Homeಮುಖಪುಟನಾನು ಬಾಂಬೆ ಬಾಯ್ಸ್ ಎಂಬ ಪದ ಬಳಸಿಲ್ಲ: ಸುವರ್ಣ ಚಾನೆಲ್ ವಿರುದ್ಧ ಕೆ.ಎಸ್ ಈಶ್ವರಪ್ಪ ಕಿಡಿ

ನಾನು ಬಾಂಬೆ ಬಾಯ್ಸ್ ಎಂಬ ಪದ ಬಳಸಿಲ್ಲ: ಸುವರ್ಣ ಚಾನೆಲ್ ವಿರುದ್ಧ ಕೆ.ಎಸ್ ಈಶ್ವರಪ್ಪ ಕಿಡಿ

- Advertisement -
- Advertisement -

ನಾನು ಎಲ್ಲಿಯೂ ‘ಬಾಂಬೆ ಬಾಯ್ಸ್’ ಎಂಬ ಪದ ಬಳಸಿಲ್ಲ. ಆದರೂ ತಪ್ಪಾಗಿ ಉಲ್ಲೇಖ ಮಾಡಿ ಪ್ರಸಾರ ಮಾಡಲಾಗಿದೆ ಎಂದು ‘ಸುವರ್ಣ ಚಾನೆಲ್’ ವಿರುದ್ಧ ಮಾಜಿ ಸಚಿವ, ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಬಹಿರಂಗವಾಗಿ ಕಿಡಿಕಾರಿದ್ದಾರೆ.

ಇಂದು ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಗಾಳಿ ನಮಗೂ ಬೀಸಿ, ಸ್ವಲ್ಪ ಅಶಿಸ್ತು ಉಂಟಾಗಿದೆ’ ಎಂದು ಹೇಳಿದ್ದೆ. ಆದರೆ ‘ಸುವರ್ಣ ಚಾನೆಲ್’ನಲ್ಲಿ ‘ಬಾಂಬೆ ಬಾಯ್ಸ್ ವಿರುದ್ಧ ಈಶ್ವರಪ್ಪ ಗರಂ’ ಎಂಬ ಸುದ್ದಿ ಪ್ರಸಾರವಾಗುವುದು ಗಮನಿಸಿದೆ. ಟಿವಿಗಳಲ್ಲಿ ಏನು ಬೇಕಾದರೂ ಬರೆಯಬಹುದು ಎಂಬುದು ನೋಡಿ ನನಗೆ ಆಶ್ವರ್ಯವಾಯಿತು. ನಾನು ಅಲ್ಲಿ ಬಾಂಬೆ ಬಾಯ್ಸ್ ಅಂತ ಪ್ರಸ್ತಾಪ ಮಾಡಿದ್ದನ್ನು ತೋರಿಸಲಿ. ಆದರೆ, ನನ್ನ ಹೇಳಿಕೆಯನ್ನು ತಿರುಚಲಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಆ ಬಳಿಕ ಸಂಬಂಧಪಟ್ಟ ಹುಬ್ಬಳ್ಳಿಯ ವರದಿಗಾರನಿಗೆ ಕರೆ ಮಾಡಿ ಕೇಳಿದಾಗ, ನಾನು ಆ ಥರ ಕಳಿಸಿಲ್ಲ. ಮುಖ್ಯ ಕಚೇರಿಯಿಂದ ಹಾಗೆ ವರದಿ ಮಾಡುತ್ತಿದ್ದಾರೆ ಎಂದುತ್ತರಿಸಿದರು. ಆ ಬಳಿಕ ಸುವರ್ಣ ಚಾನೆಲ್‌ನ ಉನ್ನತ ಹುದ್ದೆಯಲ್ಲಿರುವವರಿಗೆ ತಿಳಿಸಿದಾಗ, ಬದಲಾವಣೆ ಮಾಡಿದ್ದೇವೆ ಎಂದು ಹೇಳಿದರು. ಅವರು ಬದಲಾವಣೆ ಮಾಡುವ ವೇಳೆಗೆ ಇಡೀ ರಾಜ್ಯದ ಜನ ನೋಡಿಯಾಗಿತ್ತು. ಅಲ್ಲದೇ, ‘ಬಾಂಬೆ ಬಾಯ್ಸ್’ ಸುದ್ದಿಯಿಂದ ಬಿಜೆಪಿಗೆ ಬಂದಂತಹಾ 17 ಜನ ಶಾಸಕರಿಗೂ ಕೂಡ ನೋವಾಗಿದೆ. ನನಗೂ ನೋವಾಯಿತು. ಅವರು ನಮಗೆ ಸಹಕಾರ ನೀಡಿದ್ದರಿಂದಲೇ ಬಿಜೆಪಿ ಸರ್ಕಾರ ಕೂಡ ಬಂತು. ನಾನೂ ಕೂಡ ಮಂತ್ರಿಯಾದೆ. ಆದರೆ, ಅವರ ಬಗ್ಗೆ ಆಪಾದನೆ ಮಾಡಿ ಸುದ್ದಿ ಹರಡಿರುವುದು ನೋವಾಗಿದೆ ಎಂದು ಈಶ್ವರಪ್ಪ ಸಮಜಾಯಿಷಿ ನೀಡಿದರು.

ಈ ಸಂಬಂಧ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೂ ಪೋನ್ ಮಾಡಿ ತಿಳಿಸಿದೆ. ಬಳಿಕ ಪಕ್ಷದ ಕಾರ್ಯಕರ್ತರ ಸಭೆಗೆ ಹೋದಾಗ, ಅಲ್ಲಿ ಸುವರ್ಣ ಚಾನೆಲ್‌ನ ವರದಿಗಾರರಿದ್ದರು. ಅವರಲ್ಲಿ ನನ್ನ ಸ್ಪಷ್ಟೀಕರಣ ಹಾಕುವಂತೆ ವಿನಂತಿಸಿದೆ. ಆದರೆ ಅವರು ವಿಡಿಯೋ ಮಾಡಲಿಲ್ಲ. ನಾನು ಅಲ್ಲಿ ‘ಬಾಂಬೆ ಬಾಯ್ಸ್‌’ ಎಂದು ಪ್ರಸ್ತಾಪವೇ ಮಾಡಿಲ್ಲ. ಕಾಂಗ್ರೆಸ್‌ನ ಗಾಳಿ ನಮಗೂ ಬೀಸಿ, ಸ್ವಲ್ಪ ಅಶಿಸ್ತು ಉಂಟಾಗಿದೆ ಎಂದಷ್ಟೇ ಹೇಳಿದ್ದೆ. ಆದ್ದರಿಂದ ಇಂತಹ ಸುದ್ದಿಗಳು ಪ್ರಸಾರ ಮಾಡುವುದರಿಂದ ನಮ್ಮೊಳಗಡೆ ಗೊಂದಲ ಉಂಟಾಗುತ್ತದೆ. ಆದ್ದರಿಂದ ಹೇಳದೇ ಇರುವ ಹೇಳಿಕೆಗಳನ್ನು ಪ್ರಸಾರ ಮಾಡಬೇಡಿ’ ಎಂದು ‘ಸುವರ್ಣ ಚಾನೆಲ್‌’ನ ಹೆಸರೇಳಿ ಮನವಿ ಮಾಡಿದರು.

ಇದನ್ನೂ ಓದಿ: ಕೋಲಾರದಲ್ಲಿ ಮರ್ಯಾದೆಗೇಡು ಹತ್ಯೆ: ಪರಿಶಿಷ್ಟ ಜಾತಿಯವನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ; ಯುವಕ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನಲ್ಲಿ ತಿರಂಗ ಯಾತ್ರೆಗೆ ಪೊಲೀಸರ ಷರತ್ತುಬದ್ಧ ಅನುಮತಿ: ಪ್ರತಿಭಟನೆ, ಘೋಷಣೆಗಳಿಗೆ ನಿರ್ಬಂಧ

ಬೆಂಗಳೂರು: ದೆಹಲಿಯಲ್ಲಿ ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆ ವಿಚಾರವಾಗಿ ರಾಜಕೀಯ ಸಂಘರ್ಷ ತೀವ್ರಗೊಂಡಿರುವ ಬೆನ್ನಲ್ಲೇ, ಬೆಂಗಳೂರಿನಲ್ಲಿ ಅಕ್ಟೋಬರ್ 16ರಂದು ಟೌನ್ ಹಾಲ್‌ನಿಂದ ಬನ್ನಪ್ಪ ಪಾರ್ಕ್‌ನಲ್ಲಿರುವ ಕ್ವಿಟ್ ಇಂಡಿಯಾ ಸ್ಮಾರಕದವರೆಗೆ ಹಮ್ಮಿಕೊಂಡಿರುವ ತಿರಂಗ...

ಸುಪ್ರೀಂ ವಿಚಾರಣೆಗೆ ಸಜ್ಜಾಗುತ್ತಿದ್ದಂತೆ ಸಿಜೆಪಿಯ ತಿರಂಗಾ ಮೆರವಣಿಗೆ ಆರಂಭ; ಪೊಲೀಸರ ನೋಟಿಸ್ ಧಿಕ್ಕರಿಸಿ ತೆರಳುತ್ತಿದ್ದ ಅಭಿಜೀತ್ ದೀಪ್ಕೆ ವಶಕ್ಕೆ

ನವದೆಹಲಿ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವ ಹಕ್ಕಿನ ಕುರಿತ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ ಸಜ್ಜಾಗುತ್ತಿದ್ದ ಬೆನ್ನಲ್ಲೇ, ದೆಹಲಿ ಪೊಲೀಸರ ಸೂಚನೆಯನ್ನು ಧಿಕ್ಕರಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ‘ಲೆಹ್ರಾ ದೋ ತಿರಂಗಾ’...

‘ದಿಮಾಗಿ ನಕ್ಸಲ್’, ‘ದೇಶದ್ರೋಹಿ’ ಎಂದು ಪಟ್ಟ ಕಟ್ಟುವುದು ಅಧಿಕಾರ ಕಳೆದುಕೊಳ್ಳುವ ಭೀತಿಯ ಸಂಕೇತ”: ಮೋದಿ-ಅಮಿತ್ ಶಾ ವಿರುದ್ಧ ಪವನ್ ಖೇರಾ ವಾಗ್ದಾಳಿ!

ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರವು ತನ್ನ ನೀತಿಗಳು ಮತ್ತು ನಡೆಯನ್ನು ಪ್ರಶ್ನಿಸುವ ನಾಗರಿಕರಿಗೆ ‘ರಾಷ್ಟ್ರವಿರೋಧಿ’, ‘ಎಡಪಂಥೀಯ’ ಹಾಗೂ ‘ದಿಮಾಗಿ ನಕ್ಸಲ್’ ಎಂದು ಪಟ್ಟ ಕಟ್ಟುತ್ತಿರುವುದು ಅದರ ಅಧಿಕಾರ ಕಳೆದುಕೊಳ್ಳುವ ಭೀತಿಯನ್ನು ತೋರಿಸುತ್ತದೆ ಎಂದು...

ಸಿಜೆಪಿಯ ‘ಲೆಹ್ರಾ ದೋ ತಿರಂಗಾ’ ಮೆರವಣಿಗೆಗೆ ಹೆಚ್ಚಿದ ನಿರ್ಬಂಧ: 25 ಸಾವಿರಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿ ನಿಯೋಜನೆ, ಸೆಂಟ್ರಲ್ ಪಾರ್ಕ್ ಬಂದ್

ನವದೆಹಲಿ: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿ, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)...

ಸಿಜೆಪಿಯ ತಿರಂಗಾ ಮೆರವಣಿಗೆ: ಸೆಂಟ್ರಲ್ ಪಾರ್ಕ್ ಮುಚ್ಚುವಿಕೆ ಪ್ರಶ್ನಿಸಿದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್ ಮುಚ್ಚುವ ನವದೆಹಲಿ ಮುನ್ಸಿಪಲ್ ಕೌನ್ಸಿಲ್ (ಎನ್‌ಡಿಎಂಸಿ) ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ಕಾಕ್ರೋಚ್ ಜನತಾ ಪಾರ್ಟಿ...

ದೆಹಲಿ ಬಿಟ್ಟು ರಿಲಯನ್ಸ್ ರಿಫೈನರಿ ಇರುವ ಜಾಮ್‌ನಗರಕ್ಕೆ ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಭೇಟಿ: ಮೋದಿ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ!

ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೋ ರುಬಿಯೋ ಅವರ ಮುಂಬರುವ ಭಾರತ ಭೇಟಿ ಹಾಗೂ ವಿದೇಶಾಂಗ ಸಚಿವಾಲಯದ ನಿರ್ಧಾರಗಳ ಕುರಿತು ವಿಪಕ್ಷ ನಾಯಕ ರಾಹುಲ್ ಗಾಂಧಿ ವಿಮರ್ಶಾತ್ಮಕವಾಗಿ ಪ್ರತಿಕ್ರಿಯಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ...

ದೆಹಲಿ ಪ್ರತಿಭಟನೆ: ‘ತಿರಂಗ ಹಾರಿಸಿದ್ದಕ್ಕೆ ಜೈಲಿಗೆ ಹೋಗಲೂ ಸಿದ್ಧ’: ಮೋದಿ ಸರ್ಕಾರದ ವಿರುದ್ಧ ಅಭಿಜೀತ್ ದೀಪ್ಕೆ ತೀವ್ರ ವಾಗ್ದಾಳಿ

ನವದೆಹಲಿ: ರಾಷ್ಟ್ರಧ್ವಜ ಹಾರಿಸುವುದನ್ನೇ ಅಪರಾಧವೆಂದು ಪರಿಗಣಿಸುವ ಪರಿಸ್ಥಿತಿ ದೇಶದಲ್ಲಿ ನಿರ್ಮಾಣವಾಗಿದೆಯೇ ಎಂದು ಪ್ರಶ್ನಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ತಿರಂಗ ಹಾರಿಸಿದ್ದಕ್ಕಾಗಿ ಜೈಲಿಗೆ ಹೋಗಬೇಕಾದರೂ ಸಿದ್ಧ ಎಂದು ಘೋಷಿಸಿದ್ದಾರೆ....

“ಅಮೆರಿಕ-ಪಾಕಿಸ್ತಾನ್ ಯುದ್ಧವಾದರೆ ನಾವು ಪಾಕ್ ಪರ ನಿಲ್ಲುತ್ತೇವೆ”: ರಾಜಸ್ಥಾನ ಬಿಜೆಪಿ ಅಧ್ಯಕ್ಷರಿಂದ ವಿವಾದಾತ್ಮಕ ಹೇಳಿಕೆ!

"ಒಂದು ವೇಳೆ ಇಂದು ಅಮೆರಿಕ ಮತ್ತು ಪಾಕಿಸ್ತಾನದ ನಡುವೆ ಯುದ್ಧ ನಡೆದರೆ, ಪಾಕಿಸ್ತಾನ ನಮ್ಮ ನೆರೆಹೊರೆಯ ದೇಶವಾಗಿರುವುದರಿಂದ ನಾವು ಅದರ ಜೊತೆ ಇರುತ್ತೇವೆ" ಎಂದು ರಾಜಸ್ಥಾನ ಬಿಜೆಪಿ ಅಧ್ಯಕ್ಷ ಹಾಗೂ ರಾಜ್ಯಸಭಾ ಸಂಸದ...

ಗ್ಯಾನೇಶ್ ಕುಮಾರ್ ರಕ್ಷಣೆಗಾಗಿ ದೆಹಲಿಯನ್ನೇ ಭಾರತ-ಪಾಕ್ ಗಡಿಯನ್ನಾಗಿ ಪರಿವರ್ತಿಸಿದ ಮೋದಿ: ಅಭಿಜೀತ್ ದಿಪ್ಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್‌) ನಡೆದಿರುವ ಅಕ್ರಮಗಳನ್ನು ವಿರೋಧಿಸಿ, ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳ ಕುರಿತು ಚರ್ಚಿಸಲು ವಿದ್ಯಾರ್ಥಿ ಸಂಘಟನೆಗಳು,...

ಸಹಪಾಠಿಗಳ ಜಾತಿ, ಪ್ರವೇಶದ ವರ್ಗ, ರ‍್ಯಾಂಕ್ ಕೇಳಬೇಡಿ: ದರ್ಶನ್, ಸಾಹಿಲ್ ಸಾವುಗಳ ಬೆನ್ನಲ್ಲೇ ತಾರತಮ್ಯ ವಿರೋಧಿ ನಿಯಮ ನೆನಪಿಸಿದ ಐಐಟಿ ಬಾಂಬೆ

ಮುಂಬೈ: ಸಹಪಾಠಿಗಳ ಜಾತಿ, ಪ್ರವೇಶದ ವರ್ಗ ಅಥವಾ ಪ್ರವೇಶ ಪರೀಕ್ಷೆಯ ರ‍್ಯಾಂಕ್‌ಗಳ ಬಗ್ಗೆ ಪ್ರಶ್ನಿಸುವುದು ತಾರತಮ್ಯಕ್ಕೆ ಕಾರಣವಾಗಬಹುದು. ಇಂತಹ ಪ್ರಶ್ನೆಗಳನ್ನು ಕೇಳಬಾರದು ಎಂದು ಭಾರತೀಯ ತಂತ್ರಜ್ಞಾನ ಸಂಸ್ಥೆ (ಐಐಟಿ) ಬಾಂಬೆ ತನ್ನ ವಿದ್ಯಾರ್ಥಿಗಳಿಗೆ...