Homeಕರ್ನಾಟಕನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್

ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ : ಡಿ.ಕೆ ಶಿವಕುಮಾರ್

- Advertisement -
- Advertisement -

“ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು ಉಪಯೋಗಿಸಿಕೊಳ್ಳಬೇಡಿ. ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ” ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.

ಸೋಮವಾರ (ಜ.20) ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಕಾರ್ಯಕರ್ತರ ರಕ್ಷಣೆ ಮಾಡುವುದು ನನ್ನ ಮೊದಲ ಕರ್ತವ್ಯ. ನಾನು ನನ್ನ ಕೆಲಸವನ್ನು ಮಾಡುತ್ತಿದ್ದೇನೆ. ಪಕ್ಷ, ಹೈಕಮಾಂಡ್ ಇದೆ. ಮಾಧ್ಯಮದವರು ಯಾರೋ ಹೇಳಿದ ಸುಳ್ಳನ್ನು ನಂಬಬೇಡಿ. ಶಿವಕುಮಾರ್ ಅವರಿವರನ್ನು ಭೇಟಿ ಮಾಡಿದರು, ಪಕ್ಷದಲ್ಲಿ ಬಂಡಾಯವಿದೆ ಎಂದೆಲ್ಲಾ ಹೇಳಬೇಡಿ” ಎಂದರು.

ಕಾಂಗ್ರೆಸ್ ಪಕ್ಷದಲ್ಲಿ ಬಂಡಾಯ, ಆಂತರಿಕ ಬೇಗುದಿ ಇಲ್ಲವೇ ಎಂಬ ಪ್ರಶ್ನೆಗೆ, “ಯಾವ ಬಂಡಾಯವೂ ಇಲ್ಲ. ಯಾರ ಜೊತೆಯೂ ವೈಯಕ್ತಿಕ ಭಿನ್ನಾಭಿಪ್ರಾಯವಿಲ್ಲ. ನಾನು ಎಲ್ಲರನ್ನು ಸಮಾನವಾಗಿ ಕಾಣುವ ಅಧ್ಯಕ್ಷ ಸ್ಥಾನದಲ್ಲಿದ್ದು, ನನಗೆ ಎಲ್ಲರೂ ಒಂದೇ. ಎಲ್ಲರನ್ನು ಸರಿ ಸಮಾನವಾಗಿ ತೆಗೆದುಕೊಂಡು ಹೋಗುವುದು ನನ್ನ ಕರ್ತವ್ಯ” ಎಂದು ಹೇಳಿದರು.

ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನೇ ಬದಲಾವಣೆ ಮಾಡಬೇಕು ಎಂದು ಕೆಲವು ಸಚಿವರು ರಾಹುಲ್ ಗಾಂಧಿ ಅವರಿಗೆ ದೂರು ನೀಡುತ್ತಿದ್ದಾರಂತೆ ಎಂಬ ಬಗ್ಗೆ ಕೇಳಿದಾಗ, “ಯಾರೋ ಸುಳ್ಳು ಮಾಹಿತಿ ನೀಡಿ ಮಾಧ್ಯಮಗಳ ಘನತೆಯನ್ನೇ ಹಾಳು ಮಾಡುತ್ತಿದ್ದಾರೆ. ನಾನು ಭಾನುವಾರ ಹಿರಿಯ ಶಾಸಕರ ಮನೆಗೆ ಭೇಟಿ ನೀಡಿದ್ದೆ. ಅವರಿಗೆ ಯಾರ ಜೊತೆಯೋ ಜಗಳ ಇತ್ತಂತೆ ಎಂದು ಒಂದಷ್ಟು ಟಿವಿ ಮಾಧ್ಯಮಗಳು ನೂತನ ಕಥೆಯನ್ನು ಸೃಷ್ಟಿಸಿದ್ದವು. ಫಿರೋಜ್ ಸೇಠ್ ಅವರು ಪಕ್ಷದ ಹಿರಿಯ ನಾಯಕರು. ನನ್ನ ಜೊತೆ ಶಾಸಕರಾಗಿ ಕೆಲಸ ಮಾಡಿದ್ದಾರೆ. ಬೆಳಗಾವಿಯಲ್ಲಿ ಸಮಾವೇಶ ನಡೆಯುತ್ತಿದೆ. ಅವರನ್ನು ಈ ಸಮಾವೇಶದ ಸಮಿತಿಯ ಸದಸ್ಯರನ್ನಾಗಿ ಮಾಡಲಾಗಿದೆ. ಸಂಘಟನೆ ದೃಷ್ಟಿಯಿಂದ ಜಿಲ್ಲಾಧ್ಯಕ್ಷರ ಜೊತೆ ಹೋಗಿ ಭೇಟಿ ಮಾಡಿದ್ದೆ. ಆದರೆ, ಮಾಧ್ಯಮಗಳು ಏನೇನೋ ವರದಿ ಬಿತ್ತರ ಮಾಡಿದವು. ಯಾರೋ ಸ್ಟೋರಿ ಪ್ಲಾಂಟ್ ಮಾಡಿದ್ದನ್ನು ನಂಬಿ ಮಾಧ್ಯಮಗಳು ತಮ್ಮ ಘನತೆಯನ್ನು ಹಾಳು ಮಾಡಿಕೊಳ್ಳಬಾರದು” ಎಂದರು.

ಕಾಂಗ್ರೆಸ್ ನ 60 ಜನ ಶಾಸಕರು ಬಿಜೆಪಿಗೆ ಬರುತ್ತಾರೆ ಎನ್ನುವ ಯತ್ನಾಳ್ ಹೇಳಿಕೆ ಬಗ್ಗೆ ಕೇಳಿದಾಗ, “ಇಂತಹ ನೀಚ ರಾಜಕಾರಣದ ಬಗ್ಗೆ ನೀವು ಪ್ರಶ್ನೆ ಮಾಡಿದರೆ ಹೇಗೆ? ಇಂತಹ ಪ್ರಶ್ನೆಗಳಿಗೆ ನಾನು ಉತ್ತರಿಸುವುದಿಲ್ಲ. ಬೆಳಗಾವಿಯಲ್ಲಿ ನಡೆಯುತ್ತಿರುವ ರಾಷ್ಟ್ರ ಮಟ್ಟದ ಕಾರ್ಯಕ್ರಮದ ಬಗ್ಗೆ ಗಮನಹರಿಸಿ. ನಿಮಗೆ ಯಾರು ಏನೇ ಹೇಳಿದ್ದರೂ ಅದೆಲ್ಲಾ ಸುಳ್ಳಿನ ಕಂತೆ. ಕಾಂಗ್ರೆಸ್‌ಗೆ ಶಕ್ತಿ ತುಂಬಲು ಅನೇಕ ಹೋರಾಟ, ತ್ಯಾಗ ಮಾಡಲಾಗಿದೆ. ಈ ಬೆಳಗಾವಿ ಭೂಮಿಯಿಂದಲೇ ಗಾಂಧಿ ಬಾವಿಯಿಂದ ನೀರು ತೆಗೆದು ಸ್ವಚ್ಚಗೊಳಿಸಿ ಪಕ್ಷವನ್ನು ಅಧಿಕಾರಕ್ಕೆ ತರಲಾಗಿದೆ” ಎಂದು ಹೇಳಿದರು.

2023ರ ಚುನಾವಣೆಯಲ್ಲಿ ಫಿರೋಜ್ ಸೇಠ್ ಅವರಿಗೆ ಟಿಕೆಟ್ ಸಿಗದಿದ್ದಕ್ಕೆ ಸತೀಶ್ ಜಾರಕಿಹೊಳಿ ಅವರು ಕಾರಣ ಎನ್ನುವ ಮಾತಿನ ಬಗ್ಗೆ ಕೇಳಿದಾಗ, “ನನಗೆ ಈ ವಿಚಾರದ ಬಗ್ಗೆ ಗೊತ್ತಿಲ್ಲ. ನನಗೆ ಎಲ್ಲರೂ ಒಂದೇ. ಕಾರ್ಯಕರ್ತರು, ಶಾಸಕರು, ಸಚಿವರು ಎಲ್ಲರೂ ಒಂದೇ. ನಮ್ಮ ಪಕ್ಷದ ಶಿಸ್ತಿನ ಚೌಕಟ್ಟಿನಲ್ಲಿ ಕೆಲಸ ಮಾಡುವವರ ಎದುರು ತಲೆಬಾಗಿ ಅವರ ಸೇವೆ ಮಾಡುತ್ತೇನೆ. ನನಗೆ ಪಕ್ಷವೇ ಮುಖ್ಯ. ನನಗೆ ಕೊಟ್ಟಿರುವ ಜವಾಬ್ದಾರಿಗಳನ್ನು ಪ್ರಾಮಾಣಿಕವಾಗಿ ಕಾಲ, ಕಾಲದಿಂದಲೂ ನಿರ್ವಹಿಸಿಕೊಂಡು ಬಂದಿದ್ದೇನೆ” ಎಂದರು.

“ಪಕ್ಷಕ್ಕಾಗಿ ಮೊದಲಿನಿಂದಲೂ ಹಲವಾರು ತ್ಯಾಗಗಳನ್ನು ಮಾಡಿದ್ದೇನೆ. ಧರಂಸಿಂಗ್ ಅವರ ನೇತೃತ್ವದ ಸಮ್ಮಿಶ್ರ ಸರ್ಕಾರ ಹಾಗೂ ಸಿದ್ದರಾಮಯ್ಯ ಅವರ ಹಿಂದಿನ ಸರ್ಕಾರದಲ್ಲಿಯೂ ಉಸಿರು ಬಿಗಿ ಹಿಡಿದುಕೊಂಡು ತ್ಯಾಗ ಮಾಡಿದ್ದೇನೆ. ನನಗೆ ಪಕ್ಷವೇ ಮುಖ್ಯ. ನಾನು ಪಕ್ಷದಿಂದ ಬೆಳೆದವನು. ವಿದ್ಯಾರ್ಥಿ ನಾಯಕನಾಗಿದ್ದ ನನ್ನನ್ನು ಗುರುತಿಸಿ ಪಕ್ಷ ಟಿಕೆಟ್ ನೀಡಿತ್ತು. ಮಾಧ್ಯಮದವರು ಯಾರ ಮಾತನ್ನೋ ಕೇಳಬೇಡಿ” ಎಂದರು.

ಎಷ್ಟು ದಿನ ಶಿವಕುಮಾರ್ ತ್ಯಾಗ ಮಾಡುತ್ತಾರೆ, ತ್ಯಾಗಕ್ಕೆ ಫಲ ಯಾವಾಗ ಸಿಗುತ್ತದೆ ಎಂದು ಕೇಳಿದಾಗ, “ನಾನು ತ್ಯಾಗ ಮಾಡಿಕೊಂಡೆ ಬರುತ್ತೇನೆ. ನನಗೆ ಫಲದ ಅವಶ್ಯಕತೆಯೇ ಇಲ್ಲ. ಜನಕ್ಕೆ ಒಳೆಯದಾಗುತ್ತಿದೆಯಲ್ಲ, ಅಷ್ಟು ಸಾಕು ನನಗೆ” ಎಂದು ಹೇಳಿದರು.

ಸಾಮಾಜಿಕ ನ್ಯಾಯ, ಸಂವಿಧಾನ ಉಳಿಸುವುದು ನಮ್ಮ ಮೂಲ ಮಂತ್ರ

“ಮಹಾತ್ಮ ಗಾಂಧಿ ಅವರ ಹಾಗೂ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸ್ಮರಣೆ, ಸಂವಿಧಾನ ರಕ್ಷಣೆಯೇ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶದ ಉದ್ಧೇಶ. ಸಾಮಾಜಿಕ ನ್ಯಾಯವನ್ನು ಉಳಿಸುವುದೇ ನಮ್ಮ ಮೂಲ ಮಂತ್ರ. ಕಳೆದ ಬಾರಿ ರೂಪಿಸಿದ ಕಾರ್ಯಕ್ರಮಗಳನ್ನು ಈ ಬಾರಿಯೂ ಮುಂದಿವರೆಸಲಾಗುವುದು” ಎಂದು ಹೇಳಿದರು.

“ಸುಮಾರು 60ಕ್ಕೂ ಹೆಚ್ಚು ರಾಷ್ಟ್ರೀಯ ಮಟ್ಟದ ನಾಯಕರು, ಅತಿಥಿಗಳು, ಸಂಸದರು, ಕಾರ್ಯಕಾರಿ ಸಮಿತಿ ಸದಸ್ಯರು ಬೆಳಗಾವಿ ಸಮಾವೇಶಕ್ಕೆ ಆಗಮಿಸುತ್ತಿದ್ದಾರೆ. ಸಚಿವರು, ಶಾಸಕರು, ಹಿರಿಯ ನಾಯಕರು ಕಾರ್ಯಕ್ರದಲ್ಲಿ ಭಾಗವಹಿಸಲಿದ್ದು, ಒಂದಷ್ಟು ನಾಯಕರಿಗೆ ಮುಖ್ಯ ವೇದಿಕೆಯಲ್ಲಿ ಅವಕಾಶ ಮಾಡಿಕೊಡಲಾಗಿದೆ” ಎಂದು ತಿಳಿಸಿದರು.

ದೆಹಲಿ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ನಿಮ್ಮ ಹೆಸರಿದೆ ಎಂದು ಕೇಳಿದಾಗ, “ನಾನೇ ಖುದ್ದಾಗಿ ದೆಹಲಿಗೆ ಹೋಗಿ ಮಹಿಳೆಯರಿಗೆ ತಿಂಗಳಿಗೆ 2,500 ರೂಪಾಯಿ ನೀಡುವ ಪ್ಯಾರಿ ದೀದಿ ಯೋಜನೆ ಪ್ರಕಟಣೆ ಮಾಡಿದ್ದೆ” ಎಂದರು.

ಎಲ್ಲಾ ರಾಜ್ಯಗಳ ಸಿಎಂಗಳಿದ್ದು ಸಿದ್ದರಾಮಯ್ಯ ಅವರನ್ನು ಕೈ ಬಿಟ್ಟಿರುವ ಬಗ್ಗೆ ಕೇಳಿದಾಗ, “ಸಿದ್ದರಾಮಯ್ಯ ಅವರು ಬಜೆಟ್ ತಯಾರಿಯಲ್ಲಿದ್ದಾರೆ. ಎಲ್ಲಾ ಮಂತ್ರಿಗಳು, ಇಲಾಖಾ ಅಧಿಕಾರಿಗಳ ಜೊತೆ ಚರ್ಚೆ ನಡೆಸಬೇಕಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಎಐಸಿಸಿ ಸಮಯ ನೀಡಿದೆ” ಎಂದರು.

ಸುವರ್ಣಸೌಧದ ಗಾಂಧಿ ಪ್ರತಿಮೆಯನ್ನು ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತನೆ ಮಾಡಿದ್ದಾರೆಯೇ ಎನ್ನುವ ಬಗ್ಗೆ ಕೇಳಿದಾಗ, “ಇದನ್ನು ನಿರ್ವಹಿಸಿದ್ದು ಲೋಕೋಪಯೋಗಿ ಇಲಾಖೆ, ಶಿಲ್ಪಿ ಯಾರು ಎಂದು ನಾನು ಬಹಿರಂಗಪಡಿಸಲು ಆಗುವುದಿಲ್ಲ” ಎಂದು ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದರು.

ಮುಡಾ ಕುರಿತ ಇಡಿಯವರ ಪತ್ರಿಕಾ ಪ್ರಕಟಣೆ ರಾಜಕೀಯ ಪ್ರೇರಿತ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀನಗರದಲ್ಲಿ ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐವರ ಬಂಧನ; ಅಂತರರಾಜ್ಯ ಎಲ್‌ಇಟಿ ಮಾಡ್ಯೂಲ್ ಪತ್ತೆ 

ಶ್ರೀನಗರ: ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮಂಗಳವಾರ ಶ್ರೀನಗರದಲ್ಲಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಅಂತರರಾಜ್ಯ ಮಾಡ್ಯೂಲ್ ಅನ್ನು ಭೇದಿಸಿದ್ದು, ಇಬ್ಬರು ಪಾಕಿಸ್ತಾನಿ ಭಯೋತ್ಪಾದಕರು ಸೇರಿದಂತೆ ಐದು...

ಟರ್ಕಿಯ ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ರಾಯಭಾರ ಕಚೇರಿ ಬಳಿ ಗುಂಡಿನ ದಾಳಿ: ಮೂವರು ಸಾವು

ಇಸ್ತಾನ್‌ಬುಲ್‌ನಲ್ಲಿರುವ ಇಸ್ರೇಲಿ ಕಾನ್ಸುಲೇಟ್ ಕಟ್ಟಡದ ಬಳಿ ಮಂಗಳವಾರ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಪೊಲೀಸ್ ಅಧಿಕಾರಿಗಳು ಗಾಯಗೊಂಡಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ, ಅಧಿಕಾರಿಗಳು ಆ ಪ್ರದೇಶವನ್ನು...

ತೆಲಂಗಾಣ ಸಿಎಂ ರೆಡ್ಡಿ ವಿರುದ್ಧ ಪಿಣರಾಯಿ ವಿಜಯನ್ ವಾಗ್ದಾಳಿ; ತೀವ್ರ ಸ್ವರೂಪ ಪಡೆದುಕೊಂಡ ವಾಕ್ಸಮರ

ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮಂಗಳವಾರ (ಏ.7) ವಾಗ್ದಾಳಿ ನಡೆಸಿದ್ದಾರೆ. ಇಬ್ಬರು ನಾಯಕರ ನಡುವಿನ ಮಾತಿನ ಸಮರ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಣ್ಣೂರಿನಲ್ಲಿ ನಡೆದ ಪತ್ರಿಕಾ ಸಂವಾದ...

ಹಿಮಂತ ಬಿಸ್ವಾ ಶರ್ಮಾ ಪತ್ನಿಯ ವಿರುದ್ಧ ‘ಹಲವು ಪಾಸ್‌ಪೋರ್ಟ್‌’ ಹೊಂದಿರುವ ಆರೋಪ : ಪವನ್ ಖೇರಾ ಮನೆಯಲ್ಲಿ ಶೋಧ ನಡೆಸಿದ ಅಸ್ಸಾಂ ಪೊಲೀಸರು

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಪ್ರಕರಣ ದಾಖಲಿಸಿದ ಬೆನ್ನಲ್ಲೇ, ಅಸ್ಸಾಂ ಪೊಲೀಸರು ದೆಹಲಿಯಲ್ಲಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರ ಮನೆಯಲ್ಲಿ ಶೋಧ...

ಮಮತಾ ಬ್ಯಾನರ್ಜಿ ಅವರ ಟಿಎಂಸಿ ಕೇಂದ್ರದ ಹಣವನ್ನು ಪಕ್ಷದ ಚಟುವಟಿಕೆಗಳಿಗೆ ಬಳಸಿಕೊಂಡಿದೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಪಶ್ಚಿಮ ಬಂಗಾಳದ ಟಿಎಂಸಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಕೇಂದ್ರ ನಿಧಿಯ ದುರುಪಯೋಗ ಮತ್ತು ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ತೀವ್ರ ಕುಸಿತವಾಗಿದೆ ಎಂದು...

ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿ ರಚಿಸುವಂತೆ ಇರಾನಿನ ಯುವಕರಿಗೆ ಮನವಿ

ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆದರಿಕೆ ದಾಳಿಗಳಿಗೆ ಮುಂಚಿತವಾಗಿ ವಿದ್ಯುತ್ ಸ್ಥಾವರಗಳ ಸುತ್ತ ಮಾನವ ಸರಪಳಿಗಳನ್ನು ರಚಿಸುವಂತೆ ಇರಾನ್ ಸರ್ಕಾರ 'ಕ್ರೀಡಾಪಟುಗಳು, ಕಲಾವಿದರು, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅವರ...

ಪಶ್ಚಿಮ ಬಂಗಾಳ| ಎಸ್‌ಐಆರ್ ಬಳಿಕ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳು ಡಿಲೀಟ್

ಚುನಾವಣಾ ಆಯೋಗ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ, ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಸುಮಾರು 91 ಲಕ್ಷ ಮತದಾರರನ್ನು ಮತದಾರರ ಪಟ್ಟಿಯಿಂದ ಅಳಿಸಲಾಗಿದೆ. ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ...

ಇರಾನ್ ನೂತನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ‘ಪ್ರಜ್ಞಾಹೀನ’, ಕೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ: ವರದಿ

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಅವರು ಕೋಮ್‌ನಲ್ಲಿ ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಪ್ರಜ್ಞಾಹೀನರಾಗಿದ್ದಾರೆ ಎಂದು ನಂಬಲಾಗಿದೆ ಎಂದು ಗುಪ್ತಚರ ಆಧಾರಿತ ರಾಜತಾಂತ್ರಿಕ ಜ್ಞಾಪಕ ಪತ್ರವನ್ನು ಉಲ್ಲೇಖಿಸಿ ದಿ ಟೈಮ್ಸ್ ವರದಿ...

ಪ. ಬಂಗಾಳ : ಎಸ್‌ಐಆರ್‌ನಲ್ಲಿ ಮತದಾರರ ಪಟ್ಟಿಯಿಂದ ಕೈ ಬಿಟ್ಟಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ ವೇಳೆ (ಎಸ್‌ಐಆರ್‌) ತೆಗೆದು ಹಾಕಿದ್ದ ಮತ್ತೊಬ್ಬ ಕಾಂಗ್ರೆಸ್ ಅಭ್ಯರ್ಥಿಯ ಹೆಸರನ್ನು ಮತದಾರರ ಪಟ್ಟಿಗೆ ಮರು ಸೇರ್ಪಡೆಗೊಳಿಸುವಂತೆ ಮೇಲ್ಮನವಿ ನ್ಯಾಯಮಂಡಳಿ ಸೋಮವಾರ (ಏ.6) ಆದೇಶಿಸಿರುವುದಾಗಿ ವರದಿಯಾಗಿದೆ. ರತುವಾ...

ಹೈದರಾಬಾದ್| ಐಪಿಎಲ್ ಪಂದ್ಯದಿಂದ ಭಾರೀ ಸಂಚಾರ ದಟ್ಟಣೆ; ಆಂಬ್ಯುಲೆನ್ಸ್‌ನಲ್ಲಿದ್ದ ಮಹಿಳೆ ಸಾವು

ಏಪ್ರಿಲ್ 5 ರ ಭಾನುವಾರ ಉಪ್ಪಳದಲ್ಲಿ ಉಂಟಾದ ಭಾರೀ ಸಂಚಾರ ದಟ್ಟಣೆಯಿಂದಾಗಿ ಒಂದು ಗಂಟೆಗೂ ಹೆಚ್ಚು ಕಾಲ ಆಂಬ್ಯುಲೆನ್ಸ್‌ನಲ್ಲಿ ಸಿಲುಕಿಕೊಂಡಿದ್ದ ಬಿಷ್ಣಾ ಎಂಬ 30 ವರ್ಷದ ಮಹಿಳೆ ಸಾವನ್ನಪ್ಪಿದ ದುರಂತ ಘಟನೆ ನಡೆದಿದೆ. ಉಪ್ಪಳದ...