Homeಮುಖಪುಟ‘ಕ್ಷಮೆ ಕೇಳಲು ನಾನು ಸಾವರ್ಕರ್‌ ಅಲ್ಲ’: ಅನರ್ಹತೆ ಬಳಿಕ ರಾಹುಲ್‌ ಹೇಳಿಕೆ

‘ಕ್ಷಮೆ ಕೇಳಲು ನಾನು ಸಾವರ್ಕರ್‌ ಅಲ್ಲ’: ಅನರ್ಹತೆ ಬಳಿಕ ರಾಹುಲ್‌ ಹೇಳಿಕೆ

“ನಾನು ಚಿಂತಿತನಾಗಿರುವಂತೆ ಕಾಣುತ್ತಿದ್ದೇನೆಯೇ? ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ ರಾಹುಲ್ ಗಾಂಧಿ.

- Advertisement -
- Advertisement -

ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಒಂದು ದಿನದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪತ್ರಿಕಾಗೋಷ್ಠಿ ನಡೆಸಿರುವ ಅವರು, “ನಾನು ಮುಂದೆ ಮಾಡುವ ಭಾಷಣಗಳ ಕುರಿತು ಪ್ರಧಾನಿ ನರೇಂದ್ರಮೋದಿಯವರು ಭಯಭೀತರಾಗಿದ್ದಾರೆ” ಎಂದಿದ್ದಾರೆ.

ಇದರ ನಡುವೆ, ಬಿಜೆಪಿಯು ರಾಹುಲ್ ಅವರ ಮೇಲಿನ ದಾಳಿಯನ್ನು ದ್ವಿಗುಣಗೊಳಿಸಿದೆ. “ಚುನಾವಣಾ ಲಾಭಕ್ಕಾಗಿ ರಾಹುಲ್ ಅವರ ಹೆಸರನ್ನು ಬಳಸಿಕೊಂಡು ಪ್ರಚಾರ ಮಾಡಲು ಕಾಂಗ್ರೆಸ್‌ ಯೋಚಿಸಿದೆ” ಎಂದು ಬಿಜೆಪಿ ಆರೋಪಿಸಿದೆ.

ಲಂಡನ್‌ನಲ್ಲಿ ಆಡಿರುವ ಮಾತುಗಳಿಗೆ ಸಂಬಂಧಿಸಿದಂತೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಒತ್ತಾಯಿಸುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್‌ ಗಾಂಧಿ, “ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ರಾಹುಲ್ ಗಾಂಧಿ, ನಾನು ಕ್ಷಮೆ ಕೇಳುವುದಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ನನ್ನ ಮುಂದಿನ ಭಾಷಣಗಳಿಗೆ ಪ್ರಧಾನಿ ಹೆದರಿದ್ದರಿಂದ ನನ್ನನ್ನು ಅನರ್ಹಗೊಳಿಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡುವುದನ್ನು ಅವರು ಬಯಸುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.

ದೇಶದ ಆಂತರಿಕ ವ್ಯವಹಾರಗಳಲ್ಲಿ ಅಂತರಾಷ್ಟ್ರೀಯ ಶಕ್ತಿಗಳ ಹಸ್ತಕ್ಷೇಪವನ್ನು ರಾಹುಲ್‌ ಬಯಸಿದ್ದರು ಎಂಬ ಬಿಜೆಪಿ ಮಾಡುತ್ತಿರುವ ಆರೋಪಗಳನ್ನು ಅವರು ನಿರಾಕರಿಸಿದ್ದಾರೆ. “ಲಂಡನ್ ಪ್ರವಾಸದ ವೇಳೆ ನೀಡಿದ ಹೇಳಿಕೆಗಳಿಗೆ ಬಂದಿರುವ ಆರೋಪಗಳಿಗೆ ಸದನದಲ್ಲಿ ಪ್ರತಿಕ್ರಿಯಿಸಲು ಅವಕಾಶ ನೀಡಬೇಕೆಂದು ಸ್ಪೀಕರ್ ಅವರನ್ನು ಕೇಳಿದ್ದೆನು” ಎಂದಿದ್ದಾರೆ ರಾಹುಲ್‌.

“ನಾನು ಭಾರತ ವಿರೋಧಿ ಶಕ್ತಿಗಳಿಗೆ ಸಹಾಯ ಮಾಡುತ್ತಿದ್ದೇನೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ. ಈ ಆರೋಪಗಳಿಗೆ ಪ್ರತಿಕ್ರಿಯಿಸುವುದು ನನ್ನ ಹಕ್ಕು ಎಂದು ಸ್ಪೀಕರ್‌ಗೆ ಹೇಳಿದೆ. ಆದರೆ ಅವರು ನನಗೆ ಅವಕಾಶ ನೀಡಲಿಲ್ಲ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ವಿಧಾನಸಭಾ ಚುನಾವಣೆ: 124 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಹೆಸರು ಪ್ರಕಟ; ಇಲ್ಲಿದೆ ವಿವರ

“ನನಗೆ ಒಂದೇ ಒಂದು ಇದೆ. ಅದು ಸತ್ಯಕ್ಕಾಗಿ ಹೋರಾಡುವುದು ಮತ್ತು ಈ ದೇಶದ ಪ್ರಜಾಸತ್ತಾತ್ಮಕ ಸ್ವರೂಪವನ್ನು ರಕ್ಷಿಸುವುದು. ನನ್ನನ್ನು ಜೀವಮಾನವಿಡೀ ಅನರ್ಹಗೊಳಿಸಿ, ಜೀವಿತಾವಧಿಯವರೆಗೆ ಜೈಲಿನಲ್ಲಿರಿಸಿದರೂ ನಾನು ಅದಕ್ಕಾಗಿ ಮುನ್ನಡೆಯುತ್ತೇನೆ” ಎಂದು ಗುಡುಗಿದ್ದಾರೆ.

“ನಾನು ಚಿಂತಿತನಾಗಿರುವಂತೆ ಕಾಣುತ್ತಿದ್ದೇನೆಯೇ? ನಾನು ಉತ್ಸುಕನಾಗಿದ್ದೇನೆ” ಎಂದಿದ್ದಾರೆ ರಾಹುಲ್‌ ಗಾಂಧಿ.

ಮೋದಿ ಉಪನಾಮವನ್ನು ಬಳಸಿ ರಾಹುಲ್ ಗಾಂಧಿಯವರು ಇತರ ಹಿಂದುಳಿದ ಸಮುದಾಯಗಳನ್ನು (ಒಬಿಸಿ) ಅವಮಾನಿಸಿದ್ದಾರೆ ಎಂದು ಬಿಜೆಪಿ ತನ್ನ ಹೇಳಿಕೆಯನ್ನು ಪುನರುಚ್ಚರಿಸಿದೆ.

ಅವರೊಬ್ಬರೇ ಅಲ್ಲ, ಬಿಜೆಪಿಯ ಆರು ಮಂದಿ ಸೇರಿದಂತೆ ದೇಶಾದ್ಯಂತ 32 ನಾಯಕರನ್ನು ಅನರ್ಹಗೊಳಿಸಲಾಗಿದೆ. ಕರ್ನಾಟಕದಲ್ಲಿ ಚುನಾವಣಾ ಲಾಭಕ್ಕಾಗಿ ರಾಹುಲ್ ಗಾಂಧಿಯನ್ನು ಬಲಿಪಶು ಎಂದು ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ರೇವಣ್ಣ, ಪ್ರಜ್ವಲ್‌ಗೆ ಎಸ್‌ಐಟಿ ನೋಟಿಸ್

0
ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆಗೆ ಹಾಜರಾಗಲು ಆರೋಪಿಗಳಾದ ಹೆಚ್‌.ಡಿ ರೇವಣ್ಣ ಹಾಗೂ ಪ್ರಜ್ವಲ್ ರೇವಣ್ಣಗೆ ಎಸ್ಐಟಿ ಅಧಿಕಾರಿಗಳು ಇಂದು (ಏ.30) ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹಾಸನದ ಹೊಳೆನರಸೀಪುರ ನಗರ...