Homeಸಿನಿಮಾಕ್ರೀಡೆ‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

‘ನನ್ನ ತಂಡಕ್ಕೆ ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ!’: ಟೆಸ್ಟ್‌‌ ನಾಯಕತ್ವಕ್ಕೆ ಕೊಹ್ಲಿ ರಾಜೀನಾಮೆ

- Advertisement -
- Advertisement -

ಭಾರತ ಕ್ರಿಕೆಟ್‌ ತಂಡದ ಆಟಗಾರ ವಿರಾಟ್ ಕೊಹ್ಲಿ ಅವರು ಭಾರತ ಟೆಸ್ಟ್ ತಂಡದ ನಾಯಕತ್ವ ಸ್ಥಾನದಿಂದ ಕೆಳಗಿಳಿಯುವುದಾಗಿ ಶನಿವಾರ ಘೋಷಿಸಿದ್ದಾರೆ. ಕಳೆದ ವರ್ಷ, ಕೊಹ್ಲಿ ಅವರು ಟಿ20 ನಾಯಕತ್ವದಿಂದ ಕೆಳಗಿಳಿದಿದ್ದರು. ಇದರ ನಂತರ ಬಿಸಿಸಿಐ ಅವರನ್ನು ಏಕದಿನ ತಂಡನ ನಾಯಕ ಸ್ಥಾನದಿಂದ ತೆಗೆದುಹಾಕಿತ್ತು.

“ತಂಡವನ್ನು ಸರಿಯಾದ ದಿಕ್ಕಿನಲ್ಲಿ ಕೊಂಡೊಯ್ಯಲು 7 ವರ್ಷಗಳ ಕಾಲ ಪ್ರತಿದಿನ ನಿರಂತರವಾಗಿ ಶ್ರಮ ಪಟ್ಟಿದ್ದೇನೆ. ಏನನ್ನೂ ಬಿಡದೇ ನಾನು ಕೆಲಸವನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ಮಾಡಿದ್ದೇನೆ. ಪ್ರತಿಯೊಂದು ವಿಷಯವೂ ಒಂದು ಹಂತದಲ್ಲಿ ಸ್ಥಗಿತಗೊಳ್ಳಬೇಕು, ಹಾಗೆಯೆ, ಭಾರತದ ಟೆಸ್ಟ್ ಕ್ಯಾಪ್ಟನ್ ಆಗಿ ಇದು ನನ್ನ ಕೊನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:ವಿರಾಟ್ ಕೊಹ್ಲಿ ನಾಯಕತ್ವ ವಿವಾದ: ಬಿಸಿಸಿಐ ಇದನ್ನು ನಿಭಾಯಿಸುತ್ತದೆ ಎಂದ ಸೌರವ್ ಗಂಗೂಲಿ

“ಪ್ರಯಾಣದ ಉದ್ದಕ್ಕೂ ಅನೇಕ ಏರಿಳಿತಗಳು ಮತ್ತು ಕೆಲವು ಕುಸಿತಗಳು ಇದ್ದವು. ಆದರೆ ಎಂದಿಗೂ ಪ್ರಯತ್ನದ ಕೊರತೆ ಅಥವಾ ನಂಬಿಕೆಯ ಕೊರತೆ ಇರಲಿಲ್ಲ. ನಾನು ಯಾವಾಗಲೂ ನನ್ನ 120% ದಷ್ಟು ಪ್ರಯತ್ನವನ್ನು ಎಲ್ಲದರಲ್ಲೂ ನೀಡುತ್ತೇನೆ ಎಂದು ನಂಬಿದ್ದೇನೆ. ಒಂದು ವೇಳೆ ನಾನು ಅದನ್ನು ಮಾಡಲು ಸಾಧ್ಯವಾಗದಿದ್ದರೆ, ಅದು ಸರಿಯಾದ ಕೆಲಸವಲ್ಲ ಎಂದು ನನಗೆ ತಿಳಿದಿದೆ. ನನ್ನ ಮನಸ್ಸಿನಲ್ಲಿ ನನಗೆ ಸಂಪೂರ್ಣ ಸ್ಪಷ್ಟತೆ ಇದೆ ಮತ್ತು ನನ್ನ ತಂಡಕ್ಕೆ ನಾನು ಅಪ್ರಾಮಾಣಿಕನಾಗಿರಲು ಸಾಧ್ಯವಿಲ್ಲ” ಎಂದು ಕೊಹ್ಲಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ಇಷ್ಟು ದೀರ್ಘಾವಧಿಯವರೆಗೆ ನನ್ನ ದೇಶವನ್ನು ಮುನ್ನಡೆಸಲು ನನಗೆ ಅವಕಾಶ ನೀಡಿದ ಬಿಸಿಸಿಐಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಎಲ್ಲಕ್ಕಿಂತ ಮುಖ್ಯವಾಗಿ ಯಾವುದೇ ಪರಿಸ್ಥಿತಿಯಲ್ಲಿ ಎಂದಿಗೂ ಬಿಟ್ಟುಕೊಡದ ತಂಡದ ಸಹ ಆಟಗಾರರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ನೀವು ಈ ಪ್ರಯಾಣವನ್ನು ಸ್ಮರಣೀಯ ಮತ್ತು ಸುಂದರಗೊಳಿಸಿದ್ದೀರಿ. ಟೆಸ್ಟ್ ಕ್ರಿಕೆಟ್‌ನಲ್ಲಿ ಸತತವಾಗಿ ನಮ್ಮನ್ನು ಮುನ್ನಡೆಸಿದ್ದ ರವಿ ಭಾಯ್ ಮತ್ತು ಅವರ ಗುಂಪಿಗೆ ಧನ್ಯವಾದಗಳು. ಕೊನೆಯದಾಗಿ, ನಾಯಕನಾಗಿ ನನ್ನನ್ನು ನಂಬಿದ ಎಂಎಸ್ ಧೋನಿಗೆ ಧನ್ಯವಾದ”ಎಂದು ಅವರು ಹೇಳಿದ್ದಾರೆ.

ಶುಕ್ರವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾರತ ಸೋತ ಒಂದು ದಿನದ ನಂತರ ಟೆಸ್ಟ್ ನಾಯಕತ್ವವನ್ನು ತೊರೆಯುವ ನಿರ್ಧಾರವನ್ನು ಕೊಹ್ಲಿ ತೆಗೆದುಕೊಂಡಿದ್ದಾರೆ. ನವೆಂಬರ್ 2019 ರಿಂದ ಕೊಹ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಯಾವುದೆ ಶತಕ ದಾಖಲಿಸಿಲ್ಲ. ಅವರು ಕೊನೆಯ ಬಾರಿಗೆ ಬಾಂಗ್ಲಾದೇಶ ವಿರುದ್ಧ ಈಡನ್ ಗಾರ್ಡನ್‌ನಲ್ಲಿ ನಡೆದ ಹಗಲು-ರಾತ್ರಿ ಟೆಸ್ಟ್‌ನಲ್ಲಿ ಶತಕ ಗಳಿಸಿದ್ದರು.

ಇದನ್ನೂ ಓದಿ:ಮೊಹಮ್ಮದ್ ಶಮಿ ಬೆನ್ನಿಗೆ ನಿಂತ ವಿರಾಟ್ ಕೊಹ್ಲಿ: ಕೋಮುವಾದಿ ದಾಳಿಗೆ ತೀವ್ರ ಖಂಡನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....