ರಾಜಕೀಯ ಪಕ್ಷ ಕಟ್ಟುತ್ತೇನೆ ಎಂದು ಸಂಚಲನ ಸೃಷ್ಟಿಸಿದ್ದ ಸೂಪರ್‌ಸ್ಟಾರ್ ರಜನಿಕಾಂತ್ ಇದೀಗ ಉಲ್ಟಾ ಹೊಡೆದಿದ್ದಾರೆ. ತಾವು ರಾಜಕೀಯ ಪಕ್ಷ ಸ್ಥಾಪಿಸುವುದಿಲ್ಲ ಎಂದು ಅಧಿಕೃತವಾಗಿ ಹೇಳಿದ್ದಾರೆ. ಈ ಮೂಲಕ ಚುನಾವಣಾ ರಾಜಕೀಯ ಮಾಡದೇ ಜನರ ಸೇವೆ ಮಾಡುತ್ತೇನೆ ಎಂದು ರಜನಿಕಾಂತ್ ಹೇಳಿದ್ದಾರೆ.
“ನನ್ನ ಆರೋಗ್ಯದಲ್ಲಾದ ಏರುಪೇರಿನಿಂದ ಮತ್ತು ರೂಪಾಂತರಿ ಕೊರೊನಾ ಸೋಂಕಿನ ಕಾರಣದಿಂದ ಪಕ್ಷ ಸ್ಥಾಪನೆಯ ವಿಚಾರವನ್ನು ಕೈಬಿಟ್ಟಿದ್ದೇನೆ. ಇದು ನನ್ನ ಮೇಲೆ ಭರವಸೆಯಿಟ್ಟಿದ್ದ ಅಭಿಮಾನಿಗಳಿಗೆ ನಿರಾಸೆಯನ್ನುಂಟುಮಾಡುತ್ತದೆ ಎಂಬುದು ನನಗೆ ತಿಳಿದಿದೆ”
ಈ ಕುರಿತು ತಾವು ಬರೆದಿರುವ ಪತ್ರವನ್ನು ರಜನಿಕಾಂತ್ ಟ್ವೀಟ್ ಮಾಡಿದ್ದು, ರಾಜಕೀಯ ಪಕ್ಷ ಸ್ಥಾಪಿಸುವುದಿಲ್ಲ ಎಂಬುದನ್ನು ಸ್ಪಷ್ಟವಾಗಿ ಹೇಳಿದ್ದಾರೆ.
ಇದನ್ನೂ ಓದಿ: ವೇದಾಂತ ಸ್ಟೆರ್‌ಲೈಟ್ ವಿರೋಧಿ ಹಿಂಸಾಚಾರ: ರಜನಿಕಾಂತ್‌ಗೆ ಸಮನ್ಸ್
— Rajinikanth (@rajinikanth) December 29, 2020
ಈ ಹಿಂದೆ ರಜನಿಕಾಂತ್ ಜನವರಿಯಲ್ಲಿ ತಮ್ಮ ಹೊಸ ಪಕ್ಷವನ್ನು ಆರಂಭಿಸುವುದಾಗಿ ಅಧಿಕೃತ ಘೋಷಣೆ ಮಾಡಿದ್ದರು. ಪಕ್ಷ ಆರಂಭದ ವಿಚಾರಕ್ಕೆ ಸಂಬಂಧಿಸಿದ ವಿಚಾರಗಳನ್ನು ಡಿಸೆಂಬರ್ 31 ರಂದು ತಿಳಿಸಲಾಗುವುದು ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ದೃಢಪಡಿಸಿದ್ದರು.
ಇದನ್ನೂ ಓದಿ: ನಟ ರಜನಿಕಾಂತ್ ಅವರ ಬಹುನಿರೀಕ್ಷಿತ ಹೊಸ ಪಕ್ಷ ಜನವರಿಯಲ್ಲಿ ಆರಂಭ


