Homeಕರ್ನಾಟಕನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ...

ನಾನು ಹಾವಿನಪುರದಲ್ಲಿ ತರಬೇತಿ ಪಡೆದಿಲ್ಲ, ವಾಟ್ಸಪ್‌ ಯುನಿವರ್ಸಿಟಿ ವಿದ್ಯಾರ್ಥಿಯೂ ಅಲ್ಲ: ಸಚಿವ ಬಿಸಿ ನಾಗೇಶ್‌ ವಿರುದ್ಧ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ವಾಗ್ದಾಳಿ

- Advertisement -
- Advertisement -

ಇತಿಹಾಸದ ಬಗ್ಗೆ ನಂಬಿಕೆಯೂ ಇಲ್ಲದ, ಕನಿಷ್ಠ ಅದರ ತಿಳುವಳಿಕೆಯೂ ಇಲ್ಲದ ಶಿಕ್ಷಣ ಸಚಿವ ನಾಗೇಶ್ ಅವರು ಇತಿಹಾಸದ ಪಾಠ ಹೇಳಲು ಬರುತ್ತಿದ್ದಾರೆ. ಬಿಸಿ ನಾಗೇಶ್ ಅವರೇ ನಾನು ನಿಮ್ಮ ಹಾವಿನಪುರದಲ್ಲಿ ತರಬೇತಿ ಪಡೆದವನೂ ಅಲ್ಲ, ವಾಟ್ಸಪ್ ಫಾರ್ವರ್ಡ್‌ ಯುನಿವರ್ಸಿಟಿಯ ವಿದ್ಯಾರ್ಥಿಯೂ ಅಲ್ಲ ಎಂದು ವಿರೋಧ ಪಕ್ಷದ ನಾಯಕರಾದ ಬಿಕೆ ಹರಿಪ್ರಸಾದ್ ಸೋಮವಾರ ಆಕ್ರೊಶ ವ್ಯಕ್ತಪಡಿಸಿದ್ದಾರೆ.

“ರಾಷ್ಟ್ರೀಯತೆ, ಸ್ವಾತಂತ್ರ್ಯ ಹೋರಾಟ, ರಾಷ್ಟ್ರಪ್ರೇಮ, ರಾಷ್ಟ್ರಧ್ವಜದ ವಿರುದ್ಧ ಇದ್ದವರಿಂದ ಪಾಠ ಹೇಳಿಸಿಕೊಳ್ಳುವ ದಾರಿದ್ರ್ಯ ಬಂದಿಲ್ಲ, ಬರುವುದು ಇಲ್ಲ. ಕೇಸರಿ ಬಿಳಿ ಹಸಿರು ಬಣ್ಣಗಳ ನಡುವೆ ಅಶೋಕ ಚಕ್ರವಿರುವ ರಾಷ್ಟ್ರಧ್ವಜ ಬಗ್ಗೆ ನಿಮ್ಮ ಸಂಘದ ಸಂಸ್ಥಾಪಕ ಹೆಡ್ಗೇವಾರ್ ತಿರಸ್ಕಾರ ಮನೋಭಾವನೆಯ ಜೊತೆಗೆ ಕನಿಷ್ಟ ಗೌರವವೂ ಇರಲಿಲ್ಲ ಎಂಬುದನ್ನ ಸಾಬೀತು ಮಾಡಲು ನಾನು ಸಿದ್ದ” ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್‌ ಅವರಿಗೆ ಸವಾಲು ಎಸೆದಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“1930ರಲ್ಲಿಯೇ ತ್ರಿವರ್ಣ ಧ್ವಜವನ್ನು ಸ್ವಾತಂತ್ರ್ಯ ಹೋರಾಟದ ಸ್ಪೂರ್ತಿಯಾಗಿ ಎಲ್ಲಾ ವರ್ಗದ, ಧರ್ಮದವರನ್ನು ಪ್ರತಿನಿಧಿಸುವಂತೆ ರಚಿಸಿ, ಇಡೀ ದೇಶವೇ ತ್ರಿವರ್ಣ ಧ್ವಜವನ್ನ ಒಪ್ಪಿ ಅಪ್ಪಿಕೊಂಡಾಗಿತ್ತು. ಆದರೆ 1928ರಿಂದಲೇ ಭಾಗಧ್ವಜವನ್ನು ಆರೆಸ್ಸೆಸ್‌‌ ಅಧಿಕೃತ ನಿಶಾನೆ ಎಂದು ಹೆಡ್ಗೇವಾರ್ ಘೋಷಿಸಿದ್ದರಿಂದ, ತ್ರಿವರ್ಣ ಧ್ವಜವನ್ನ ಸಂಘಪರಿವಾರ ಒಪ್ಪಲೇ ಇಲ್ಲ. ಹೆಚ್ಚಿನ ಮಾಹಿತಿ ಬೇಕಿದ್ದರೆ ಹೆಡ್ಗೇವಾರರ ಸಹಚರನಾಗಿದ್ದ ಎನ್‌ಹೆಚ್ ಪಾಲ್ಕರ್ ಬರೆದ ‘Saffron flag’ ಪುಸ್ತಕದಲ್ಲಿ ದಾಖಲೆಗಳಿವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ರೋಹಿತ್‌ ಚಕ್ರತೀರ್ಥ ಐಐಟಿ, ಸಿಇಟಿ ಪ್ರೊಫೆಸರ್‌‌: ಶಿಕ್ಷಣ ಸಚಿವ ಬಿ.ಸಿ ನಾಗೇಶ್

“ಅಷ್ಟೇ ಯಾಕೆ ಸ್ವಾಮಿ, ಸಂಘದ ಸ್ಥಾಪಕ ಮುಖಂಡ ಗೋಳ್ವಾಲ್ಕರ್ ಬರೆದ ‘ಬಂಚ್ ಆಫ್ ಥಾಟ್ಸ್’ ಪುಸ್ತಕದಲ್ಲಿ ರಾಷ್ಟ್ರಧ್ವಜವನ್ನು ತಿರಸ್ಕಾರ ಮಾಡಿದ್ದಾರೆ. ಕಣ್ಣಿನ ಪೊರೆ ಕಳಚಿಟ್ಟು ಓದಿ” ಎಂದು ಕಿಡಿ ಕಾರಿದ್ದಾರೆ.

“1930 ಜನವರಿ 26ರಂದು ಸ್ವಾತಂತ್ರ್ಯ ಹೋರಾಟಗಾರರು ತ್ರಿವರ್ಣ ಧ್ವಜವನ್ನು ದೇಶದೆಲ್ಲೆಡೆ ಹಾರಿಸಲು ತೀರ್ಮಾನಿಸಿದಾಗ, ಈ ಹೆಡ್ಗೆವಾರ್ ‘ನಮ್ಮ ಎಲ್ಲಾ ಶಾಖೆಯ ಕಚೇರಿಗಳಲ್ಲಿ ಭಾಗವಧ್ವಜ ಹಾರಿಸಬೇಕು’ ಎಂದು ಕರೆ ಕೊಟ್ಟಿದ್ದನ್ನು ದೇಶ ಮರೆತಿಲ್ಲ. ಆಗ ಹೆಡ್ಗೇವಾರ್ ಬದುಕಿದ್ದರು” ಎಂದು ಹೇಳಿದ್ದಾರೆ.

“ಬಿಜೆಪಿಯ ಪಿತಾಮಹ ಶ್ಯಾಂ ಪ್ರಸಾದ್ ಮುಖರ್ಜಿ ಸ್ವಾತಂತ್ರ್ಯ ಭಾರತದ ನಂತರ ಪಂಡಿತ್ ಜವಹರಲಾಲ್ ನೆಹರೂ ಸರ್ಕಾರದಲ್ಲಿ ಮಂತ್ರಿಯಾಗಿದ್ದರೂ ಕೂಡ ಅವರ ಅಧಿಕೃತ ನಿವಾಸದ ಮೇಲೆ ಹಾರಿಸುತ್ತಿದ್ದಿದ್ದು ಭಗವದ್ವಜ ಹೊರತು ರಾಷ್ಟ್ರಧ್ವಜ ಅಲ್ಲ” ಎಂದು ಹರಿಪ್ರಸಾದ್‌ ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳಿಗೆ ಇನ್ನೂ ಸಿಕ್ಕಿಲ್ಲ ಪಠ್ಯಪುಸ್ತಕ: ಪೋಷಕರ ಸಂಘಟನೆಗಳ ಸಮನ್ವಯ ಸಮಿತಿ ಆಕ್ರೋಶ

“ಅಷ್ಟಕ್ಕೂ ಆರೆಸ್ಸೆಸ್ಸಿನ ಮುಖವಾಣಿ ಆರ್ಗನೈಸರ್ ಅಲ್ಲಿ ತ್ರಿವರ್ಣ ಇರುವ ಭಾರತದ ಧ್ವಜ ಅಪಶಕುನ ಎಂದು ಬರೆದಿರುವುದು ದಾಖಲೆಯಾಗಿದೆ. ಸ್ವಾತಂತ್ರ್ಯ ಬಂದು 2002ರವರೆಗೆ ರಾಷ್ಟ್ರ ಧ್ವಜವನ್ನ ಶಾಖೆಯ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಹಾರಿಸಲೇ ಇಲ್ಲ ಯಾಕೆ ಎಂಬುದನ್ನ ಮೊದಲು ಸ್ಪಷ್ಟಪಡಿಸಿ” ಎಂದು ಅವರು ಹೇಳಿದ್ದಾರೆ.

“ಆರೆಸ್ಸೆಸ್ಸ್‌ ಹಾಗೂ ಬಿಜೆಪಿ ತಮ್ಮ ಹುಟ್ಟಿನಿಂದಲೇ ಸ್ವಾತಂತ್ರ್ಯ ಹೋರಾಟದ ಜೊತೆ ಜೊತೆಗೆ ರಾಷ್ಟ್ರೀಯತೆ, ರಾಷ್ಟ್ರಧ್ವಜದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ ಎಂಬ ನನ್ನ ಹೇಳಿಕೆಗೆ ಈಗಲೂ ನಾನು ಬದ್ಧ. ಚರ್ಚೆಗೂ ಸಿದ್ದ” ಎಂದು ಅವರು ಬಿಜೆಪಿ ಸರ್ಕಾರಕ್ಕೆ ಸವಾಲು ಎಸೆದಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. ಮಾನಗೆಟ್ಟ ಮೂರ್ಖ ಚಡ್ಡಿಗಳಿಗೆ ಸಾರ್ವಜನಿಕವಾಗಿ ಬೆತ್ತಲಾಗುವುದು ಒಂದು ಹವ್ಯಾಸವೇ ಆಗಿಬಿಟ್ಟಿದೆ.

LEAVE A REPLY

Please enter your comment!
Please enter your name here

- Advertisment -

Must Read

ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್‌ರನ್ನು ಗುಂಡಿಕ್ಕಿ ಕೊಲ್ಲಿ: ಪಬ್ಲಿಕ್‌ ಟಿವಿಯಲ್ಲಿ ಮಾಡಲಾದ ಪ್ರಚೋದನೆಗೆ ಖಂಡನೆ

“ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರನ್ನು ಗುಂಡಿಕ್ಕಿ ಕೊಲ್ಲಿ”- ಹೀಗೆ ಪ್ರಚೋದನಾತ್ಮಕವಾಗಿ ವ್ಯಕ್ತಿಯೊಬ್ಬರು ಪಬ್ಲಿಕ್‌ ಟಿ.ವಿ. ಜೊತೆ ಮಾತನಾಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಇಬ್ಬರು ಧಾರ್ಮಿಕ...