Homeಮುಖಪುಟನನ್ನ ಸಹೋದರರ ಸಾವಿನ ಸುದ್ದಿಯಿಂದ ಆಘಾತಗೊಂಡಿದ್ದೇನೆ: ರಾಹುಲ್ ಗಾಂಧಿ

ನನ್ನ ಸಹೋದರರ ಸಾವಿನ ಸುದ್ದಿಯಿಂದ ಆಘಾತಗೊಂಡಿದ್ದೇನೆ: ರಾಹುಲ್ ಗಾಂಧಿ

- Advertisement -
- Advertisement -

ಮಹಾರಾಷ್ಟ್ರದ ಔರಂಗಾಬಾದ್ ಜಿಲ್ಲೆಯಲ್ಲಿ ಇಂದು ಮುಂಜಾನೆ 16 ವಲಸೆ ಕಾರ್ಮಿಕರ ಮೇಲೆ ಸರಕು ರೈಲು ಚಲಿಸಿ ಮೃತಪಟ್ಟಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೇಸರ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ಟ್ವೀಟ್ ಮಾಡಿದ ರಾಹುಲ್ ಗಾಂಧಿ “ನನ್ನ ಕಾರ್ಮಿಕ ಸಹೋದರರ ಸಾವಿನ ಸುದ್ದಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ” ಎಂದಿದ್ದಾರೆ.

ಇಂದು ಬೆಳಿಗ್ಗೆ ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ರೈಲ್ವೇ ಹಳಿಗಳಲ್ಲಿ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಸರಕುಗಳ ರೈಲು ಹರಿದ ಪರಿಣಾಮ 16 ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಈ ದುರ್ಘಟನೆಯಲ್ಲಿ 4 ಜನರು ಗಾಯಗೊಂಡಿದ್ದು ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

“ಸರಕುಗಳ ರೈಲು ಚಲಿಸಿ ನನ್ನ ಕಾರ್ಮಿಕರು ಸಹೋದರರ ಸಾವಿನ ಸುದ್ದಿಯಿಂದ ನಾನು ಆಘಾತಕ್ಕೊಳಗಾಗಿದ್ದೇನೆ. ನಮ್ಮ ರಾಷ್ಟ್ರ ನಿರ್ಮಾಣಕಾರನ್ನು ನಡೆಸಿಕೊಳ್ಳುತ್ತಿರುವ ರೀತಿಗೆ ನಾವು ನಾಚಿಕೆಪಡಬೇಕು. ಸಾವಿಗೀಡಾದವರ ಕುಟುಂಬಗಳಿಗೆ ನನ್ನ ಸಂತಾಪ ಹಾಗೂ ಗಾಯಗೊಂಡವರು ಬೇಗನೆ ಚೇತರಿಕೆಯಾಗಲಿ ಎಂಬ ಪ್ರಾರ್ಥನೆ” ರಾಹುಲ್ ಗಾಂಧಿ ಹೇಳಿದ್ದಾರೆ.

ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಅವರು ವಲಸೆ ಕಾರ್ಮಿಕರ ಸಾವಿನಿಂದ ತೀವ್ರ ದುಃಖಿತರಾಗಿದ್ದರು ಮತ್ತು ಅವರ ಕುಟುಂಬಗಳಿಗೆ “ಸಾಧ್ಯವಿರುವ ಎಲ್ಲ ಬೆಂಬಲ” ನೀಡಲಾಗುವುದು ಎಂದು ಟ್ವೀಟ್ ಮಾಡಿದ್ದಾರೆ.

“ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿನ ರೈಲು ಅಪಘಾತದಿಂದಾದ ಪ್ರಾಣಹಾನಿಗೆ ತೀವ್ರ ದುಃಖಿತನಾಗಿದ್ದೇನೆ. ರೈಲ್ವೆ ಸಚಿವ ಶ್ರೀ ಪಿಯೂಷ್ ಗೋಯಲ್ ಅವರೊಂದಿಗೆ ಮಾತನಾಡಿದ್ದಾರೆ ಹಾಗೂ ಅವರು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಅಗತ್ಯವಿರುವ ಎಲ್ಲ ಸಹಾಯವನ್ನು ಒದಗಿಸಲಾಗುತ್ತಿದೆ” ಎಂದು ಪ್ರಧಾನಿ ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಮಾರ್ಚ್ 24 ರಿಂದ ಜಾರಿಯಲ್ಲಿರುವ ಲಾಕ್‌ಡೌನ್‌ನಿಂದ ಸಿಕ್ಕಿಹಾಕಿಕೊಂಡಿರುವ ಲಕ್ಷಾಂತರ ವಲಸಿಗ ಕಾರ್ಮಿಕರು ಹಾಗೂ ದಿನಗೂಲಿ ಕಾರ್ಮಿಕರು ಲಾಕ್ ಡೌನ್ ನಂತರ ತಮ್ಮ ಊರಿಗೆ ನಡೆಯುತ್ತಾ ಹೋಗುತ್ತಿರುವ ಮನಕಲುಕುವ ಘಟನೆ ದೇಶದಾದ್ಯಂತ ವರದಿಯಾಗುತ್ತಿದೆ. ಈ ಮಹಾ ನಡಿಗೆಯಲ್ಲಿ ಹಲವಾರು ಜನರು ಈ ವರೆಗೆ ಸಾವನ್ನಪ್ಪಿದ್ದಾರೆ.

ಕಳೆದ ವಾರ ಕೇಂದ್ರದ ಆಡಳಿತ ಬಿಜೆಪಿ ಪಕ್ಷಕ್ಕೆ ರಾಜಕೀಯ ಹಿನ್ನಡೆಯಾಗುತ್ತದೆ ಎಂಬ ಬಗ್ಗೆ ಪಕ್ಷದೊಳಗೆ ಮನವರಿಕೆ ಮಾಡಿದ ನಂತರ, ವಲಸಿಗರು ಮನೆಗೆ ಹಿಂತಿರುಗಲು ವಿಶೇಷ ರೈಲುಗಳನ್ನು ಓಡಿಸಲು ಕೇಂದ್ರವು ರೈಲ್ವೆಗೆ ಅನುಮತಿ ನೀಡಿತ್ತು. ಇದರ ಹೊರತಾಗಿಯೂ, ಹಲವಾರು ವಲಸಿಗರು ತಮ್ಮ ತವರು ರಾಜ್ಯಕ್ಕೆ ನಡೆಯುತ್ತಾ ಹೋಗುವುದನ್ನು ಮುಂದುವರೆಸಿದ್ದಾರೆ.


ಇದನ್ನೂ ಓದಿ: ರೈಲು ಹಳಿಗಳಲ್ಲಿ ಪ್ರಾಣಬಿಟ್ಟ 14 ವಲಸೆ ಕಾರ್ಮಿಕರು : ಮಹಾರಾಷ್ಟ್ರದ ಔರಂಗಾಬಾದ್‌ನಲ್ಲಿ ನಡೆದ ದುರ್ಘಟನೆ


ವಿಡಿಯೊ ನೋಡಿ: ಮರೆಯಲೇ ಭಾರದ ಸುದ್ದಿಗಳಿವು. ಸದ್ದು…ಈ ಸುದ್ದಿಗಳೇನಾಗಿದೆ (ನಾಲ್ಕನೇ ಸಂಚಿಕೆ)

ಸದ್ದು… ಈ ಸುದ್ದಿಗಳೇನಾದವು? – 4

ನಾವು ಕೆಲವು ಸುದ್ದಿಗಳನ್ನು ಮರೆತುಬಿಡಬೇಕೆಂದು ಬಯಸುವವರು, ಹೊಸ ಸುದ್ದಿಗಳ ರಾಶಿ ಹಾಕುತ್ತಾರೆ. ಆದರೆ, ಇಂದು ನಾವು ಕಾಣುತ್ತಿರುವ ಸಮಸ್ಯೆಗಳ ಕಾರಣ ಹಿಂದಿನ ಘಟನೆಗಳಲ್ಲಿ ಇರುತ್ತದೆ. ಹಿಂದೆ ನಡೆದ ʼಬೃಹತ್ʼ ಹಗರಣ, ಅದರ ನಂತರ ನಡೆದ ಇನ್ನೊಂದು ಭೀಕರ ಘಟನೆಯ ಕಾರಣದಿಂದ ಮರೆಯಾಗುತ್ತದೆ. ಹಾಗಾಗಿ ಮತ್ತೆ ಮತ್ತೆ ನೆನಪಿಸಿಕೊಳ್ಳುವ ಅಗತ್ಯವಿದ್ದೇ ಇದೆ.ಅಂತಹ ವಿಶಿಷ್ಟ ಕಾರ್ಯಕ್ರಮದ ನಾಲ್ಕನೇ ಕಂತು ಇಲ್ಲಿದೆ ನೋಡಿ.

Posted by Naanu Gauri on Wednesday, May 6, 2020


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...