ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, “ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ” ಎಂದು ತಮ್ಮ ವಕೀಲರ ಮೂಲಕ ಇಂದು (ಫೆ.18) ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದಾರೆ. ಮಲ್ಯ ಅವರು ತಮ್ಮ ವಕೀಲ ಅಮಿತ್ ದೇಸಾಯಿ ಮೂಲಕ ಹೈಕೋರ್ಟ್‌ಗೆ ಸಲ್ಲಿಸಿದ ಹೇಳಿಕೆಯಲ್ಲಿ, “ನನ್ನ ಪಾಸ್‌ಪೋರ್ಟ್ ರದ್ದುಪಡಿಸಲಾಗಿದ್ದು, ಭಾರತಕ್ಕೆ ಮರಳುವ ನಿರ್ದಿಷ್ಟ ದಿನಾಂಕವನ್ನು ನೀಡಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ. ಮುಖ್ಯ ನ್ಯಾಯಮೂರ್ತಿ … Continue reading ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ