುದು ಪತ್ರಿಕೋದ್ಯಮವಲ್ಲ; ಆ ವೃತ್ತಿಗೆ ಮಾಡುತ್ತಿರುವ ಅವಮಾನ ಎಂದು. ಹಾಗಾಗಿ ನಾನು ಅರ್ನಾಬ್ ಪರ ನಿಲ್ಲುವುದಿಲ್ಲ” ಎಂದು ಅರ್ಫಾ ಖಾನಮ್ ಶೇರ್ವಾನಿ ಹೇಳಿದ್ದಾರೆ.

ಇದನ್ನೂ ಓದಿ: ರಿಪಬ್ಲಿಕ್ ಟಿವಿ ಅರ್ನಾಬ್ ಬಂಧನ ಸಂತೋಷ ತಂದಿದೆ: ಅನ್ವಯ್ ನಾಯಕ್ ಕುಟುಂಬ!

“ಅರ್ನಾಬ್ ವಿರುದ್ಧದ ಪೊಲೀಸರ ಈ ಕ್ರಮವು ರಾಜಕೀಯ ಪ್ರೇರಿತವಾಗಿ ಕಂಡರೂ, ಇದು ಅರ್ನಾಬ್ ಆಡುತ್ತಿದ್ದ ಆಟದ ಭಾಗವೇ ಆಗಿದೆ. ವಾಸ್ತವದಲ್ಲಿ ಹೇಳಬೇಕೆಂದರೆ, ಆತ ಒಬ್ಬ ತಟಸ್ಥ ಪತ್ರಕರ್ತನಾಗಿ ಕೆಲಸ ಮಾಡುವುದರ ಬದಲಿಗೆ ಒಬ್ಬ ರಾಜಕೀಯ ದಲ್ಲಾಳಿಯಾಗಿ ವರ್ತಿಸುತ್ತಿದ್ದರು. ಕೇಂದ್ರ ಮತ್ತು ಬಿಜೆಪಿ ಆಡಳಿತವಿರುವ ರಾಜ್ಯಸರ್ಕಾರಗಳು ಕಳೆದ ಆರು ವರ್ಷಗಳಿಂದ, ಎಡಪಂಥೀಯ ಕಾರ್ಯಕರ್ತರು, ವಿದ್ಯಾರ್ಥಿಗಳು ಮತ್ತು ಪ್ರಾಮಾಣಿಕ ಪತ್ರಕರ್ತರ ಮೇಲೆ ನಡೆಸುತ್ತಿರುವ ಕಿರುಕುಳಕ್ಕೆ ನಾವೆಲ್ಲರೂ ಸಾಕ್ಷಿಯಾಗಿದ್ದೇವೆ. ಸಾರ್ವಜನಿಕ ಬೆಂಬಲವನ್ನು ಗಳಿಸಲು ನ್ಯಾಯಾಲಯದ ಕಲಾಪಗಳನ್ನು ತಮ್ಮ ಸ್ಟುಡಿಯೋದಲ್ಲಿಯೇ ನಡೆಸಿ, ನ್ಯಾಯಾಧೀಶ, ತೀರ್ಪುಗಾರ ಮತ್ತು ಮರಣದಂಡನೆಕಾರರಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಆದರೆ, ಬಿಜೆಪಿ ಮತ್ತು ಅದರ ಸರ್ಕಾರಗಳನ್ನು ದೂಷಿಸಿ ಒಬ್ಬೇ ಒಬ್ಬ ಪತ್ರಕರ್ತನ ರಕ್ಷಣೆಗೂ ಆತ ಮುಂದಾಗಿಲ್ಲ. ಹಾಗಾಗಿ ನಿಜವಾದ ಪತ್ರಕರ್ತರು ಇವರ ಬೆಂಬಲಕ್ಕೆ ನಿಲ್ಲುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: TRP ಹಗರಣದಲ್ಲಿ ವಿಚಾರಣೆಗೆ ಹಾಜರಾಗಲು ಸಮನ್ಸ್; ಬಂಧನ ಭೀತಿಯಲ್ಲಿ ಅರ್ನಾಬ್ ಗೋಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...