Homeಮುಖಪುಟಚುನಾವಣಾ ಬಾಂಡ್ ಕುರಿತ ಎಸ್‌ಬಿಐ ಅರ್ಜಿ ಹಾಸ್ಯಾಸ್ಪದವಾಗಿದೆ: ಸುಪ್ರೀಂಕೋರ್ಟ್‌ ಮಾಜಿ ನ್ಯಾಯಮೂರ್ತಿ

ಚುನಾವಣಾ ಬಾಂಡ್ ಕುರಿತ ಎಸ್‌ಬಿಐ ಅರ್ಜಿ ಹಾಸ್ಯಾಸ್ಪದವಾಗಿದೆ: ಸುಪ್ರೀಂಕೋರ್ಟ್‌ ಮಾಜಿ ನ್ಯಾಯಮೂರ್ತಿ

- Advertisement -
- Advertisement -

ಸಾರ್ವಜನಿಕ ಚುನಾವಣಾ ಬಾಂಡ್ ವಿವರಗಳನ್ನು ನೀಡಲು ಜೂನ್ 30ರವರೆಗೆ ಮೂರುವರೆ ತಿಂಗಳಿಗಿಂತ ಹೆಚ್ಚು ಹೆಚ್ಚುವರಿ ಸಮಯವನ್ನು ಕೋರಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಅರ್ಜಿ ಬಗ್ಗೆ ಪ್ರತಿಕ್ರಿಯಿಸಿದ ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ, ಚುನಾವಣಾ ಬಾಂಡ್ ಕುರಿತ ಎಸ್‌ಬಿಐ ವಿವರಣೆಯನ್ನು ನಾನು ನಂಬುವುದಿಲ್ಲ, ಇದು ಹಾಸ್ಯಾಸ್ಪದ ಎಂದು ಹೇಳಿದ್ದಾರೆ.

ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರು 2019ರಲ್ಲಿ ಎಸ್‌ಬಿಐಗೆ ಚುನಾವಣಾ ಬಾಂಡ್ ಯೋಜನೆಯ ಸಂಬಂಧಿತ ವಿವರಗಳನ್ನು ಅಂದರೆ ದಾಖಲೆಗಳನ್ನು ಸಂಗ್ರಹಿಸಲು ಮತ್ತು ಇರಿಸಿಕೊಳ್ಳಲು ತಿಳಿಸಿದ್ದ ಪೀಠದ ಭಾಗವಾಗಿದ್ದರು ಎಂದು ಹೇಳಿದ್ದು, ಚುನಾವಣಾ ಆಯೋಗಕ್ಕೆ ವಿವರಣೆಯನ್ನು ಕೊಡಲು ಮೂರೂವರೆ ತಿಂಗಳು ಹೆಚ್ಚುವರಿ ಅಗತ್ಯವಿದೆ ಎಂದು ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದ್ದಾರೆ.

SBIನ ನಿಲುವು ಸಂಪೂರ್ಣವಾಗಿ ಹಾಸ್ಯಾಸ್ಪದವಾಗಿದೆ. ಈ ವಿವರಣೆಯು ಹೆಚ್ಚು ಮೌಲ್ಯಯುತವಾಗಿಲ್ಲ ಎಂದು ಹೇಳಿದ್ದಾರೆ. ಪೀಠದ ಭಾಗವಾಗಿದ್ದಾಗಿನ ಏಪ್ರಿಲ್ 2019ರ ಆದೇಶವನ್ನು ಉಲ್ಲೇಖಿಸಿದ ನ್ಯಾಯಮೂರ್ತಿ ದೀಪಕ್ ಗುಪ್ತಾ, ಒಮ್ಮೆ ನ್ಯಾಯಾಲಯವು ಈ ಮಾಹಿತಿಯನ್ನು ಇರಿಸಿಕೊಳ್ಳಲು ನಿರ್ದೇಶಿಸಿದಾಗ ಅದನ್ನು ಇಟ್ಟುಕೊಳ್ಳುವುದು ಅವರ ಬದ್ಧ ಕರ್ತವ್ಯವಾಗಿದೆ. ಅವರು ಸಾಧ್ಯವಾದಷ್ಟು ಬೇಗ ಅದನ್ನು ಬಹಿರಂಗಪಡಿಸಬೇಕು. ಮೂರು ತಿಂಗಳವರೆಗೆ ಕಾಲಾವಕಾಶ ಕೋರುವುದಲ್ಲ ಎಂದು ಹೇಳಿದ್ದಾರೆ.

ಕರಣ್ ಥಾಪರ್‌ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ನ್ಯಾಯಮೂರ್ತಿ ದೀಪಕ್ ಗುಪ್ತಾ, ಎಲ್ಲಾ ವಿವರಗಳನ್ನು ಒಟ್ಟುಗೂಡಿಸಲು ಕೆಲವು ಗಂಟೆಗಳು ಅಥವಾ ಕೆಲವು ದಿನಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ  44,434 ಸೆಟ್‌ಗಳ ಮಾಹಿತಿಯನ್ನು ಒಟ್ಟುಗೂಡಿಸುವಲ್ಲಿ ಈ ಸಮಸ್ಯೆ ಇದೆ ಎಂದು ಏಕೆ ಊಹಿಸಿದೆ ಎಂದು ಅವರು ಪ್ರಶ್ನಿಸಿದ್ದಾರೆ.

ನ್ಯಾಯಮೂರ್ತಿ ಗುಪ್ತಾ ಅವರು ತಮ್ಮ ಅಭಿಪ್ರಾಯದಲ್ಲಿ ಚುನಾವಣಾ ಬಾಂಡ್ ವಿವರಗಳನ್ನು ಮತದಾನ ಪ್ರಾರಂಭವಾಗುವ ಕನಿಷ್ಠ ಐದು ಅಥವಾ ಆರು ದಿನಗಳ ಮೊದಲು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಬೇಕು ಎಂದು ಹೇಳಿದರು. ಎಸ್‌ಬಿಐ ಅರ್ಜಿಯನ್ನು ತಿರಸ್ಕರಿಸಲು ಮತ್ತು ಮಾಹಿತಿ ಲಭ್ಯವಾದಾಗ ಹೊಸ ಗಡುವನ್ನು ನಿಗದಿಪಡಿಸಲು ಸುಪ್ರೀಂಕೋರ್ಟ್‌ಗೆ ಎಲ್ಲ ಹಕ್ಕಿದೆ ಎಂದು ಹೇಳಿದರು. ಏಪ್ರಿಲ್ ಮಧ್ಯದಲ್ಲಿ ಅಂದರೆ ಮತದಾನ ಪ್ರಾರಂಭವಾಗುವ ಸಾಧ್ಯತೆಯಿರುವಾಗ ಮಾಹಿತಿಯು ಇತ್ತೀಚಿನ ದಿನಗಳಲ್ಲಿ ಲಭ್ಯವಿರಬೇಕು ಎಂದು ನಾನು ನಂಬುತ್ತೇನೆ ಎಂದು ಹೇಳಿದ್ದಾರೆ.

ಚುನಾವಣಾ ಬಾಂಡ್:

ಜನ ಸಾಮಾನ್ಯರು, ಕಾರ್ಪೊರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ನೀಡುವ ಒಂದು ವಿಧದ ದೇಣಿಗೆ ಕ್ರಮವಾಗಿದೆ ಚುನಾವಣಾ ಬಾಂಡ್. ಜನರು 1,000 ರೂ, 10,000 ರೂ, 1 ಲಕ್ಷ ರೂ, 10 ಲಕ್ಷ ರೂ, 1 ಕೋಟಿ ರೂ ಇತ್ಯಾದಿ ಮುಖಬೆಲೆಗಳಲ್ಲಿ ಬಾಂಡ್​ಗಳನ್ನು ಖರೀದಿಸಬಹುದಿತ್ತು. ಈ ಬಾಂಡ್​ಗಳು ಅನಾಮಧೇಯವಾಗಿತ್ತು. ಅಂದರೆ, ಇದನ್ನು ಖರೀದಿಸಿದ ವ್ಯಕ್ತಿ ಅಥವಾ ಸಂಸ್ಥೆಯ ಹೆಸರು ಬಹಿರಂಗಗೊಳ್ಳುತ್ತಿರಲಿಲ್ಲ. ಯಾವ ರಾಜಕೀಯ ಪಕ್ಷಕ್ಕೆ ದೇಣಿಗೆ ಕೊಡಲಾಗಿದೆ ಆ ಪಕ್ಷ ಹೆಸರೂ ಬಹಿರಂಗವಾಗುತ್ತಿರಲಿಲ್ಲ.

ಜನವರಿ 2,2018ರಂದು ಅಂದಿನ ಮೋದಿ ಸರ್ಕಾರ ಚುನಾವಣಾ ಬಾಂಡ್ ಯೋಜನೆಗೆ ಅಧಿಸೂಚನೆ ಹೊರಡಿಸಿತ್ತು. ಚುನಾವಣಾ ಬಾಂಡ್​ಗಳನ್ನು ಹಣಕಾಸು ಕಾಯ್ದೆ 2017ರ ತಿದ್ದುಪಡಿ ಮೂಲಕ ಜಾರಿಗೆ ತರಲಾಗಿತ್ತು. ಈ ಬಾಂಡ್​ಗಳನ್ನು ವರ್ಷಕ್ಕೆ ನಾಲ್ಕು ಬಾರಿ, ಅಂದರೆ ಜನವರಿ, ಏಪ್ರಿಲ್, ಜುಲೈ ಹಾಗೂ ಅಕ್ಟೋಬರ್​ನಲ್ಲಿ ನೀಡಲಾಗುತ್ತಿತ್ತು. ಜನರು ಬ್ಯಾಂಕ್ ಶಾಖೆಗೆ ಭೇಟಿ ನೀಡುವ ಮೂಲಕ ಅಥವಾ ವೆಬ್​ಸೈಟ್​ನಲ್ಲಿ ಆನ್​ಲೈನ್​ನಲ್ಲಿ ಇದನ್ನು ಖರೀದಿಸಬಹುದಿತ್ತು.

ಇದನ್ನು ಓದಿ: ಚುನಾವಣಾ ಬಾಂಡ್‌: SBI ಕಾಲಾವಕಾಶ ಕೋರಿರುವುದರ ವಿರುದ್ಧ ಭುಗಿಲೆದ್ದ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...