'2014 ರಲ್ಲಿ ನಿಮ್ಮನ್ನು ನಾನೂ ನಂಬಿದ್ದೆ, ಆದರೆ...!' - ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಶಂಕರ್ ಬಿದರಿ

ಕೇಂದ್ರ ಸರ್ಕಾರ ಮತ್ತು ನರೇಂದ್ರ ಮೋದಿಯವರ ವಿರುದ್ಧ ವಿಷಾದ ವ್ಯಕ್ತಪಡಿಸಿರುವ ರಾಜ್ಯ ನಿವೃತ್ತ ಪೊಲೀಸ್ ಮಹಾನಿರ್ದೇಶಕ ಶಂಕರ್ ಬಿದರಿ, ಫೇಸ್‌ಬುಕ್‌ನಲ್ಲಿ ಸರಣಿ ಪೋಸ್ಟ್ ಮಾಡುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. “ನಿಮ್ಮ ಭರವಸೆಗಳು ಸುಳ್ಳಾಗಿವೆ, ನೀವೂ ವಿಫಲಾರಾಗಿದ್ದೀರಿ” ಎಂದು ಮೋದಿಯವರ ವಿರುದ್ಧ ಹರಿಹಾಯ್ದಿದ್ದಾರೆ.

“ಮೋದಿಯವರು 2014ರಲ್ಲಿ ಅಧಿಕಾರಕ್ಕೆ ಬಂದಾಗ ನಾನು ಉತ್ಸಾಹದಲ್ಲಿದ್ದೆ. ಮೋದಿ ಜನರನ್ನು ತನ್ನೊಂದಿಗೆ ಕೊಂಡೊಯ್ದು ದೇಶದ ಹಣೆಬರಹವನ್ನು ಬದಲಾಯಿಸುತ್ತಾರೆ ಎಂದು ನಂಬಿಕೊಂಡಿದ್ದೆ. ಈ ಕಾರಣಕ್ಕೇ ನಾನು ಅವರಿಗೆ ನೋಟ್ ಬ್ಯಾನ್ ಹಾಗೂ 370ರ ವಿಧಿ ರದ್ದತಿ ಸಂಬಂಧ ಬೆಂಬಲ ವ್ಯಕ್ತಪಡಿಸಿದ್ದೆ. ಆದರೆ ಇಂದು ನನಗೆ ತುಂಬಾ ಬೇಸರವಾಗುತ್ತಿದೆ. ಮೋದಿ ಕೂಡ ಸೋತಿದ್ದಾರೆ” ಎಂದು ಶಂಕರ್ ಬಿದರಿ ಬೇಸರ ವ್ಯಕ್ತಪಡಿಸಿದ್ದಾರೆ.

“ನೆಹರೂ, ಶಾಸ್ತ್ರಿ, ಇಂದಿರಾ, ಮೊರಾರ್ಜಿಯವರು ಮೂರ್ಖರೇನು? ಈ ದೇಶ ಬಡತನದಲ್ಲಿದ್ದಾಗ ವಿದೇಶಿ ತೈಲ, ವಿಮಾ ಕಂಪನಿಗಳು, ಪಿಎಸ್‌ಯುಗಳಂತಹ ರಾಷ್ಟ್ರೀಯ ಸೊತ್ತುಗಳನ್ನು ಅವರು ನಿರ್ಮಿಸಿದ್ದರು. ಆದರೆ ಅವರು ಮಾಡಿದ ಈ ರಾಷ್ಟ್ರೀಯ ಸೊತ್ತುಗಳು ಇಷ್ಟು ಬೇಗ ವಿದೇಶಿ ಕಂಪನಿಗಳಿಗೆ ಮಾರಾಟಕ್ಕೆ ಬರಲಿವೆ ಎಂದು ಊಹಿಸಿರಲಿಲ್ಲ” ಎಂದು ಮೋದಿ ಸರ್ಕಾರ ಸಾರ್ವಜನಿಕ ಉದ್ಯಮಗಳನ್ನು ಖಾಸಗಿಯವರಿಗೆ ಮಾರಾಟ ಮಾಡುತ್ತಿರುವುದರ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನೂ ಓದಿ: ಬಿಎಸ್‌ವೈಯಿಂದ ಪಕ್ಷದ ಗೌರವ ಹಾಳಾಗುತ್ತಿದೆ, ಅವರ ವಿರುದ್ದ ಕ್ರಮ ಕೈಗೊಳ್ಳಿ: ಶಂಕರ್‌ ಬಿದರಿ

“ನೋಟ್ ಬ್ಯಾನ್ ನಂತರ ಕೋಟಿಗಟ್ಟಲೆ ಹಣ ಕರ್ನಾಟಕದ ಕೋ ಆಪರೇಟಿವ್ ಬ್ಯಾಂಕ್‌ಗಳಲ್ಲಿ ಹಾಗೂ ಇನ್ನಿತರ ರಾಜ್ಯಗಳಲ್ಲಿ ಕಾನೂನು ಬಾಹಿರವಾಗಿ ವಿನಿಯಮವಾಗಿದೆ ಎಂದು ವರದಿಯಾಗಿದೆ. ಆದರೆ ಈ ಬಗ್ಗೆ ಆರ್‌ಬಿಐ ತೆಗೆದುಕೊಂಡ ಕ್ರಮವಾದರೂ ಏನು?” ಎಂದು ಪ್ರಶ್ನಿಸಿದ್ದಾರೆ.

“1999ರಿಂದಲೂ ಕೃಷ್ಣಾ ನದಿ ಕಣಿವೆ ಬಿಜೆಪಿಗೆ ನಿರಂತರವಾಗಿ ಬೆಂಬಲ ನೀಡಿದೆ. ಆ ಸಂದರ್ಭ ಮೋದಿಯವರು ಒಂದು ಹನಿ ನೀರನ್ನೂ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಹೇಳಿದ್ದರು. ನಾವು ಅವರನ್ನು ನಂಬಿದ್ದೆವು. ಆದರೆ ಏಳು ವರ್ಷಗಳು ಕಳೆದವು. ಇಂದಿಗೂ ಕರ್ನಾಟಕಕ್ಕೆ ಮೀಸಲಾದ 300 ಟಿಎಂಸಿ ನೀರು ವ್ಯರ್ಥವಾಗಿ ಹೋಗುತ್ತಿದೆ” ಎಂದು ಬಿದರಿ ಹೇಳಿದ್ದಾರೆ.

ಇದನ್ನೂ ಓದಿ: ರೈತರು, ಜನಸಾಮಾನ್ಯರು ಮೂಢಾತ್ಮರಲ್ಲ, ಬದಲಿಗೆ ಮೋದಿಶಾ ವಂಚಕಾತ್ಮರು | ದೇವನೂರ ಮಹಾದೇವ

“ನೀವೂ ವಿಫಲರಾದಿರಿ ಮೋದಿ: ಭ್ರಷ್ಟಾಚಾರ ಹಾಗೂ ಗಂಭೀರ ಅಪರಾಧಗಳ ಆರೋಪ ಎದುರಿಸುತ್ತಿರುವ ರಾಜಕೀಯ ವ್ಯಕ್ತಿಗಳನ್ನು ಈ ವ್ಯವಸ್ಥೆಯಿಂದ ಮೋದಿಯವರು ತೆಗೆದು ಹಾಕುತ್ತಾರೆ ಎಂದು ನಿರೀಕ್ಷಿಸಿದ್ದೆ. ಆದರೆ ಏಳು ವರ್ಷಗಳು ಕಳೆದು ಹೋದವು. ನಿಮ್ಮ ಭರವಸೆಗಳು ಸುಳ್ಳಾಗಿವೆ. ನೀವೂ ವಿಫಲರಾಗಿದ್ದೀರಿ” ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.

“ಸಾರ್ವಜನಿಕ ಜೀವನಕ್ಕೆ ಕಾಲಿಡುವುದು ಸಾರ್ವಜನಿಕರಿಗೆ ಏನಾದರೂ ಒಳ್ಳೆದನ್ನು ಮಾಡುವ ಸಲುವಾಗಿ. ಅವರು ಅದನ್ನು ಮಾಡದಿದ್ದರೆ, ತಾವೇ ಸಾರ್ವಜನಿಕ ಜೀವನದಿಂದ ಹೊರನಡೆಯಬೇಕು. ತಮಗೆ, ಸಾರ್ವಜನಿಕರಿಗೆ ಮತ್ತು ದೇಶಕ್ಕೆ ಮೋಸ ಮಾಡುವುದನ್ನು ಮುಂದುವರೆಸಬಾರದು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ‘ಹೌದು ಮೈಲಾರ್ಡ್, ಲೈಂಗಿಕ ದೌರ್ಜನ್ಯಕ್ಕೆ ಒಳಗಾದವರೆಲ್ಲಾ ಒಟ್ಟಾಗಿ ಸಂಚು ಹೂಡಿದರು’

Donate

ನ್ಯಾಯದ ಜೊತೆಗಿರಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ

ಜನಪರ ಸ್ವತಂತ್ರ ಪತ್ರಿಕೋದ್ಯಮವೇ ನಮ್ಮ ಆಶಯ. ನಿಮ್ಮಗಳ ಬೆಂಬಲವೇ ನಮಗೆ ಬಲ. ನ್ಯಾಯದ ಜೊತೆಗಿರಲು ಬಯಸುವ, ಸತ್ಯಪಥವನ್ನು ತುಳಿಯಲು ಪ್ರೋತ್ಸಾಹಿಸುವವರು ಬೆಂಬಲಿಸಿ. ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ ಪಾವತಿಸಬಹುದು.
ಧನ್ಯವಾದಗಳು

Independent journalism can’t be independent without your support, contribute by clicking below.

ಪ್ರತಿವಾರದ ವಿದ್ಯಮಾನಗಳ ವಿಶ್ಲೇಷಣೆಗಳು, ಅಂಕಣಗಳು ಹಾಗೂ ವಿಶೇಷ ಬರಹಗಳನ್ನು ಓದಲು ನ್ಯಾಯಪಥ ಪತ್ರಿಕೆಗೆ ಚಂದಾದಾರರಾಗಿ. ಚಂದಾ ಹಣವನ್ನು ಪಾವತಿಸಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ.
+ posts

LEAVE A REPLY

Please enter your comment!
Please enter your name here