Homeಮುಖಪುಟಕೈ ಮುಗಿದು, ತಲೆಬಾಗಿ ರೈತರೊಡನೆ ಚರ್ಚಿಸಲು ಸಿದ್ದನಿದ್ದೇನೆ: ನರೇಂದ್ರ ಮೋದಿ

ಕೈ ಮುಗಿದು, ತಲೆಬಾಗಿ ರೈತರೊಡನೆ ಚರ್ಚಿಸಲು ಸಿದ್ದನಿದ್ದೇನೆ: ನರೇಂದ್ರ ಮೋದಿ

ತಮ್ಮ ಮಾತಿನ ನಡುವೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು, "ಈ ಕೃಷಿ ಕಾಯ್ದೆಗಳಿಂದ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಳೆದುಹೋಗುತ್ತದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳಾಗಿದೆ" ಎಂದಿದ್ದಾರೆ.

- Advertisement -
- Advertisement -

ಕೇಂದ್ರದ 3 ವಿವಾದಾತ್ಮಕ ಕಾಯ್ದೆಗಳನ್ನು ಮತ್ತೆ ಸಮರ್ಥಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ “ಕೈ ಮುಗಿದು, ತಲೆಬಾಗಿ ರೈತರೊಡನೆ ಎಲ್ಲಾ ವಿಷಯಗಳನ್ನು ಚರ್ಚಿಸಲು ಸಿದ್ದನಿದ್ದೇನೆ” ಎಂಬ ಭಾವನಾತ್ಮಕ ಮಾತುಗಳನ್ನಾಡಿದ್ದಾರೆ.

ಒಂದು ಗಂಟೆಗೂ ಹೆಚ್ಚು ಕಾಲ ಮಧ್ಯಪ್ರದೇಶದ ರೈತರೊಂದಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಿದ ಅವರು, “ಈ ಕಾಯ್ದೆಗಳನ್ನು ತರಾತುರಿಯಲ್ಲಿ ಸಂಸತ್ತಿನಲ್ಲಿ ಅಂಗೀಕರಿಸಿಲ್ಲ, ಬದಲಿಗೆ ದಶಕಗಳ ಕಾಲ ಚರ್ಚೆ ನಡೆಸಿದ್ದೇವೆ” ಎಂದಿದ್ದಾರೆ.

ಕೃಷಿ ಕಾಯ್ದೆಗಳಿಂದ ಏನೆಲ್ಲಾ ಉಪಯೋಗ ಎಂದು ಮತ್ತೊಮ್ಮೆ ವಿವರಿಸಿರುವ ಮೋದಿ, ‘ರೈತರ ಕಲ್ಯಾಣವೇ ನಮ್ಮ ಸರ್ಕಾರದ ಅತಿ ಮುಖ್ಯ ಆದ್ಯತೆ. ನೂತನ ಕೃಷಿ ಕಾಯ್ದೆಗಳ ಸುತ್ತಲಿನ ಸುಳ್ಳುಗಳನ್ನು ನಂಬಬೇಡಿ. ಇದೆಲ್ಲದರ ಆಚೆಗೆ ಕೈ ಮುಗಿದು, ತಲೆಬಾಗಿ ರೈತರು ಏನು ಹೇಳುತ್ತಾರೆ ಎಲ್ಲವನ್ನು ಕೇಳಲು ಸಿದ್ದನಿದ್ದೇನೆ. ಅವರ ಅಭ್ಯುದಯವೇ ನಮ್ಮ ಪ್ರಧಾನ ಕರ್ತವ್ಯ’ ಎಂದು ಹೇಳಿದ್ದಾರೆ.

ತಮ್ಮ ಮಾತಿನ ನಡುವೆ ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿರುವ ಅವರು, “ಈ ಕೃಷಿ ಕಾಯ್ದೆಗಳಿಂದ ಕನಿಷ್ಟ ಬೆಂಬಲ ಬೆಲೆ (ಎಂಎಸ್‌ಪಿ) ಕಳೆದುಹೋಗುತ್ತದೆ ಎಂದು ಹೇಳುತ್ತಿರುವುದು ಅತ್ಯಂತ ದೊಡ್ಡ ಸುಳ್ಳಾಗಿದೆ” ಎಂದಿದ್ದಾರೆ.

“ಈ ಕಾಯ್ದೆಗಳನ್ನು ರಾತ್ರೋರಾತ್ರಿ ತಂದಿದ್ದಲ್ಲ. ಈ ಕುರಿತು ದಶಕಗಳ ಕಾಲ ಚರ್ಚಿಸಲಾಗಿದೆ. ಕಳೆದ 22 ವರ್ಷಗಳಿಂದ ಎಲ್ಲಾ ರಾಜ್ಯ ಸರ್ಕಾರಗಳು ಈ ಕುರಿತು ಚರ್ಚಿಸಿವೆ. ರೈತ ಸಂಘಟನೆಗಳು, ಕೃಷಿ ತಜ್ಞರು, ಆರ್ಥಶಾಸ್ತ್ರಜ್ಞರು, ವಿಜ್ಞಾನಿಗಳು ಸೇರಿ ಚರ್ಚೆ ನಡೆಸಿದ್ದಾರೆ. ಈ ಕಾಯ್ದೆಗಳು ಬೇಕೆಂದು ರೈತರು ಆಗ್ರಹಿಸಿದ್ದಾರೆ. ಈ ಕಾಯ್ದೆಗಳನ್ನು ವಿರೋಧಿಸುತ್ತಿರುವ ವಿರೋಧ ಪಕ್ಷಗಳ ಚುನಾವಣಾ ಪ್ರಣಾಳಿಕೆಯಲ್ಲಿಯೂ ಇದೇ ಅಂಶಗಳಿವೆ. ಆ ಪಕ್ಷಗಳಿಗೆ ಇಂದು ನೋವಾಗಿದೆ. ನಾವು ತರಲಾಗದ್ದನ್ನು ಮೋದಿ ಹೇಗೆ ತರುತ್ತಾರೆ ಎಂದು ಅವರು ಕೇಳಿಕೊಳ್ಳುತ್ತಿದ್ದಾರೆ. ಮೋದಿ ಏಕೆ ಇದರ ಲಾಭ ಪಡೆಯಬೇಕೆಂಬುದು ಅವರ ಹುನ್ನಾರ. ನಾನು ಇದರ ಲಾಭ ಪಡೆಯುವುದಿಲ್ಲ. ಲಾಭವನ್ನು ನಿಮಗೆ ಮತ್ತು ನಿಮ್ಮ ಪ್ರಣಾಳಿಕೆಗಳಿಗೆ ನೀಡುತ್ತೇನೆ. ನನಗೆ ರೈತರ ಅಭ್ಯುದಯ ಮುಖ್ಯ. ಸುಳ್ಳು ಹರಡುವುದನ್ನು ನಿಲ್ಲಿಸಿ” ಎಂದು ಮೋದಿ ಹೇಳಿದ್ದಾರೆ.

ಪ್ರಪಂಚದ ರೈತರು ಅತ್ಯಾಧುನಿಕ ತಂತ್ರಜ್ಞಾನದಿಂದ ಮುಂದುವರೆಯುತ್ತಿರುವಾಗ ನಮ್ಮ ದೇಶದ ರೈತರನ್ನು ಹಿಂದುಳಿಯಲು ನಾವು ಬಿಡುವುದಿಲ್ಲ. ಈ ಕುರಿತು ಪ್ರತಿಪಕ್ಷಗಳು ಹೇಳುವ ಸುಳ್ಳುಗಳನ್ನು ನಂಬಬೇಡಿ. ಅವರು ಸ್ವಾಮಿನಾಥನ್ ವರದಿಯನ್ನು ಜಾರಿಗೊಳಿಸಲಿಲ್ಲ. ನಮ್ಮ ಸರ್ಕಾರ ಸ್ವಾಮಿನಾಥನ್ ವರದಿಯ ಶಿಫಾರುಸ್ಸುಗಳನ್ನು ಜಾರಿ ಮಾಡಿದೆ. ಮಧ್ಯಪ್ರದೇಶದ ಜನರಿಗೆ ಅವರ ಬಗ್ಗೆ ಚೆನ್ನಾಗಿ ತಿಳಿಸಿದೆ. ಅವರು ಅಧಿಕಾರಕ್ಕೆ ಬಂದರೆ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದ್ದರು. ಅದರ ಪ್ರಯೋಜನ ನಿಮಗೆ ಸಿಕ್ಕಿದೆಯೇ ಎಂದು ಮೋದಿ ಪ್ರಶ್ನಿಸಿದ್ದಾರೆ.


ಇದನ್ನೂ ಓದಿ : ‘ಕೃಷಿ ಸುಧಾರಣೆಯಲ್ಲಿ ಜಾತಿ ವಿನಾಶದ ಬೀಜಗಳಿವೆ’ – ಕೃಷಿ ಕುರಿತ ಅಂಬೇಡ್ಕರ್ ಚಿಂತನೆಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. ಕಪಟ ಭಾವನಾತ್ಮಕತೆಯೇ ಇವರ ರಾಜಕೀಯ ಬಂಡವಾಳ. ಬಡ ರೈತರ ನೋವಿಗೆ ಸ್ಪಂದಿಸುವ ನಿಷ್ಕಲ್ಮಷ ಉದ್ದೇಶ ಇವರಿಗಿದ್ದಿದ್ದರೆ ಇಷ್ಟು ದಿನ ರೈತರನ್ನು ಬೀದಿಯಲ್ಲಿ ನಿಲ್ಲಿಸಿ ಸತಾಯಿಸುವ, ಅವಮಾನಿಸುವ, ಅವರ ಘನತೆಗೆ ಮಾತ್ರವಲ್ಲ ಜೀವಕ್ಕೆ ಧಕ್ಕೆತರುವ ಅಗತ್ಯವಿತ್ತೇ?

  2. I don’t know how much pm as paid the amt to the media people all the positive news giving to public people .they not showing the problems wat people are facing right now roads street lights water hospitals …. simply they announce the sceams and they leave that and 10 to 15 people will get that offer wat pm give media people will show that 15 people who have received the offer for 3 o 5days if some who not received if is asked they will tell oppasion party or media won’t let that person to speak if front of the public they will change the topic then people wil forget it .I am looking for right media who fight for right .

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...