Homeಕರ್ನಾಟಕ‘ನಾನು ಚುನಾವಣೆಗೆ ಸ್ಪರ್ಧಿಸಲ್ಲ’: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

‘ನಾನು ಚುನಾವಣೆಗೆ ಸ್ಪರ್ಧಿಸಲ್ಲ’: ವದಂತಿಗಳಿಗೆ ಅನಿತಾ ಕುಮಾರಸ್ವಾಮಿ ಸ್ಪಷ್ಟನೆ

- Advertisement -
- Advertisement -

“ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆ ಇಲ್ಲ” ಎಂದು ರಾಮನಗರ ಎಂಎಲ್‌ಎ ಅನಿತಾ ಕುಮಾರಸ್ವಾಮಿ ಅವರು ಸ್ಪಷ್ಟಪಡಿಸಿದ್ದಾರೆ. ಅನಿತಾ ಕುಮಾರಸ್ವಾಮಿ ಅವರು ಮತ್ತೆ ಚುನಾವಣೆಗೆ ಸ್ಪರ್ಧಿಸುತ್ತಾರೆ ಎನ್ನುವ ರೀತಿಯಲ್ಲಿ ಹಬ್ಬಿಸಲಾಗುತ್ತಿರುವ ವದಂತಿಗಳ ಬಗ್ಗೆ ಟ್ವೀಟ್ ಮಾಡಿ ಸ್ಪಷ್ಟೀಕರಣ ನೀಡಿದ್ದಾರೆ.

“ಪ್ರಸಕ್ತ ವಿಧಾನಸಭೆ ಚುನಾವಣೆಯಲ್ಲಿ ನಾನು ಸ್ಪರ್ಧಿಸುತ್ತೇನೆಂಬ ವದಂತಿಗಳನ್ನು ಕೆಲವರು ವ್ಯವಸ್ಥಿತವಾಗಿ ಹಬ್ಬಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ, ಇದು ಶುದ್ಧಸುಳ್ಳು ಮತ್ತು ಅಪಪ್ರಚಾರದ ಭಾಗವಷ್ಟೇ. ಮತ್ತೊಮ್ಮೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ಈ ಹಿಂದೆಯೇ ಸ್ಪಷ್ಟಪಡಿಸಿದ್ದೇನೆ” ಎಂದು ಅವರು ತಿಳಿಸಿದ್ದಾರೆ.

“ರಾಮನಗರ ಕ್ಷೇತ್ರವನ್ನು ನನ್ನ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರಿಗೆ ಬಿಟ್ಟುಕೊಟ್ಟಿದ್ದೇನೆ. ಪುನಾ ಸ್ಪರ್ಧಿಸುವ ಮಾತೆಲ್ಲಿ? 2008ರಲ್ಲಿ ಆಪರೇಷನ್‌ ಕಮಲದ ಉಪ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡ ಅವರ ಆದೇಶ ಗೌರವಿಸಿ ಸ್ಪರ್ಧಿಸಿದ್ದೆ. ಆ ನಂತರದ ಚುನಾವಣೆಯಲ್ಲಿ ವೀರಭದ್ರಯ್ಯ ಅವರಿಗೆ ಮಧುಗಿರಿ ಕ್ಷೇತ್ರವನ್ನು ಸಂತೋಷದಿಂದ ಬಿಟ್ಟುಕೊಟ್ಟು ಪಕ್ಷದ ಕೆಲಸ, ಮನೆಗಷ್ಟೇ ಸೀಮಿತವಾದೆ” ಎಂದಿದ್ದಾರೆ.

“2013ರಲ್ಲಿ ಕೂಡ ಕಾರ್ಯಕರ್ತರ ಒತ್ತಡಕ್ಕೆ ತಲೆಕೊಟ್ಟು ಚನ್ನಪಟ್ಟಣದಲ್ಲಿ ಸ್ಪರ್ಧಿಸಬೇಕಾಯಿತು. ಆಗಲೂ ನಾನು ಪಕ್ಷ ಹಾಗೂ ವರಿಷ್ಠರ ಆದೇಶವನ್ನಷ್ಟೇ ಪಾಲಿಸಿದೆ” ಎಂದು ಅನಿತಾ ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯನವರ ಹೇಳಿಕೆ ತಿರುಚಿ, ನಂತರ ತಿದ್ದಿದ ಎನ್‌ಡಿಟಿವಿ; ಸುಳ್ಳನ್ನೇ ವೈಭವೀಕರಿಸಿದ ಕನ್ನಡ ಮಾಧ್ಯಮಗಳು

“2018ರ ಉಪ ಚುನಾವಣೆ ವೇಳೆ ರಾಮನಗರ ಕ್ಷೇತ್ರದಲ್ಲಿ ಕೆಲವರು ನಮ್ಮ ಪಕ್ಷದ ಬೆನ್ನಿಗೆ ಇರಿಯುವ ಕೃತ್ಯವೆಸಗಿದಾಗ ಮತ್ತೆ ಜೆಡಿಎಸ್ ಪಕ್ಷ, ದೇವೇಗೌಡ ಅವರು, ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ರಾಮನಗರ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದೆ” ಎಂದಿರುವ ಅವರು, “ಹೀಗೆ ಪಕ್ಷ ಹಾಗೂ ವರಿಷ್ಠರ ಆದೇಶವನ್ನು ಶಿರಸಾ ಪಾಲಿಸಿದ್ದೇನೆ. ಅಂಥ ಕ್ಲಿಷ್ಟ ಪರಿಸ್ಥಿತಿಯಲ್ಲೂ ಮನೆಮಗಳೆಂದು ಭಾವಿಸಿ ನನ್ನನ್ನು ಗೆಲ್ಲಿಸಿದ ಮಧುಗಿರಿ, ರಾಮನಗರ ಕ್ಷೇತ್ರಗಳ ಮಹಾಜನತೆಗೆ ಆಜೀವ ಪರ್ಯಂತ ನಾನು ಆಭಾರಿ. ಚನ್ನಪಟ್ಟಣ ಕ್ಷೇತ್ರದ ಜನತೆಗೂ ಚಿರಋಣಿ. ಸಿಕ್ಕಿದ ಅವಕಾಶ ಬಳಸಿಕೊಂಡು ಈ ಕ್ಷೇತ್ರಗಳ ಅಭಿವೃದ್ಧಿಗೆ ಶ್ರಮಿಸಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

“ಚುನಾವಣೆಯ ಕಣದಿಂದ ಹಿಂದೆ ಸರಿದು ಪಕ್ಷದ ಶ್ರಯೋಭಿವೃದ್ಧಿ ಹಾಗೂ ನನ್ನ ಕ್ಷೇತ್ರದ ಜನರ ಒಳಿತಿಗಾಗಿಯಷ್ಟೇ ಕೆಲಸ ಮಾಡುತ್ತಿದ್ದೇನೆ. ಹೀಗಾಗಿ ಯಾರೂ ಇಂಥ ವದಂತಿಗಳನ್ನು ಹಬ್ಬಿಸಬಾರದು ಮತ್ತೂ ನಂಬಬಾರದು ಎನ್ನುವುದು ನನ್ನ ಕಳಕಳಿಯ ವಿನಂತಿ” ಎಂದು ಅವರು ಮನವಿ ಮಾಡಿದ್ದಾರೆ.

“ಎಲ್ಲಾ ಚುಣಾವಣೆಗಳಲ್ಲಿ ಪಕ್ಷದ ಆದೇಶವನ್ನಷ್ಟೇ ಪಾಲಿಸಿ ನಡೆದಿದ್ದೇನೆಯೇ ಹೊರತು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಕಟ್ಟಿದ ಈ ಪಕ್ಷಕ್ಕೆ ಧಕ್ಕೆ ತರುವ ಅಥವಾ ಕುಟುಂಬದ ಗೌರವಕ್ಕೆ ಚ್ಯುತಿಯುಂಟು ಮಾಡುವ ಕೆಲಸ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ದಯಮಾಡಿ ನನ್ನ ಭಾವನೆಗಳನ್ನು ಗೌರವಿಸಬೇಕು” ಎಂದು ಕೋರಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...