Homeಮುಖಪುಟಯತ್ನಾಳ್ ಹಿಂದೂತ್ವವಾದಿಯಾಗಿರುವುದಕ್ಕೆ ಖುಷಿ ಇದೆ, ಪಕ್ಷದ ಶಿಸ್ತು ಕಾಪಾಡಬೇಕು: ಈಶ್ವರಪ್ಪ

ಯತ್ನಾಳ್ ಹಿಂದೂತ್ವವಾದಿಯಾಗಿರುವುದಕ್ಕೆ ಖುಷಿ ಇದೆ, ಪಕ್ಷದ ಶಿಸ್ತು ಕಾಪಾಡಬೇಕು: ಈಶ್ವರಪ್ಪ

- Advertisement -
- Advertisement -

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಂದು ಪ್ರಕಾರದ ಹಿಂದೂತ್ವವಾದಿ. ಅದಕ್ಕೆ ನಾನು ಖುಷಿ ಪಡುತ್ತೇನೆ. ಆದರೆ ಅವರು ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು ಎಂದು ಸಚಿವ ಕೆ.ಎಸ್ ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.

ಸಿಎಂ ಯಡಿಯೂರಪ್ಪ ವಿರುದ್ಧ ಹಲವು ಹೇಳಿಕೆಗಳನ್ನು ನೀಡಿ ಇಕ್ಕಟ್ಟಿಗೆ ಸಿಲುಕಿಸಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುರಿತು ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಯತ್ನಾಳ್ ಅವರು ಸಿಎಂ ಬಗ್ಗೆ ಈ ರೀತಿಯ ಹೇಳಿಕೆ ನೀಡುವುದಕ್ಕೆ ನಾನು ಒಪ್ಪಲ್ಲ. ಅವರು ಒಂದು ಪ್ರಕಾರದ ಹಿಂದೂತ್ವವಾದಿ, ಅದಕ್ಕೆ ನಾನು ಖುಷಿ ಪಡುತ್ತೇನೆ. ಆದರೆ, ಅವರು ಪಕ್ಷದ ಶಿಸ್ತಿನ ಒಳಗೆ ಇದ್ದರೆ ಒಳ್ಳೆಯದು” ಎಂದು ತಿಳಿಸಿದ್ದಾರೆ.

“ಯತ್ನಾಳ್ ಬಗ್ಗೆ ಏನು ಕ್ರಮ ತೆಗೆದು ಕೊಳ್ಳಬೇಕು ಎಂಬ ಬಗ್ಗೆ ಕೇಂದ್ರಕ್ಕೆ ಮಾಹಿತಿ ಕಳುಹಿಸಿ ಕೊಡಲಾಗಿದೆ. ಕೇಂದ್ರದ ನಾಯಕರು ಅವರಿಗೆ ನೋಟಿಸ್ ನೀಡಿದ್ದಾರೆ. ಅದಕ್ಕೆ ಯತ್ನಾಳ್ ಉತ್ತರ ಸಹ ನೀಡಿದ್ದಾರೆ. ಕೇಂದ್ರದ ನಾಯಕರು ಈ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ” ಎಂದು ಈಶ್ವರಪ್ಪ ತಿಳಿಸಿದ್ದಾರೆ.


ಇದನ್ನೂ ಓದಿ: ಹೈಕಮಾಂಡ್ ನೀಡಿದ ನೋಟಿಸ್‌ಗೆ ಉತ್ತರಿಸಿದ ಯತ್ನಾಳ್: ಯಡಿಯೂರಪ್ಪ ವಿರುದ್ಧ 11 ಪುಟಗಳ ಆರೋಪ


ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಕಾಂಗ್ರೆಸ್‌ನ ಬಿ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ನೂತನ ಬಿಜೆಪಿ ಸಚಿವ ಮುರುಗೇಶ ನಿರಾಣಿ ನಿನ್ನೆ ವಾಗ್ದಾಳಿ ನಡೆಸಿದ್ದರು.

“ಪಂಚಮಸಾಲಿ ಮಂತ್ರಿಗಳು ಮತ್ತು ಶಾಸಕರು ರಾಜೀನಾಮೆ ನೀಡಬೇಕು ಎಂದು ಯತ್ನಾಳ್ ಸಮಾವೇಶದಲ್ಲಿ ಹೇಳಿದ್ದಾರೆ. ನಾವು ನಮ್ಮ ನಮ್ಮ ಕ್ಷೇತ್ರಗಳ ಎಲ್ಲ ಮತದಾರರ ಆಶೀರ್ವಾದದಿಂದ ಗೆದ್ದು ಬಂದಿದ್ದೇವೆ. ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿಯವರು ನಮ್ಮನ್ನು ಮಂತ್ರಿ ಮಾಡಿದ್ದು. ಮೊದಲಿಗೆ ಅವರು (ಯತ್ನಾಳ) ರಾಜೀನಾಮೆ ಕೊಟ್ಟು, ವಿಜಯಪುರದಿಂದ ಸ್ವರ್ಧಿಸಿ ಗೆದ್ದು ಬರಲಿ” ಎಂದು ಮುರಗೇಶ ನಿರಾಣಿ ಸವಾಲು ಹಾಕಿದ್ದರು.

ಇನ್ನು ಮೊನ್ನೆ ಯತ್ನಾಳ್ ಮಾತನಾಡಿ “ಪಕ್ಷದಿಂದ ನನಗೆ ನೋಟಿಸ್ ಬಂದಿರುವುದು ನಿಜ. ಅದಕ್ಕೆ ಪ್ರತಿಕ್ರಿಯೆಯಾಗಿ ಹನ್ನೊಂದು ಪುಟಗಳ ಉತ್ತರ ನೀಡಿದ್ದೇನೆ. ಯಡಿಯೂರಪ್ಪ ಅವರ ಕುಟುಂಬ ರಾಜಕಾರಣದ ಬಗ್ಗೆ 45 ಪ್ಯಾರಾಗಳಲ್ಲಿ ವಿವರಿಸಿದ್ದೇನೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಸರ್ಕಾರಕ್ಕೆ ಹೇಗೆ ಕೆಟ್ಟ ಹೆಸರು ಬರುತ್ತಿದೆ ಎಂಬುದನ್ನು ಪತ್ರದಲ್ಲಿ ಪ್ರಸ್ತಾಪಿಸಿದ್ದೇನೆ. ಸರ್ಕಾರದಲ್ಲಿ ಕುಟುಂಬದ ಹಸ್ತಕ್ಷೇಪ ಇರಬಾರದು ಎನ್ನುವುದು ನರೇಂದ್ರ ಮೋದಿ ಆಶಯ. ಆದರೆ, ಅವರ ಆಶಯದಂತೆ ಇಲ್ಲಿ ಸರ್ಕಾರ ಇಲ್ಲ. ಯಡಿಯೂರಪ್ಪ ಅವರ ಕುಟುಂಬ ಬಿಜೆಪಿ ಶಾಸಕರನ್ನು ಗೌರವಿಸುತ್ತಿಲ್ಲ. ಯಡಿಯೂರಪ್ಪ ಅವರ ಕುಟುಂಬದ ಬಗ್ಗೆಯೂ ತನಿಖೆ ಮಾಡಬೇಕು ಮತ್ತು ಭ್ರಷ್ಟಾಚಾರ, ಹಸ್ತಕ್ಷೇಪ, ವರ್ಗಾವಣೆ ದಂಧೆ ಬಗ್ಗೆಯೂ ತನಿಖೆ ಮಾಡಬೇಕು ಒತ್ತಾಯಿಸಿದ್ದೇನೆ” ಎಂದು ತಿಳಿಸಿದ್ದಾರೆ.

ನೋಟಿಸ್‌ಗೆ ಉತ್ತರ ಕೊಡುವಾಗ ಪತ್ರದಲ್ಲಿ ಎಲ್ಲೂ ಕ್ಷಮೆ ಯಾಚಿಸಿಲ್ಲ. ಸಿಡಿ, ಇಡಿ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿದ್ದೇನೆ.‌ ಮಾರಿಷಸ್ ವಿಚಾರವನ್ನೂ ಬರೆದಿದ್ದೇನೆ. ಮಾರಿಷಸ್‌ಗೆ ಯಾಕೆ ಹೋಗಿದ್ದರು. ಎಷ್ಟು ಮಂದಿ ಹೋಗಿದ್ದರು. ಯಾವ ವಿಮಾನದಲ್ಲಿ ಹೋಗಿದ್ದರು, ಮಾಜಿ ಗೃಹ ಸಚಿವರೊಬ್ಬರ ಆಪ್ತ ಸಹಾಯಕನ ಮೂಲಕ ಮಾರಿಷಸ್‌ಗೆ ಹೋಗಿ ಏನೇನು ತೆಗೆದುಕೊಂಡಿದ್ದಾರೆ ಎಲ್ಲವನ್ನೂ ಪತ್ರದಲ್ಲಿ ಉಲ್ಲೇಖಿಸಿದ್ದೇನೆ. ಇದರ ಬಗ್ಗೆಯೂ ತನಿಖೆ ಮಾಡಲು‌ ಆಗ್ರಹಿಸಿದ್ದೇನೆ” ಎಂದು ಯತ್ನಾಳ್ ಹೇಳಿದ್ದಾರೆ.


ಇದನ್ನೂ ಓದಿ: ಯತ್ನಾಳ್ ಕಾಂಗ್ರೆಸ್‌ನ ‘ಬಿ’ ಟೀಂ ಆಗಿ ಕೆಲಸ ಮಾಡುತ್ತಿದ್ದಾರೆ – ಸಚಿವ ಮುರುಗೇಶ ನಿರಾಣಿ ಆರೋಪ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇರಳ: ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿಗೆ ಹಲ್ಲೆ ನಡೆಸಿದ ಸ್ವಪಕ್ಷದ ಮುಖಂಡ

0
ಕೇರಳದ ಕೊಲ್ಲಂ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ ಕೃಷ್ಣಕುಮಾರ್ ಅವರ ಕಣ್ಣಿಗೆ ತೀವ್ರ ಸ್ವರೂಪದ ಗಾಯವಾಗಿದ್ದು, ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಪಕ್ಷದ ಸ್ಥಳೀಯ ನಾಯಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಕೃಷ್ಣಕುಮಾರ್ ಇತ್ತೀಚೆಗೆ...