Homeಮುಖಪುಟದೇಶಸೇವೆಗೆ ಸಿದ್ಧನಿದ್ದೇನೆ, ನನ್ನ ವೈದ್ಯ ಹುದ್ದೆ ಮರಳಿಕೊಡಿ: ಡಾ.ಕಫೀಲ್ ಖಾನ್

ದೇಶಸೇವೆಗೆ ಸಿದ್ಧನಿದ್ದೇನೆ, ನನ್ನ ವೈದ್ಯ ಹುದ್ದೆ ಮರಳಿಕೊಡಿ: ಡಾ.ಕಫೀಲ್ ಖಾನ್

"ಮುಂಬೈನಿಂದ ಮಥುರಾಗೆ ಕರೆತರುವಾಗ ನನ್ನನ್ನು ಎನ್‌ಕೌಂಟರ್ ಮಾಡದಿರುವುದಕ್ಕೆ ಉಳಿದಿದ್ದೇನೆ. ಅಲಹಾಬಾದ್ ನ್ಯಾಯಾಲಯವು ನನ್ನ ಮೇಲಿನ ಆರೋಪಗಳನ್ನು ಮುಕ್ತಗೊಳಿಸಿರುವುದಕ್ಕೆ ನ್ಯಾಯಾಲಯಕ್ಕೆ ಧನ್ಯವಾದ ಅರ್ಪಿಸುತ್ತೇನೆ" ಎಂದಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಭದ್ರತಾ ಕಾಯಿದೆಯಡಿ (ಎನ್‌ಎಸ್‌ಎ) ಬಂಧನದಲ್ಲಿದ್ದ ಉತ್ತರ ಪ್ರದೇಶದ ಡಾ. ಕಫೀಲ್ ಖಾನ್ ತಡರಾತ್ರಿ ಬಿಡುಗಡೆಯಾಗಿದ್ದು, ನಂತರ ಮಾತನಾಡಿದ ಅವರು ‘ನನ್ನ ವೈದ್ಯ ಹುದ್ದೆಯನ್ನು ಮರಳಿಕೊಡಿ, ದೇಶಸೇವೆಗೆ ಸಿದ್ಧನಿದ್ದೇನೆ’ ಎಂದು ಘೋಷಿಸಿದ್ದಾರೆ.

ಮಥರು ಜೈಲಿನಿಂದ ಬಿಡುಗಡೆಗೊಂಡ ಅವರು, “ಮುಂಬೈನಿಂದ ಮಥುರಾಗೆ ಕರೆತರುವಾಗ ನನ್ನನ್ನು ಎನ್‌ಕೌಂಟರ್ ಮಾಡದಿರುವುದಕ್ಕೆ ಉಳಿದಿದ್ದೇನೆ. ಅಲಹಾಬಾದ್ ನ್ಯಾಯಾಲಯವು ನನ್ನ ಮೇಲಿನ ಆರೋಪಗಳನ್ನು ಮುಕ್ತಗೊಳಿಸಿರುವುದಕ್ಕೆ ನ್ಯಾಯಾಲಯಕ್ಕೆ ಧನ್ಯವಾದ ಅರ್ಪಿಸುತ್ತೇನೆ” ಎಂದಿದ್ದಾರೆ.

ಡಾ.ಕಫೀಲ್‌ ಖಾನ್‌ರವರ ಭಾಷಣವು ಹಿಂಸೆಗೆ ಅನುವು ಮಾಡಿಕೊಡುವ ಅಥವಾ ಪ್ರಚೋದನಾಕಾರಿಯಾಗಿಲ್ಲ. ಅವರ ಮೇಲೆ ಎನ್‌ಎಸ್‌ಎ ಪ್ರಕರಣ ಹಾಕಿರುವುದು ಕಾನೂನುಬಾಹಿರ ಎಂದಿದ್ದ ಅಲಹಾಬಾದ್ ಹೈಕೋರ್ಟ್ ಅವರನ್ನು ಕೂಡಲೇ ಬಿಡುಗಡೆಗೊಳಿಸುವಂತೆ ಮತ್ತು ಅವರ ಮೇಲಿನ NSA ಪ್ರಕರಣ ಕೈಬಿಡುವಂತೆ ನಿನ್ನೆ ಆದೇಶಿಸಿತ್ತು.

ಏನೂ ಅಪರಾಧ ಮಾಡದ ನನ್ನ ಮಗನನ್ನು 8 ತಿಂಗಳು ಜೈಲಿನಲ್ಲಿ ಕೂಡಿ ಹಾಕಲಾಯಿತು. ಇಂದು ಕೊನೆಗೂ ಆತನನ್ನು ಮುಟ್ಟುವ, ಅಪ್ಪುವ ಅವಕಾಶ ನಮಗೆ ಸಿಕ್ಕಿದೆ ಎಂದು ಅವರ ತಾಯಿ ತಿಳಿಸಿದ್ದಾರೆ.

2017ರಲ್ಲಿ ಗೋರಖ್ ಪುರದ ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆ ಆಕ್ಸಿಜನ್ ಕೊರತೆ ದುರಂತ ಪ್ರಕರಣದಲ್ಲಿ ಕಫೀಲ್‌ ಖಾನ್‌ ಅಮಾನತು ಮತ್ತು 9 ತಿಂಗಳ ಜೈಲುವಾಸಕ್ಕೆ ಒಳಗಾಗಿದ್ದರು. ಬಿಆರ್‌ಡಿ ವೈದ್ಯಕೀಯ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ಮತ್ತು ವೈದ್ಯಕೀಯ ನಿರ್ಲಕ್ಷ್ಯದ ಆರೋಪ ಡಾ.ಕಫೀಲ್ ಅವರ ಮೇಲಿತ್ತು. ಆದರೆ ನ್ಯಾಯಾಲಯ ಅವರು ಅಮಾಯಕರು ಮತ್ತು ಉದ್ದೇಶಪೂರ್ವಕವಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿ ಪ್ರಕರಣ ಕೈಬಿಟ್ಟಿತ್ತು. ಆದರೂ ಉತ್ತರ ಪ್ರದೇಶದ ಯೋಗಿ ಸರ್ಕಾರ ಡಾ.ಕಫೀಲ್ ಖಾನ್‌ ಮೇಲೆ ಮರು ತನಿಖೆ ನಡೆಸುವುದಾಗಿ ಹೇಳಿದೆ.

ಈಗಲೂ ಸಹ ಸಿಎಎ ವಿರೋಧಿ ಹೋರಾಟಗಳು ಉತ್ತುಂಗದಲ್ಲಿದ್ದಾಗ 2019 ರ ಡಿಸೆಂಬರ್ 13 ರಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದ ಮೇಲೆ ಡಾ.ಕಫೀಲ್‌ ಖಾನ್ ಅವರನ್ನು ಜನವರಿಯಲ್ಲಿ ಮುಂಬೈನಲ್ಲಿ ಬಂಧಿಸಲಾಗಿತ್ತು.

ಒಬ್ಬ ಜನಾನುರಾಗಿ ಯುವ ವೈದ್ಯನ ವಿರುದ್ಧ ಕ್ಲುಲಕ ವಿಚಾರಗಳನ್ನಿಟ್ಟುಕೊಂಡು, ಆತ ಅನ್ಯ ಧರ್ಮೀಯ ಎಂಬ ಕಾರಣಕ್ಕೆ ಯೋಗಿ ಸರ್ಕಾರವು ಇಲ್ಲಸಲ್ಲದ ಕೇಸುಗಳನ್ನು ಹಾಕಿ ಜೈಲಿಗೆ ಅಟ್ಟುತ್ತಿದೆ ಎಂದು ಆರೋಪ ಪ್ರಗತಿಪರ ವಲಯದಲ್ಲಿ ಕೇಳಿಬಂದಿದೆ.

ಈಗ ಬಿಡುಗಡೆಯಾಗಿರುವ ಕಫೀಲ್ ಖಾನ್ ದೇಶಸೇವೆ ಸಿದ್ದನಿರುವುದಾಗಿ ಘೋಸಿಷಿದ್ದಾರೆ. ಜನವರಿಯಲ್ಲಿಯೂ ಸಹ ಕೊರೊನಾ ಪ್ರಕರಣಗಳು ಆರಂಭವಾಗಿದ್ದಾಗ ತಾನು ವೈದ್ಯನಾಗಿ ಕೊರೊನಾ ವಿರುದ್ಧ ಕೆಲಸ ಮಾಡುತ್ತೇನೆ ಎಂದು ಕಫೀಲ್ ಖಾನ್ ಹೇಳಿದ್ದರು.


ಇದನ್ನೂ ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

Also Read: Dr. Kafeel Khan released at midnight: thankful to Judiciary and people of India

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...