Homeಮುಖಪುಟನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ನಂಗೆ ಹಿಂದಿ ಬರಲ್ಲ ಹೋಗ್ರಪ್ಪ: ಹಿಂದಿ ಹೇರಿಕೆಯ ವಿರುದ್ಧ ಬಹುಭಾಷ ನಟ ಪ್ರಕಾಶ್ ರಾಜ್ ದನಿ

ಚಿತ್ರನಟ ಚೇತನ್ ಸಹ ತಮ್ಮ ಗೆಳೆಯರ ಜೊತೆಗೂಡಿ "ಹಿಂದಿ ಗೊತ್ತಿಲ್ಲ ಹೋಗೋ, ನಾವು ಕನ್ನಡಿಗರು, ನಾವು ದ್ರಾವಿಡರು.." ಎಂಬ ಟೀ ಶರ್ಟ್ ಧರಿಸಿ ಹಿಂದಿ ಹೇರಿಕೆಯ ವಿರುದ್ಧದ ಹೋರಾಟಕ್ಕೆ ದನಿಗೂಡಿಸಿದ್ದರು.

- Advertisement -
- Advertisement -

ದಕ್ಷಿಣ ಭಾರತದಲ್ಲಿ ತೀವ್ರಗೊಂಡಿರುವ ಹಿಂದಿ ಹೇರಿಕೆ ವಿರುದ್ಧದ ಹೋರಾಟಕ್ಕೆ ಬಹುಭಾಷ ನಟ ಪ್ರಕಾಶ್ ರಾಜ್ ದನಿಗೂಡಿಸಿದ್ದಾರೆ. ಕರ್ನಾಟಕದ ನಕ್ಷೆಯೊಳಗೆ ‘ನಂಗೆ ಹಿಂದಿ ಬರಲ್ಲ ಹೋಗ್ರಪ್ಪ’ ಎಂದು ಬರೆದಿರುವ ಟೀಶರ್ಟ್ ಧರಿಸಿರುವ ಫೋಟೊ ಟ್ವೀಟ್ ಮಾಡುವ ಮೂಲಕ ಅವರು ಸಂಚಲನ ಮೂಡಿಸಿದ್ದಾರೆ.

ಹಲವು ಭಾಷೆ ಬಲ್ಲೆ.. ಹಲವು ಭಾಷೆಗಳಲ್ಲಿ ಕೆಲಸ ಮಾಡಬಲ್ಲೆ..ಆದರೆ ನನ್ನ ಕಲಿಕೆ..ನನ್ನ ಗ್ರಹಿಕೆ..ನನ್ನ ಬೇರು..ನನ್ನ ಶಕ್ತಿ…ನನ್ನ ಹೆಮ್ಮೆ..ನನ್ನ ಮಾತೃಭಾಷೆ ಕನ್ನಡ #ಹಿಂದಿ_ಹೇರಿಕೆ_ಬೇಡ ..NO #HindiImposition #justasking ಎಂದು ಅವರು ಟ್ವೀಟ್ ಮಾಡಿದ್ದಾರೆ.

ನಾಳೆ ಸೆಪ್ಟಂಬರ್ 14 ಹಿಂದಿ ದಿವಸ್. ಕೇಂದ್ರದ ಮುತುವರ್ಜಿಯಿಂದ ನಡೆಯುವ ಈ ಕಾರ್ಯಕ್ರಮಕ್ಕೆ ಬಹಳ ವರ್ಷಗಳಿಂದಲೂ ಕನ್ನಡಿಗರು, ದಕ್ಷಿಣ ಭಾರತೀಯರು ವಿರೋಧ ವ್ಯಕ್ತಪಡಿಸುತ್ತಲೇ ಬಂದಿದ್ದಾರೆ. ಸಂವಿಧಾನ ಮಾನ್ಯಮಾಡಿರುವ 22 ಭಾಷೆಗಳಿಗೂ ಸಮಾನ ಆದ್ಯತೆ ನೀಡಬೇಕೆಂಬುದು ಅವರೆಲ್ಲರೂ ಆಗ್ರಹವಾಗಿದೆ.

ಈ ವರ್ಷವೂ ಹಿಂದಿ ಹೇರಿಕೆ ವಿರುದ್ಧ ದೇಶದ ಹಲವೆಡೆ ವ್ಯಾಪಕ ಪ್ರತಿರೋಧಗಳು ವ್ಯಕ್ತವಾಗುತ್ತಿವೆ. ಸಾಮಾಜಿಕ ಜಾಲತಾಣಗಳಲ್ಲಿ ತಮಿಳುನಾಡಿನ ಟೀ-ಶರ್ಟ್ ಘೋಷಣೆಗಳು ವೈರಲ್ ಆಗುತ್ತಿವೆ. ಹಿಂದಿ ಥೆರಿಯಾದು, ಪೋಡಾ! ” (ನನಗೆ ಹಿಂದಿ ಗೊತ್ತಿಲ್ಲ, ಹೋಗು!). “ನಾನು ತಮೀಝ್ ಪೆಸುಮ್ ಇಂಡಿಯನ್” (ನಾನು ತಮಿಳು ಮಾತನಾಡುವ ಭಾರತೀಯ). “ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ”ಎಂಬ ಘೋಷಣೆಗಳು ವೈರಲ್ ಆಗಿವೆ.

PC: Kanimozhi@twitter

ಇದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಸಹ ಕೆಲ ಚಿತ್ರ ನಟರು ಹಿಂದಿ ಹೇರಿಕೆ ವಿರುದ್ಧ ಗುಡುಗಿದ್ದಾರೆ. ಆ ದಿನಗಳು ಖ್ಯಾತಿಯ ಚಿತ್ರನಟ ಚೇತನ್ ಸಹ ತಮ್ಮ ಗೆಳೆಯರ ಜೊತೆಗೂಡಿ “ಹಿಂದಿ ಗೊತ್ತಿಲ್ಲ ಹೋಗೋ,
ನಾವು ಕನ್ನಡಿಗರು, ನಾವು ದ್ರಾವಿಡರು..” ಎಂಬ ಟೀ ಶರ್ಟ್ ಧರಿಸಿ ಹಿಂದಿ ಹೇರಿಕೆಯ ವಿರುದ್ಧದ ಹೋರಾಟಕ್ಕೆ ದನಿಗೂಡಿಸಿದ್ದರು.

ಕರ್ನಾಟಕದಲ್ಲಿ ಈ ಹಿಂದೆ ನಟ ವಸಿಷ್ಠ ಎನ್. ಸಿಂಹ, ಸಂಸದ ಪ್ರಜ್ವಲ್ ರೇವಣ್ಣ, ಮಾಜಿ ಶಾಸಕ ವೈಎಸ್‌ವಿ ದತ್ತ, ನಟ ಹಾಗೂ ಜೆಡಿಎಸ್‌ ಮುಖಂಡ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಅನೇಕರು ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ದ್ವಿಭಾಷಾ ನೀತಿ ಜಾರಿಗೆ ತರಬೇಕು. ಅದಕ್ಕೆ ಹೊರತಾಗಿ ಬೇರೆ ಭಾಷೆಗಳನ್ನು ಕಲಿಯುವ ಆಯ್ಕೆ ಆಯಾ ವ್ಯಕ್ತಿಗಳದ್ದಾಗಿರುತ್ತದೆ. ಮೂರನೇ ಭಾಷೆಯ ಹೆಸರಿನಲ್ಲಿ ಯಾವ ಭಾಷೆಯನ್ನೂ ಹೇರುವ ಪ್ರಯತ್ನ ಮಾಡಬಾರದು ಎಂದು ಒತ್ತಾಯಿಸಿದ್ದರು.


ಇದನ್ನೂ ಓದಿ: ನಾನು ಭಾರತೀಯ, ನಾನು ಹಿಂದಿ ಮಾತನಾಡುವುದಿಲ್ಲ: ಹಿಂದಿ ಹೇರಿಕೆ ವಿರುದ್ಧ ವಿಭಿನ್ನ ಪ್ರತಿರೋಧ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...