Homeಮುಖಪುಟ'ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ' : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

- Advertisement -
- Advertisement -

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ ಲಭ್ಯವಿತ್ತು ಎಂದು ಪ್ರತಿಪಾದಿಸಿರುವ ರಾಹುಲ್ ಗಾಂಧಿ, ಈ ವಿಚಾರದಲ್ಲಿ ಪ್ರಕಾಶಕರು ಸುಳ್ಳು ಹೇಳುತ್ತಿದ್ದಾರೆ ಎಂದು ದೂರಿದ್ದಾರೆ. ಈ ಪುಸ್ತಕದ ಬಿಡುಗಡೆ ಮತ್ತು ಲಭ್ಯತೆಯ ಕುರಿತು ಪ್ರಕಾಶಕರು ನೀಡುತ್ತಿರುವ ಹೇಳಿಕೆಗಳು ಸತ್ಯಕ್ಕೆ ದೂರವಾಗಿವೆ ಎಂದಿದ್ದಾರೆ.

ರಾಹುಲ್ ಗಾಂಧಿಯವರು ಪ್ರಕಾಶನ ಸಂಸ್ಥೆಯಾದ ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ನೀಡಿದ ಹೇಳಿಕೆಯನ್ನು ಪ್ರಶ್ನಿಸಿದ್ದಾರೆ. ಪೆಂಗ್ವಿನ್ ಹೌಸ್ ನರವಾಣೆ ಅವರ ಪುಸ್ತಕವು ಮುದ್ರಣ ಅಥವಾ ಡಿಜಿಟಲ್ ರೂಪದಲ್ಲಿ ಎಲ್ಲಿಯೂ ಪ್ರಕಟವಾಗಿಲ್ಲ ಮತ್ತು ಸಾರ್ವಜನಿಕರಿಗೆ ಲಭ್ಯವಿಲ್ಲ ಎಂದು ಹೇಳಿದೆ. ಆದರೆ, ಇದನ್ನು ನಿರಾಕರಿಸಿದ ರಾಹುಲ್ ಗಾಂಧಿ, 2023ರಲ್ಲಿ ಜನರಲ್ ನರವಾಣೆ ಅವರು ಮಾಡಿದ್ದ ಟ್ವೀಟ್‌ ಅನ್ನು ಉಲ್ಲೇಖಿಸಿದ್ದು, “ನನ್ನ ಪುಸ್ತಕ ಈಗ ಲಭ್ಯವಿದೆ” ಎಂದು ಸ್ವತಃ ನರವಾಣೆ ಅವರೇ ತಿಳಿಸಿದ್ದರು ಎಂದು ನೆನಪಿಸಿದ್ದಾರೆ.

“ಒಂದೋ ಪ್ರಕಾಶಕರು ಸುಳ್ಳು ಹೇಳುತ್ತಿದ್ದಾರೆ, ಇಲ್ಲಾ ಮಾಜಿ ಸೇನಾ ಮುಖ್ಯಸ್ಥರು ಸುಳ್ಳು ಹೇಳುತ್ತಿರಬೇಕು; ನಾನು ಪೆಂಗ್ವಿನ್ ಸಂಸ್ಥೆಗಿಂತ ಜನರಲ್ ನರವಾಣೆ ಅವರ ಮಾತನ್ನೇ ನಂಬುತ್ತೇನೆ” ಎಂದು ರಾಹುಲ್ ಹೇಳಿದ್ದಾರೆ. ಈ ಪುಸ್ತಕವು ಅಮೆಜಾನ್‌ನಂತಹ ತಾಣಗಳಲ್ಲಿ ಲಭ್ಯವಿತ್ತು ಎಂಬುದು ರಾಹುಲ್ ಗಾಂಧಿ ಅವರ ವಾದವಾಗಿದ್ದು, ಮೋದಿ ಸರ್ಕಾರದ ಬಗೆಗಿನ ಕೆಲವು ” ಸತ್ಯಗಳನ್ನು” ಮರೆಮಾಚಲು ಈ ರೀತಿ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ

ಸಂಸತ್ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಹುಲ್ ಗಾಂಧಿ, “ನಮಸ್ಕಾರ ಸ್ನೇಹಿತರೇ.. ನನ್ನ ಪುಸ್ತಕ ಈಗ ಲಭ್ಯವಿದೆ. ಲಿಂಕ್ ಫಾಲೋ ಮಾಡಿ.. ಓದಿ ಸಂತೋಷವಾಗಿರಿ. ಜೈ ಹಿಂದ್” ಎಂದು ನರವಾಣೆ ಅವರು ಹಾಕಿದ್ದ ಸಾಮಾಜಿಕ ಮಾಧ್ಯಮ ಪೋಸ್ಟ್ ಓದಿ ಕೇಳಿಸಿದ್ದಾರೆ.

“ಇದು ಜನರಲ್ ನರವಾಣೆ ಅವರು ಮಾಡಿರುವ ಟ್ವೀಟ್. ನಾನು ಹೇಳಲು ಬಯಸುತ್ತಿರುವ ಅಂಶವೆಂದರೆ, ಇಲ್ಲಿ ಒಂದೋ ನರವಾಣೆ ಅವರು ಸುಳ್ಳು ಹೇಳುತ್ತಿರಬೇಕು ಅಥವಾ ಪೆಂಗ್ವಿನ್ ಪ್ರಕಾಶನ ಸಂಸ್ಥೆ ಸುಳ್ಳು ಹೇಳುತ್ತಿರಬೇಕು. ಇಬ್ಬರೂ ಏಕಕಾಲಕ್ಕೆ ಸತ್ಯ ಹೇಳಲು ಸಾಧ್ಯವಿಲ್ಲ. ಆದರೆ, ನಾನು ಮಾಜಿ ಸೇನಾ ಮುಖ್ಯಸ್ಥರ ಮಾತನ್ನು ನಂಬುತ್ತೇನೆ; ಅವರು ಸುಳ್ಳು ಹೇಳುತ್ತಾರೆ ಎಂದು ನಾನು ಭಾವಿಸುವುದಿಲ್ಲ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಪುಸ್ತಕ ಲಭ್ಯವಿತ್ತು ಎಂಬ ನರವಾಣೆ ಅವರ ಹಿಂದಿನ ಟ್ವೀಟ್ ಸತ್ಯವಾಗಿದ್ದರೆ, ಈಗ ಪುಸ್ತಕ ಲಭ್ಯವೇ ಇಲ್ಲ ಎನ್ನುತ್ತಿರುವ ಪ್ರಕಾಶಕರ ಮಾತು ಸುಳ್ಳಾಗಿರಬೇಕು ಎಂಬುವುದು ರಾಹುಲ್ ಗಾಂಧಿಯವರ ತರ್ಕವಾಗಿದೆ.

“ಪೆಂಗ್ವಿನ್ ಪ್ರಕಾಶನ ಸಂಸ್ಥೆಯು ಈ ಪುಸ್ತಕ ಪ್ರಕಟವಾಗಿಲ್ಲ ಎಂದು ಹೇಳುತ್ತಿದೆ. ಆದರೆ ಅದೇ ಪುಸ್ತಕವು ಅಮೆಜಾನ್‌ನಲ್ಲಿ ಲಭ್ಯವಿದೆ. ಜನರಲ್ ನರವಾಣೆ ಅವರು 2023ರಲ್ಲೇ ಟ್ವೀಟ್ ಮಾಡಿ, ‘ನನ್ನ ಪುಸ್ತಕವನ್ನು ದಯವಿಟ್ಟು ಖರೀದಿಸಿ’ ಎಂದು ಕೇಳಿಕೊಂಡಿದ್ದರು. ಇದನ್ನು ನಾನು ಆಗಲೇ ಓದಿ ತೋರಿಸಿದ್ದೇನೆ. ಈಗ ನೀವೇ ಹೇಳಿ, ನೀವು ನರವಾಣೆ ಅವರಿಗಿಂತ ಪೆಂಗ್ವಿನ್ ಸಂಸ್ಥೆಯನ್ನು ನಂಬುತ್ತೀರಾ? ನಾನಂತೂ ಜನರಲ್ ನರವಾಣೆ ಅವರನ್ನೇ ನಂಬುತ್ತೇನೆ,” ಎಂದು ರಾಹುಲ್ ಗಾಂಧಿ ಪುನರುಚ್ಚರಿಸಿದ್ದಾರೆ.

ಕೇಂದ್ರ ಸರ್ಕಾರ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮುಜುಗರ ಉಂಟುಮಾಡುವಂತಹ ಕೆಲವು ವಿಚಾರಗಳು ನರವಾಣೆ ಅವರ ಪುಸ್ತಕದಲ್ಲಿದೆ. ಹಾಗಾಗಿ, ಖಂಡಿತವಾಗಿಯೂ, ಇಲ್ಲಿ ಪೆಂಗ್ವಿನ್ ಪ್ರಕಾಶನ ಸಂಸ್ಥೆಯು ಸತ್ಯ ಹೇಳುತ್ತಿದೆಯೇ ಅಥವಾ ಮಾಜಿ ಸೇನಾ ಮುಖ್ಯಸ್ಥರು ಸತ್ಯ ಹೇಳುತ್ತಿದ್ದಾರೆಯೇ ಎಂಬುದನ್ನು ನೀವೇ ನಿರ್ಧರಿಸಬೇಕು. ಸದ್ಯದ ಮುಖ್ಯವಾದ ವಿಚಾರವೇ ಇದು,” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ಅಮೆಜಾನ್‌ನ ಅಮೆರಿಕದ ವೆಬ್‌ಸೈಟ್‌ನಲ್ಲಿ ನರವಾಣೆ ಅವರ ಪುಸ್ತಕವು ಮೇ 1, 2024 ರಂದೇ ಪ್ರಕಟವಾಗಿದೆ ಎಂದು ತೋರಿಸುತ್ತಿದೆ. ಆದರೆ, ಪ್ರಸ್ತುತ ಅದು “ಲಭ್ಯವಿಲ್ಲ” ಎಂದು ನಮೂದಿಸಲಾಗಿದೆ. ಇದೇ ವೇಳೆ, ಭಾರತದ ಅಮೆಜಾನ್ ವೆಬ್‌ಸೈಟ್‌ನಲ್ಲಿ ಹುಡುಕಿದಾಗ ಈ ಪುಟವು ಕಾರ್ಯನಿರ್ವಹಿಸುತ್ತಿಲ್ಲ ಎಂಬ ಸಂದೇಶ ಕಾಣಿಸುತ್ತಿದೆ. ಪ್ರಕಾಶಕರು ಪುಸ್ತಕ ಬಿಡುಗಡೆಯೇ ಆಗಿಲ್ಲ ಎನ್ನುತ್ತಿದ್ದರೂ, ಅಂತಾರಾಷ್ಟ್ರೀಯ ವೆಬ್‌ಸೈಟ್‌ಗಳಲ್ಲಿ ಪ್ರಕಟಣೆಯ ದಿನಾಂಕ ನಮೂದಾಗಿರುವುದು ರಾಹುಲ್ ಗಾಂಧಿಯವರ “ಪುಸ್ತಕ ಲಭ್ಯವಿತ್ತು” ಎಂಬ ವಾದಕ್ಕೆ ಆಧಾರ ನೀಡಿದಂತಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಉಲ್ಲೇಖಿಸಿದೆ.

ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ ಸಂಸ್ಥೆಯು ಹೇಳಿಕೆ ನೀಡಿ, ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ‘ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ’ ಎಂಬ ಆತ್ಮಕಥೆಯ ವಿಶೇಷ ಪ್ರಕಟಣಾ ಹಕ್ಕುಗಳನ್ನು ತಾವು ಹೊಂದಿರುವುದಾಗಿ ತಿಳಿಸಿದೆ. ಮಾರುಕಟ್ಟೆಯಲ್ಲಿ ಅನಧಿಕೃತ ಪ್ರತಿಗಳು ಲಭ್ಯವಿವೆ ಎಂಬ ವರದಿಗಳ ನಡುವೆ, ಈ ಪುಸ್ತಕವು ಇದುವರೆಗೆ ಮುದ್ರಣ ಅಥವಾ ಡಿಜಿಟಲ್ ರೂಪದಲ್ಲಿ ಅಧಿಕೃತವಾಗಿ ಪ್ರಕಟವಾಗಿಲ್ಲ ಮತ್ತು ಸಾರ್ವಜನಿಕರಿಗೆ ಲಭ್ಯವಿಲ್ಲ ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....