Homeಕರ್ನಾಟಕನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ; ರಾಷ್ಟ್ರೀಯವಾದಿಗಳ ಪರ ಕೆಲಸ ಮಾಡುವೆ: ಕಂಗನಾ

ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ; ರಾಷ್ಟ್ರೀಯವಾದಿಗಳ ಪರ ಕೆಲಸ ಮಾಡುವೆ: ಕಂಗನಾ

- Advertisement -
- Advertisement -

ಮಥುರಾ: ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ ಆದರೆ ರಾಷ್ಟ್ರೀಯವಾದಿಗಳ ಪರ ಪ್ರಚಾರ ಮಾಡುತ್ತೇನೆ ಎಂದು ಬಾಲಿವುಡ್ ನಟಿ ಕಂಗನಾ ರಣಾವತ್ ಶನಿವಾರ ಹೇಳಿದ್ದಾರೆ.

ಶ್ರೀಕೃಷ್ಣ ಜನನಸ್ಥಾನಕ್ಕೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದು, 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಮಾಡುತ್ತೀರಾ ಎಂಬ ಪ್ರಶ್ನೆಗೆ, “ನಾನು ಯಾವುದೇ ಪಕ್ಷಕ್ಕೆ ಸೇರಿದವನಲ್ಲ, ರಾಷ್ಟ್ರೀಯವಾದಿಗಳ ಪರ ನಾನು ಪ್ರಚಾರ ಮಾಡುತ್ತೇನೆ” ಎಂದು ಕಂಗನಾ ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶ್ರೀಕೃಷ್ಣನ ನಿಜವಾದ ಜನ್ಮಸ್ಥಳವನ್ನು ಜನರು ವೀಕ್ಷಿಸಲು ಪ್ರಯತ್ನಗಳನ್ನು ಮಾಡುತ್ತಾರೆ ಎಂದು ನಾನು ಭಾವಿಸುತ್ತೇನೆ. ಶ್ರೀಕೃಷ್ಣನ ಜನ್ಮಸ್ಥಳದಲ್ಲಿ ಈದ್ಗಾ ಇದೆ ಎಂದು ಅವರು ತಿಳಿಸಿದ್ದಾರೆ.

‘ನಿಮ್ಮ ಹೇಳಿಕೆಗಳು ಭಾವನೆಗಳಿಗೆ ಧಕ್ಕೆ ತಂದಿವೆ’ ಎಂದು ಜನರು ಆರೋಪಿಸಿದ್ದಾರೆ ಎಂದಾಗ, “ಪ್ರಾಮಾಣಿಕರು, ಧೈರ್ಯಶಾಲಿಗಳು, ರಾಷ್ಟ್ರೀಯವಾದಿಗಳು ಮತ್ತು ದೇಶದ ಬಗ್ಗೆ ಮಾತನಾಡುವವರಿಗೆ ನಾನು ಹೇಳುತ್ತಿರುವುದು ಸರಿ ಎಂದು ಅನಿಸುತ್ತದೆ” ಎಂದು ಕಂಗನಾ ಪ್ರತಿಪಾದಿಸಿದ್ದಾರೆ.

ಚಂಡೀಗಢದಲ್ಲಿ ತಮ್ಮ ಕಾರನ್ನು ರೈತರು ತಡೆದಿದ್ದಾರೆ ಎಂಬ ವರದಿಗಳ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು “ನಾನು ಎಂದಿಗೂ ಕ್ಷಮೆಯಾಚಿಸಲಿಲ್ಲ. ನಾನು ಅದನ್ನು ಪ್ರತಿಭಟಿಸಿದೆ” ಎಂದು ತಿಳಿಸಿದ್ದಾರೆ.

ಪದೇ ಪದೇ ರೈತ ವಿರೋಧಿ ಹೇಳಿಕೆಗಳನ್ನು ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಕ್ಷಮೆ ಕೇಳಬೇಕೆಂದು ಆಗ್ರಹಿಸಿ ರೈತರು ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ ಘಟನೆ ಪಂಜಾಬ್‌ನ ಕಿರಾತ್‌ಪುರ್‌ನಲ್ಲಿ ನಡೆದಿತ್ತು.


ಇದನ್ನೂ ಓದಿರಿ: ಬಾಬರಿ ಮಸೀದಿ ಧ್ವಂಸದ ಕತೆ ಹೇಳುವ ‘ರಾಮ್‌ ಕೆ ನಾಮ್’ ಸಾಕ್ಷ್ಯ ಚಿತ್ರ ಪ್ರದರ್ಶನ ಮಾಡಲಿರುವ ಜೆಎನ್‌ಯು ವಿದ್ಯಾರ್ಥಿ ಒಕ್ಕೂಟ


ಸದಾ ಬಿಜೆಪಿ ಪರವಾಗಿ ವಾದಿಸುವ ಕಂಗನಾ ರಣಾವತ್‌ರವರು ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡು ಇತ್ತೀಚೆಗೆ ಹೇಳಿಕೆ ನೀಡಿದ್ದರು. ನರೇಂದ್ರ ಮೋದಿಯವರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯುವುದಾಗಿ ಘೋಷಿಸಿದ ನಂತರ ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು, ಅವರನ್ನು ಕಾಲಡಿಯಲ್ಲಿ ಹೊಸಕಿ ಹಾಕಬೇಕೆಂಬ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಕುರಿತು ಅವರ ವಿರುದ್ಧ ಮುಂಬೈನಲ್ಲಿ ಎಫ್‌ಐಆರ್ ದಾಖಲಾಗಿದೆ.

ಪಂಜಾಬ್‌ಗೆ ಅವರು ತೆರಳಿದ್ದ ವೇಳೆ ಘೇರಾವ್ ಹಾಕಿದ ರೈತರು ಕ್ಷಮೆ ಕೇಳಬೇಕೆಂದು ಆಗ್ರಹಿಸಿ ಘೋಷಣೆ ಕೂಗಿದ್ದರು. ಬಾವುಟಗಳನ್ನು ಪ್ರದರ್ಶಿಸಿ ಕಾರು ಮುಂದೆ ಹೋಗದಂತೆ ತಡೆದಿದ್ದರು. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಕಂಗನಾ ನಾನು ಮಾಬ್‌ನಿಂದ ಸುತ್ತವರಿಯಲ್ಪಟ್ಟಿದ್ದೇನೆ. ಅವರು ನನ್ನನ್ನು ನಿಂದಿಸುತ್ತಿದ್ದಾರೆ, ಬೆದರಿಸುತ್ತಿದ್ದಾರೆ, ನನ್ನನ್ನು ಕೊಲ್ಲುತ್ತಾರೆ, ನನಗೆ ರಕ್ಷಣೆ ಇಲ್ಲದಿದ್ದರೆ ಪರಿಸ್ಥಿತಿ ಏನಾಗುತ್ತಿತ್ತು ಎಂದು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಬರೆದುಕೊಂಡಿದ್ದರು.

ಖಲಿಸ್ತಾನಿ ಭಯೋತ್ಪಾದಕರು ಸರ್ಕಾರದ ಕೈ ಹಿಂಡುತ್ತಿದ್ದಾರೆ. ಆದರೆ ನಾವು ಒಬ್ಬ ಮಹಿಳೆಯನ್ನು ಮರೆಯದಿರೋಣ. ಈ ಹಿಂದೆ ಆ ಒಬ್ಬ ಮಹಿಳೆ ಪ್ರಧಾನಿಯಾಗಿದ್ದಾಗ (ಇಂದಿರಾ ಗಾಂಧಿ) ತನ್ನ ಜೀವವನ್ನು ಲೆಕ್ಕಿಸದೆ ಇವರನ್ನು ಸೊಳ್ಳೆಗಳ ರೀತಿ ಹೊಸಕಿ ಹಾಕಿದ್ದರು. ಆ ಮಹಿಳೆ ದೇಶಕ್ಕೆ ಒಳ್ಳೆಯದು ಮಾಡದಿದ್ದರೂ ಸಹ ಇವರನ್ನು ತನ್ನ ಕಾಲಡಿಯಲ್ಲಿ ಹೊಸಕಿ ಹಾಕಿದ್ದರು ಮತ್ತು ದೇಶ ಇಬ್ಭಾಗವಾಗಲು ಬಿಡಲಿಲ್ಲ. ಈಗಲೂ ಆ ಮಹಿಳೆಯನ್ನು ಕಂಡರೆ ಇವರು ನಡುಗುತ್ತಾರೆ. ಇವರಿಗೆ ಅಂಥವರೆ ಬೇಕು” ಎಂದು ಕಂಗನಾ ರೈತರನ್ನು ಅವಮಾನಿಸಿ ನವೆಂಬರ್‌ನಲ್ಲಿ ಪೋಸ್ಟ್ ಹಾಕಿದ್ದರು.

ಕಂಗನಾ ಅವರು ಮೊದಲಿನಿಂದಲೂ ಬಿಜೆಪಿಯ ಪರ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಲ್ಲದೆ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಂದರೆ ‘2014ರ ನಂತರ ಭಾರತಕ್ಕೆ ಸ್ವಾತಂತ್ರ್ಯ ಬಂದಿತು’ ಎಂದು ಹೇಳಿಕೆ ನೀಡಿದ್ದರು. ಸ್ವಾತಂತ್ರ್ಯ ಹೋರಾಟದ ತ್ಯಾಗ, ಬಲಿದಾನವನ್ನು ಕಂಗನಾ ಅಣಕಿಸಿದ್ದಾರೆ ಎಂದು ವ್ಯಾಪಕವಾಗಿ ಟೀಕೆಗಳು ವ್ಯಕ್ತವಾಗಿದ್ದವು. ಈಗ ಕಂಗನಾ ಅವರು ‘ರಾಷ್ಟ್ರೀಯವಾದಿಗಳ ಪರವಾಗಿ ಪ್ರಚಾರ ಮಾಡುತ್ತೇನೆ, ನಾನು ಯಾವುದೇ ಪಕ್ಷಕ್ಕೆ ಸೇರಿಲ್ಲ’ ಎಂದಿದ್ದಾರೆ. ಅವರ ಹಿಂದಿನ ಹೇಳಿಕೆಗಳಿಗೂ, ಶನಿವಾರ ನೀಡಿದ ಹೇಳಿಕೆಗಳಿಗೂ ತಾಳೆ ಹಾಕಿ ನೋಡಿದರೆ, ‘ಬಿಜೆಪಿಯವರು ಮಾತ್ರ ನಿಜವಾದ ರಾಷ್ಟ್ರವಾದಿಗಳು’ ಎಂದು ಕಂಗನಾ ಪ್ರತಿಪಾದಿಸಲು ಹೊರಟಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ.


ಇದನ್ನೂ ಓದಿರಿ: ಪಾಕಿಸ್ತಾನ: ಶ್ರೀಲಂಕಾದ ವ್ಯಕ್ತಿ ಗುಂಪು ದಾಳಿಗೆ ಬಲಿ; ಸಾರ್ವಜನಿಕವಾಗಿ ಸುಟ್ಟು ವಿಕೃತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...