Homeಕರ್ನಾಟಕನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

ನಾನು ಹಿಂದೂ ಅಲ್ಲ, ಲಿಂಗಾಯತ; ನಮ್ಮ ದೇಶದಲ್ಲಿ 12,000 ವಿಭಿನ್ನ ಸಂಸ್ಕೃತಿಗಳಿವೆ: ಕುಂವೀ

- Advertisement -
- Advertisement -

“ನಾನು ಹಿಂದೂ ಅಲ್ಲವೆಂದು ವಿದ್ಯುಕ್ತವಾಗಿ ಘೋಷಿಸುತ್ತಿದ್ದೇನೆ. ನಾನು ಲಿಂಗಾಯತ ಸಮುದಾಯದಿಂದ ಬಂದವನು” ಎಂದು ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಹೇಳಿದರು.

ಲೋಕನಾಯಕ ಜೆ.ಪಿ.ವಿಚಾರ ವೇದಿಕೆ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ, “ಸರ್ವ ಜನಾಂಗದ ಶಾಂತಿಯ ತೋಟ: ಒಂದು ಭಾವೈಕ್ಯತೆಯ ಚರ್ಚೆ” ಕಾರ್ಯಕ್ರಮವನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು.

“1824ರಲ್ಲಿ ಬಂದ ಶಬ್ದ ಹಿಂದೂ. ಈ ದೇಶದಲ್ಲಿ 12,000 ಜಾತಿಗಳಿವೆ. 12,000 ಸಂಸ್ಕೃತಿಗಳಿವೆ. ಅಷ್ಟು ವೈವಿಧ್ಯಮಯ ದೇಶ ಯಾವುದಾದರೂ ಇದ್ದರೆ ಅದು ನನ್ನ ದೇಶ. ಹೀಗಾಗಿ ನಾವೆಲ್ಲ ಹಿಂದೂ ಎಂದು ಹೇಳುವುದು ಸರಿಯಲ್ಲ” ಎಂದು ಸ್ಪಷ್ಟಪಡಿಸಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ನಿಜಲಿಂಗಸ್ವಾಮಿ ಎಂಬ ಹುಡುಗ 2ನೇ ವಯಸ್ಸಿನಲ್ಲಿ ಜಾತ್ರೆಯಲ್ಲಿ ತಪ್ಪಿಸಿಕೊಂಡಿದ್ದ. ಸುಮಾರು 22 ವರ್ಷಗಳ ನಂತರ ಆ ಹುಡುಗ ಪತ್ತೆಯಾದ. ಉಸ್ಮಾನ್ ಎಂಬವರ ಮುಸ್ಲಿಂ ಕುಟುಂಬದಲ್ಲಿ ಆ ಹುಡುಗ ಬೆಳೆದ. ಉಸ್ಮಾನ್ ತಮ್ಮ ಮನೆಯಲ್ಲಿ ಪ್ರತ್ಯೇಕವಾಗಿ ಆ ಹುಡುಗನನ್ನು ಇರಿಸಿದ್ದರು. ಹಿಂದೂ ಅಂತ ತಿಳಿದ ಬಳಿಕ ಹಿಂದೂ ಸಂಪ್ರದಾಯದ ಊಟವನ್ನೇ ನೀಡಿದರು. ಅವನದ್ದೇ ಆದ ನಿಲುವನ್ನು ಬೆಳೆಸಿದರು. ಹೀಗೆ ಇಪ್ಪತ್ತೆರಡು ವರ್ಷಗಳ ಕಾಲ ನೋಡಿಕೊಂಡಿದ್ದಾರೆ. ನಿಜಲಿಂಗ ಎಂದೇ ಆತನ ಹೆಸರಿದೆ. ಯಾವುದೇ ಬದಲಾವಣೆ ಮಾಡಿಲ್ಲ. ಇದು ನಮ್ಮ ಭಾರತ ಎಂದು ತಿಳಿಸಿದರು.

ನಮ್ಮಲ್ಲಿ ಎರಡು ರೀತಿಯ ದೆವ್ವಗಳಿವೆ. ಹಿರಿಯರ ಹಬ್ಬ ಮಾಡಿದಾಗ ಕೆಲವು ದೆವ್ವಗಳು ಸ್ವರ್ಗಕ್ಕೆ ಹೋಗುತ್ತವೆ. ಇನ್ನು ಕೆಲವು ದೆವ್ವಗಳಿವೆ- ಗೋಳ್ವಲ್ಕರ್‌‌, ನಾಥೂರಾಮ್ ಗೋಡ್ಸೆ, ಹೆಗಡೇವಾರ್‌- ಇವು ಆಗಾಗ್ಗೆ ಕೆಲವರ ಮೈಮೇಲೆ ಬರುತ್ತವೆ ಎಂದು ವಿಷಾದಿಸಿದರು.

ಬಹಳ ಸಜ್ಜನರು ಕೆಲವು ಹೇಳಿಕೆಗಳನ್ನು ಕೊಡುತ್ತಾರೆ. ಅವರ ಮೈಮೇಲೆ ದೆವ್ವ ಬಂದಾಗ ಮುಸ್ಲಿಂ ವಿರೋಧಿಯಾಗಿ ಮಾತನಾಡುತ್ತಾರೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರಂತೂ ಒಳ್ಳೆಯ ವ್ಯಕ್ತಿ, ಶಿಕ್ಷಿತ. ಅವರು ಇದ್ದಕ್ಕಿದ್ದಂತೆ ಪಂಚರ್‌ ಹಾಕುವವರ ಬಗ್ಗೆ ಮಾತನಾಡುತ್ತಾರೆ. ಯಾಕೆಂದರೆ ಅವರ ಮೈಮೇಲೆ ಗೋಳ್ವಲ್ಕರ್‌ ಪ್ರೇತ ಬಂದಿರುತ್ತದೆ. ರೇಣುಕಾಚಾರ್ಯ ಅಂತ ಇದ್ದಾರೆ. ಅವರೂ ಬಹಳ ಒಳ್ಳೆಯವರು. ಅವರ ಮೇಲೆ ಪ್ರೇತ ಬಂದಾಗ ಏನೋ ಹೇಳಿಕೆ ನೀಡುತ್ತಾರೆ. ವಿಜಯಪುರದಲ್ಲಿ ಒಬ್ಬ ಸಜ್ಜನರು ಇದ್ದಾರೆ. ಅವರು ಹೆಸರು ಬಸವರಾಜ ಯತ್ನಾಳ್. ಅವರು ಕೂಡ ವಿಚಿತ್ರವಾದ ಹೇಳಿಕೆಗಳನ್ನು ನೀಡುತ್ತಾರೆ ಎಂದು ಟೀಕಿಸಿದರು.

ಕರ್ನಾಟಕ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ನಾಗಮೋಹನ್ ದಾಸ್ ಮಾತನಾಡಿ, “ಮಾನವನ ದುಃಖ ದುಮ್ಮಾನಗಳನ್ನು ಪರಿಹಾರ ಮಾಡುವುದಕ್ಕೆ ಧರ್ಮಗಳು ಹುಟ್ಟಿದವು. ಹಾಗಾಗಿ ದಮನಕ್ಕೆ ಒಳಗಾಗಿರುವ ಜನರ ದನಿಯೇ ಧರ್ಮ ಎಂದು ನಮ್ಮ ಹಿರಿಯರು ಹೇಳಿದ್ದಾರೆ. ಹಾಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಆದರೆ ನಮ್ಮೆಲ್ಲ ಸುತ್ತ ಈ ರೀತಿಯ ಬೆಳವಣಿಗೆಗಳು ಯಾಕೆ ಆಗುತ್ತಿವೆ? ಧರ್ಮವು ಅಪ್ರಜಾಪ್ರಭುತ್ವಗೊಂಡಾಗ ಅದು ಮೂಲಭೂತವಾದವಾಗುತ್ತದೆ. ಇದು ಮನುಕುಲಕ್ಕೆ ಬಹಳ ಹಾನಿಕಾರಕ” ಎಂದು ಎಚ್ಚರಿಸಿದರು.

ಕಾಶ್ಮೀರದಲ್ಲಿ ಶೇ. 92ರಷ್ಟು ಜನರು ಮುಸ್ಲಿಮರಿದ್ದಾರೆ. ಅಲ್ಲಿನ ಮುಸ್ಲಿಂ ಮಹಿಳೆಯರು ಬುರ್ಕಾ ಹಾಕಲ್ಲ. ಆದರೆ ಇಸ್ಲಾಮಿಕ್ ಮೂಲಭೂತವಾದಿಗಳು, ಬುರ್ಕಾ ಹಾಕಲೇಬೇಕೆಂದು ಧಮ್ಕಿ ಹಾಕುತ್ತಿದ್ದಾರೆ. ಅದು ಮೂಲಭೂತವಾದ. ಮೂರು ನಾಮ ಹಾಕಬೇಕು, ತಿಲಕ ಇಡಬೇಕು, ಗಡ್ಡ ಬಿಡಬೇಕು, ಪಾದಪಾದ ಪೂಜೆ ಮಾಡಬೇಕು ಎಂದು ಹೇರುವುದು ಮೂಲಭೂತವಾದ. ಇದನ್ನು ಎದುರಿಸದಿದ್ದರೆ ಶಾಂತಿ ನೆಮ್ಮದಿ ಇರುವುದಿಲ್ಲ. ಹೀಗಾಗಿ ನಾವು ಧರ್ಮ ವಿರೋಧಿಗಳಾಗಬೇಕಿಲ್ಲ. ಧರ್ಮವನ್ನು ಅಪ್ರಜಾಪ್ರಭುತ್ವಗೊಳಿಸುವ ಪ್ರಕ್ರಿಯೆಯನ್ನು ವಿರೋಧ ಮಾಡಬೇಕಿದೆ” ಎಂದು ಅಭಿಪ್ರಾಯಪಟ್ಟರು.

ಪತ್ರಕರ್ತ ಬಿ.ಎಂ. ಹನೀಫ್ ಮಾತನಾಡಿ, ‘ಮಾಧ್ಯಮಗಳು ಟಿಆರ್‌ಪಿ ಹಿಂದೆ ಹೋಗುತ್ತಿವೆ. ಹಿಜಾಬ್‌ ಧರಿಸದೆ ಹೋದ ನೂರಾರು ವಿದ್ಯಾರ್ಥಿಗಳಿದ್ದರು. ಅವರನ್ನು ಮಾಧ್ಯಮಗಳು ತೋರಿಸಲಿಲ್ಲ. ತರಗತಿಯಲ್ಲಿ ಹಿಜಾಬ್ ಧರಿಸಿ ಪಾಠ ಕೇಳಿದರೆ ಶಿಕ್ಷಣ ವ್ಯವಸ್ಥೆ ಕುಸಿದು ಹೋಗುತ್ತಿರಲಿಲ್ಲ. ಅದೇ ರೀತಿ ತಲೆ ಮೇಲೆ ಹಿಜಾಬ್‌ ಇಲ್ಲದೆ ಪಾಠ ಕೇಳಿದರೆ ಇಸ್ಲಾಂ ಧರ್ಮ ಕೆಟ್ಟು ಹೋಗುವುದಿಲ್ಲ. ಸಾವಿರಾರು ವರ್ಷಗಳ ಇತಿಹಾಸವಿರುವ ಧರ್ಮವಿದೆ” ಎಂದು ವಿವರಿಸಿದರು.

“ನಾವು ದೇಶದ ಬಗ್ಗೆ ಚಿಂತನೆ ಮಾಡಬೇಕಿದೆ. ಸಾವಿರಾರು ಕಾರ್ಮಿಕರು ಉದ್ಯೋಗ ಕಳೆದುಕೊಂಡಿದ್ದಾರೆ. ಕಾರ್ಖಾನೆಗಳು ಮುಚ್ಚಿವೆ. ಇದರ ಬಗ್ಗೆ ಮಾಧ್ಯಮಗಳು ಮಾತನಾಡುತ್ತಿಲ್ಲ. ಲಕ್ಷಾಂತರ ಕೋಟಿ ರೂ. ಸಾಲವನ್ನು ಸರ್ಕಾರ ಮಾಡಿದೆ. ಕೆಲವು ರಾಜಕಾರಣಿಗಳು ನನ್ನ ಮೈಯಲ್ಲಿ ಹಿಂದೂ ರಕ್ತ ಹರಿಯುತ್ತಿದೆ ಎನ್ನುತ್ತಾರೆ. ಮಣಿಪಾಲ್‌ ಆಸ್ಪತ್ರೆಗೆ ಹೋಗಿ ಅರ್ಜೆಂಟಾಗಿ ಎರಡು ಬಾಟಲ್‌ ಹಿಂದೂ ರಕ್ತ ಬೇಕು ಎಂದರೆ ಕೊಡುತ್ತಾರಾ?” ಎಂದು ಪ್ರಶ್ನಿಸಿದರು.

ಆದಿಚುಂಚನಗಿರಿ ಶಾಖಾ ಮಠದ ಸೌಮ್ಯಾನಂದ ಸ್ವಾಮೀಜಿ, ಇಸ್ಲಾಂ ಧಾರ್ಮಿಕ ವಿದ್ವಾಂಸರಾದ  ಮುಫ್ತಿ ಮಹಮ್ಮದ್‌ ಅಲಿ ಮಿಸ್ಬಾಹಿ ಜಮಾಲಿ ನೂರಿ, ಆರ್ಚ್‌ ಡಯಾಸಿಸ್‌ ಕಮ್ಯುನಿಕೇಷನ್‌ ಸೆಂಟರ್‌ ನಿರ್ದೇಶಕರಾದ ಫಾ. ಸಿರಿಲ್ ವಿಕ್ಟರ್‌ ಸರ್ವಧರ್ಮ ಸಮನ್ವಯತೆ ಸಾರುವ ಭಾಷಣ ಮಾಡಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others


ಇದನ್ನೂ ಓದಿರಿ: ಕೋಮುದ್ವೇಷದ ವಿರುದ್ಧ ಪಾದಯಾತ್ರೆ ಮಾಡುವೆ: ಎಚ್‌.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...