Homeಕರ್ನಾಟಕರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ;ನಾನು ಕರ್ನಾಟಕ ರಾಜಕೀಯಕ್ಕೆ ಮಾತ್ರ ಸೀಮಿತ- ಸಿದ್ದರಾಮಯ್ಯ

ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿಯಿಲ್ಲ;ನಾನು ಕರ್ನಾಟಕ ರಾಜಕೀಯಕ್ಕೆ ಮಾತ್ರ ಸೀಮಿತ- ಸಿದ್ದರಾಮಯ್ಯ

- Advertisement -

‘ರಾಷ್ಟ್ರ ರಾಜಕಾರಣದಲ್ಲಿ ನನಗೆ ಆಸಕ್ತಿಯಿಲ್ಲ, ತಾವು ಕೇವಲ ರಾಜ್ಯ ರಾಜಕಾರಣಕ್ಕೆ ಮಾತ್ರ ಸೀಮಿತ’ ಎಂದು ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ದೆಹಲಿಗೆ ಹೋಗಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರೊಮದಿಗೆ ಮಾತನಾಡಿರುವ ಅವರು “ನನಗೆ ರಾಷ್ಟ್ರೀಯ ರಾಜಕೀಯದಲ್ಲಿ ಆಸಕ್ತಿಯಿಲ್ಲ, ನಾನು ಕರ್ನಾಟಕ ರಾಜಕೀಯಕ್ಕೆ ಮಾತ್ರ ಸೀಮಿತ” ಎಂದು ಹೇಳಿದ್ದಾರೆ.

ರಾಷ್ಟ್ರ ರಾಜಕಾರಣಕ್ಕೆ ತಮಗೆ ಆಹ್ವಾನ ನೀಡಲಾಗಿದೆಯೇ ಎಂಬ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆಯ ಮೇರೆಗೆ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣಿಸಿದ್ದರು.

ಇದನ್ನೂ ಓದಿ: ರೈತರ ಹತ್ಯೆ ಪ್ರಕರಣ: ಉತ್ತರ ಪ್ರದೇಶ ಸರ್ಕಾರ ವಜಾ ಮಾಡಲು ಸಿದ್ದರಾಮಯ್ಯ ಆಗ್ರಹ

“ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ನನಗೆ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಲು ಕೇಳಿದರು ಆದರೆ ನಾನು ನಿರಾಕರಿಸಿದ್ದೇನೆ. ನನಗೆ ರಾಷ್ಟ್ರೀಯ ರಾಜಕೀಯದಲ್ಲಿ ಯಾವುದೇ ಆಸಕ್ತಿಯಿಲ್ಲ. ನಾನು ಕರ್ನಾಟಕದ ರಾಜಕೀಯಕ್ಕೆ ಮಾತ್ರ ಸೀಮಿತ” ಎಂದು ದೆಹಲಿಯಲ್ಲಿ ಹೇಳಿದ್ದಾರೆ.

“ರಾಜ್ಯದಲ್ಲಿ ಅಕ್ಟೋಬರ್ 30 ರಂದು ಸಿಂದಗಿ ಮತ್ತು ಹಾನಗಲ್‌ ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯಲಿರುವ ಉಪಚುನಾವಣೆ ಮತ್ತು ಪಕ್ಷದ ಇತರ ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ” ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ, 2023 ರಲ್ಲಿ ನಡೆಯುವ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದರೆ ಎರಡನೇ ಅವಧಿಗೆ ಮುಖ್ಯಮಂತ್ರಿಯಾಗುವ ಆಸೆ ಹೊಂದಿದ್ದಾರೆ ಎಂದು ಹೇಳಲಾಗುತ್ತಿದೆ. ಇದೇ ಕಾರಣಕ್ಕೆ ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ ಎನ್ನುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಯುಪಿ ಸರ್ಕಾರದ ದಬ್ಬಾಳಿಕೆ ತಡೆಯಲು ಜಂಟಿ ವಿರೋಧದ ಅವಶ್ಯಕತೆಯಿದೆ- ಸಂಜಯ್ ರಾವತ್

ನಾನು ಗೌರಿ ಡೆಸ್ಕ್
+ posts

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ ಮಹಿಳೆ | Naanu Gauri

ಆಸ್ಪತ್ರೆ ಸಿಬ್ಬಂದಿಗೆ ಲಂಚ ನೀಡಲು ಸಾಧ್ಯವಾಗದೆ ರಸ್ತೆಯಲ್ಲೆ 6 ತಿಂಗಳ ಶಿಶುವಿಗೆ ಜನ್ಮ ನೀಡಿದ...

0
ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ಮಹಿಳೆಯೊಬ್ಬರು ರಸ್ತೆಯಲ್ಲೇ ಆರು ತಿಂಗಳ ಶಿಶುವಿಗೆ ಜನ್ಮ ನೀಡಿರುವ ಅಘಾತಕಾರಿ ಘಟನೆ ಮಧ್ಯಪ್ರದೇಶದ ಭಿಂಡ್ ಜಿಲ್ಲೆಯಲ್ಲಿ ಮಂಗಳವಾರ ನಡೆದಿದೆ. ಆರು ತಿಂಗಳ ಗರ್ಭಿಣಿಯಾಗಿದ್ದ ಕಲ್ಲೋ ಬಾಯಿಯನ್ನು...
Wordpress Social Share Plugin powered by Ultimatelysocial