Homeಮುಖಪುಟಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

ಕಾನೂನು ರೀತಿಯ ಹೋರಾಟದ ಜತೆಗೆ ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಜಮೀನಿನ ವಿವಾದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ದೂರಿನ ಆಧಾರದ ಮೇಲೆ ಪೊಲೀಸ್ ಮೊಕದ್ದಮೆ ದಾಖಲಿಸಬೇಕು ಎಂದು ವಿಚಾರಣಾ ನ್ಯಾಯಾಲಯವು ಹೇಳಿದ ಬೆನ್ನಲ್ಲೇ, “ನಾನು ಹೋರಾಟ ಮಾಡುತ್ತೇನೆ, ನಾನು ಯಾವುದಕ್ಕೂ ಹೆದರುವುದಿಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪ್ರತಿಕ್ರಿಯಿಸಿದ್ದಾರೆ.

“ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರು ಲೋಕಾಯುಕ್ತಕ್ಕೆ ತನಿಖೆಗೆ ಆದೇಶ ನೀಡಿರುವ ವಿಚಾರ ಮಾಧ್ಯಮಗಳ ಮೂಲಕ ತಿಳಿಯಿತು. ಆದೇಶದ ಪೂರ್ಣ ಪ್ರತಿ ಓದಿ ವಿಸ್ತೃತವಾಗಿ ಪ್ರತಿಕ್ರಿಯೆ ನೀಡುತ್ತೇನೆ.
ಕಾನೂನು ರೀತಿಯ ಹೋರಾಟ ಮಾಡಲು, ತನಿಖೆ ಎದುರಿಸಲು ನಾನು ಸಿದ್ಧನಾಗಿದ್ದೇನೆ. ಈ ಮಾತನ್ನು ನಿನ್ನೆಯೂ ಹೇಳಿದ್ದೆ, ಅದನ್ನೆ ಈಗಲೂ ಪುನರುಚ್ಚರಿಸುತ್ತಿದ್ದೇನೆ. ತನಿಖೆಗೆ ಹೆದರುವ ಪ್ರಶ್ನೆ ಇಲ್ಲ, ಎಲ್ಲವನ್ನು ಎದುರಿಸಲು ನಿರ್ಧರಿಸಿದ್ದೇನೆ. ಕಾನೂನು ಪರಿಣಿತರ ಜೊತೆ ಚರ್ಚೆ ಮಾಡಿ ಮುಂದಿನ ನಡೆಯ ಬಗ್ಗೆ ನಿರ್ಧಾರ ಮಾಡುತ್ತೇನೆ” ಎಂದು ಅವರು ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ ಪೋಸ್ಟ್‌ ಮಾಡಿದ್ದಾರೆ.

ಆದರೆ, ಮುಖ್ಯಮಂತ್ರಿ ವಿರುದ್ಧದ ಪ್ರಕರಣ ದಾಖಲಿಸಿರುವ ಸಾಮಾಜಿಕ ಕಾರ್ಯಕರ್ತ ಅಸಮಾಧಾಣ ವ್ಯಕ್ತಪಡಿಸಿದ್ದಾರೆ. “ತೀರ್ಪಿನಿಂದ ಸಂಪೂರ್ಣವಾಗಿ ತೃಪ್ತರಾಗಿಲ್ಲ, ತನಿಖೆಯನ್ನು ಸಿಬಿಐನಿಂದ ಮಾತ್ರ ಮಾಡಬೇಕು” ಎಂದು ಅವರು ಹೇಳಿದ್ದಾರೆ. “ಲೋಕಾಯುಕ್ತದಿಂದ ತನಿಖೆ ನಡೆಯಲಿದೆ ಎಂದು ನ್ಯಾಯಾಲಯ ಹೇಳಿದೆ. ಆದರೆ, ಎಫ್‌ಐಆರ್ ದಾಖಲಾದ ನಂತರ ನಾವು ಕರ್ನಾಟಕ ಹೈಕೋರ್ಟ್ ಅನ್ನು ಸಂಪರ್ಕಿಸುತ್ತೇವೆ” ಎಂದು ಅವರು ಘೋಷಿಸಿದರು.

ಮುಖ್ಯಮಂತ್ರಿಗಳು ಈಗ ತಮ್ಮ ಪತ್ನಿ ಪಾರ್ವತಿ ಅವರಿಗೆ ಮೈಸೂರು ಪ್ರದೇಶದಲ್ಲಿನ ಬಹುಪಾಲು ಭೂಮಿಯನ್ನು ಬೇರೆಡೆ ಭೂಮಿಗೆ ಪರಿಹಾರವಾಗಿ ಮಂಜೂರು ಮಾಡಿದ್ದಾರೆ ಎಂಬ ಆರೋಪದ ಬಗ್ಗೆ ತನಿಖೆಯನ್ನು ಎದುರಿಸಬೇಕಾಗುತ್ತದೆ. ಈ ವಿನಿಮಯದಿಂದ ರಾಜ್ಯಕ್ಕೆ ಕನಿಷ್ಠ ₹4,000 ಕೋಟಿ ನಷ್ಟವಾಗಿದೆ ಎಂದು ದೂರುದಾರರು ವಾದಿಸಿದ್ದಾರೆ.

ತಮ್ಮ ಮೇಳಿನ ಆರೋಪವನ್ನು ಬಲವಾಗಿ ನಿರಾಕರಿಸಿದ ಸಿದ್ದರಾಮಯ್ಯ, ಕಳೆದ ತಿಂಗಳು ಅವರು ನಾಲ್ಕು ದಶಕಗಳ ಕಾಲದ ರಾಜಕೀಯ ಜೀವನದಲ್ಲಿ ಯಾವುದೇ ಅಕ್ರಮ ಮಾಡಿಲ್ಲ. ನ್ಯಾಯಾಂಗವು ತಮ್ಮನ್ನು ಆರೋಪದಿಂದ ಮುಕ್ತಗೊಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮುಡಾ ಪ್ರಕರಣದಲ್ಲಿ ಅವರಿಗೆ ಇದು ಎರಡನೇ ಹಿನ್ನಡೆಯಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಅವರ ಸವಾಲನ್ನು ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ತನ್ನ ಆದೇಶವನ್ನು ಅಂಗೀಕರಿಸುವಲ್ಲಿ, ಹೈಕೋರ್ಟ್ ತನ್ನ ಆಗಸ್ಟ್ 19 ರ ಆದೇಶವನ್ನು ವಿಚಾರಣಾ ನ್ಯಾಯಾಲಯಕ್ಕೆ ಹಿಂತಿರುಗಿಸಿತು. ಗೆಹ್ಲೋಟ್ ಅವರ ಕ್ರಮವನ್ನು “ಅಕ್ರಮ” ಎಂದು ಪ್ರತಿಪಾದಿಸುವ ಅವರ ಅರ್ಜಿಯನ್ನು ಇತ್ಯರ್ಥಪಡಿಸುವವರೆಗೆ ಮುಖ್ಯಮಂತ್ರಿಯ ವಿರುದ್ಧ ಕ್ರಮ ತೆಗೆದುಕೊಳ್ಳಬಾರದು ಎಂದು ಸೂಚನೆ ನೀಡಿತ್ತು.

ಆದೇಶದ ನಂತರ ಸಿದ್ದರಾಮಯ್ಯ ಅವರು ನ್ಯಾಯಾಂಗ ವ್ಯವಸ್ಥೆಯಲ್ಲಿ ತಮ್ಮ ವಿಶ್ವಾಸವನ್ನು ಒತ್ತಿಹೇಳಿದರು. ಭಾರತೀಯ ಜನತಾ ಪಕ್ಷದ ಸೇಡಿನ ರಾಜಕೀಯವನ್ನು ಕಟುವಾಗಿ ಟೀಕಿಸಿದರು. “ನಾನು ಕಾನೂನಿನಲ್ಲಿ ನಂಬಿಕೆ ಇಡುತ್ತೇನೆ; ಸತ್ಯವು ಅಂತಿಮವಾಗಿ ಗೆಲ್ಲುತ್ತದೆ” ಎಂದು ನಿನ್ನೆ ನಡೆದ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

ಇದನ್ನೂ ಓದಿ;

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಟೋಲ್ ಪ್ಲಾಜಾಗಳಲ್ಲಿನ ಅಶುಚಿತ್ವ ಶೌಚಾಲಯಗಳ ಬಗ್ಗೆ ವರದಿ ಮಾಡಿದರೆ ಬಹುಮಾನ: ಕೇಂದ್ರ ಸರ್ಕಾರ

ರಾಷ್ಟ್ರೀಯ ಹೆದ್ದಾರಿಗಳಲ್ಲಿನ ನೈರ್ಮಲ್ಯದ ಬಗ್ಗೆ ದೀರ್ಘಕಾಲದ ಕಳವಳಗಳನ್ನು ಪರಿಹರಿಸುವ ಪ್ರಯತ್ನದಲ್ಲಿ, ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ (MoRTH) ಟೋಲ್ ಪ್ಲಾಜಾಗಳಲ್ಲಿ ಅಶುಚಿಯಾದ ಶೌಚಾಲಯ ಸೌಲಭ್ಯಗಳ ಬಗ್ಗೆ ವರದಿ ಮಾಡಲು ಪ್ರಯಾಣಿಕರನ್ನು ಪ್ರೋತ್ಸಾಹಿಸುವ...

ಮಣಿಪುರ: ಬಾಂಬ್ ದಾಳಿಗೆ ಇಬ್ಬರು ಮಕ್ಕಳು ಬಲಿ; ಕುಕಿ ದಂಗೆಕೋರರಿಂದ ದಾಳಿ ಆರೋಪ; ಇದು ಅನಾಗರಿಕ ಕೃತ್ಯ ಎಂದ ಸಿಎಂ 

ಗುವಾಹಟಿ: ಮಣಿಪುರದ ಮೈತೇಯಿ ಪ್ರಾಬಲ್ಯದ ಬಿಷ್ಣುಪುರ ಜಿಲ್ಲೆಯಲ್ಲಿ ಮಂಗಳವಾರ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಘಟನೆಯಲ್ಲಿ ಐದು ತಿಂಗಳ ಗಂಡು ಮಗು ಸೇರಿದಂತೆ ಇಬ್ಬರು ಅಪ್ರಾಪ್ತ ವಯಸ್ಕರು ಸಾವನ್ನಪ್ಪಿರುವ ಘಟನೆ ನಡೆದಿದೆ.  ಮೊಯಿರಾಂಗ್...

ಮುಖ್ಯ ಚುನಾವಣಾ ಆಯುಕ್ತರ ಪದಚ್ಯುತಿಗೆ ವಿಪಕ್ಷಗಳಿಂದ ನೋಟಿಸ್‌ : ಕಾರಣ ನೀಡದೆ ತಿರಸ್ಕರಿಸಿದ ಸಂಸತ್ತಿನ ಉಭಯ ಸದನಗಳ ಮುಖ್ಯಸ್ಥರು-ವರದಿ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸಲು ವಿಪಕ್ಷ ಸಂಸದರು ಸಲ್ಲಿಸಿದ್ದ ನಿಲುವಳಿ ನೋಟಿಸ್ ಅನ್ನು ರಾಜ್ಯಸಭಾ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಮತ್ತು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ತಿರಸ್ಕರಿಸಿದ್ದಾರೆ. ಉಭಯ...

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...