Homeಮುಖಪುಟ'ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ' : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

- Advertisement -
- Advertisement -

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, “ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ” ಎಂದಿದ್ದಾರೆ. “ಸಂಸತ್ತಿನಲ್ಲಿ ನನ್ನ ಉದ್ದೇಶ ಪ್ರಭಾವ ಬೀರುವುದೇ ಹೊರತು, ಗದ್ದಲ ಸೃಷ್ಟಿಸುವುದಲ್ಲ” ಎಂದು ಅವರು ಹೇಳಿದ್ದಾರೆ.

ವಿಡಿಯೋ ಹೇಳಿಕೆಯಲ್ಲಿ ಚಡ್ಡಾ ಅವರು, ವಿರೋಧ ಪಕ್ಷದ ಸಭಾತ್ಯಾಗಗಳಲ್ಲಿ ತಾನು ಭಾಗವಹಿಸಿಲ್ಲ ಎಂಬ ಆರೋಪಗಳನ್ನು ‘ಸಂಪೂರ್ಣ ಸುಳ್ಳು’ ಎಂದು ತಳ್ಳಿಹಾಕಿದ್ದಾರೆ. ಸಂಸತ್ತಿನ ಕಲಾಪಗಳು ಸಿಸಿಟಿವಿ ಕ್ಯಾಮರಾಗಳಲ್ಲಿ ದಾಖಲಾಗಿರುತ್ತವೆ ಎಂದಿರುವ ಅವರು, ತಾನು ಭಾಗವಹಿಸದ ಒಂದೇ ಒಂದು ಸಂದರ್ಭವನ್ನು ಬೆರಳು ಮಾಡಿ ತೋರಿಸುವಂತೆ ಟೀಕಾಕಾರರಿಗೆ ಸವಾಲು ಹಾಕಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ಆಗ್ರಹಿಸಿದ ನಿಲುವಳಿ ನೋಟಿಸ್‌ಗೆ ಸಹಿ ಹಾಕಲು ನಿರಾಕರಿಸಿದ್ದಾರೆ ಎಂಬ ಮತ್ತೊಂದು ಆರೋಪದ ಕುರಿತು ಪ್ರತಿಕ್ರಿಯಿಸಿದ ಚಡ್ಡಾ, ಈ ಬಗ್ಗೆ ಯಾವುದೇ ಪಕ್ಷದ ನಾಯಕರು ತನ್ನನ್ನು ಔಪಚಾರಿಕವಾಗಿಯಾಗಲಿ ಅಥವಾ ಅನೌಪಚಾರಿಕವಾಗಿಯಾಗಲಿ ಎಂದಿಗೂ ಸಂಪರ್ಕಿಸಿಲ್ಲ. ಅಲ್ಲದೆ, ನಮ್ಮ ಪಕ್ಷದ ಇತರ ಹಲವಾರು ಸಂಸದರು ಕೂಡ ಆ ನೋಟಿಸ್‌ಗೆ ಸಹಿ ಹಾಕಿಲ್ಲ ಎಂದು ಹೇಳಿದ್ದಾರೆ.

ತನ್ನ ಕೆಲಸವನ್ನು ಎತ್ತಿ ತೋರಿಸಿದ ಚಡ್ಡಾ ಅವರು, ಜಿಎಸ್‍ಟಿ, ಆದಾಯ ತೆರಿಗೆ, ದೆಹಲಿಯ ವಾಯು ಮಾಲಿನ್ಯ, ಪಂಜಾಬ್‌ನ ನೀರಿನ ಸಮಸ್ಯೆಗಳು, ಸಾರ್ವಜನಿಕ ಆರೋಗ್ಯ, ಶಿಕ್ಷಣ, ರೈಲ್ವೆ ಪ್ರಯಾಣಿಕರ ಸಮಸ್ಯೆಗಳು, ಋತುಸ್ರಾವದ ಆರೋಗ್ಯ, ನಿರುದ್ಯೋಗ ಮತ್ತು ಹಣದುಬ್ಬರ ಸೇರಿದಂತೆ ಸಾರ್ವಜನಿಕ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಸತತವಾಗಿ ಪ್ರಸ್ತಾಪಿಸುತ್ತಿರುವುದಾಗಿ ತಿಳಿಸಿದ್ದಾರೆ.

ತನ್ನ ಕೆಲಸದ ಹೊಣೆಗಾರಿಕೆಯನ್ನು ಪುನರುಚ್ಚರಿಸಿದ ಚಡ್ಡಾ, “ಸಂಸತ್ತು ಜನರ ತೆರಿಗೆ ಹಣದಿಂದ ನಡೆಯುತ್ತದೆ. ಜನರ ಸಮಸ್ಯೆಗಳನ್ನು ಪ್ರಸ್ತಾಪಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದಿದ್ದಾರೆ. “ಪ್ರತಿಯೊಂದು ಸುಳ್ಳು ಕೂಡ ಬಯಲಾಗಲಿದೆ” ಎಂದು ಇದೇ ಸಂದರ್ಭದಲ್ಲಿ ಅವರು ಹೇಳಿದ್ದಾರೆ.

ರಾಘವ್ ಚಡ್ಡಾ ಅವರನ್ನು ರಾಜ್ಯಸಭೆಯ ಪಕ್ಷದ ಉಪನಾಯಕನ ಸ್ಥಾನದಿಂದ ಎಎಪಿ ಹಠಾತ್ ತೆಗೆದು ಹಾಕಿದೆ. ಇದು ಚಡ್ಡಾ ಅವರ ಅಸಮಾಧಾನಕ್ಕೆ ಕಾರಣವಾಗಿದೆ. ಚಡ್ಡಾ ಇತ್ತೀಚಿನ ದಿನಗಳಲ್ಲಿ ರಾಜ್ಯಸಭೆಯಲ್ಲಿ ಜನರ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸುವ ಮೂಲಕ ಗಮನ ಸೆಳೆದಿದ್ದರು. ಅವರು ಪ್ರಸ್ತಾಪಿಸಿದ ವಿಷಯಗಳು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಜನರು ಕೂಡ ಈ ಬಗ್ಗೆ ಚರ್ಚೆಗಳನ್ನು ನಡೆಸುತ್ತಿದ್ದರು. ಈ ಸಂದರ್ಭದಲ್ಲೇ ಚಡ್ಡಾ ಅವರ ಸ್ಥಾನ ಕಿತ್ತುಕೊಂಡಿರುವುದು, ಎಎಪಿಯಲ್ಲಿ ಆಂತರಿಕ ಕಲಹಕ್ಕೆ ಕಾರಣವಾಗಿದೆ. ಜನರಲ್ಲೂ ಆಶ್ಚರ್ಯ ಮೂಡಿಸಿದೆ. ಚಡ್ಡಾ ಕೇಜ್ರಿವಾಲ್ ಸೇರಿದಂತೆ ಎಎಪಿ ನಾಯಕ ವಿರುದ್ದವೇ ಅಸಮಾಧಾನ ಹೊರ ಹಾಕಿದ್ದಾರೆ.

ಒಟ್ಟಿನಲ್ಲಿ ಚಡ್ಡಾ ಅವರ ಸ್ಥಾನ ಕಿತ್ತುಕೊಂಡಿರುವುದು ಎಎಪಿಯಲ್ಲಿ ವಾಗ್ಯುದ್ಧವಾಗಿ ಪರಿವರ್ತನೆಗೊಂಡಿದೆ. ಹಿರಿಯ ನಾಯಕರು ಚಡ್ಡಾ ಅವರನ್ನು ಬಹಿರಂಗವಾಗಿ ಟೀಕಿಸುತ್ತಾ ಅವರ ರಾಜಕೀಯ ನಿಲುವನ್ನು ಪ್ರಶ್ನಿಸುತ್ತಿದ್ದರೆ, ಚಡ್ಡಾ ಸಂಸತ್ತಿನಲ್ಲಿ ಸಾರ್ವಜನಿಕ ಹಿತಾಸಕ್ತಿಯ ವಿಷಯಗಳನ್ನು ಪ್ರಸ್ತಾಪಿಸುತ್ತಿದ್ದರೂ ಸಹ ತಮ್ಮನ್ನು ಗುರಿ ಮಾಡಲಾಗುತ್ತಿದೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...