Homeಮುಖಪುಟನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

- Advertisement -
- Advertisement -

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, “ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ” ಎಂದು ತಮ್ಮ ವಕೀಲರ ಮೂಲಕ ಇಂದು (ಫೆ.18) ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ.

ಮಲ್ಯ ಅವರು ತಮ್ಮ ವಕೀಲ ಅಮಿತ್ ದೇಸಾಯಿ ಮೂಲಕ ಹೈಕೋರ್ಟ್‌ಗೆ ಸಲ್ಲಿಸಿದ ಹೇಳಿಕೆಯಲ್ಲಿ, “ನನ್ನ ಪಾಸ್‌ಪೋರ್ಟ್ ರದ್ದುಪಡಿಸಲಾಗಿದ್ದು, ಭಾರತಕ್ಕೆ ಮರಳುವ ನಿರ್ದಿಷ್ಟ ದಿನಾಂಕವನ್ನು ನೀಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಚಂದ್ರಶೇಖರ್ ಮತ್ತು ನ್ಯಾಯಮೂರ್ತಿ ಗೌತಮ್ ಅಂಕದ್ ಅವರ ಪೀಠವು, ಮಲ್ಯ ಅವರು ಭಾರತಕ್ಕೆ ಮರಳುವವರೆಗೆ ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸುವ ಆದೇಶದ ವಿರುದ್ಧದ ಅರ್ಜಿಯನ್ನು ವಿಚಾರಣೆ ನಡೆಸುವುದಿಲ್ಲ ಎಂದು ಕಳೆದ ವಾರ ಸ್ಪಷ್ಟಪಡಿಸಿದ ನಂತರ ಈ ಹೇಳಿಕೆಯನ್ನು ಸಲ್ಲಿಸಲಾಯಿತು.

ನಂತರ, ನ್ಯಾಯಾಲಯವು ಮಲ್ಯ ಅವರು ಭಾರತಕ್ಕೆ ಮರಳಲು ಉದ್ದೇಶಿಸಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಸ್ಪಷ್ಟಪಡಿಸುವಂತೆ ಕೇಳಿತ್ತು.

2016 ರಿಂದ ಯುನೈಟೆಡ್ ಕಿಂಗ್‌ಡಮ್‌ನಲ್ಲಿ ನೆಲೆಸಿರುವ ಮಲ್ಯ, ಹೈಕೋರ್ಟ್‌ನಲ್ಲಿ ಎರಡು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಒಂದು, ತಮ್ಮನ್ನು ಪರಾರಿಯಾದ ಆರ್ಥಿಕ ಅಪರಾಧಿ ಎಂದು ಘೋಷಿಸಿದ ಆದೇಶವನ್ನು ಪ್ರಶ್ನಿಸಿದರೆ, ಇನ್ನೊಂದು ದೇಶಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿದೆ.

70 ವರ್ಷದ ಮದ್ಯದ ದೊರೆ ಹಲವಾರು ಸಾವಿರ ಕೋಟಿ ಮೌಲ್ಯದ ಬಹು ಸಾಲ ಮರುಪಾವತಿಯನ್ನು ಬಾಕಿ ಉಳಿಸಿಕೊಂಡಿದ್ದು, ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದಾರೆ.

ಮದ್ಯದ ಉದ್ಯಮಿ ವಿಜಯ್ ಮಲ್ಯ ಹೈಕೋರ್ಟ್‌ಗೆ ನೀಡಿದ ಹೇಳಿಕೆಯಲ್ಲಿ, 2016 ರಲ್ಲಿ ಸರ್ಕಾರವು ರದ್ದುಗೊಳಿಸಿದ ಭಾರತೀಯ ಪಾಸ್‌ಪೋರ್ಟ್ ನನ್ನ ಬಳಿ ಇಲ್ಲದ ಕಾರಣ, ಇಂಗ್ಲೆಂಡ್ ಮತ್ತು ವೇಲ್ಸ್‌ನಲ್ಲಿನ ನ್ಯಾಯಾಲಯಗಳು ದೇಶ ತೊರೆಯುವುದನ್ನು ನಿಷೇಧಿಸುವ ಆದೇಶಗಳಿರುವುದರಿಂದ ಹಿಂದಿರುಗಲು ನಿರ್ದಿಷ್ಟ ದಿನಾಂಕವನ್ನು ನೀಡಲು ಸಾಧ್ಯವಿಲ್ಲ ಎಂದು ಹೇಳಿದರು.

“ಮಲ್ಯ ಅವರಿಗೆ ಇಂಗ್ಲೆಂಡ್ ಮತ್ತು ವೇಲ್ಸ್ ಅನ್ನು ತೊರೆಯಲು ಪ್ರಯತ್ನಿಸಲು ಅಥವಾ ಯಾವುದೇ ಅಂತರರಾಷ್ಟ್ರೀಯ ಪ್ರಯಾಣ ದಾಖಲೆಗಾಗಿ ಅರ್ಜಿ ಸಲ್ಲಿಸಲು ಅಥವಾ ಹೊಂದಲು ಅನುಮತಿ ಇಲ್ಲ. ಯಾವುದೇ ಸಂದರ್ಭದಲ್ಲಿ, ಅರ್ಜಿದಾರರು ಯಾವಾಗ ಭಾರತಕ್ಕೆ ಹಿಂತಿರುಗುತ್ತಾರೆ ಎಂಬುದನ್ನು ನಿಖರವಾಗಿ ಹೇಳಲು ಸಾಧ್ಯವಿಲ್ಲ” ಎಂದು ದೇಸಾಯಿ ನ್ಯಾಯಾಲಯದಲ್ಲಿ ಹೇಳಿಕೆಯನ್ನು ಓದಿದರು.

ಪರಾರಿಯಾದವರ ಅರ್ಜಿ ಮತ್ತು ಕಾಯ್ದೆಯ ನಿಬಂಧನೆಗಳ ವಿಚಾರಣೆಗೆ, ಮಲ್ಯ ಅವರು ನ್ಯಾಯಾಲಯದಲ್ಲಿ ಹಾಜರಿರುವ ಅಗತ್ಯವಿಲ್ಲ ಎಂದು ಹಿರಿಯ ವಕೀಲರು ಪುನರುಚ್ಚರಿಸಿದರು.

“ಅವರು (ಮಲ್ಯ) ಭಾರತದಲ್ಲಿ ಹಾಜರಾದರೆ, ಈ ಎಲ್ಲಾ ಪ್ರಕ್ರಿಯೆಗಳು ಅಪ್ರಸ್ತುತವಾಗುತ್ತವೆ. ಏಕೆಂದರೆ, ಅಪರಾಧಿ ಸಂಬಂಧಪಟ್ಟ ನ್ಯಾಯಾಲಯಕ್ಕೆ ಹಾಜರಾದ ನಂತರ, ಈ ಎಲ್ಲಾ ಆದೇಶಗಳನ್ನು ರದ್ದುಗೊಳಿಸಲಾಗುತ್ತದೆ ಎಂದು ಕಾನೂನು ಹೇಳುತ್ತದೆ” ಎಂದು ದೇಸಾಯಿ ನ್ಯಾಯಾಲಯಕ್ಕೆ ತಿಳಿಸಿದರು.

ಮಲ್ಯ ಅವರ ಹೇಳಿಕೆಗೆ ಉತ್ತರ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಪೀಠವು ನಿರ್ದೇಶನ ನೀಡಿತು. ಮುಂದಿನ ವಿಚಾರಣೆಯನ್ನು ಮುಂದಿನ ತಿಂಗಳಿಗೆ ಮುಂದೂಡಿತು.

ಹಣ ಅಕ್ರಮ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣಗಳನ್ನು ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು 2019 ರ ಜನವರಿಯಲ್ಲಿ ಮಲ್ಯ ಅವರನ್ನು ಪರಾರಿಯಾದ ಆರ್ಥಿಕ ಅಪರಾಧಿ ಎಂದು ಘೋಷಿಸಿತು. ಉದ್ಯಮಿ ಮಾರ್ಚ್ 2016 ರಲ್ಲಿ ಭಾರತವನ್ನು ತೊರೆದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...