Homeಕರ್ನಾಟಕಸಿದ್ದರಾಮಯ್ಯರ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ: ಹೆಚ್‌ಡಿ ಕುಮಾರಸ್ವಾಮಿ

ಸಿದ್ದರಾಮಯ್ಯರ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ: ಹೆಚ್‌ಡಿ ಕುಮಾರಸ್ವಾಮಿ

- Advertisement -
- Advertisement -

ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವ್ಯಂಗ್ಯ ಮಾಡಿ ಹೆಚ್‌ಡಿ ಕುಮಾರಸ್ವಾಮಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಜೆಡಿಎಸ್‌ ಪಕ್ಷದ ರೈತ ಸಾಂತ್ವನ ಯಾತ್ರೆಯ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ”ಜಾತ್ಯತೀತ ಜನತಾ ದಳ ನಾಡಿನ ಬರಪರಿಸ್ಥಿತಿಯ ವೀಕ್ಷಣೆಗೆ ‘ರೈತ ಸಾಂತ್ವನ ಯಾತ್ರೆ’ ಕೈಗೊಳ್ಳುವುದನ್ನು ನಾನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ. ಇದು ಒಂದು ಜವಾಬ್ದಾರಿಯುತ ವಿರೋಧ ಪಕ್ಷವಾಗಿ ಮಾಡಬೇಕಾದ ಕೆಲಸ. ಈ ಯಾತ್ರೆಯ ನಂತರ ಅವರು ಕೊಡುವ ವರದಿಯನ್ನು ನಮ್ಮ ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ” ಎಂದು ಹೇಳಿದ್ದರು.

ಮುಖ್ಯ ಮಂತ್ರಿಗಳ ಪೋಸ್ಟ್ ಬೆನ್ನಲ್ಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‌ಡಿ ಕುಮಾರಸ್ವಾಮಿ ಅವರು ಪೋಸ್ಟ್ ಮಾಡಿದ್ದು, ”ಪ್ರತಿಪಕ್ಷಗಳ ಕೆಲಸ ಗುರುತಿಸುವ ನಿಮ್ಮ ʼಹೃದಯ ವೈಶಾಲ್ಯತೆʼಗೆ ನಾನು ಆಭಾರಿ. ರೈತ ಸಾಂತ್ವನ ಯಾತ್ರೆಯನ್ನು ಸ್ವಾಗತ ಮಾಡಿರುವ ನಿಮ್ಮ ʼದೊಡ್ಡʼ ಗುಣವನ್ನು ಮನಸಾರೆ ಕೊಂಡಾಡುತ್ತೇನೆ” ಎಂದು ಹೇಳಿದ್ದಾರೆ.

”ಜೆಡಿಎಸ್‌ ಪಕ್ಷ ಸಲ್ಲಿಸಲಿರುವ ಬರ ಅಧ್ಯಯನ ವರದಿಯನ್ನು ಗಂಭೀರವಾಗಿ ಪರಿಗಣಿಸುವುದಾಗಿ ಹೇಳಿದ್ದೀರಿ, ಬಹಳ ಸಂತೋಷ. ‘ರೈತ ಸಾಂತ್ವನ ಯಾತ್ರೆ’ಯ ಅನುಭವವನ್ನು ಕೇಂದ್ರದ ಜತೆಗೂ ಹಂಚಿಕೊಳ್ಳುತ್ತೇವೆ. ನಿಮಗೆ ಸಂಶಯ ಬೇಡ. ರಾಜ್ಯದ ಅಗತ್ಯಗಳಿಗೆ ಕೇಂದ್ರ ಸರಕಾರ ಹೇಗೆ ಸ್ಪಂದಿಸುತ್ತಿದೆ? ಅದಕ್ಕೆ ನಿಮ್ಮ ನೇತೃತ್ವದ ಸರಕಾರ ಎಷ್ಟು ʼಗಂಭೀರ(!?)ʼ ಪ್ರಯತ್ನ ಮಾಡಿದೆ, ಮಾಡುತ್ತಿದೆ ಎನ್ನುವುದು ನನಗೂ ತಿಳಿದಿದೆ. ಬರದ ಜತೆಗೆ, ವಿದ್ಯುತ್‌ ಬಿಕ್ಕಟ್ಟು, ಕಾವೇರಿ ಸಂಕಷ್ಟದ ವಿಷಯದಲ್ಲಿ ನಿಮ್ಮ ಸರಕಾರದ ʼಅಪರಿಮಿತ ಅಸಡ್ಡೆʼಯನ್ನು ಅರಿಯದಷ್ಟು ಮುಗ್ಧನೇ ನಾನು?” ಎಂದು ಪ್ರಶ್ನೆ ಮಾಡಿದ್ದಾರೆ.

”ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಜತೆ ಹೆಚ್.ಡಿ.ದೇವೇಗೌಡರು ಮತ್ತವರ ಕುಟುಂಬಕ್ಕೆ ಆತ್ಮೀಯತೆ ಇದೆ ಎಂಬುದರಲ್ಲಿ ಎರಡು ಮಾತಿಲ್ಲ. ಬಿಜೆಪಿ-ಜೆಡಿಎಸ್‌ ನಡುವೆ ಮೈತ್ರಿ ಏರ್ಪಟ್ಟಿದೆ ಎನ್ನುವುದೂ ನಿಜ. ರಾಜ್ಯದ ಹಿತಕ್ಕಾಗಿ ನಾವು ಪ್ರಧಾನಿಯವರ ಮುಂದೆಯೂ ದನಿ ಎತ್ತುತ್ತೇವೆ, ಅದು ನಮ್ಮ ಬದ್ಧತೆ. ಆದರೆ, ನಿಮಗೆ ರಾಜ್ಯದ ಬರ ಮತ್ತಿತರೆ ಸಂಕಷ್ಟಗಳಿಗಿಂತ ಈ ಮೈತ್ರಿಯೇ ಬಹುದೊಡ್ಡ ಸಂಕಷ್ಟವಾಗಿ ಪರಿಣಮಿಸಿದಂತೆ ತೋರುತ್ತಿದೆ! ಅಲ್ಲವೇ?” ಎಂದು ಕೇಳಿದ್ದಾರೆ.

”ಪ್ರತಿಪಕ್ಷಗಳಾಗಿ ನಮ್ಮ ಪ್ರಯತ್ನ ನಾವು ಮಾಡುತ್ತೇವೆ, ಸರಕಾರವಾಗಿ ನಿಮ್ಮ ಸಾಧನೆ ಏನು? ಎಷ್ಟು ರೈತರಿಗೆ ಬೆಳೆ ವಿಮೆ ಕೊಡಿಸಿದ್ದೀರಿ? ಸರಕಾರದ ವತಿಯಿಂದ ಎಷ್ಟು ಪರಿಹಾರ ನೀಡಿದ್ದೀರಿ? ಅದನ್ನು ಹೇಳಬೇಕೆ ಹೊರತು, ಮಿತ್ರರ ನಡುವೆ ಹುಳಿ ಹಿಂಡುವ ಉಡಾಳತನ ತಮಗ್ಯಾಕೆ? ಎನ್ನುವುದು ನನ್ನ ವಿನಮ್ರ ಪ್ರಶ್ನೆ” ಎಂದಿದ್ದಾರೆ.

”236 ತಾಲೂಕುಗಳಲ್ಲಿ 216 ಬರಪೀಡಿತ ಎಂದು ಲೆಕ್ಕ ಕೊಟ್ಟಿದ್ದೀರಿ. 33,710 ಕೋಟಿ ರೂ. ಮೌಲ್ಯದ ಬೆಳೆಹಾನಿ ಆಗಿದ್ದು, ಕೇಂದ್ರಕ್ಕೆ 17,901 ಕೋಟಿ ರೂ. ಪರಿಹಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಹೇಳಿದ್ದೀರಿ, ಸರಿ. ಜತೆಗೆ; 343 ಕೋಟಿ ರೂ. ಬಿಡುಗಡೆ ಮಾಡಿದ್ದೇವೆ ಎಂದೂ ತಿಳಿಸಿದ್ದೀರಿ. ಅದನ್ನು ಯಾರಿಗೆ ಹಂಚಿದ್ದೀರಿ?” ಎಂದು ಪ್ರಶ್ನೆ ಮಾಡಿದ್ದಾರೆ.

”ಈ ರಾಜ್ಯದಲ್ಲಿ ಅತಿ ಹೆಚ್ಚು ಬಜೆಟ್‌ ಮಂಡಿಸಿ ʼವಿಶ್ವವಿಖ್ಯಾತ ವಿತ್ತತಜ್ಞʼರಾಗಿ ಮೆರೆಯುತ್ತಿರುವವರು ನೀವು. ಅಧಿಕಾರಕ್ಕೆ ಬಂದೊಡನೆ ವಿಶೇಷವಾಗಿ ವಿತ್ತಖಾತೆಯನ್ನು ತಮ್ಮಲ್ಲಿಯೇ ‘ ಜೋಪಾನ ‘ ಮಾಡಿಕೊಳ್ಳುವ ನಿಮಗೆ, ಕೇಂದ್ರ ಸರಕಾರವು ಬರಕ್ಕೆ, ಪ್ರವಾಹಕ್ಕೆ ಯಾವ ರೀತಿ ಪರಿಹಾರ ಕೊಡುತ್ತದೆ ಎನ್ನುವ ಸಾಮಾನ್ಯ ತಿಳಿವಳಿಕೆಯೂ ಇಲ್ಲವೇ?” ಎಂದು ಕೇಳಿದ್ದಾರೆ.

”ಹೋಗಲಿ, ನೀವು ಈ ರಾಜ್ಯದ ಮುಖ್ಯಮಂತ್ರಿ… ದೆಹಲಿಗೆ ಹೋಗಿ ಪ್ರಧಾನಿಗಳಿಗೆ ವಸ್ತುಸ್ಥಿತಿ ಮನವರಿಕೆ ಮಾಡಿಕೊಡಬೇಕಿತ್ತು. ಅದನ್ನೂ ಮಾಡಲಿಲ್ಲ, ಪ್ರತಿಷ್ಠೆ ನಿಮಗೆ. ಪ್ರಧಾನಿಗಳನ್ನು ಸದಾ ನಿಂದಿಸುತ್ತಾ ಕುಳಿತರೆ ಲಾಭವೇನು? ಇಲ್ಲಿ ವರ್ಗಾವಣೆ ದಂಧೆ, ಕಮೀಷನ್ ವಸೂಲಿ, ಆಪರೇಷನ್‌ ಹಸ್ತ, ಡಿನ್ನರ್‌-ಬ್ರೇಕ್‌ ಫಾಸ್ಟ್‌ ಮೀಟಿಂಗುಗಳಲ್ಲಿಯೇ ʼಭಾರೀʼ ಬ್ಯುಸಿ‌ ಆಗಿರುವ ನಿಮಗೆ ದೆಹಲಿಗೆ ಜನರ ಅಹವಾಲು ತೆಗೆದುಕೊಂಡು ಹೋಗಲು ಸಮಯವಾದರೂ ಎಲ್ಲಿದೆ?” ಎಂದು ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

”ನೀವು ಕರೆದೊಯ್ಯುವ ಸರ್ವಪಕ್ಷ ನಿಯೋಗದಲ್ಲಿ ಜೆಡಿಎಸ್ ಪಕ್ಷವೂ ಇರುತ್ತದೆ, ನಮ್ಮ ಮಿತ್ರಪಕ್ಷ ಬಿಜೆಪಿಯೂ ಇರುತ್ತದೆ. ಇನ್ನೊಬ್ಬರ ಧೈರ್ಯದ ಬಗ್ಗೆ ಮಾತನಾಡುವ ನೀವು, ನಿಮ್ಮ ಸ್ಥೈರ್ಯದ ಬಗ್ಗೆಯೂ ಕೊಂಚ ಹೇಳಬೇಕಲ್ಲವೇ? ಮುಖ್ಯಮಂತ್ರಿಯಾಗಿ ನೀವು ರಾಜ್ಯಕ್ಕೆ ಸಂಬಂಧಿಸಿ ಪ್ರಧಾನಿಗಳನ್ನು,‌ ಸಂಬಂಧಿಸಿದ ಕೇಂದ್ರ ಸಚಿವರನ್ನು ಎಷ್ಟು ಸಲ ಭೇಟಿ ಆಗಿದ್ದೀರಿ? ಎಷ್ಟು ಅರ್ಜಿ ಕೊಟ್ಟಿದ್ದೀರಿ? ರಾಜ್ಯದ ನೆಲ-ಜಲ, ಇನ್ನಿತರೆ ಸಂಕಷ್ಟದ ವೇಳೆ ಈ ಇಳಿವಯಸ್ಸಿನಲ್ಲಿಯೂ ಮಾನ್ಯ ದೇವೇಗೌಡರು ನಡೆಸುತ್ತಿರುವ ಹೋರಾಟ ನಿಮಗೆ ಕಾಣಿಸಿಲ್ಲವೇ? ಕಾವೇರಿ ಬಗ್ಗೆ ಅವರು ಸಂಸತ್ತಿನಲ್ಲಿ ಸಿಡಿದೆದ್ದಾಗ ನಿಮ್ಮ ಪಕ್ಷದ ಸದಸ್ಯರೆಲ್ಲರೂ ಎಲ್ಲಿ ಅವಿತು ಕುಳಿತಿದ್ದರು? ಎಂದು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...