ಕೊರೊನಾ

ಕೊರೊನಾ ಸಾಂಕ್ರಾಮಿಕದ ವಿರುದ್ಧ ಹೋರಾಡುವಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವಿನ ಸಮನ್ವಯವು ಒಕ್ಕೂಟ ವ್ಯವಸ್ಥೆಗೆ ಉತ್ತಮ ಉದಾಹರಣೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಜನವರಿ 16 ರಿಂದ ಪ್ರಾರಂಭವಾಗಲಿರುವ ಲಸಿಕೆ ಅಭಿಯಾನ ಆರಂಭದ ಕುರಿತು ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸಿದ ನಂತರ ಅವರು ಮಾತನಾಡಿದರು.

“ಕೊರೊನಾ ಬಿಕ್ಕಟ್ಟಿನಲ್ಲಿ ಒಗ್ಗೂಡಿ ಕೆಲಸ ಮಾಡುವ ಮೂಲಕ ನಾವು ಒಟ್ಟಾಗಿ ಕೆಲಸ ಮಾಡಿದ್ದೇವೆ ಎಂದು ನನಗೆ ತೃಪ್ತಿ ಇದೆ. ತ್ವರಿತ ನಿರ್ಧಾರಗಳನ್ನು ಪೂರ್ಣ ಸಂವೇದನೆಯೊಂದಿಗೆ ತೆಗೆದುಕೊಳ್ಳಲಾಗಿದೆ. ಇದರ ಪರಿಣಾಮವಾಗಿ, ಕೊರೊನಾವು ವಿಶ್ವದಲ್ಲಿ ಬೇರೆಡೆ ಹರಡಿದ ಪ್ರಮಾಣದಷ್ಟು ಭಾರತದಲ್ಲಿ ಹರಡಲಿಲ್ಲ” ಎಂದು ಪ್ರಧಾನಿ ಮೋದಿ ಹೇಳಿದರು.

ಈಗಾಗಲೇ ಅನುಮೋದಿತವಾಗಿರುವ ಎರಡು ಭಾರತ ನಿರ್ಮಿತ ಲಸಿಕೆಗಳಲ್ಲದೆ, ಇನ್ನೂ ನಾಲ್ಕು ಲಸಿಕೆಗಳನ್ನು ದೇಶದಲ್ಲಿ ಹೊರತರಲು ಸಿದ್ಧವಾಗಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಇನ್ನೂ ಸಮಯವಿದೆ ಮೋದಿಜಿ…! – ಪ್ರಧಾನಿಯವರಲ್ಲಿ ಮನವಿ ಮಾಡಿದ ರಾಹುಲ್ ಗಾಂಧಿ

“ಮೊದಲಿಗೆ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗುವುದು. ಪೌರ ಕಾರ್ಮಿಕರು, ಇತರ ಮುಂಚೂಣಿಯ ಕಾರ್ಮಿಕರು, ರಕ್ಷಣಾ ಪಡೆಗಳು, ಪೊಲೀಸ್ ಮತ್ತು ಇತರ ಅರೆಸೈನಿಕ ಪಡೆಗಳಿಗೆ ಮೊದಲ ಹಂತದಲ್ಲಿ ಲಸಿಕೆ ನೀಡಲಾಗುವುದು” ಎಂದು ಪ್ರಧಾನಿ ಮೋದಿ ಹೇಳಿದರು.

ಕಾರ್ಮಿಕರ ಸಾವು
ಕೊರೊನಾ ಸಮಯದಲ್ಲಿ ಮೋದಿ ಸರ್ಕಾರದ ಆದೇಶದಂತೆ ಲಾಕ್‌ಡೌನ್ ಆದಾಗ ಕಷ್ಟಪಟ್ಟ ವಲಸೆ ಕಾರ್ಮಿಕರು

“ಮೊದಲ ಹಂತದ ವ್ಯಾಕ್ಸಿನೇಷನ್‌ನಲ್ಲಿ ಸುಮಾರು ಮೂರು ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಮಿಕರಿಗೆ ಲಸಿಕೆ ನೀಡಲಾಗುವುದು. ಎರಡನೇ ಹಂತದಲ್ಲಿ 50 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುವುದು” ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ: ದೇಶದ ಪ್ರಧಾನಿ ರಾಹುಲ್ ಗಾಂಧಿಯೋ, ಮೋದಿಯೋ?: ಸುವರ್ಣ ನ್ಯೂಸ್, ಕನ್ನಡಪ್ರಭ ವಿರುದ್ಧ ಸ್ಪೋಟಗೊಂಡ ಆಕ್ರೋಶ

ಭಾರತದ ಔಷಧ ನಿಯಂತ್ರಕದಿಂದ ನಿರ್ಬಂಧಿತ ತುರ್ತು ಬಳಕೆಗಾಗಿ ಎರಡು ಕೊರೊನಾ ವೈರಸ್ ಲಸಿಕೆಗಳನ್ನು ಅನುಮೋದಿಸಿದ ನಂತರ ಮೋದಿಯು ಮುಖ್ಯಮಂತ್ರಿಗಳೊಂದಿಗೆ ನಡೆಸಿದ ಮೊದಲ ಸಂವಾದ ಇದು. ದೇಶದಲ್ಲಿ ಸಾಂಕ್ರಾಮಿಕ ರೋಗ ಹರಡಿದ ನಂತರ ಪ್ರಧಾನಿಯು ಹಲವಾರು ಭಾರಿ ಮುಖ್ಯಮಂತ್ರಿಗಳೊಂದಿಗೆ ಮಾತನಾಡಿದ್ದಾರೆ.

ಭಾರತದ ಔಷಧ ನಿಯಂತ್ರಕವು ಸೀರಮ್ ಇನ್‌ಸ್ಟಿಟ್ಯೂಟ್ ತಯಾರಿಸುತ್ತಿರುವ ಆಕ್ಸ್‌ಫರ್ಡ್ ಲಸಿಕೆ ಕೊವಿಶೀಲ್ಡ್  ಮತ್ತು ಭಾರತ್ ಬಯೋಟೆಕ್‌ನ ಕೋವಾಕ್ಸಿನ್ ಅನ್ನು ದೇಶದಲ್ಲಿ ನಿರ್ಬಂಧಿತ ತುರ್ತು ಬಳಕೆಗಾಗಿ ಅನುಮತಿ ನೀಡಿದೆ. ಕಳೆದ ವಾರ ಶನಿವಾರ, ಮೋದಿ ಉನ್ನತ ಮಟ್ಟದ ಸಭೆಯಲ್ಲಿ ಕೊರೊನಾ ಸ್ಥಿತಿ ಮತ್ತು ಲಸಿಕೆ ಸಿದ್ಧತೆಯನ್ನು ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರಿಶೀಲಿಸಿದ್ದರು.

ಇದನ್ನು ವಿಶ್ವದ ಅತಿದೊಡ್ಡ ಇನಾಕ್ಯುಲೇಷನ್ ಕಾರ್ಯಕ್ರಮ ಎಂದು ಪ್ರಧಾನಿ ಕರೆದಿದ್ದಾರೆ.

ಇದನ್ನೂ ಓದಿ: ಇದು ಮೋದಿ ಸರ್ಕಾರದ ಮತ್ತೊಂದು ಐತಿಹಾಸಿಕ ವಿಕಾಸ: ರಾಹುಲ್‌ ಗಾಂಧಿ ವ್ಯಂಗ್ಯ

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
Avatar
ನಾನು ಗೌರಿ ಡೆಸ್ಕ್
+ posts

LEAVE A REPLY

Please enter your comment!
Please enter your name here