ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲಡಾಖ್‌ನ ಲೆಫ್ಟಿನೆಂಟ್ ಗವರ್ನರ್‌ಗೆ ಬುಧವಾರ (ಅ.1) ಪತ್ರ ಬರೆದಿರುವ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಅಂಗ್ಮೋ, ವಾಂಗ್ಚುಕ್ ಅವರ ಶೀಘ್ರ ಬಿಡುಗಡೆಗೆ ಒತ್ತಾಯಿಸಿದ್ದಾರೆ. ಸರ್ಕಾರ ವಾಂಗ್ಚುಕ್ ಅವರಿಗೆ ಕಿರುಕುಳ ಕೊಡುತ್ತಿದೆ ಎಂದು ಆರೋಪಿಸಿದ್ದಾರೆ.
ಮೂರು ಪುಟಗಳ ಪತ್ರದಲ್ಲಿ ವಾಂಗ್ಚುಕ್ ಅವರ ಪತ್ನಿ, “ಕಳೆದ ನಾಲ್ಕು ವರ್ಷಗಳಿಂದ ಜನರ ಪರವಾಗಿ ಕೆಲಸ ಮಾಡುತ್ತಿದ್ದ ನನ್ನ ಪತಿಯ ವಿರುದ್ಧ ಸರ್ಕಾರ ಬೇಟೆ ಕೈಗೊಂಡಿದೆ. ಸೆಪ್ಟೆಂಬರ್ 26ರಂದು ಬಂಧಿಸಿದ ಬಳಿಕ ನನ್ನ ಗಂಡನ ಬಗ್ಗೆ ಯಾವುದೇ ಮಾಹಿತಿ ದೊರೆತಿಲ್ಲ” ಎಂದು ಬರೆದಿದ್ದಾರೆ.
I have sent this representation for the immediate release of Shri Sonam Wangchuk to the President of India, Prime Minister of India, Home Minister, Law Minister of India, and the LG of Ladakh, with a cc to DC Leh. pic.twitter.com/6Y0xa46sNK
— Gitanjali J Angmo (@GitanjaliAngmo) October 1, 2025
“ನನ್ನ ಪತಿಯನ್ನು ಎಲ್ಲಿ ಬಂಧಿಸಲಾಗಿದ್ದರೂ ಅವರನ್ನು ಫೋನ್‌ನಲ್ಲಿ ಮತ್ತು ವೈಯಕ್ತಿಕವಾಗಿ ಭೇಟಿಯಾಗಲು ಮತ್ತು ಮಾತನಾಡಲು ನನಗೆ ಅರ್ಹತೆ ಇಲ್ಲವೇ? ನನ್ನ ಪತಿ ಬಂಧನದ ಕಾರಣವನ್ನು ತಿಳಿದುಕೊಳ್ಳಲು ಮತ್ತು ನ್ಯಾಯಾಲಯದ ಮುಂದೆ ನ್ಯಾಯವನ್ನು ಪಡೆಯುವ ಅವರ ಕಾನೂನುಬದ್ಧ ಹಕ್ಕುಗಳನ್ನು ಸಮರ್ಥಿಸಲು ನಾನು ಸಹಾಯ ಮಾಡಲು ಸಾಧ್ಯವಿಲ್ಲವೇ? ನನ್ನ ಬಂಧನಕ್ಕೊಳಗಾದ ಪತಿಯ ಸ್ಥಿತಿಯನ್ನು ತಿಳಿದುಕೊಳ್ಳಲು ನನಗೆ ಅರ್ಹತೆ ಇಲ್ಲವೇ? ಭಾರತದ ಜವಾಬ್ದಾರಿಯುತ ನಾಗರಿಕಳಾಗಿ, ನಮಗೆ ಶಾಂತಿಯುತ ಅಭಿವ್ಯಕ್ತಿ ಮತ್ತು ಚಲನೆಯ ಸ್ವಾತಂತ್ರ್ಯದ ಹಕ್ಕಿಲ್ಲವೇ?” ಎಂದು ಗೀಂತಾಜಲಿ ತನ್ನ ಪತ್ರದಲ್ಲಿ ಪ್ರಶ್ನಿಸಿದ್ದಾರೆ.
ಲಡಾಖ್‌ಗೆ ರಾಜ್ಯದ ಸ್ಥಾನಮಾನ ನೀಡಬೇಕು ಮತ್ತು ಸಂವಿಧಾನದ 6ನೇ ಪರಿಚ್ಛೇಧದಡಿ ಸೇರಿಸಬೇಕು ಎಂದು ಸೋನಮ್ ವಾಂಗ್ಚುಕ್ ಹೋರಾಟ (ಉಪವಾಸ ಸತ್ಯಾಗ್ರಹ) ಕೈಗೊಂಡಿದ್ದರು. ಈ ನಡುವೆ ಸೆಪ್ಟೆಂಬರ್ 24ರಂದು ಲೇಹ್‌ನಲ್ಲಿ ಯುವಜನರು ಬೀದಿಗಿಳಿದು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ಶುರು ಮಾಡಿದ್ದರು. ನಂತರ ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು.
ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದರು ಮತ್ತು 80ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು. ಹಿಂಸಾತ್ಮಕ ಪ್ರತಿಭಟನೆ ಬಳಿಕ 1980ರ ಕಠಿಣ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ವಾಂಗ್ಚುಕ್ ಅವರನ್ನು ಬಂಧಿಸಲಾಗಿದೆ. ಪ್ರಸ್ತುತ ಅವರನ್ನು ರಾಜಸ್ಥಾನದ ಜೋಧ್‌ಪುರ ಜೈಲಿನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ವಾಂಗ್ಚುಕ್ ಪ್ರಚೋದನಕಾರಿ ಭಾಷಣಗಳ ಮೂಲಕ ಹಿಂಸಾಚಾರವನ್ನು ಪ್ರಚೋದಿಸುತ್ತಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಆರೋಪಿಸಿದೆ.
ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆಗಳು ಮೆತ್ತಿಕೊಂಡಿದೆ: ಕಾಂಗ್ರೆಸ್


