Homeಮುಖಪುಟನಾನೇ ಕಾಂಗ್ರೆಸ್‌ನ ಪೂರ್ಣಾವಧಿ ಅಧ್ಯಕ್ಷೆ: ಸೋನಿಯಾ ಗಾಂಧಿ

ನಾನೇ ಕಾಂಗ್ರೆಸ್‌ನ ಪೂರ್ಣಾವಧಿ ಅಧ್ಯಕ್ಷೆ: ಸೋನಿಯಾ ಗಾಂಧಿ

- Advertisement -
- Advertisement -

ವಿಧಾನಸಭಾ ಚುನಾವಣೆಗಳು 2022ರಲ್ಲಿ ಎದುರಾಗಲಿವೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಪೂರ್ಣಾವಧಿ ಅಧ್ಯಕ್ಷ ನೇಮಕ ಚರ್ಚೆ ಮುನ್ನೆಲೆಗೆ ಬಂದಿತ್ತು. ದೆಹಲಿಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆ ನಡೆದಿದ್ದು, “ನಾನೇ ಪೂರ್ಣಾವಧಿ ಅಧ್ಯಕ್ಷೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

2019ರ ಲೋಕಸಭಾ ಚುನಾವಣೆ ಬಳಿಕ ರಾಹುಲ್‌ ಗಾಂಧಿ ಸೋಲಿನ ನೈತಿಕ ಹೊಣೆ ಹೊತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಬಳಿಕ ಸೋನಿಯಾ ಗಾಂಧಿಯವರು ಮಧ್ಯಂತರ ಅಧ್ಯಕ್ಷರಾಗಿ ಮುಂದುವರಿದ್ದರು. ಪೂರ್ಣಾವಧಿ ಅಧ್ಯಕ್ಷರ ಆಯ್ಕೆಗೆ ಕೂಗು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಿತು.

ಸಭೆಯ ಆರಂಭದಲ್ಲಿ ಮಾತನಾಡಿದ ಸೋನಿಯಾ ಗಾಂಧಿಯವರು, ಕಾಂಗ್ರೆಸ್‌ನ ಪೂರ್ಣಾವಧಿ ಅಧ್ಯಕ್ಷರಾಗಿ ಮುಂದುವರಿಯುವುದಾಗಿ ತಿಳಿಸಿದರು.

ಪಕ್ಷದ ಪುನರುಜ್ಜೀವನವು ಏಕತೆ, ಸ್ವಯಂ ನಿಯಂತ್ರಣ ಮತ್ತು ಶಿಸ್ತಿನ ಮೇಲೆ ಅವಲಂಬಿತವಾಗಿದೆ” ಎಂದು ಸೋನಿಯಾ ಗಾಂಧಿ ಎಚ್ಚರಿಸಿದರು.

“ಇಡೀ ಸಂಘಟನೆಯು ಕಾಂಗ್ರೆಸ್ ಪಕ್ಷದ ಪುನರುಜ್ಜೀವನವನ್ನು ಬಯಸುತ್ತದೆ” ಎಂದು ಸೋನಿಯಾ ಗಾಂಧಿ ಹೇಳಿದರು. “ನಾನು ಯಾವಾಗಲೂ ಪ್ರಾಮಾಣಿಕತೆಯನ್ನು ಮೆಚ್ಚುತ್ತೇನೆ. ಮಾಧ್ಯಮಗಳ ಮೂಲಕ ನನ್ನೊಂದಿಗೆ ಮಾತನಾಡುವ ಅಗತ್ಯವಿಲ್ಲ. ಆದ್ದರಿಂದ, ನಾವೆಲ್ಲರೂ ಮುಕ್ತ ಮತ್ತು ಪ್ರಾಮಾಣಿಕ ಚರ್ಚೆಯನ್ನು ಮಾಡೋಣ. ಆದರೆ ಈ ಕೊಠಡಿಯ ನಾಲ್ಕು ಗೋಡೆಗಳ ಹೊರಗೆ ಸಂವಹನ ಮಾಡಬೇಕಾಗಿದದ್ದು, ಕಾರ್ಯಕಾರಿ ಸಮಿತಿಯ ಸಾಮೂಹಿಕ ನಿರ್ಧಾರವಾಗಿರಲಿದೆ” ಎಂದಿದ್ದಾರೆ.

ಜಿ-23 ಎಂದೇ ಖ್ಯಾತವಾಗಿರುವ 23 ನಾಯಕರನ್ನು ಸೋನಿಯಾ ಗಾಂಧಿ ಉಲ್ಲೇಖಿಸಿದರು. ಈ ನಾಯಕರು ಪಕ್ಷದ ಸಂಘಟನೆಯ ಸಂಪೂರ್ಣ ಪರಿಷ್ಕರಣೆಗೆ ಒತ್ತಾಯಿಸಿ ಕಳೆದ ವರ್ಷ ಆಗಸ್ಟ್‌ನಲ್ಲಿ ಸೋನಿಯಾ ಗಾಂಧಿಯವರಿಗೆ ಪತ್ರ ಬರೆದಿದ್ದರು. ಪಕ್ಷಕ್ಕೆ ಸಕ್ರಿಯ ಅಧ್ಯಕ್ಷರ ಅಗತ್ಯವಿದೆ ಎಂದು ಜಿ -23 ನಾಯಕರು ಪದೇ ಪದೇ ಹೇಳಿದ್ದರು.

“ಕಳೆದ ಎರಡು ವರ್ಷಗಳಲ್ಲಿ, ನಮ್ಮ ಸಹೋದ್ಯೋಗಿಗಳು, ವಿಶೇಷವಾಗಿ ಕಿರಿಯರು, ಪಕ್ಷದ ನೀತಿಗಳು ಮತ್ತು ಕಾರ್ಯಕ್ರಮಗಳನ್ನು ಜನರಲ್ಲಿಗೆ ಕೊಂಡೊಯ್ಯುವಲ್ಲಿ ಮುಂದಾಳತ್ವ ವಹಿಸಿದ್ದಾರೆ. ರೈತರ ಆಂದೋಲನ, ಸಾಂಕ್ರಾಮಿಕ ಸಮಯದಲ್ಲಿ ಜನರಿಗೆ ಸಹಕಾರ, ಯುವಕರು ಮತ್ತು ಮಹಿಳೆಯರಿಗೆ ಸಂಬಂಧಿಸಿದ ಸಮಸ್ಯೆಗಳು, ದಲಿತರು, ಆದಿವಾಸಿಗಳು ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳು, ಬೆಲೆ ಏರಿಕೆ, ಸಾರ್ವಜನಿಕ ವಲಯದ ನಾಶ- ಈ ವಿಚಾರವಾಗಿ ಹೋರಾಡಲಾಗಿದೆ” ಎಂದು ಸೋನಿಯಾ ಗಾಂಧಿ ಹೇಳಿದ್ದಾರೆ.

“ನಾವು ಎಂದಿಗೂ ಸಾರ್ವಜನಿಕ ಪ್ರಾಮುಖ್ಯತೆ ಮತ್ತು ಕಾಳಜಿಯ ಸಮಸ್ಯೆಗಳನ್ನು ಪರಿಹರಿಸದೆ ಬಿಡಲಿಲ್ಲ. ಡಾ.ಮನಮೋಹನ್ ಸಿಂಗ್ ಮತ್ತು ರಾಹುಲ್ ಜೀ ಅವರಂತೆ ನಾನು ಕೂಡ ಅವರನ್ನು ಪ್ರಧಾನಮಂತ್ರಿಯೊಂದಿಗೆ ಕರೆದುಕೊಂಡು ಹೋಗುತ್ತಿದ್ದೇನೆ ಎಂದು ನಿಮಗೆ ತಿಳಿದಿದೆ. ನಾನು ಸಮಾನ ಮನಸ್ಕ ರಾಜಕೀಯ ಪಕ್ಷಗಳೊಂದಿಗೆ ನಿಯಮಿತವಾಗಿ ಸಂವಹನ ನಡೆಸುತ್ತಿದ್ದೇನೆ. ನಾವು ರಾಷ್ಟ್ರೀಯ ಸಮಸ್ಯೆಗಳ ಕುರಿತು ಜಂಟಿ ಹೇಳಿಕೆಗಳನ್ನು ನೀಡಿದ್ದೇವೆ ಮತ್ತು ಸಂಸತ್ತಿನಲ್ಲಿಯೂ ನಮ್ಮ ಕಾರ್ಯತಂತ್ರವನ್ನು ಸಂಯೋಜಿಸಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ, ಪ್ರಧಾನ ಕಾರ್ಯದರ್ಶಿ ಸೋನಿಯಾ ಗಾಂಧಿ, ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌, ಛತ್ತೀಸ್‌ಘಡದ ಮುಖ್ಯಮಂತ್ರಿ ಭೂಪೇಶ್ ಭಾಗೇಲ್‌, ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌‌ ಚನ್ನಿ, ಹಿರಿಯ ನಾಯಕರಾದ ಗುಲಾಮ್‌ ನಬಿ ಆಜಾದ್‌‌, ಆನಂದ್ ಶರ್ಮ ಹಾಜರಿದ್ದರು.

ಮುಂದಿನ ವರ್ಷ ಚುನಾವಣೆ: ಮುಂದಿನ ವರ್ಷ ಸೆಪ್ಟೆಂಬರ್‌ನಲ್ಲಿ ಪೂರ್ಣಾವಧಿ ಅಧ್ಯಕ್ಷರ ಚುನಾವಣೆ ನಡೆಯಲಿದೆ ಎಂದು ಮೂಲಗಳು ಹೇಳಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿರಿ: ಪಟಾಕಿ ಬ್ಯಾನ್: 4 ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ತಮಿಳುನಾಡು ಸಿಎಂ ಸ್ಟಾಲಿನ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ದೆಹಲಿ ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್‌ ಜಾಮೀನು ಆದೇಶವನ್ನು ಮೇ 10ಕ್ಕೆ ಕಾಯ್ದಿರಿಸಿದ ಸುಪ್ರೀಂ...

0
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಮಧ್ಯಂತರ ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್ ಮೇ 10 ರಂದು ತನ್ನ...